ಶಿವಮೊಗ್ಗ ನಗರದಲ್ಲಿ ಎರಡು ವರ್ಷಕ್ಕೊಮ್ಮೆ ನಡೆಯುವ ಐತಿಹಾಸಿಕ ಕೋಟೆ ಮಾರಿಕಾಂಬಾ ದೇವಿಯ ಜಾತ್ರೆಯ ಸಂಭ್ರಮದ ನಡುವೆಯೇ, ನಗರದ ಹೊರವಲಯದ ಸೂಳೆಬೈಲಿನಲ್ಲಿ ಭೀಕರ ಕೊಲೆಯೊಂದು ನಡೆದಿದ್ದು ಇಡೀ ನಗರವನ್ನು ಬೆಚ್ಚಿಬೀಳಿಸಿದೆ. ಮೃತ ವಿದ್ಯಾರ್ಥಿ ಸಂಕೇತ್ (15) ಸೂಳೆಬೈಲು ಸರ್ಕಾರಿ ಶಾಲೆಯ ಎಸ್‌ಎಸ್‌ಎಲ್ಸಿ ವ್ಯಾಸಂಗ ಮಾಡುತ್ತಿದ್ದನು. ಶಿವಮೊಗ್ಗ ನಗರದ ಹೊರವಲಯದ ಸೂಳೆಬೈಲಿನಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ ವಿಶೇಷ ತರಗತಿ (Special Class) ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸಂಕೇತ್ನ …
Read More »ಮೇ ತಿಂಗಳೊಳಗೆ ಹಸಿರುಮಕ್ಕಿ ಸೇತುವೆ ಉದ್ಘಾಟನೆ : ಸಚಿವ ಸತೀಶ್ ಜಾರಕಿಹೊಳಿ
ಶಿವಮೊಗ್ಗ : ಸಾಗರ ತಾಲೂಕಿನ ಹಸಿರುಮಕ್ಕಿ ಬಳಿ ಶರಾವತಿ ನದಿ ಲಿಂಗನಮಕ್ಕಿ ಜಲಾಶಯದ ಹಿನ್ನೀರಿನಲ್ಲಿ ಅಂದಾಜು 125.67 ಕೋಟಿ ರು. ವೆಚ್ಚದ ಸೇತುವೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಮೇ ತಿಂಗಳೊಳಗೆ ಜನಸಂಚಾರಕ್ಕೆ ಮುಕ್ತಗೊಳಿಸಿ ಕೊಡಲಾಗುವುದು ಎಂದು ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಸೋಮವಾರ ಹಸಿರುಮಕ್ಕಿ ಸೇತುವೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ, ಹಿನ್ನೀರಿನ ಲಾಂಚ್‌ನಲ್ಲಿ ಪ್ರಯಾಣಿಸಿ, ಕಾಮಗಾರಿಗಳನ್ನು …
Read More »ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ – ಪೊಲೀಸ್ ಸಿಬ್ಬಂದಿ ಪತ್ನಿ ಆತ್ಮಹತ್ಯೆ
ಶಿವಮೊಗ್ಗ: ಪತಿ ಸಾವಿನ ಬಳಿಕ ಪೇದೆ ನೀಡುತ್ತಿದ್ದ ಕಿರುಕುಳ, , ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಅಪಪ್ರಚಾರ ತಾಳಲಾಗದೇ ಪೊಲೀಸ್ ಸಿಬ್ಬಂದಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸ್ವಾತಿ ಎಂದು ಗುರುತಿಸಲಾಗಿದೆ. ವಾಟ್ಸಪ್‌ನಲ್ಲಿ ಡೆತ್‌ನೋಟ್‌ನಲ್ಲಿ ಪತ್ತೆಯಾಗಿದ್ದು, ಪೇದೆ ಮೋಹನ್ ಕಾಟ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದಿದ್ದಾರೆ. ಮೃತ ಸ್ವಾತಿ ಹಾಗೂ ಜಗದೀಶ್ 7 ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ …
Read More »ಕುಡಿದ ಮತ್ತಿನಲ್ಲಿ ಗೆಳಯನನ್ನೇ ಕಲ್ಲು ಎತ್ತಿ ಹಾಕಿ ಕೊಂದ ಸ್ನೇಹಿತರು
ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಭೀಕರ ಕೊಲೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರೇ ಸೇರಿ ತನ್ನವನನ್ನೇ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿ ನಡೆದಿದೆ. ಶ್ರೀನಿವಾಸ (36) ಎಂಬುವವರೇ ಕೊಲೆಯಾದ ದುರ್ದೈವಿ. ಶಿವಮೊಗ್ಗ ನಗರದ ಹೊಸಮನೆ ನಿವಾಸಿಯಾಗಿದ್ದ ಶ್ರೀನಿವಾಸ್ ಕಳೆದ ಒಂದು ವರ್ಷದಿಂದ ಗಾಜನೂರಿನಲ್ಲಿ ನೆಲೆಸಿದ್ದು, ಗಾರೆ ಕೆಲಸ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಸ್ನೇಹ ಬಾರ್ ಎದುರಿಗಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಂಗಳದಲ್ಲಿ …
Read More »ಕಿಚ್ಚನ ‘ಮಾರ್ಕ್ಸಿನಿಮಾ ಕಟೌಟ್‌ಗೆ ಮದ್ಯ ಸುರಿದು ಅಭಿಮಾನ!
ಶಿವಮೊಗ್ಗ: ಕೊನೆಗೂ ಫ್ಯಾನ್ಸ್ ಕಾತರ ಕೊನೆಗೊಂಡಿದೆ. ಕನ್ನಡ ಚಿತ್ರರಂಗದ ಖ್ಯಾತ ನಟ ಕಿಚ್ಚ ಸುದೀಪ್ ಮುಖ್ಯಭೂಮಿಕೆಯ ಬಹುನಿರೀಕ್ಷಿತ ‘ಮಾರ್ಕ್’ ಇಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಿದೆ. ಎಲ್ಲೆಡೆ ಸಂಭ್ರಮಾಚರಣೆ ಜೋರಾಗಿದೆ. ಶಿವಮೊಗ್ಗ ನಗರದಲ್ಲಿ ಮಾಲ್ ಸಹಿತ 4 ಚಿತ್ರಮಂದಿರಗಳಲ್ಲಿ ಸುದೀಪ್ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸಿನಿಮಾ ಬಿಡುಗಡೆ ಆಗಿದೆ. ಬೆಳಗ್ಗೆ 6 ಗಂಟೆಗೆ ಫ್ಯಾನ್ಸ್ ಶೋ ನಡೆಯಿತು. ಈ ಶೋನಲ್ಲಿ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಮೆಚ್ಚಿನ ನಟನನ್ನು ಬಿಗ್ ಸ್ಕ್ರೀನ್ನಲ್ಲಿ ಕಣ್ತುಂಬಿಕೊಂಡರು. ಒಂದು …
Read More »ಕೈದಿಯ ಹೊಟ್ಟೆಯಲ್ಲಿತ್ತು ಕೀಪ್ಯಾಡ್ ಫೋನ್! ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದ ಮೆಗ್ಗಾನ್ ಆಸ್ಪತ್ರೆ ವೈದ್ಯರು
ಶಿವಮೊಗ್ಗ: ಇಲ್ಲಿನ ಕೇಂದ್ರ ಕಾರಾಗೃಹದ ಕೈದಿಯೊಬ್ಬನ ಹೊಟ್ಟೆಯಲ್ಲಿದ್ದ ಕೀಪ್ಯಾಡ್ ಮೊಬೈಲ್ ಅನ್ನು ಮೆಗ್ಗಾನ್ ಬೋಧನಾ ಆಸ್ಪತ್ರೆಯ ಮೂವರು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆದಿದ್ದಾರೆ. ದೌಲತ್ ಎಂಬ ಕೈದಿಯ ಹೊಟ್ಟೆಯಿಂದ ಫೋನ್ ಹೊರತೆಗೆಯಲಾಗಿದೆ. ಕಾರಾಗೃಹದ ಸಜಾ ಬಂಧಿಯಾಗಿದ್ದ ದೌಲತ್ ಅಲಿಯಾಸ್ ಗುಂಡ (34) ಹೊಟ್ಟೆ ನೋವೆಂದು ಜೂನ್ 23ರಂದು ಕಾರಾಗೃಹದ ವೈದ್ಯರ ಬಳಿ ತಪಾಸಣೆಗೆ ಬಂದಿದ್ದ. ಆಗ ವೈದ್ಯರು ಏನು ತಿಂದಿದ್ದೀರಾ ಎಂದು ಕೇಳಿದಾಗ, ಕೈದಿ ಕಲ್ಲು ನುಂಗಿರುವುದಾಗಿ ಸುಳ್ಳು ಹೇಳಿದ್ದ. ನಂತರ …
Read More »ಮರಣೋತ್ತರ ಪರೀಕ್ಷೆಯ ವರದಿಗೆ ಲಂಚ: ಸಿಕ್ಕಿಬಿದ್ದ ಶಿಕಾರಿಪುರ ತಾಲೂಕು ಆಸ್ಪತ್ರೆ ವೈದ್ಯ
ಶಿವಮೊಗ್ಗ: ಮರಣೋತ್ತರ ಪರೀಕ್ಷೆಯ ವರದಿ ನೀಡಲು 20 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟು 10 ಸಾವಿರ ರೂ ಪಡೆಯುವಾಗ ಶಿಕಾರಿಪುರ ತಾಲೂಕು ಆಸ್ಪತ್ರೆಯ ವೈದ್ಯ ಡಾ.ಗೋಪಾಲ್ ಜಿ.ಹರಿಗಿ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ವಿವರ: ಶಿಕಾರಿಪುರ ತಾಲೂಕು ಕಪ್ಪನಹಳ್ಳಿ ಗ್ರಾಮದ ಸುನೀಲ್ ಎಂಬವರು ಮರಣೋತ್ತರ ಪರೀಕ್ಷೆ ವರದಿ ನೀಡಲು ಹಣದ ಬೇಡಿಕೆ ಇಟ್ಟಿರುವ ಕುರಿತು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಇಂದು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ …
Read More »ಶೀಘ್ರವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕಿದೆ : ಆರ್.ಎಂ. ಮಂಜುನಾಥ ಗೌಡ
ಶಿವಮೊಗ್ಗ : ಕಳೆದ ಸಾಲಿನಲ್ಲಿ ಮಂಡಳಿ ವತಿಯಿಂದ ಮಂಜೂರಾಗಿರುವ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕಿದೆ ಎಂದು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅಧ್ಯಕ್ಷರಾದ ಆರ್.ಎಂ.ಮಂಜುನಾಥ ಗೌಡ ಹೇಳಿದರು. ಗುರುವಾರ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಕಚೇರಿಯಲ್ಲಿ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿಯ 2025-26ನೇ ಸಾಲಿನ ಹೊಸ ದಿನಚರಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಕಳೆದ ಸಾಲಿನಲ್ಲಿ ಮಂಜೂರಾದ 954 ಕಾಮಗಾರಿಗಳ ಪೈಕಿ 335 ಕಾಮಗಾರಿಗಳು ಪೂರ್ಣಗೊಂಡಿವೆ. ಪೂರ್ಣಗೊಂಡ ಕೆಲವು ಕಾಮಗಾರಿಗಳಿಗೆ …
Read More »ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ವರ್ಷಧಾರೆ ಚುರುಕು: ತುಂಬಿದ ತುಂಗಾ ಡ್ಯಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಮಳೆ ಪ್ರಾರಂಭವಾಗಿದೆ. ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತದೆ. ವರುಣನ ಆಗಮನದಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 199.90 ಮಿಮೀ ಮಳೆ ಸುರಿದಿದೆ. ಸರಾಸರಿ 28.56 ಮಿಮೀ ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮೀ ಇದ್ದು, ಈವರೆಗೆ ಸರಾಸರಿ 73.13 ಮಿಮೀ ಮಳೆ ಮಾತ್ರ ದಾಖಲಾಗಿದೆ. …
Read More »ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಪರಿಸ್ಥಿತಿ ಹೇಗಿರಲಿದೆ ಎಂದು ಕಾದು ನೋಡಿ: ವಿಜಯೇಂದ್ರ
ಶಿವಮೊಗ್ಗ: ಲೋಕಸಭೆಯಲ್ಲಿ ಬಿಜೆಪಿ 25 ಸ್ಥಾನ ಗೆದ್ದ ಬಳಿಕ ಕಾಂಗ್ರೆಸ್ ಪಕ್ಷದವರ ಪರಿಸ್ಥಿತಿ ಏನಾಗುತ್ತದೆ ಎಂಬುದನ್ನು ಕಾದು ನೋಡಿ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಭರವಸೆಯಂತೆ ಎಲ್ಲರಿಗೂ 10 ಕೆ.ಜಿ ಅಕ್ಕಿ ಕೊಡುತ್ತೇವೆ ಎಂದಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಗರೀಬ್ ಕಲ್ಯಾಣ ಯೋಜನೆಯಡಿ 5 ಕೆ.ಜಿ ಅಕ್ಕಿ ನೀಡುತ್ತಿದ್ದಾರೆ. ಆದರೆ ಕಾಂಗ್ರೆಸ್ನವರು ಭರವಸೆ ನೀಡಿದ್ದು …
Read More »
Laxmi News 24×7