ಶಿವಮೊಗ್ಗ: ಪೊಲೀಸರನ್ನು ನೋಡುವ ದೃಷ್ಟಿಕೋನ ಬದಲಾಗಬೇಕು. ಪೊಲೀಸರಿಗೆ ಸಮಯದ ಮಿತಿಯೆಂಬುದೇ ಇರುವುದಿಲ್ಲ. ಸರ್ಕಾರಿ ಉದ್ಯೋಗಿಗಳ ಪೈಕಿ ಪೊಲೀಸರ ಕೆಲಸ ಕಠಿಣವಾದದ್ದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಬುಳ್ಳಾಪುರದಲ್ಲಿ 97ನೇ ಆರ್ ಎಎಫ್ ಬೆಟಾಲಿಯನ್ ತರಬೇತಿ ಘಟಕ ಕಟ್ಟಡಕ್ಕೆ ಶಿಲನ್ಯಾಸ ನೆರವೇರಿಸಿ ಮಾತನಾಡಿದ ಅಮಿತ್ ಶಾ, ಸಿಆರ್ ಪಿ ಎಫ್ ನಮ್ಮ ಶಕ್ತಿ. ದೇಶದ ಮೂಲೆ ಮೂಲೆಗೂ ಸಿಆರ್ ಪಿ ಎಫ್ ಹೋಗುತ್ತದೆ …
Read More »ಅಮ್ಮನನ್ನ ನೋಡಲು ಆಸ್ಪತ್ರೆಗೆ ಬಂದ ಬಾಲಕಿಯ ಮೇಲೆ ಗ್ಯಾಂಗ್‍ರೇಪ್
ಶಿವಮೊಗ್ಗ: ಆಸ್ಪತ್ರೆಗೆ ದಾಖಲಾಗಿದ್ದ ತಾಯಿಯನ್ನ ನೋಡಲು ಬಂದ ಬಾಲಕಿಯ ವಾರ್ಡ್ ಬಾಯ್ ತನ್ನ ಗೆಳೆಯರ ಜೊತೆ ಸೇರಿ ಅತ್ಯಾಚಾರಗೈದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಅಪ್ರಾಪ್ತೆ ತಾಯಿ ಅನಾರೋಗ್ಯ ಹಿನ್ನೆಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ತಾಯಿಯನ್ನ ನೋಡಲು ಬರುತ್ತಿದ್ದ ಬಾಲಕಿಯನ್ನ ಆಸ್ಪತ್ರೆಯ ವಾರ್ಡ್ ಬಾಯ್ ಪರಿಚಯ ಮಾಡಿಕೊಂಡಿದ್ದಾನೆ. ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ ಹಿನ್ನೆಲೆ ಬಹುತೇಕ ಹೋಟೆಲ್ ಗಳು ಮುಚ್ಚಿವೆ. ಇದನ್ನೇ …
Read More »ಅಡ್ವಾಣಿಗೆ ಭಾರತ ರತ್ನ ನೀಡಿ- ಶಂಕರಮೂರ್ತಿಯಿಂದ ಪ್ರಧಾನಿಗೆ ಪತ್ರ
ಶಿವಮೊಗ್ಗ: ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ನೀಡುವಂತೆ ವಿಧಾನ ಪರಿಷತ್‍ನ ಮಾಜಿ ಸಭಾಪತಿ ಡಿ.ಎಚ್ ಶಂಕರಮೂರ್ತಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಎಲ್.ಕೆ.ಅಡ್ವಾಣಿ ಅವರು 7 ದಶಕಕ್ಕೂ ಹೆಚ್ಚು ಕಾಲದಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅಡ್ವಾಣಿ ಅವರ ಈ ಎಲ್ಲ ಜನಪರ ಸೇವೆ ಗುರುತಿಸಿ ರಾಷ್ಟ್ರದ ಅತ್ಯುನ್ನತ ಪ್ರಶಸ್ತಿಯಾದ …
Read More »ಆಸ್ಪತ್ರೆಯಲ್ಲಿ ಅಸುನೀಗಿದ ಮಗು ಅದಲು, ಬದಲು
ಶಿವಮೊಗ್ಗ: ಆಸ್ಪತ್ರೆಯಲ್ಲಿ ಮೃತಪಟ್ಟ ನವಜಾತ ಶಿಶುವನ್ನು ಪೋಷಕರಿಗೆ ನೀಡದೇ, ಬದುಕಿರುವ ಮಗುವಿನ ಪೋಷಕರಿಗೆ ಸಿಬ್ಬಂದಿ ನೀಡಿರುವ ಆಘಾತಕಾರಿ ಘಟನೆ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಣೆಬೆಳಕೆರೆ ನಿವಾಸಿಗಳಾದ ಸುಮಾ, ಅಂಜನಪ್ಪ ದಂಪತಿಗೆ ಕಳೆದ ಸೋಮವಾರ ಮೆಗ್ಗಾನ್ ಆಸ್ಪತ್ರೆಯಲ್ಲಿ ಗಂಡು ಮಗು ಜನನವಾಗಿದೆ. ಅದೇ ದಿನ ಶಿವಮೊಗ್ಗ ಜಿಲ್ಲೆಯ ಸೊರಬದ ಸುಮಾ, ಗೋಪಾಲಪ್ಪ ದಂಪತಿಗೂ ಹೆಣ್ಣು ಮಗು ಜನಿಸಿದೆ. ಇಬ್ಬರ ಮಕ್ಕಳನ್ನು ಆರೋಗ್ಯದ ದೃಷ್ಟಿಯಿಂದ ಆಸ್ಪತ್ರೆಯ …
Read More »ಸೊರಬ ಪಟ್ಟಣದಲ್ಲಿ ದಿ.ಬಂಗಾರಪ್ಪ ಅವರ ಸ್ಮಾರಕ ನಿರ್ಮಿಸಲು ಈಗಾಗಲೇ 1 ಕೋಟಿ ರೂ. ಅನುದಾನ:B.S.Y.
ಶಿವಮೊಗ್ಗ: ಸಮಾಜಮುಖಿ ಚಿಂತನೆಯ ನಾಯಕರಾಗಿದ್ದ ಬಂಗಾರಪ್ಪ ಅವರು ಜಾರಿಗೊಳಿಸಿದ ಜನಪರ ಹಾಗೂ ದೂರದೃಷ್ಟಿಯ ಯೋಜನೆಗಳಿಂದಾಗಿ ಇಂದಿಗೂ ಅವರು ಜನಮಾನಸದಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಅವರ 87ನೇ ಜನ್ಮಸ್ಮರಣೆ ಹಾಗೂ ಸೊರಬ ಪಟ್ಟಣದಲ್ಲಿ 21.15ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಉದ್ಯಾನವನವನ್ನು ಆನ್‍ಲೈನ್ ಸಮಾರಂಭದ ಮೂಲಕ ಉದ್ಘಾಟಿಸಿ ಮಾತನಾಡಿದ ಸಿಎಂ, ಶಿಕ್ಷಣ, ಆರೋಗ್ಯ, ಕೃಷಿ ಕ್ಷೇತ್ರದಲ್ಲಿ ಬಂಗಾರಪ್ಪ ಅವರು ತಂದ ದೂರದೃಷ್ಟಿ ಯೋಜನೆಯಿಂದಾಗಿ ಅವರು …
Read More »ಆರ್.ಎಂ.ಪಿ ವೈದ್ಯ ಮಾಡಿದ ನಿರ್ಲಕ್ಷತೆ ಹಾಗೂ ಎಡವಟ್ಟಿನಿಂದ ಬಾಲಕ ತನ್ನ ಎರಡು ಕಣ್ಣನ್ನು ಕಳೆದುಕೊಳ್ಳುವಂತಾಗಿದೆ.
ಶಿವಮೊಗ್ಗ: ನಗುನಗುತ್ತಾ ಎಲ್ಲ ಮಕ್ಕಳಂತೆ ಆಡಿ, ಕುಣಿದು ಬೆಳೆಯಬೇಕಿದ್ದ ಮಗು ಇದೀಗ ತಂದೆಯನ್ನು ಬಿಟ್ಟು ಇರದಂತಹ ಸ್ಥಿತಿಗೆ ಬಂದಿದೆ. ಆರ್.ಎಂ.ಪಿ ವೈದ್ಯ ಮಾಡಿದ ನಿರ್ಲಕ್ಷತೆ ಹಾಗೂ ಎಡವಟ್ಟಿನಿಂದ ಬಾಲಕ ತನ್ನ ಎರಡು ಕಣ್ಣನ್ನು ಕಳೆದುಕೊಳ್ಳುವಂತಾಗಿದೆ. ಸೊರಬ ತಾಲೂಕಿನ ಚಿಟ್ಟೂರು ಗ್ರಾಮದ ನಿವಾಸಿ ಗಿರೀಶ್ ಅವರ ಪುತ್ರ ಶರತ್ ಹುಟ್ಟಿದಾಗ ಎಲ್ಲರಂತೆ ಕಣ್ಣು ಚೆನ್ನಾಗಿಯೇ ಇತ್ತು. ಎಲ್ಲರ ಜೊತೆ ಆಡಿ ಕುಣಿದು ನಲಿಯುತ್ತಿದ್ದ. ಆದರೆ ಇದೀಗ ತಂದೆಯ ಆಶ್ರಯ ಇದ್ದರೆ ಮಾತ್ರ …
Read More »ಶಿಕಾರಿಪುರ ತಾಲೂಕಿನ ಉಡುತಡಿಯ ಸಮಗ್ರ ಅಭಿವೃದ್ಧಿಗೆ ಸರ್ಕಾರ 30 ಕೋಟಿ ರೂ………
ಶಿವಮೊಗ್ಗ: ಅಕ್ಕಮಹಾದೇವಿ ಜನ್ಮಸ್ಥಳವಾದ ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುತಡಿಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಈಗಾಗಲೇ 30 ಕೋಟಿ ರೂ.ಗಳನ್ನು ಮೀಸಲಾಗಿರಿಸಿದ್ದು, ಜಿಲ್ಲೆಯ ಆಕರ್ಷಕ ಪ್ರವಾಸಿ ತಾಣಗಳಲ್ಲೊಂದನ್ನಾಗಿ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಉಡುಗುಣಿ ಗ್ರಾಮಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದ ಸಿಎಂ ಶರಣೆ ಅಕ್ಕಮಹಾದೇವಿಯವರ ಹಾಗೂ 12ನೇ ಶತಮಾನದ ಶಿವಶರಣರ ಮಾಹಿತಿಯನ್ನು ಜನಸಾಮಾನ್ಯರಿಗೆ ತಲುಪಿಸುವ ಸದುದ್ದೇಶ ಹೊಂದಲಾಗಿದೆ ಎಂದರು. ಈ ಕ್ಷೇತ್ರವು ಕರ್ನಾಟಕ ಮಾತ್ರವಲ್ಲದೇ …
Read More »ವರ್ಷದೊಳಗಾಗಿ ಶಿವಮೊಗ್ಗ ವಿಮಾನ ನಿಲ್ದಾಣ ಆರಂಭ :B.S.Y.
ಶಿವಮೊಗ್ಗ: ಜಿಲ್ಲೆಯ ಸೋಗಾನೆ ಬಳಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದ್ದು, 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ವಿಮಾನ ಹಾರಾಟ ಆರಂಭವಾಗುವ ನಿರೀಕ್ಷೆ ಇರುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ, ಆರಂಭದಲ್ಲಿ 2050 ಮೀಟರ್ ರನ್ ವೇ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಏರ್ ಬಸ್ ಸೇರಿದಂತೆ ದೊಡ್ಡ …
Read More »ನೆರೆ ಪೀಡಿತ ಪ್ರದೇಶಗಳಿಗೆ ಹೋಗಿ ಅಂದ್ರೆ ಸಿಎಂ ಬಿ.ಎಸ್. ಯಡಿಯೂರಪ್ಪ ತವರಿಗೆ ಹೊರಟಿದ್ದಾರೆ.
ಶಿವಮೊಗ್ಗ: ನೆರೆ ಪೀಡಿತ ಪ್ರದೇಶಗಳಿಗೆ ಹೋಗಿ ಅಂದ್ರೆ ಸಿಎಂ ಬಿ.ಎಸ್. ಯಡಿಯೂರಪ್ಪ ತವರಿಗೆ ಹೊರಟಿದ್ದಾರೆ. ನಾಳೆಯಿಂದ 3 ದಿನಗಳ ಕಾಲ ಸಿಎಂ ತವರು ಕ್ಷೇತ್ರ ಶಿಕಾರಿಪುರಕ್ಕೆ ಪ್ರವಾಸ ಬೆಳೆಸಲಿದ್ದಾರೆ. ನಾಳೆ ಮಧ್ಯಾಹ್ನ ಬೆಂಗಳೂರಿಂದ ಶಿಕಾರಿಪುರದತ್ತ ಪ್ರಯಾಣ ಬೆಳೆಸಲಿದ್ದು ಅಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಲಾಕ್‌ಡೌನ್ ನಂತರ ಇದೇ ಮೊದಲ ಬಾರಿಗೆ ಸಿಎಂ ತವರು ಕ್ಷೇತ್ರಕ್ಕೆ ತೆರಳಿದ್ದಾರೆ. ಇನ್ನು ಸಿಎಂ ಪ್ರವಾಸ ಕೈಗೊಂಡಿರುವ ಬಗ್ಗೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. …
Read More »ಬೆಳ್ಳಂಬೆಳಗ್ಗೆ ನಡೀತು ಡಬಲ್ ಮರ್ಡರ್.. ಚಾಕುವಿನಿಂದ ಇರಿದು ತಾಯಿ ಮಗನ ಬರ್ಬರ ಹತ್ಯೆ, ಎಲ್ಲಿ?
ಶಿವಮೊಗ್ಗ: ಜಿಲ್ಲೆಯ ಸಾಗರ ಬಳಿಯ ಕಸೆಕಸೆಗೊಡ್ಲು ಗ್ರಾಮದಲ್ಲಿ ತಾಯಿ, ಮಗನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಚಾಕುವಿನಿಂದ ಇರಿದು ತಾಯಿ ಬಂಗಾರಮ್ಮ ಹಾಗೂ ಆಕೆಯ ಪುತ್ರ ಪ್ರವೀಣನನ್ನು ಹತ್ಯೆಮಾಡಲಾಗಿದೆ. ಸಾಗರದ ಹಳೇ ಇಕ್ಕೇರಿಯ ಸಮೀಪವಿರುವ ಕಸೆಕಸೆಗೊಡ್ಲು ಗ್ರಾಮದಲ್ಲಿ ಈ ಡಬಲ್ ಮರ್ಡರ್ ನಡೆದಿದ್ದು ತಾಯಿ ಮಗನನ್ನು ಚಾಕುವಿನಿಂದ ಚುಚ್ಚಿ ಚುಚ್ಚಿ ಭೀಕರವಾಗಿ ಕೊಲೆಮಾಡಲಾಗಿದೆ. ಸಾಗರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »