Breaking News

ಶಿವಮೊಗ್ಗ

ಶಿವಮೊಗ್ಗದಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!

ಶಿವಮೊಗ್ಗ: ಇಲ್ಲೊಬ್ಬ ಮಹಿಳೆ ಒಂದಲ್ಲ, ಎರಡಲ್ಲ, ಬರೋಬ್ಬರಿ ನಾಲ್ಕು ಮಕ್ಕಳಿಗೆ ಏಕಕಾಲದಲ್ಲಿ ಜನ್ಮ ನೀಡಿದ್ದಾರೆ. ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಮಹಿಳೆಯು ಏಕಕಾಲದಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ್ದು, ತಾಯಿ-ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.   ಭದ್ರಾವತಿ ತಾಲೂಕಿನ ಕಡಸ ಗ್ರಾಮದ ಆರೀಫ್ ಅವರ ಪತ್ನಿ ಅಲ್ಮಾ ಬಾನು 4 ಮಕ್ಕಳಿಗೆ ಜನ್ಮ ನೀಡಿದ ತಾಯಿ. ಸೋಮವಾರ ಬೆಳಗ್ಗೆ ಅಲ್ಮಾಗೆ ಹೆರಿಗೆಯಾಗಿದ್ದು, 2 ಗಂಡು ಮತ್ತು 2 ಹೆಣ್ಣು ಮಗು ಜನಿಸಿವೆ.

Read More »

ಕಾಗೋಡು ತಿಮ್ಮಪ್ಪ ಪುತ್ರಿಗೆ ಕೊಲೆ ಬೆದರಿಕೆ

ಶಿವಮೊಗ್ಗ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಅವರಿಗೆ ವ್ಯಕ್ತಿಯೋರ್ವ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಕಾಗೋಡು ತಿಮ್ಮಪ್ಪ ಫೌಂಡೇಷನ್ ವತಿಯಿಂದ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹಲವೆಡೆಗಳಲ್ಲಿ ಆರೋಗ್ಯ ಶಿಬಿರ ನಡೆಸಲಾಗುತ್ತಿದೆ. ಈ ಆರೋಗ್ಯ ಶಿಬಿರವನ್ನು ಮಂಗಳವಾರ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಏರ್ಪಡಿಸಲಾಗಿತ್ತು.  ಆರೋಗ್ಯ ಶಿಬಿರ ಮುಗಿಸಿ ಸಾಗರಕ್ಕೆ ವಾಪಸ್ ಆಗುವಾಗ ರಾಜನಂದಿನಿ ಅವರ ಕಾರನ್ನು ಮಂಜು ಎಂಬಾತ ರಸ್ತೆ ಮಧ್ಯೆದಲ್ಲಿ ಅಡ್ಡ …

Read More »

ಕಾಮಗಾರಿ ಹಿನ್ನಲೆ ‘ಆಗುಂಬೆ ಘಾಟ್’ ರಸ್ತೆ 10 ದಿನ ಬಂದ್

ಶಿವಮೊಗ್ಗ: ಈಗಾಗಲೇ ರಸ್ತೆ ಕಾಮಗಾರಿ ಹಿನ್ನಲೆಯಲ್ಲಿ ಹಲವು ಬಾರಿ ಬಂದ್ ಆಗಿದ್ದಂತ ಆಗುಂಬೆ ರಸ್ತೆ , ಈಗ ಮತ್ತೆ ಬಂದ್ 10 ದಿನ ಬಂದ್ ಆಗಲಿದೆ. ಈ ಕುರಿತಂತೆ ಶಿವಮೊಗ್ಗ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ-ಹೆಬ್ರಿವರೆಗೆ ರಸ್ತೆ ದುರಸ್ತಿ ಕಾಮಗಾರಿ ಹಿನ್ನಲೆಯಲ್ಲಿ ಮಾರ್ಚ್ 5 ರಿಂದ 15ರವರೆಗೆ ಹತ್ತು ದಿನ ಬೆಳಿಗ್ಗೆ 7 ರಿಂದ ಸಂಜೆ 7ರವೆರೆಗೆ ಆಗುಂಬೆ ಘಾಟ್ ಸಂಚಾರ ನಿಷೇಧಿಸಲಾಗಿದೆ …

Read More »

ಶಿವಮೊಗ್ಗ: ವೇಗವಾಗಿ ಬಂದ ಟಿಪ್ಪರ್ ಕಾರಿಗೆ ಡಿಕ್ಕಿ! ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ ಬಳಿ ಭೀಕರ ಅಪಘಾತ (Accident) ನಡೆದಿದೆ. ವೇಗವಾಗಿ ಬಂದ ಟಿಪ್ಪರ್ ಡಿವೈಡರ್​ಗೆ ಗುದ್ದಿ ಕಾರಿಗೆ (Car) ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಷಣ್ಣುಗ್ (39) ಮತ್ತು ರಾಮಚಂದ್ರ (40) ಎಂಬುವವರು ಭೀಕರ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ವೇಗವಾಗಿ ಬಂದ ಚಾಲಕನ ಎಡವಟ್ಟಿನಿಂದ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಘಟನೆ ಬಳಿಕ ಟಿಪ್ಪರ್ ಗಾಡಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ …

Read More »

ಅನಾರೋಗ್ಯದಿಂದ ಗೈರು ಹಾಜರಾಗುವ ವಿದ್ಯಾರ್ಥಿಗಳಿಗೆ ಹಾಜರಾತಿಯನ್ನು ಕಡ್ಡಾಯಗೊಳಿಸಬಾರದು.

ಶಿವಮೊಗ್ಗ: ಕೋವಿಡ್ ಹರಡದಂತೆ ತಡೆಯಲು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೇಲೆ ನಿಗಾ ಇರಿಸಬೇಕು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ನಿಯಂತ್ರಣ ಕುರಿತು ವಿವಿಧ ಇಲಾಖಾ ಅಧಿಕಾರಿಗಳ ಹಾಗೂ ತಜ್ಞ ವೈದ್ಯರ ಸಭೆಯಲ್ಲಿ ಮಾತನಾಡಿದರು. ಸರ್ಕಾರದ ಮಾರ್ಗಸೂಚಿ ಪ್ರಕಾರ ಶಾಲಾ ಕಾಲೇಜುಗಳನ್ನು ನಡೆಸಬೇಕು. ಪಾಸಿಟಿವ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುವ ವಿದ್ಯಾ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಅವರ ಅನುಮತಿ ಪಡೆದ ಬಳಿಕ ರಜೆ ನೀಡಬಹುದಾಗಿದೆ. …

Read More »

ಕುವೆಂಪು ವಿಶ್ವವಿದ್ಯಾಲಯದ 24 ಮಂದಿಯಲ್ಲಿ ಸೋಂಕು ಪತ್ತೆ, ಸೀಲ್ ಡೌನ್ ಗೆ ಆದೇಶ

ಶಿವಮೊಗ್ಗ : 19 ವಿದ್ಯಾರ್ಥಿಗಳು ಹಾಗೂ ಐವರು ಸಿಬ್ಬಂದಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಭದ್ರಾವತಿ ತಾಲ್ಲೂಕು ಶಂಕರಘಟ್ಟದಲ್ಲಿನ ಕುವೆಂಪು ವಿಶ್ವವಿದ್ಯಾಲಯವನ್ನು ಸೀಲ್ ಡೌನ್ ಮಾಡಲಾಗಿದೆ. ಇಲ್ಲಿನ ಗ್ರಂಥಾಲಯ ಮತ್ತು ವಸತಿನಿಲಯದ ಕೆಲವು ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಲಪತಿಯವರ ಆದೇಶದ ಮೇರೆಗೆ ವಿಶ್ವವಿದ್ಯಾಲಯ ಸೀಲ್ ಡೌನ್ ಮಾಡಿ ಆದೇಶ ಹೊರಡಿಸಿದ್ದಾರೆ.   ಜ್ಞಾನ ಸಹ್ಯಾದ್ರಿ ಆವರಣದಲ್ಲಿನ ಎಲ್ಲಾ ಸ್ನಾತಕೋತ್ತರ ಪದವಿ ತರಗತಿಗಳಿಗೆ ಜನವರಿ 17 ರಿಂದ 21 ರವರೆಗೆ …

Read More »

ಟೈಸನ್‌’ ಶ್ವಾನದ ಜನ್ಮದಿನ: 150 ಮಂದಿಗೆ ಬಿರಿಯಾನಿ ಊಟ, 13 ಸಾವಿರ ಬೆಲೆ ಬಾಳುವ ಹಾಸಿಗೆ ಉಡುಗೊರೆ

ಶಿವಮೊಗ್ಗ : ತಾವು ಸಾಕಿರುವ ಶ್ವಾನದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ ಶ್ವಾನಪ್ರಿಯರೊಬ್ಬರು ಶ್ವಾನಕ್ಕೆ ಬೆಲೆಬಾಳುವ ಉಡುಗೊರೆ ನೀಡಿದ್ದಾರೆ.   ಇಲ್ಲಿನ ರಾಗಿಗುಡ್ಡದ ನಿವಾಸಿ ಮಹಮದ್ ಅಯಾಜ್ ಅವರು ಸೈಬೀರಿಯನ್ ಹಸ್ಕಿ ತಳಿಯ ಶ್ವಾನವೊಂದನ್ನು ಸಾಕಿದ್ದಾರೆ. ಅದಕ್ಕೆ ‘ಟೈಸನ್’ ಎಂದು ಹೆಸರಿಟ್ಟಿದ್ದಾರೆ. ‘ಟೈಸನ್‌’ಗೆ ಮೊದಲ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. 150 ಮಂದಿಗೆ ಬಿರಿಯಾನಿ ಊಟ: ಟೈಸನ್ ಮೊದಲ ವರ್ಷದ ಹುಟ್ಟುಹಬ್ಬಕ್ಕಾಗಿ ಮಹಮದ್ ಅಯಾಜ್ ಅವರು ಮನೆ ಬಳಿ ಪೆಂಡಾಲ್ ಹಾಕಿಸಿ, ನಾಯಿಯಿಂದ ಕೇಕ್ …

Read More »

ನಿಯಮ ಮೀರಿ ರಸ್ತೆಗೆ ಇಳಿದ ವಾಹನಗಳು ಸೀಜ್

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆಯಿಂದಲೇ ಪೊಲೀಸರು ಕಾರ್ಯಾಚರಣೆ‌ ನಡೆಸುತ್ತಿದ್ದಾರೆ. ಲಾಕ್ ಡೌನ್ ನಿಯಮ ಮೀರಿ ರಸ್ತೆಗೆ ಇಳಿದ ವಾಹನಗಳು ಸೀಜ್ ಮಾಡಲು ಮುಂದಾಗಿದ್ದಾರೆ. ನಗರದ ಪ್ರತಿ ಸರ್ಕಲ್ ನಲ್ಲೂ ಬ್ಯಾರಿಕೇಡ್ ಅಳವಡಿಸಿ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಬೆಳಗ್ಗೆಯಿಂದ‌ ಇದುವರೆಗೆ ಶಿವಮೊಗ್ಗ ನಗರ ಒಂದರಲ್ಲೇ 200ಕ್ಕೂ ಹೆಚ್ಚು ವಾಹನಗಳು ಸೀಜ್ ಮಾಡಲಾಗಿದೆ. ಇಂದಿನಿಂದ ಶಿವಮೊಗ್ಗದಲ್ಲಿ ವಾಹನದಲ್ಲಿ ಓಡಾಟ ನಡೆಸಲು ಅವಕಾಶವಿಲ್ಲ. ಬೆಳಗ್ಗೆ 6 ಗಂಟೆಯಿಂದ 10 ಗಂಟೆ ಒಳಗೆ ಕಾಲ್ನಡಿಗೆಯಲ್ಲೇ ಬಂದು ದಿನಬಳಕೆ ವಸ್ತುಗಳ …

Read More »

‘ರಾಜ್ಯದಲ್ಲಿ 17 ಕಾಂಗ್ರೆಸ್, ಜೆಡಿಎಸ್ ಶಾಸಕರು ರಾಜೀನಾಮೆ ಕೊಟ್ಟರು; ತಮ್ಮನ್ನು ಗೆಲ್ಲಿಸಿದ ಪಕ್ಷಕ್ಕೆ ದ್ರೋಹ ಬಗೆದರು’

ಶಿವಮೊಗ್ಗ: ರಮೇಶ್ ಜಾರಕಿಹೊಳಿ​ ಸಿಡಿ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಲು ಸಚಿವ ಕೆ.ಎಸ್​.ಈಶ್ವರಪ್ಪ ನಿರಾಕರಿಸಿದ್ದಾರೆ. ಜೊತೆಗೆ, ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಗರಂ ಸಹ ಆದರು. ಒಂದು ದೇಶ ಒಂದು ಚುನಾವಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಒಳ್ಳೇ ವಿಚಾರ ಕೇಳಿದ್ದೇನೆ. ಆ ದರಿದ್ರ ಸಿಡಿ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಈಶ್ವರಪ್ಪ ಹೇಳಿ ಹೊರಟು ಹೋದರು. ಇದಕ್ಕೂ ಮುಂಚೆ, ನಗರದಲ್ಲಿ ನಡೆದ ಒಂದು ದೇಶ ಒಂದು ಚುನಾವಣೆ …

Read More »

ಪ್ರಚೋದನಕಾರಿ ಭಾಷಣದ ಆರೋಪ: ಟಿಕಾಯತ್ ವಿರುದ್ಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲು

ಶಿವಮೊಗ್ಗ: ಮಾರ್ಚ್‌ 20ರಂದು ಇಲ್ಲಿನ ಬಿ.ಎಚ್‌.ರಸ್ತೆಯ ಸೈನ್ಸ್ ಮೈದಾನದಲ್ಲಿ ನಡೆದ ದಕ್ಷಿಣ ಭಾರತದ ಮೊದಲ ರೈತರ ಮಹಾ ಪಂಚಾಯತ್‌ನಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಸಂಯುಕ್ತ ಕಿಸಾನ್‌ ಮೋರ್ಚಾ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾಯ್ದೆ ವಿರೋಧಿಸಿ ರಾಜ್ಯದ ರೈತರು ಬೆಂಗಳೂರಿಗೆ ದಿಗ್ಬಂಧನ ಹಾಕಬೇಕು. ಟ್ರ್ಯಾಕ್ಟರ್‌ಗಳನ್ನೇ ಅಸ್ತ್ರವಾಗಿ ಬಳಸಬೇಕು ಎಂದು ನೀಡಿದ್ದ ಹೇಳಿಕೆ ಆಧಾರಿಸಿ …

Read More »