Breaking News

ಶಿವಮೊಗ್ಗ

ಶಿವಯೋಗಿ ಮಠದ ಪರಮ ಪೂಜ್ಯ ಹಾಲಸ್ವಾಮಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಶಿವಮೊಗ್ಗ : ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕು ರಾಂಪುರದ ಶಿವಯೋಗಿ ಮಠದ ಪರಮ ಪೂಜ್ಯ ಹಾಲಸ್ವಾಮಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಹಲವು ದಿನಗಳಿಂದ ತೀವ್ರ ತರ ಉಸಿರಾಟದ ತೊಂದರೆಯಿಂದ ನರಳುತ್ತಿದ್ದರು. ಭಕ್ತರು ಎಷ್ಟೇ ವಿನಂತಿಸಿದರೂ ಆಸ್ಪತ್ರೆಗೆ ಹೋಗಲು ನಿರಾಕರಿಸಿದ್ದರು. ಕೊನೆಗೆ ಎರಡು ದಿನಗಳ ಹಿಂದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಕೋವಿಡ್‌ ಕೇಂದ್ರಕ್ಕೆ ಕರೆತರಲಾಗಿತ್ತು. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ದಾವಣಗೆರೆ ಜಿಲ್ಲೆ ಸಾಸ್ವೆಹಳ್ಳಿ ಸಮೀಪದ ರಾಂಪುರ ಮಹಾಸಂಸ್ಥಾನದ ಹಾಲಸ್ವಾಮಿ ಅವರಿಗೆ …

Read More »

ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಸಾವು

ಶಿವಮೊಗ್ಗ : ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕರೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟ ಶಿಕ್ಷಕ ಭದ್ರಾವತಿಯ ಸತ್ಯಸಾಯಿ ಶಿಕ್ಷಣ ಸಂಸ್ಥೆಯ ಕುಮಾರ್ (48) ಎಂದು ಗುರುತಿಸಲಾಗಿದೆ. ಮೃತ ಶಿಕ್ಷಕ ಕುಮಾರ್ ಶಿವಮೊಗ್ಗದ ಎನ್.ಇ.ಎಸ್ ಪ್ರೌಢಶಾಲೆಯಲ್ಲಿ ನಡೆಯುತ್ತಿದ್ದ ಸಮಾಜ ವಿಜ್ಞಾನ ವಿಷಯದ ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು. ಇಂದು ಮಧ್ಯಾಹ್ನದವರೆಗೂ ಮೌಲ್ಯಮಾಪನ ಕಾರ್ಯದಲ್ಲಿ ತೊಡಗಿದ್ದ ಮೃತ ಶಿಕ್ಷಕ ಕುಮಾರ್ ಮಧ್ಯಾಹ್ನ ಊಟಕ್ಕೆ ತೆರಳಲು ಹೊರಡುತ್ತಿದ್ದರು. ಈ ವೇಳೆ …

Read More »

ಜೋಗ ಜಲಪಾತದಲ್ಲಿ ಧುಮ್ಮಿಕ್ಕಿ ಹರಿಯುತ್ತಿರೋ ಶರಾವತಿ- ರಸ್ತೆ ಬದಿಯಲ್ಲಿ ಮಣ್ಣು ಕುಸಿತ

ಶಿವಮೊಗ್ಗ: ಕಳೆದ ಒಂದು ವಾರದಿಂದ ಮಲೆನಾಡಿನಾದ್ಯಂತ ಉತ್ತಮ ಮಳೆಯಾಗುತ್ತಿದೆ. ಉತ್ತಮ ಮಳೆಯ ಕಾರಣ ಪ್ರಸಿದ್ಧ ಜಲಪಾತಗಳಲ್ಲಿ ಒಂದಾದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ ಜಲಪಾತದಲ್ಲಿ ಶರಾವತಿ ಧುಮ್ಮಿಕ್ಕಿ ಹರಿಯುತ್ತಿದೆ. ಮಳೆಗಾಲದ ಸಮಯದಲ್ಲಿ ಜೋಗ ಜಲಪಾತವನ್ನು ವೀಕ್ಷಿಸಲು ರಾಜ್ಯ, ಹೊರ ರಾಜ್ಯಗಳಿಂದಲೂ ಪ್ರವಾಸಿಗರು ಜೋಗಕ್ಕೆ ಭೇಟಿ ನೀಡಿ ನಯನ ಮನೋಹರವಾದ ಜಲಪಾದ ದೃಶ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಕೊರೊನಾ ವೈರಸ್ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಸರ್ಕಾರ ಪ್ರವಾಸಿ ತಾಣಗಳಿಗೂ …

Read More »

ಶಿವಮೊಗ್ಗ ಜೈಲಿನಲ್ಲಿ ಸ್ಯಾನಿಟೈಸರ್ ಟನಲ್ ಅಳವಡಿಕೆ

ಶಿವಮೊಗ್ಗ: ಇಡೀ ರಾಜ್ಯದಲ್ಲಿಯೇ ಹಲವಾರು ಬಂಧೀಖಾನೆಗಳು ಕೊರೊನಾ ಪಾಸಿಟಿವ್ ಗಳಿಂದ ನಲುಗಿ ಹೋಗಿದ್ದರೂ, ಶಿವಮೊಗ್ಗದ ಜೈಲು ಮಾತ್ರ ಕೊರೊನಾ ಮುಕ್ತವಾಗಿದೆ. ಅಲ್ಲದೇ ಇದೀಗ ಈ ಜೈಲಿನಲ್ಲಿ ಸ್ಯಾನಿಟೈಸರ್ ಟನಲ್ ಅಳವಡಿಸಲಾಗಿದ್ದು, ಇದು ಕೂಡ ರಾಜ್ಯದಲ್ಲೇ ಪ್ರಪ್ರಥಮವಾಗಿದೆ. ರಾಜ್ಯದಲ್ಲಿ ಅಷ್ಟೇ ಅಲ್ಲ ಭಾರತದಲ್ಲಿಯೇ ಅತ್ಯಂತ ವಿಶೇಷತೆ ಹೊಂದಿರುವ ಇಲ್ಲಿ ಬಂದು ನಿಂತ್ರೆ ಸಾಕು ಸ್ವಚ್ಛಂದ ಗಾಳಿ, ಉತ್ತಮ ಪರಿಸರ, ಸ್ವಚ್ಛತೆ, ಸುಂದರ ಪಾರ್ಕ್, ನಮ್ಮ ಕಣ್ಮನ ಸೆಳೆಯುತ್ತೆ. ಇಂತಹ ಸುಸಜ್ಜಿತವಾದ ಜೈಲು …

Read More »

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಒಂದು ವರ್ಷವಾಯ್ತು:ಬಿ.ಸಿ.ಪಾಟೀಲ್

ಶಿವಮೊಗ್ಗ: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಇಂದಿಗೆ ಒಂದು ವರ್ಷವಾಯ್ತು ಎಂದು ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ದಿನವನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ನೆನಪಿಸಿಕೊಂಡರು. ಶಿವಮೊಗ್ಗದ ಇರುವಕ್ಕಿಯಲ್ಲಿ ನಿರ್ಮಾಣ ಆಗುತ್ತಿರುವ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕಟ್ಟಡ ಕಾಮಗಾರಿ ವೀಕ್ಷಣೆಗೆ ಸಚಿವರು ಆಗಮಿಸಿದ್ದ ವೇಳೆ ಕೃಷಿ ವಿವಿ ಉಪಕುಲಪತಿ ಅವರು ಸಚಿವರನ್ನು ಸನ್ಮಾನಿಸಿದರು. ಈ ವೇಳೆ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದನ್ನು ನೆನಪಿಸಿಕೊಂಡ ಸಚಿವರು ಇಂದು ಕಾಂಗ್ರೆಸ್ ಗೆ …

Read More »

ಕೇವಲ 3 ರೂಪಾಯಿ 46 ಪೈಸೆ ಸಾಲ ಕಟ್ಟಲು ರೈತ 15 ಕಿ.ಮೀ. ದೂರ ಕಾಲ್ನಡಿಗೆಯಲ್ಲಿಯೇ ತೆರಳಿ ಸಾಲ ಮರುಪಾವತಿ ಮಾಡಿ ಬಂದಿದ್ದಾರೆ.

ಶಿವಮೊಗ್ಗ: ಬ್ಯಾಂಕ್‍ಗಳಲ್ಲಿ ಲಕ್ಷ, ಕೋಟಿ ಲೆಕ್ಕದಲ್ಲಿ ಸಾಲ ಪಡೆದವರು ಪಡೆದ ಸಾಲ ಹಿಂದಿರುಗಿಸದೇ ಆರಾಮಾಗಿ ಇದ್ದಾರೆ. ಅಂತಹವರಿಗೆ ಯಾವ ಸರ್ಕಾರಗಳು ಆಗಲಿ, ಬ್ಯಾಂಕ್ ಗಳಾಗಲಿ ಏನು ಮಾಡಲು ಹೋಗಿಲ್ಲ. ಆದರೆ ಇಲ್ಲೊಬ್ಬ ಸ್ವಾಭಿಮಾನಿ ರೈತನನ್ನು ಬ್ಯಾಂಕ್ ಅವಮಾನವೀಯವಾಗಿ ನಡೆಸಿಕೊಂಡಿರುವುದು ಬೆಳಕಿಗೆ ಬಂದಿದೆ. ಹೌದು, ಬ್ಯಾಂಕ್‍ಗೆ ಕೇವಲ 3 ರೂಪಾಯಿ 46 ಪೈಸೆ ಸಾಲ ಕಟ್ಟಲು ರೈತ 15 ಕಿ.ಮೀ. ದೂರ ಕಾಲ್ನಡಿಗೆಯಲ್ಲಿಯೇ ತೆರಳಿ ಸಾಲ ಮರುಪಾವತಿ ಮಾಡಿ ಬಂದಿದ್ದಾರೆ. ಈ …

Read More »

ದಿನದಿಂದ ದಿನಕ್ಕೆ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಳವಾಗತೊಡಗಿದೆ.

ಶಿವಮೊಗ್ಗ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಳವಾಗತೊಡಗಿದೆ. ಭಾನುವಾರ ನಾಲ್ವರಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಆತಂಕದ ಸಂಗತಿ ಎಂದರೆ ಈ ನಾಲ್ವರು ಒಂದೇ ಕುಟುಂಬವರಾಗಿದ್ದಾರೆ. ಸೋಂಕಿತರಲ್ಲಿ 19 ವರ್ಷದ ಮಹಿಳೆ (ಪಿ-11963), 80 ವರ್ಷದ ವೃದ್ಧೆ (ಪಿ-11964), 56 ವರ್ಷದ ಪುರುಷ (ಪಿ-11965) ಹಾಗೂ 20 ವರ್ಷದ ಯುವತಿ (ಪಿ- 11966) ಇದ್ದಾರೆ. ಭಾನುವಾರ ಪತ್ತೆಯಾದ ನಾಲ್ವರು ಸೋಂಕಿತರಿಗೂ ತಮ್ಮ ಸಂಬಂಧಿಯಿಂದಲೇ ಕೊರೋನಾ ತಗುಲಿರುವ ಸಾಧ್ಯತೆ …

Read More »

ಶಿವಮೊಗ್ಗದಲ್ಲಿ ಬೆಳಗ್ಗೆ 8ರಿಂದ ಮಧ್ಯಾಹ್ನ 3ರ ವರೆಗೆ ಮಾತ್ರ ವ್ಯಾಪಾರ, ವಹಿವಾಟು

ಶಿವಮೊಗ್ಗ: ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹಬ್ಬುತ್ತಿದ್ದು, ಸಮುದಾಯಕ್ಕೂ ಹರಡುತ್ತಿದೆಯಾ ಎಂಬ ಅನುಮಾನ ಶುರುವಾಗಿದೆ. ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗದ ದಿನಸಿ ವರ್ತಕರು ಸೋಮವಾರದಿಂದ ಬೆಳಗ್ಗೆ 8ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಿ, ಮಧ್ಯಾಹ್ನದ ನಂತರ ಸ್ವಯಂ ಪ್ರೇರಿತರಾಗಿ ಲಾಕ್‍ಡೌನ್ ಮಾಡಲು ನಿರ್ಧರಿಸಿದ್ದಾರೆ. ವ್ಯಾಪಾರಿಗಳು, ಅಂಗಡಿಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರು ಹಾಗೂ ಗ್ರಾಹಕರ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದಾರೆ. …

Read More »

ಕೊರೊನಾ ಸಂಕಷ್ಟದ ಸಮಯದಲ್ಲಿಯೂ ಕೂಡ ಈ ವಾರಿಯರ್ಸ್ ಗಳು ಜನ ಮೆಚ್ಚುವಂತಹ ಕೆಲಸ ಮಾಡಿ ತೋರಿಸಿದ್ದಾರೆ.

ಶಿವಮೊಗ್ಗ : ಕೊರೊನಾ ಸಂಕಷ್ಟದ ಸಮಯದಲ್ಲಿಯೂ ಕೂಡ ಈ ವಾರಿಯರ್ಸ್ ಗಳು ಜನ ಮೆಚ್ಚುವಂತಹ ಕೆಲಸ ಮಾಡಿ ತೋರಿಸಿದ್ದಾರೆ. ಕೊರೊನಾ ವಾರಿಯರ್ಸ್ ಗಳಾದ ಪೊಲೀಸರು ಸುಂದರವಾದ ಕೆರೆ ಪುನರ್ ನಿರ್ಮಾಣಕ್ಕೆ ಕೈ ಜೋಡಿಸಿ, ಎಲ್ಲರ ಮನೆ ಮಾತಾಗಿದ್ದಾರೆ. ಸ್ವಗ್ರಾಮ ಸಮಿತಿಯ ಸದಸ್ಯರೊಂದಿಗೆ ಕೈ ಜೋಡಿಸಿ ಒತ್ತುವಾರಿಯಾಗಿದ್ದ ಇಡೀ ಕೆರೆಯನ್ನು ಬಿಡಿಸಿಕೊಂಡು, ಕೆರೆಯಲ್ಲಿ ತುಂಬಿದ್ದ ಹೂಳು ತೆಗೆದು ಇದೀಗ ಜೀವ ಕಳೆ ನೀಡಿದ್ದಾರೆ. ಕೇವಲ 80 ಲಕ್ಷ ಲೀ. ನೀರು ತುಂಬುತ್ತಿದ್ದ …

Read More »

ತುಂಗಾ ಜಲಾಶಯದ 4 ಗೇಟ್ ಓಪನ್- 2 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ

ಶಿವಮೊಗ್ಗ/ ಬೆಳಗಾವಿ: ಮಲೆನಾಡು ಹಾಗೂ ತುಂಗಾ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆ ಗಾಜನೂರು ಸಮೀಪದ ತುಂಗಾ ಜಲಾಶಯ ಈಗಾಗಲೇ ಭರ್ತಿಯಾಗಿದೆ. ಹೀಗಾಗಿ ಇಂದು 4 ಕ್ರಸ್ಟ್ ಗೇಟ್ ಮೂಲಕ 2 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ತುಂಗಾ ಜಲಾಶಯ 3.25 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು, 100 ಮೀ. ಎತ್ತರವಿದೆ. ಮುಂಗಾರು ಆರಂಭದಲ್ಲಿಯೇ ಜಲಾಶಯ ಭರ್ತಿಯಾಗಿದ್ದು, ಜಲಾಶಯಕ್ಕೆ ಪ್ರತಿದಿನ 7 ಸಾವಿರ ಕ್ಯೂಸೆಕ್ …

Read More »