ಹುಬ್ಬಳ್ಳಿ: ಪತಿಯ ಅಂತ್ಯ ಸಂಸ್ಕಾರಕ್ಕೆ ತೆರಳಲು ಪಾಸ್ ಇಲ್ಲದೆ ಪುಟ್ಟ ಮಕ್ಕಳೊಂದಿಗೆ ಪರದಾಡುತ್ತಿದ್ದ ಮಹಿಳೆಗೆ 20 ನಿಮಿಷದಲ್ಲಿ ಪಾಸ್ ವ್ಯವಸ್ಥೆ ಮಾಡುವ ಮೂಲಕ ಹುಬ್ಬಳ್ಳಿ ತಾಲೂಕ ಆಡಳಿತ ಕಾರ್ಯದಕ್ಷತೆಯನ್ನು ಮೆರೆದಿದೆ. ಅರವಿಂದ ನಗರದ ಯಶೋಧ ಲೋಕಾಪುರ ಎಂಬವರ ಪತಿ ಬಾಗಲಕೋಟೆಯ ನವನಗರದಲ್ಲಿ ಸಾವನ್ನಪ್ಪಿದ್ದರು. ಬಾಗಲಕೋಟೆಗೆ ತೆರಳು ಪಾಸ್ ಇಲ್ಲದೆ ಎರಡು ಚಿಕ್ಕ ಮಕ್ಕಳ ಜೊತೆ ತಹಶೀಲ್ದಾರ ಕಚೇರಿಗೆ ಆಗಮಿಸಿದ್ದರು. ಅಂತ್ಯ ಸಂಸ್ಕಾರಕ್ಕೆ ತೆರಳಲು ಪಾಸ್ ನೀಡುವಂತೆ ಮನವಿ ಮಾಡಿದ್ದಾರೆ. ಮಹಿಳೆಯ …
Read More »ಲ್ಯಾಪ್‍ಟಾಪ್ ಬಿಟ್ಟು ನೇಗಿಲ ಹೊತ್ತ ಟೆಕ್ಕಿಗಳು..!
ಹುಬ್ಬಳ್ಳಿ, ಮೇ 5ಅವರು ಹವಾನಿಯಂತ್ರಿತ ಕೋಣೆಯಲ್ಲಿ ಕುಳಿತುಕೊಂಡು ಲ್ಯಾಪ್ ಟ್ಯಾಪ್ ಮುಂದಿಸಿಕೊಂಡು ತಾಂತ್ರಿಕ ಲೋಕದಲ್ಲಿ ಸದಾ ಮಗ್ನರಾಗುತ್ತಿದ್ದ ಯುವಕರು ಈಗ ಬದಲಾದ ಸಂದರ್ಭದಲ್ಲಿ ಹೊಲಗಳತ್ತ ಬಂದಿದ್ದಾರೆ. ಅದು ನೇಗಿಲು ಹೊತ್ತುಕೊಂಡು. ತಮ್ಮ ತಂದೆ ,ತಾಯಿ, ಅಣ್ಣ ತಂಗಿ, ತಮ್ಮಂದಿರ, ಆಳು ಕಾಳು ಜೊತೆಗೆ. ಇನ್ನು ಕೇಲವರು ಬೀದಿ ಬದಿಯಲ್ಲಿ ತರಕಾರಿ ಮಾರಾಟದಲ್ಲಿ ತೊಡಗಿದ್ದಾರೆ. ಹೌದು ಇದು ಕರೋನಾ ವೈರಸ್ ತಂದಿಟ್ಟ ಪರಿಸ್ಥಿತಿ. ಲಂಡನ್, ಕಲ್ಕತ್ತಾ, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ …
Read More »ಹುಬ್ಬಳ್ಳಿಯ ಮಾಧ್ಯಮ ಪ್ರತಿನಿಧಿಗಳಿಗೆ ಆರೋಗ್ಯ ತಪಾಸಣೆ……..
ಹುಬ್ಬಳ್ಳಿ: ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್-19 ಆರೋಗ್ಯ ತಪಾಸಣೆಯನ್ನು ನಗರದ ಕಿಮ್ಸ್ ನ ಪಿಎಂಎಸ್‍ಎಸ್ ವೈ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಾಡಲಾಯಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪತ್ರಕರ್ತರಿಗೆ ಕೋವಿಡ್ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಮಟ್ಟದ ಎಲ್ಲ ಮಾಧ್ಯಮ ಪ್ರತಿನಿಧಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಗಂಟಲು ದ್ರವ ಸಂಗ್ರಹಿಸಲಾಯಿತು. ರಾಜ್ಯದಲ್ಲಿ ಕೋವಿಡ್-19 ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, …
Read More »ಹುಬ್ಬಳ್ಳಿಯ ಒಂದೇ ಕುಟುಂಬದ 7 ಮಂದಿಗೆ ಕೊರೊನಾ ಸೋಂಕು
ಹುಬ್ಬಳ್ಳಿ: ದೆಹಲಿಗೆ ವ್ಯಾಪಾರಕ್ಕಾಗಿ ಹೋಗಿ ಬಂದಿದ್ದ ಹುಬ್ಬಳ್ಳಿಯ ಮುಲ್ಲಾ ಓಣಿಯ ನಿವಾಸಿ ರೋಗಿ ನಂಬರ್-194ರ ಸಂಪರ್ಕದಿಂದ ಇದೀಗ ಹುಬ್ಬಳ್ಳಿಯಲ್ಲಿ ಮತ್ತೆ ಎರಡು ಕೊರೊನಾ ಪಾಸಿಟಿವ್ ಬಂದಿದೆ. ಈ ಮೂಲಕ ಒಬ್ಬನಿಂದ ಒಂದೇ ಕುಟುಂಬದ ಏಳು ಜನರಿಗೆ ಸೋಂಕು ತಗುಲಿದೆ. ತಮ್ಮನಿಂದಾಗಿ ಸಹೋದರ, ಸಹೋದರಿಯರ ಮಕ್ಕಳಿಗೂ ಸೋಂಕು ತಗುಲಿದೆ. ಕೊರೊನಾ ವೈರಸ್ ಮುಲ್ಲಾ ಓಣಿಯ ಕುಟುಂಬಕ್ಕೆ ಸಂಕಷ್ಟವನ್ನು ತಂದೊಡ್ಡಿದ್ದು, ಈಗ ಒಂದೇ ಕುಟುಂಬದಲ್ಲಿಯೇ 7 ಜನರಿಗೆ ಸೋಂಕು ತಗುಲುವ ಮೂಲಕ ಕೊರೊನಾ …
Read More »ಮದ್ಯ ಸಿಗದೆ ಸ್ಯಾನಿಟೈಸರ್ ಕುಡಿದು ವ್ಯಕ್ತಿ ಸಾವು……
ಹುಬ್ಬಳ್ಳಿ: ಲಾಕ್‍ಡೌನ್ ಎಫೆಕ್ಟ್ ನಿಂದ ಮದ್ಯ ಸಿಗದೆ ಮದ್ಯ ವ್ಯಸನಿಗಳು ಪರದಾಡುತ್ತಿದ್ದಾರೆ. ಈ ಮಧ್ಯೆ ಎಣ್ಣೆ ಸಿಗದೆ ವ್ಯಕ್ತಿಯೋರ್ವ ಸ್ಯಾನಿಟೈಸರ್ ಕುಡಿದು ಮೃತಪಟ್ಟ ಘಟನೆ ಕಲಘಟಗಿ ತಾಲೂಕಿನ ಗಂಬ್ಯಾಪುರ ಗ್ರಾಮದಲ್ಲಿ ನಡೆದಿದೆ. ಗಂಬ್ಯಾಪುರ ಗ್ರಾಮದ ನಿವಾಸಿ ಬಸವರಾಜ್ ವೆಂಕಪ್ಪ ಕುರುವಿನಕೊಪ್ಪ(45) ಮೃತ ವ್ಯಕ್ತಿ. ಮದ್ಯ ಸಿಗದೆ ಸ್ಯಾನಿಟೈಸರ್ ಕುಡಿದ ಪರಿಣಾಮ ಮೂರು ದಿನಗಳ ಹಿಂದೆ ಬಸವರಾಜ್ ಅಸ್ವಸ್ಥಗೊಂಡಿದ್ದನು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಬಸವರಾಜ್‍ನನ್ನು ಕಿಮ್ಸ್ ಗೆ ದಾಖಲಿಸಲಾಗಿತ್ತು. ಆದರೆ ಕಿಮ್ಸ್ ನಲ್ಲಿ …
Read More »ಹುಬ್ಬಳ್ಳಿ:ಜಗದೀಶ್ ಶೆಟ್ಟರ್ ಪುತ್ರನಿಂದ ಆಹಾರ ಕಿಟ್ ವಿತರಣೆ……
ಹುಬ್ಬಳ್ಳಿ: ಕೊರೊನಾ ವೈರಸ್ ಲಾಕ್‍ಡೌನ್ ನಡುವೆ ಸಚಿವ ಜಗದೀಶ್ ಶೆಟ್ಟರ್ ಅವರ ಮಗ ಸರ್ಕಾರದ ಆಹಾರ ಕಿಟ್ ವಿತರಣೆ ಮಾಡಿರುವುದು ತೀವ್ರ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಹೌದು, ಯಾವುದೇ ಚುನಾಯಿತ ಪ್ರತಿನಿಧಿ ಅಲ್ಲದಿದ್ದರು ಕೂಡ ಜಗದೀಶ್ ಶೆಟ್ಟರ್ ಅವರ ಪುತ್ರ ಸಂಕಲ್ಪ ಶೆಟ್ಟರ್ ಕಾರ್ಮಿಕ ಇಲಾಖೆಯ ವತಿಯಿಂದ ವಿತರಿಸಲಾಗುತ್ತಿರುವ ಆಹಾರ ಕಿಟ್ ವಿತರಣೆ ಮಾಡಿ ಫೇಸ್‍ಬುಕ್ ಪೋಸ್ಟ್ ಹಾಕಿರುವುದು ಟೀಕೆಗೆ ಗುರಿಯಾಗಿದೆ. ಅಲ್ಲದೇ ಯಾವುದೇ ಚುನಾಯಿತ ವ್ಯಕ್ತಿ ಆಗಿಲ್ಲದಿದ್ದರು ಕೂಡ ತಂದೆಯ …
Read More »ಹುಬ್ಬಳ್ಳಿ-ಧಾರವಾಡದಲ್ಲಿ ಲಾಕ್‍ಡೌನ್ ಉಲ್ಲಂಘಿಸಿ ಕೆಲವೊಂದು ಮದ್ಯ ಮಾರಾಟಗಾರರು ಕದ್ದು ಮುಚ್ಚಿ ಮಾರಾಟ
ಹುಬ್ಬಳ್ಳಿ: ಅವಳಿ ನಗರ ಹುಬ್ಬಳ್ಳಿ-ಧಾರವಾಡದಲ್ಲಿ ಲಾಕ್‍ಡೌನ್ ಉಲ್ಲಂಘಿಸಿ ಕೆಲವೊಂದು ಮದ್ಯ ಮಾರಾಟಗಾರರು ಕದ್ದು ಮುಚ್ಚಿ ಮಾರಾಟ ಮಾಡುವುದು ಬೆಳಕಿಗೆ ಬಂದಿದೆ. ಕಳೆದ 25ದಿನಗಳಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ವಿವಿಧಕಡೆ ದಾಳಿ ನಡೆಸಿ 40 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ. ಮದ್ಯ ಮಾರಾಟಗಾರರು ತಮ್ಮ ಅಂಗಡಿ ಕಳ್ಳತನವಾಗಿದೆ ಎಂದು ಪ್ರತಿ ಬಿಂಬಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಯು, ನಿಮ್ಮ ಬಳಿ ಇರುವ ಮದ್ಯ ಮತ್ತು ಬೀಯರ್ …
Read More »ಹುಬ್ಬಳ್ಳಿಯಲ್ಲಿ ಒಂದೇ ಕುಟುಂಬದ ಐವರಿಗೆ ಕೊರೋನಾ; ಆತಂಕ ಹೆಚ್ಚಿಸಿದೆ
ಹುಬ್ಬಳ್ಳಿ,(ಏ.14): ಹುಬ್ಬಳ್ಳಿಯಲ್ಲಿ ಒಂದೇ ಕುಟುಂಬದ ಐವರಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆ ಆತಂಕ ಹೆಚ್ಚಾಗಿದೆ. ಮುಲ್ಲಾ ಓಣಿಯ ನಿವಾಸಿ 37 ವರ್ಷದ ವ್ಯಕ್ತಿಯ(ಪಿ-236) ಪ್ರಯಾಣ ವಿವರ ದಂಗು ಬಡಿಸಿದೆ. ಈ ವ್ಯಕ್ತಿಯಿಂದಲೇ ಈತನ ಕುಟುಂಬಸ್ಥರಿಗೂ ಸೋಂಕು ತಗುಲಿದೆ. ಸೋಂಕಿತ ವ್ಯಕ್ತಿಯ ಪ್ರಯಾಣ ಹಿನ್ನೆಲೆ ಜಿಲ್ಲಾಡಳಿತಕ್ಕೆ ಹೊಸ ತಲೆನೋವಾಗಿ ಪರಿಣಮಿಸಿದೆ. ಪಿ-236 ವ್ಯಕ್ತಿ ಮಾರ್ಚ್ 23ರಂದು ಬೆಳಗ್ಗೆ ಡ್ರೈವರ್ ಜೊತೆ ಕಾರಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರಕ್ಕೆ ಪ್ರಯಾಣಿಸಿದ್ದಾರೆ. ಮಧ್ಯಾಹ್ನದವರೆಗೆ ಯಲ್ಲಾಪುರದಲ್ಲಿನ …
Read More »ಹುಬ್ಬಳ್ಳಿ ಕೊರೊನಾ ಸೋಂಕಿತನ ಟ್ರಾವೆಲ್ ಹಿಸ್ಟರಿ ……
ಹುಬ್ಬಳ್ಳಿ: ಹುಬ್ಬಳ್ಳಿಯ ಮುಲ್ಲಾ ಓಣಿಯ ಕೊರೊನಾ ಸೋಂಕಿತನ ಅಣ್ಣ ರೋಗಿ ನಂಬರ್-236 ಟ್ರಾವೆಲ್ ಹಿಸ್ಟರಿಯನ್ನು ಜಿಲ್ಲಾಡಳಿತ ಬಿಡುಗಡೆಗೊಳಿಸಿದ್ದು, ಸಂಪರ್ಕದಲ್ಲಿರುವವರು ಕೂಡಲೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಜಿಲ್ಲಾಡಳಿತ ಮನವಿ ಮಾಡಿದೆ. ಪಿ.194ನ ಅಣ್ಣ ಪಿ-236 ಇಡೀ ಹುಬ್ಬಳ್ಳಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಸುತ್ತಾಡಿದ್ದಾನೆ. ಮಾರ್ಚ್ 23ರಂದು ವಾಹನ ಚಾಲಕನ ಸಮೇತ ಯಲ್ಲಾಪುರಕ್ಕೆ ಪ್ರಯಾಣ ಬೆಳೆಸಿ, ಅಲ್ಲಿಂದ ತನ್ನ ಫುಟ್ ವೇರ್ ಅಂಗಡಿ ಓಪನ್ ಮಾಡಿದ್ದಾನೆ. ಅಂದೇ ಭಾರತ …
Read More »ಕ್ವಾರಂಟೈನ್ ಸೇವೆ ನೀಡಿದ ಪ್ರಪ್ರಥಮ NIMA ವೈದ್ಯ
ಹುಬ್ಬಳ್ಳಿ: ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಶನ್ (NIMA) ಸಂಸ್ಥೆಯ ಹಿರಿಯ ಸದಸ್ಯರಾದ ಡಾ.ಗುರುನಾಥ ಕಂಠಿಯವರು ಏಪ್ರಿಲ್ 4ರಂದು ಹುಬ್ಬಳ್ಳಿಯ ಕ್ವಾರಂಟೈನ್ ಸೆಂಟರ್ ನಲ್ಲಿ ಕಾರ್ಯನಿರ್ವಹಿಸಿದ್ದಾರೆ. ಈ ಮೂಲಕ ಕ್ವಾರಂಟೈನ್ ಸೇವೆ ಸಲ್ಲಿಸಿದ ಧಾರವಾಡ ಜಿಲ್ಲೆಯ ಪ್ರಪ್ರಥಮ NIMA ವೈದ್ಯಕೀಯ ಸಂಸ್ಥೆಯ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆಯುರ್ವೇದ ವೈದ್ಯರುಗಳಾದ ಡಾ.ಗುರುನಾಥ ಕಂಠಿ, ಡಾ.ಎನ್.ಎನ್.ಭರದ್ವಾಡ ಮತ್ತು ಡಾ.ಎಂ.ಸಿ.ಪಾಟೀಲ್ ಇವರು ಮಾರ್ಚ್ 9 ರಂದು ಕೊವಿಡ್-19 ಸೇವೆಗಾಗಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‍ವೊಂದರ ಕ್ವಾರಂಟೈನ್ …
Read More »