Breaking News

ಶಿವಮೊಗ್ಗ

ಶಿವಮೊಗ್ಗದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್ ಐಆರ್ ,ಇನ್ಸ್ಪೆಕ್ಟರ್ ನನ್ನು ಅಮಾನತುಗೊಳಿಸಿ: ಡಿಕೆಶಿ ಆಗ್ರಹ

ಬೆಂಗಳೂರು: ಶಿವಮೊಗ್ಗದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್ ಐಆರ್ ದಾಖಲಿಸಿರುವ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡುವಂತೆ ಒತ್ತಾಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿಎಂ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ. ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ  ಬಿಜೆಪಿ ಕಾರ್ಯಕರ್ತನೊಬ್ಬ ನೀಡಿರುವ ಸುಳ್ಳು ದೂರು ಆಧರಿಸಿ ಸೋನಿಯಾಗಾಂಧಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಪೊಲೀಸ್ ಅಧಿಕಾರಿ ತನ್ನ ಅಧಿಕಾರ‌ ದುರುಪಯೋಗಪಡಿಸಿಕೊಂಡು ಎಫ್​​ಐಆರ್ ದಾಖಲಿಸಿದ್ದಾರೆ. ಕೂಡಲೇ ಆ ಅಧಿಕಾರಿಯನ್ನ ಅಮಾನತು ಮಾಡಬೇಕು ಎಂದು …

Read More »

ತಾಯಿಯ ಶವದೊಂದಿಗೆ 5 ದಿನ ಮನೆಯಲ್ಲೇ ಕಳೆದ ಮಗಳು………

ಶಿವಮೊಗ್ಗ: ತಾಯಿ ಮೃತಪಟ್ಟು ಐದು ದಿನವಾದರೂ ಮಗಳು ಶವದೊಂದಿಗೆ ಐದು ದಿನಗಳ ಕಾಲ ಕಳೆದಿರುವ ಘಟನೆ ಶಿವಮೊಗ್ಗದ ಬಸವನಗುಡಿಯಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಬಸವನಗುಡಿ ನಿವಾಸಿ ನಿವೃತ್ತ ಶಾಲಾ ಶಿಕ್ಷಕಿ ರಾಜೇಶ್ವರಿ ಎಂದು ಗುರುತಿಸಲಾಗಿದೆ. ಮೃತ ರಾಜೇಶ್ವರಿ ಪತಿ ಸಹ ಕಳೆದ 20 ವರ್ಷದ ಹಿಂದೆಯೇ ಮೃತಪಟ್ಟಿದ್ದರು. ಹೀಗಾಗಿ ಮನೆಯಲ್ಲಿ ತಾಯಿ ಮಗಳು ಇಬ್ಬರೇ ವಾಸಿಸುತ್ತಿದ್ದರು. ಆದರೆ ಕಳೆದ ಹಲವು ವರ್ಷಗಳಿಂದ ಮೃತ ರಾಜೇಶ್ವರಿ ಸ್ತನ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು. …

Read More »

ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುವ ಎಲ್ಲ ಬಸ್‍ಗಳ ಟಿಕೆಟ್ ಸೋಲ್ಡ್ ಔಟ್…….

ಶಿವಮೊಗ್ಗ: ಲಾಕ್‍ಡೌನ್‍ನ ನಾಲ್ಕನೇ ಹಂತ ಆರಂಭವಾದ ಬೆನ್ನಲ್ಲೇ ರಾಜ್ಯದಲ್ಲಿ ನಿಗದಿತ ಬಸ್ ಸಂಚಾರವನ್ನು ಸರ್ಕಾರ ಆರಂಭಿಸಿದ್ದು, ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುವ ಬಹುತೇಕ ಎಲ್ಲ ಬಸ್‍ಗಳ ಟಿಕೇಟ್ ಸೋಲ್ಡ್ ಔಟ್ ಆಗಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ಹಲವರು ಸೀಟ್ ಕಾಯ್ದಿರಿಸಿ ಪ್ರಯಾಣಿಸುತ್ತಿದ್ದು, ಇನ್ನೂ ಹಲವರು ನೇರ ಟಿಕೆಟ್ ಪಡೆದು ಸಂಚರಿಸುತ್ತಿದ್ದಾರೆ. ಈಗಾಗಲೇ 6 ಬಸ್‍ಗಳು ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಿವೆ. ಮಧ್ಯಾಹ್ನ 1 ಗಂಟೆಯವರೆಗೆ ಇನ್ನೂ ಆರೇಳು ಬಸ್‍ಗಳು ಸಿಲಿಕಾನ್ ಸಿಟಿಯತ್ತ ಪ್ರಯಾಣ ಬೆಳೆಸಲು …

Read More »

ತಬ್ಲಿಘಿಗಳ ನಂತರ ಮಲೆನಾಡಿಗೆ ಮುಂಬೈ ನಂಟಿನ ಕಂಟಕ……….

ಶಿವಮೊಗ್ಗ: ಕೊರೊನಾ ಸೋಂಕು ಕಾಣಿಸಿಕೊಂಡ ಆರಂಭದ ದಿನದಿಂದಲೂ ಮಲೆನಾಡಿನ ಶಿವಮೊಗ್ಗ ಜಿಲ್ಲೆ ಗ್ರೀನ್ ಝೋನ್ ನಲ್ಲಿತ್ತು. ಒಂದೂ ಪಾಸಿಟಿವ್ ಪ್ರಕರಣ ಪತ್ತೆಯಾಗಿರಲಿಲ್ಲ. ಆದರೆ ಇದೀಗ ಒಂದೆಡೆ ಅಹಮದಾಬಾದ್‍ನ ತಬ್ಲಿಘಿಗಳು, ಮತ್ತೊಂದೆಡೆ ಮುಂಬೈನಿಂದ ಬಂದ ವಲಸೆ ಕಾರ್ಮಿಕರು ಮಲೆನಾಡಿನ ಮಂದಿಗೆ ಕಂಟಕವಾಗಿ ಕಾಡುತ್ತಿದ್ದಾರೆ. ಹೀಗಾಗಿ ಇಂದು ಮತ್ತೆ ಮೂರು ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12ಕ್ಕೇರಿದೆ. ಕೊರೊನಾ ಕಾಣಿಸಿಕೊಂಡ ಆರಂಭದಿಂದಲೂ ಜಿಲ್ಲೆ ಹಸಿರು ವಲಯದಲ್ಲಿತ್ತು. ಸರ್ಕಾರ ಲಾಕ್‍ಡೌನ್ ಸಡಿಲಗೊಳಿಸಿದ …

Read More »

ಶಿವಮೊಗ್ಗ, ಚಿತ್ರದುರ್ಗದಲ್ಲಿ ಕ್ವಾರಂಟೈನ್‍ಗೆ ತೀವ್ರ ವಿರೋಧ- ಪೊಲೀಸರ ಜೊತೆ ಜನತೆ ವಾಗ್ವಾದ

ಶಿವಮೊಗ್ಗ/ಚಿತ್ರದುರ್ಗ: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಹೊರ ರಾಜ್ಯ, ಹೊರ ಜಿಲ್ಲೆಗಳಲ್ಲಿಯೇ ಲಾಕ್ ಆಗಿದ್ದ ಕಾರ್ಮಿಕರು, ಜನರು ಇದೀಗ ತಮ್ಮ ತಮ್ಮ ಊರುಗಳತ್ತ ಬರುತ್ತಿದ್ದಾರೆ. ಇದೀಗ ಹೊರ ರಾಜ್ಯಗಳಿಂದ ಬರುತ್ತಿರುವ ಕಾರ್ಮಿಕರಿಗೆ ತಮ್ಮ ಗ್ರಾಮಗಳಲ್ಲಿ ಕ್ವಾರಂಟೈನ್ ಮಾಡಬೇಡಿ ಎಂದು ಗ್ರಾಮಸ್ಥರು ಪ್ರತಿಭಟನೆ ಮಾಡುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಗೆ ಬೇರೆಬೇರೆ ರಾಜ್ಯಗಳಿಂದ ಕಾರ್ಮಿಕರು ಬರುತ್ತಿದ್ದಾರೆ. ಹೊರ ರಾಜ್ಯಗಳಿಂದ ಬರುತ್ತಿರುವ ಕಾರ್ಮಿಕರಿಗೆ ಜಿಲ್ಲಾಡಳಿತ ಸರ್ಕಾರಿ ವಸತಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿ ಕ್ವಾರಂಟೈನ್ ಮಾಡಲು ಸಿದ್ಧತೆ …

Read More »

ಉತ್ತಮ ಆಹಾರ, ಊಳಿದುಕೊಳ್ಳಲು ಸೂಕ್ತ ವ್ಯವಸ್ಥೆ ಇಲ್ಲದೆ ಕೊರೊನಾ ವಾರಿಯರ್ಸ್ ಆಕ್ರೋಶ

ಶಿವಮೊಗ್ಗ: ಕೊರೊನಾ ಕಾಣಿಸಿಕೊಂಡ ದಿನದಿಂದಲೂ ಹಗಲು ರಾತ್ರಿ ಎನ್ನದೇ, ಮನೆಗೂ ಹೋಗದೆ ನರ್ಸ್ ಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ಅವರಿಗೆ ಊಟ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸದೆ ಗೋಳಾಡುವಂತೆ ಮಾಡಲಾಗಿದೆ. ಶಿವಮೊಗ್ಗದ ಮೆಗ್ಗಾನ್ ಭೋಧನಾ ಆಸ್ಪತ್ರೆಯನ್ನು ಕೋವಿಡ್-19 ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ. ಇಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳು ಮನೆಗೆ ಹೋಗುವಂತಿಲ್ಲ. ಕೊರೊನಾ ವಾರಿಯರ್ ಗಳು ಉಳಿದುಕೊಳ್ಳಲು ಜಿಲ್ಲಾಡಳಿತ ನಗರದ ವಿವಿಧ ಹೋಟೆಲ್ ಗಳಲ್ಲಿ ವ್ಯವಸ್ಥೆ ಮಾಡಿದೆ. ಆದರೆ ಹೋಟೆಲ್ ನಲ್ಲಿ ಕೊಠಡಿಗಳು …

Read More »

ಶಿವಮೊಗ್ಗ:ಕೊರೊನಾ ಪರಿಹಾರದಲ್ಲೂ ವಸೂಲಿಗಿಳಿದ ಆಫೀಸರ್ಸ್………….

ಶಿವಮೊಗ್ಗ: ಕೊರೊನಾ ವೈರಸ್ ಕಾಣಿಸಿಕೊಂಡ ದಿನದಿಂದಲೂ ಒಬ್ಬೊಬ್ಬರು ಒಂದೊಂದು ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ಅದರಲ್ಲಿಯೂ ಅತೀ ಹೆಚ್ಚು ಸಮಸ್ಯೆಗೆ ಒಳಗಾದವರು ಅಂದ್ರೆ ದಿನ ದುಡಿಮೆಯ ಕಾರ್ಮಿಕರು. ಹೀಗಾಗಿ ರಾಜ್ಯ ಸರ್ಕಾರ ಇವರ ನೆರವಿಗೆ ನಿಂತಿದೆ. ಅದರಲ್ಲೂ ವಸೂಲಿ ಶುರುವಾಗಿದೆ. ಹೌದು. ಮುಖ್ಯಮಂತ್ರಿ ತವರು ಜಿಲ್ಲೆ ಶಿವಮೊಗ್ಗದಲ್ಲಿ ಆಟೋ ಚಾಲಕರು ಅಧಿಕಾರಿಗಳಿಗೆ ಧಿಕ್ಕಾರ ಹಾಕಿದ್ದಾರೆ. ಕೊರೊನಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಐದು ಸಾವಿರ ಪರಿಹಾರ ಘೋಷಣೆ …

Read More »

ಶಿವಮೊಗ್ಗಕ್ಕೆ ತಬ್ಲಿಘಿಗಳ ಎಂಟ್ರಿ – ಮಲೆನಾಡಿಗರನ್ನು ಆವರಿಸಿಕೊಂಡ ಕೊರೊನಾ ಭೀತಿ…

ಶಿವಮೊಗ್ಗ: ಗ್ರೀನ್ ಝೋನ್‍ನಲ್ಲಿದ್ದ ಚಿತ್ರದುರ್ಗ ಜಿಲ್ಲೆ ತಬ್ಲಿಘಿಗಳ ಎಂಟ್ರಿಯಿಂದ ರೆಡ್ ಝೋನ್‍ಗೆ ಬಂದಿದ್ದು, ಇದೇ ಹಾದಿಯಲ್ಲೀಗ ಶಿವಮೊಗ್ಗ ಇದೆ ಎನಿಸುತ್ತಿದೆ. ಯಾಕಂದ್ರೆ ಇದೀಗ ಶಿವಮೊಗ್ಗಕ್ಕೆ ತಬ್ಲಿಘಿಗಳ ಎಂಟ್ರಿಯಾಗಿದ್ದು, ಮಲೆನಾಡಿಗರಲ್ಲಿ ಕೊರೊನಾ ಭೀತಿ ಹೆಚ್ಚಿಸಿದೆ. ಜಿಲ್ಲೆಯ ಶಿಕಾರಿಪುರ ಮೂಲದ 8 ಮತ್ತು ತೀರ್ಥಹಳ್ಳಿಯ ಒಬ್ಬರು ತಬ್ಲಿಘಿಗಳು ಗುಜರಾತ್‍ನ ಅಹಮದಾಬಾದ್‍ನಿಂದ ಬೆಳಗಾವಿ ಗಡಿ ಮೂಲಕ ಶಿವಮೊಗ್ಗಕ್ಕೆ ವಾಪಸ್ ಬಂದಿದ್ದು, ಇದು ಮಲೆನಾಡಿಗರಲ್ಲಿ ಭೀತಿ ಹೆಚ್ಚಿಸಿದೆ. ಮಾರ್ಚ್ 5ರಂದು ಗುಜರಾತ್‍ನ ಅಹಮದಾಬಾದ್‍ಗೆ ದಾವಣಗೆರೆಯಿಂದ ರೈಲಿನ …

Read More »

ಕೋವಿಡ್-19 ಮುಖ್ಯಮಂತ್ರಿ ಪರಿಹಾರ ನಿಧಿಗೆ 35 ಸಾವಿರ ರೂ. ದೇಣಿಗೆ ನೀಡುವ ಮೂಲಕ ಕೂಲಿ ಕಾರ್ಮಿಕರು ಮಾನವೀಯತೆ ಮೆರೆದಿದ್ದಾರೆ.

ಶಿವಮೊಗ್ಗ: ಕೊರೊನಾ ಬಂದ ಕಾರಣ ಕೂಲಿ ಕಾರ್ಮಿಕರಿಗೆ ಒಂದೆಡೆ ಕೂಲಿ ಕೆಲಸವಿಲ್ಲ, ಇನ್ನೊಂದೆಡೆ ಕೂಲಿ ಇಲ್ಲದೆ ಜೀವನ ಸಾಗಿಸುವುದೇ ಕಷ್ಟವಾಗಿದೆ. ಆದರೆ ಇಂತಹ ಸಮಯದಲ್ಲಿಯೂ ಕೋವಿಡ್-19 ಮುಖ್ಯಮಂತ್ರಿ ಪರಿಹಾರ ನಿಧಿಗೆ 35 ಸಾವಿರ ರೂ. ದೇಣಿಗೆ ನೀಡುವ ಮೂಲಕ ಕೂಲಿ ಕಾರ್ಮಿಕರು ಮಾನವೀಯತೆ ಮೆರೆದಿದ್ದಾರೆ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ ನರೇಗಾ ಯೋಜನೆಯಡಿಯಲ್ಲಿ ಕಾಮಗಾರಿ ಕೆಲಸಗಳು ಆರಂಭವಾಗಿವೆ. ಅದರಂತೆ ಶಿವಮೊಗ್ಗ ಜಿಲ್ಲೆಯ 271 ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಯುತ್ತಿವೆ. ಹೀಗಾಗಿ …

Read More »

ಕಾರ್ಯಕ್ರಮದಲ್ಲಿ ಕೊರೊನಾ ಭಯವಿಲ್ಲದೇಸಾಮಾಜಿಕ ಅಂತರ ಕಾಣದೇ ಇರುವುದು ವಿಪರ್ಯಾಸ….

ಶಿವಮೊಗ್ಗ: ದುಡಿಯುವ ಕೈಗಳಿಗೆ ಕೆಲಸ ನೀಡಬೇಕೆನ್ನುವ ಗುರಿ ಒಂದು ಕಡೆಯಾದರೆ, ಲಾಕ್‍ಡೌನ್ ಕಾರಣದಿಂದ ಮತ್ತೊಂದು ಕಡೆ ಕೆಲಸವಿಲ್ಲದೇ ಜನರು ಕಂಗಾಲಾಗಿರುವುದು. ಇಂತಹ ಸಂದಿಗ್ಧ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ವಿವಿಧ ಯೋಜನೆಗಳಡಿಯಲ್ಲಿ ದುಡಿಯುವ ಕೈಗಳಿಗೆ ಕೆಲಸ ನೀಡಲಾಗಿದೆ. ಈಗಾಗಲೇ ಎನ್.ಆರ್.ಇ.ಜಿ. ಯೋಜನೆ ಅಡಿಯಲ್ಲಿ ಸಾವಿರಾರು ಜನರಿಗೆ ಕೆಲಸ ನೀಡಿರುವ ಇಲಾಖೆ ಇದೀಗ ಅಂತರ್ಜಲ ಹೆಚ್ಚಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ ನೀಡಿದೆ. ರಾಜ್ಯ ಸರ್ಕಾರ ಕೊರೊನಾ ಮಹಾಮಾರಿ ಅಟ್ಟಹಾಸದ …

Read More »