ಶಿವಮೊಗ್ಗ :ಗ್ರಾಮ ಪಂಚಾಯತ್ ಕಾರ್ಯದರ್ಶಿಯೊಬ್ಬರು ಲಂಚ ಸ್ವೀಕರಿಸುತಿದ್ದ ಸಂದರ್ಭ ಎಸಿಬಿ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹೊಸೂರು ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ. ಶಿಕಾರಿಪುರ ತಾಲೂಕು ಹೊಸೂರು ಗ್ರಾ.ಪಂಚಾಯತ್ ನ ಶಿವಪ್ಪ ಎಸಿಬಿ ದಾಳಿ ವೇಳೆ ಸಿಕ್ಕಿ ಬಿದ್ದಿದ್ದಾರೆ. ಶಿವಪ್ಪ ಅವರು ನರೇಗಾದ 2.10 ಲಕ್ಷ ಹಣ ಬಿಡುಗಡೆಗೆ 8 ಸಾವಿರ ರೂಪಾಯಿ ಲಂಚ ನೀಡುವಂತೆ ಗುತ್ತಿಗೆದಾರ ಮಂಜುನಾಥ ಬಳಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.ಈ ಕುರಿತು …
Read More »ಉತ್ತರ ಒಳನಾಡಿನಲ್ಲಿ ಉತ್ತಮ ಮಳೆ
ಶಿವಮೊಗ್ಗ: ಜಿಲ್ಲೆಯ ಹಲವೆಡೆ ಸೋಮವಾರ ಉತ್ತಮ ಮಳೆಯಾಗಿದೆ. ತೀರ್ಥಹಳ್ಳಿಯಲ್ಲಿ 1.2 ಸೆಂ.ಮೀ, ಆಗುಂಬೆಯಲ್ಲಿ 3.8 ಮಿ.ಮೀ ಮಳೆಯಾಗಿದೆ. ಭಾನುವಾರ ತಡರಾತ್ರಿ ಜಿಲ್ಲೆಯ ಹಲವೆಡೆ ಜೋರು ಮಳೆಯಾಗಿದೆ. ಗಾಳಿ, ಮಳೆಗೆ ಸೊರಬದಲ್ಲಿ ಕೆಲ ಮನೆಗಳು ಹಾನಿಗೀಡಾಗಿವೆ. ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಶಿಕಾರಿಪುರ, ಸಾಗರ, ಹೊಸನಗರದಲ್ಲಿ 4 ಸೆಂ.ಮೀಗೂ ಅಧಿಕ ಮಳೆಯಾಗಿದೆ. ಧಾರಾಕಾರ ಮಳೆ- ಸೇತುವೆ ಮುಳುಗಡೆ: ಭಾನುವಾರ ತಡ ರಾತ್ರಿ ಹಾಗೂ ಸೋಮವಾರ ಮುಂಜಾನೆ ಹುಬ್ಬಳ್ಳಿ, ವಿಜಯಪುರ, …
Read More »ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸಾಲ ಸೌಲಭ್ಯಕ್ಕಾಗಿ ‘ಅರಿವು’ ಯೋಜನೆಯಡಿ ಅರ್ಜಿ ಆಹ್ವಾನ
ಶಿವಮೊಗ್ಗ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಪ್ರಸಕ್ತ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಬೌದ್ಧ, ಸಿಖ್, ಪಾರ್ಸಿ ಹಾಗೂ ಆಂಗ್ಲೋ-ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ ನೀಡಲಿದೆ. ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಂದ ಸಾಲ ಸೌಲಭ್ಯಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ವಿದ್ಯಾರ್ಥಿಗಳು ನಿಗಮದ ವೆಬ್‍ಸೈಟ್ www.kmdc.kar.nic.in/arivu2 ನಲ್ಲಿ ಅರ್ಜಿ ಸಲ್ಲಿಸಿ, ಭರ್ತಿ ಮಾಡಿದ ಅರ್ಜಿಯ ಪ್ರಿಂಟೌಟ್‍ನೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸೆಪ್ಟಂಬರ್ …
Read More »ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕೊರೊನಾ ಸೋಂಕು
ಶಿವಮೊಗ್ಗ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆಯಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಇಂದು ಸಚಿವ ಕೆ.ಎಸ್ ಈಶ್ವರಪ್ಪಗೂ ಕೊರೊನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ನನಗೆ ಇಂದು ಕೊರೊನಾ ಸೋಂಕು ದೃಢ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ. ಸಧ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ …
Read More »ಫೈರಿಂಗ್ ಪ್ರಕರಣವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು
ಶಿವಮೊಗ್ಗ: ಫೈರಿಂಗ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಕ್ಸಲ್ ಶೋಭಾಳನ್ನು ಜಿಲ್ಲೆಯ ತೀರ್ಥಹಳ್ಳಿ ನ್ಯಾಯಾಲಯಕ್ಕೆ ಇಂದು ಹಾಜರು ಪಡಿಸಲಾಗಿದೆ. 2012ರಲ್ಲಿ ಬರ್ಕಣ ಫಾಲ್ಸ್ ಬಳಿ ನಡೆದಿದ್ದ ಫೈರಿಂಗ್ ಪ್ರಕರಣದಲ್ಲಿ ನಕ್ಸಲ್ ಶೋಭಾ ಭಾಗಿಯಾಗಿದ್ದಳು ಎಂದು ದೂರು ದಾಖಲಿಸಲಾಗಿತ್ತು. ಫೈರಿಂಗ್ ಪ್ರಕರಣದ ನಂತರ ಶೋಭಾ ತಲೆ ಮರೆಸಿಕೊಂಡಿದ್ದಳು. ಕಳೆದ ಮಾರ್ಚ್‍ನಲ್ಲಿ ಶೋಭಾಳನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿತ್ತು. ಶೋಭಾ 11 ನಕ್ಸಲ್ ಪ್ರಕರಣಗಳ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಆರೋಪವಿದ್ದು, ಇವಳ ವಿರುದ್ಧ ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನ ವಿವಿಧ ಪೊಲೀಸ್ …
Read More »2020-21ನೇ ಸಾಲಿನ ರೈತ ಬೆಳೆ ಸಮೀಕ್ಷೆ ಆ್ಯಪ್ ಪ್ರಾತ್ಯಕ್ಷಿಕೆ ನಡೆಸಿದಬಿ.ಸಿ.ಪಾಟೀಲ್
ಶಿವಮೊಗ್ಗ/ಹಾವೇರಿ,ಆ.24- ಕೃಷಿ ಹಾಗೂ ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಅವರು ಸೊರಬ ತಾಲೂಕಿನ ಯಲವಾಳ ಗ್ರಾಮ ಹಾಗೂ ಹಾವೇರಿ ಜಿಲ್ಲಾ ಹಿರೇಕೆರೂರು ತಾಲೂಕಿನ ಚಿಕ್ಕಕೊಣತಿ ಗ್ರಾಮದ ಜಮೀನುಗಳಲ್ಲಿ 2020-21ನೇ ಸಾಲಿನ ರೈತ ಬೆಳೆ ಸಮೀಕ್ಷೆ ಆ್ಯಪ್ ಪ್ರಾತ್ಯಕ್ಷಿಕೆ ನಡೆಸಿದರು. ಜಮೀನಿನಲ್ಲಿ ನಿಂತು ಬೆಳೆ ವಿವರ ಸರ್ವೆ ನಂಬರ್ ಸೇರಿದಂತೆ ಜಮೀನಿನಲ್ಲಿನ ತಮ್ಮ ಭಾವಚಿತ್ರವನ್ನು ಆ್ಯಪ್ ಪ್ರಾತ್ಯಕ್ಷಿಕೆ ಮಾಡಿ ರೈತರಿಗೆ ಮಾದರಿಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ರೈತನ ಬೆಳೆ ರೈತನ …
Read More »ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಬಿಸಿಯೂಟ ಸಿಬ್ಬಂದಿ ಪ್ರತಿಭಟನೆ
ಶಿವಮೊಗ್ಗ: ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಬಿಸಿಯೂಟ ಸಿಬ್ಬಂದಿ ಜಿಲ್ಲೆಯಲ್ಲಿ ಇಂದು ಪ್ರತಿಭಟನೆ ನಡೆಸಿದರು. ನಗರದ ಕೋರ್ಟ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ನಡೆಸಿದ ಸಿಬ್ಬಂದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೊರೊನಾ ಬಂದ ದಿನದಿಂದ ಬಿಸಿಯೂಟ ಸಿಬ್ಬಂದಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಬಿಸಿಯೂಟ ಸಿಬ್ಬಂದಿಗೆ ವೇತನ ನೀಡುವಂತೆ ಹಲವು ದಿನದಿಂದ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇವೆ. ಅಲ್ಲದೇ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದೇವೆ. ಆದರೂ ಸರ್ಕಾರ ಮಾತ್ರ ನಿರ್ಲಕ್ಷ್ಯ ವಹಿಸುತ್ತಿದೆ …
Read More »ಹವಾಮಾನ ವೈಪರೀತ್ಯ- ದಾರಿ ಮಧ್ಯೆ ಲ್ಯಾಂಡ್ ಆದ ಹೆಲಿಕಾಪ್ಟರ್
ಶಿವಮೊಗ್ಗ: ಹವಾಮಾನ ವೈಪರಿತ್ಯದಿಂದಾಗಿ ಎಂಎಲ್‍ಸಿ ರಘು ಆಚಾರ್ ಸಂಚಾರ ಮಾಡುತ್ತಿದ್ದ ಹೆಲಿಕಾಪ್ಟರ್ ದಾರಿ ಮಧ್ಯದಲ್ಲಿಯೇ ಲ್ಯಾಂಡ್ ಆದ ಘಟನೆ ಇಂದು ಜಿಲ್ಲೆಯ ಭದ್ರಾವತಿ ತಾಲೂಕಿನ ಅಂಚೆ ಸಿದ್ದಾಪುರದಲ್ಲಿ ನಡೆದಿದೆ.ಶಿವಮೊಗ್ಗದಲ್ಲಿ ಇಂದು ನಡೆದ ಶಾಸಕ ಬಿ.ಕೆ ಸಂಗಮೇಶ್ ಅವರ ಸಹೋದರನ ಪುತ್ರಿಯ ವಿವಾಹ ನಿಶ್ಚಿತಾರ್ಥ ಸಮಾರಂಭದಲ್ಲಿ ಭಾಗವಹಿಸುವ ಸಲುವಾಗಿ ಎಂಎಲ್‍ಸಿ ರಘು ಆಚಾರ್ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಿದ್ದರು. ಆದರೆ ಹೆಲಿಕಾಪ್ಟರ್ ಭದ್ರಾವತಿ ಸಮೀಪ ಬರುತ್ತಿದ್ದಂತೆ ಮೋಡ ಕವಿದ …
Read More »ಪುತ್ರನ ನಿಶ್ಚಿತಾರ್ಥದಲ್ಲಿ ನಿಯಮ ಉಲ್ಲಂಘಿಸಿದ ಲಕ್ಷ್ಮಿ ಹೆಬ್ಬಾಳ್ಕರ್
ಶಿವಮೊಗ್ಗ: ತಮ್ಮ ಮಗನ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೊರೊನಾ ನಿಯಮವನ್ನು ಉಲ್ಲಂಘಿಸಿದ್ದಾರೆ. ಹೌದು. ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹಾಗೂ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ ಸಹೋದರ ಬಿ.ಕೆ ಶಿವಕುಮಾರ್ ಪುತ್ರಿ ಹಿತಾ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಿತು. ಕೊರೊನಾ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳಲ್ಲಿ 50ಕ್ಕಿಂತ ಹೆಚ್ಚು ಜನರು ಸೇರಬಾರದೆಂಬ ನಿಯಮವಿದ್ದರೂ, ಸಮಾರಂಭದಲ್ಲಿ 50ಕ್ಕಿಂತ ಹೆಚ್ಚು ಜನರು ಭಾಗಿಯಾಗಿದ್ದಾರೆ. ಈ ಮೂಲಕ ಶಾಸಕಿ ಕೊರೊನಾ ನಿಯಮವನ್ನು …
Read More »ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ನಿಶ್ಚಿತಾರ್ಥ ಸಮಾರಂಭ……….
ಶಿವಮೊಗ್ಗ: ಇಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ವಿವಾಹ ನಿಶ್ಚಿತಾರ್ಥ ಸಮಾರಂಭ ಜಿಲ್ಲೆಯಲ್ಲಿ ನಡೆಯಲಿದೆ.ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹಾಗೂ ಡಾ. ಹಿತಾ ವಿವಾಹ ನಿಶ್ಚಿತಾರ್ಥ ಇಂದು ನಡೆಯಲಿದೆ. ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಮ್ಮಿ ಹೆಬ್ಬಾಳ್ಕರ್ ಪುತ್ರನಿಗೆ ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಸಹೋದರ ಶಿವಕುಮಾರ್ ಪುತ್ರಿ ಜೊತೆ ನಿಶ್ಚಿತಾರ್ಥ ನಡೆಯಲಿದೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹಾಗೂ ಡಾ. ಹಿತಾ ವಿವಾಹ …
Read More »
Laxmi News 24×7