ಹುಬ್ಬಳ್ಳಿ(ಏ.12): ಕೊರೋನಾ ಸೋಂಕಿನ ವಿರುದ್ಧ ವಿಶ್ವದ ವೈದ್ಯರು ಮನುಕುಲದ ರಕ್ಷಣೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಹುಬ್ಬಳ್ಳಿಯ ಉಣಕಲ್ ಗ್ರಾಮದ ಪಶುವೈದ್ಯರು ಮೃತ್ಯುವಿನ ಬಾಗಿಲು ತಟ್ಟಿದ್ದ ಅನಾಥ ಗರ್ಭಿಣಿ ಹಸುವಿಗೆ ಮರುಜನ್ಮ ನೀಡಿದ್ದಾರೆ. ಈ ಹೃದಯಸ್ಪರ್ಶಿ ಘಟನೆ ಉಣಕಲ್ ಸಿದ್ದಪ್ಪಜ್ಜನ ಹೊಸಮಠದ ಆವರಣದಲ್ಲಿ ನಡೆದಿದೆ. ಉಣಕಲ್ ಕ್ರಾಸ್ ರಾಮಲಿಂಗೇಶ್ವರ ದೇವಸ್ಥಾನದ ಬಯಲಿನಲ್ಲಿ ಪರಸ್ಪರ ಬಡಿದಾಡುತ್ತ ಬಂದ ನಾಲ್ಕಾರು ಬೀಡಾಡಿ ದನಗಳು ತುಂಬು ಗರ್ಭಿಣಿ ಹಸುವೊಂದನ್ನು ಕೆಳಗೆ ಬೀಳಿಸಿದ್ದವು. ಹಸುವಿನ ಮೇಲೆ ದಾಳಿ …
Read More »ಹುಬ್ಬಳ್ಳಿ:ನೈರುತ್ಯ ರೈಲ್ವೆಯಲ್ಲಿ 80,000 ಬೆಡ್‍ಗಳ 312 ಐಸೋಲೇಷನ್ ಬೋಗಿಗಳ ನಿರ್ಮಾಣ
ಹುಬ್ಬಳ್ಳಿ , ಏ.11- ರೈಲ್ವೆ ಇಲಾಖೆಯ 10 ದಿನದಲ್ಲಿ 80,000 ಬೆಡ್‍ಗಳ ಐಸೊಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಿದೆ. ಹುಬ್ಬಳ್ಳಿ ನೈರುತ್ಯ ರೈಲ್ವೆ ವತಿಯಿಂದ 312 ಐಸೊಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದರು. ಹುಬ್ಬಳ್ಳಿಯ ರೈಲ್ವೆ ವರ್ಕಶಾಪ್‍ನಲ್ಲಿ ನಿರ್ಮಿಸಲಾಗಿರುವ ಐಸೋಲೇಷನ್ ಬೋಗಿಗಳನ್ನು ವೀಕ್ಷಿಸಿ ನಂತರ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಿನಂತೆ ದೇಶಾದ್ಯಂತ 20,000 …
Read More »ಹುಬ್ಬಳ್ಳಿಯ ಕಮರಿಪೇಟೆ ಠಾಣೆಯ ಐವರು ಪೊಲೀಸರು ಹೋಂಕ್ವಾರಂಟೈನ್‍ಗೆ
ಹುಬ್ಬಳ್ಳಿ, ಏ.11- ಪೊಲೀಸ್ ಇಲಾಖೆಗೂ ಕೊರೊನಾ ವೈರಸ್ ಬಿಸಿ ತಟ್ಟಿರುವ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ. ಕಮರಿಪೇಟೆ ಪೊಲೀಸ್ ಠಾಣೆಯ ಐದು ಜನ ಪೊಲೀಸರನ್ನು ಹೋಂ ಕ್ವಾರಂಟೈನ್‍ಗೆ ಕಳುಹಿಸಲಾಗಿದೆ. ಐದು ಜನ ಪೊಲೀಸ್ ಸಿಬ್ಬಂದಿ ಕೈಗೆ ಆರೋಗ್ಯ ಇಲಾಖೆ ಸಿಬ್ಬಂದಿ ಸೀಲ್ ಹಾಕಿ ಹೋಂ ಕ್ವಾರಂಟೈನ್‍ನಲ್ಲಿಡಲಾಗಿದೆ. ಹುಬ್ಬಳ್ಳಿಯ ಮುಲ್ಲಾ ಓಣಿಯ ಸೋಂಕಿತನ ಜೊತೆ ಪ್ರಾಥಮಿಕ ಸಂಪರ್ಕದ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ಹೋಂ ಕ್ವಾರಂಟೈನ್‍ನಲ್ಲಿಡಲಾಗಿದೆ. ಕಮರಿಪೇಟೆ ಠಾಣಾ ವ್ಯಾಪ್ತಿಯಲ್ಲಿರುವ ಮುಲ್ಲಾ ಓಣಿಯಲ್ಲಿರುವ …
Read More »ನೈರುತ್ಯ ರೈಲ್ವೆಯಿಂದ 312 ಐಸೋಲೇಷನ್ ಬೋಗಿಗಳ ನಿರ್ಮಾಣ; ಕೇಂದ್ರ ಸಚಿವ ಸುರೇಶ್ ಅಂಗಡಿ
ಹುಬ್ಬಳ್ಳಿ: ರೈಲ್ವೆ ಇಲಾಖೆಯ 10 ದಿನದಲ್ಲಿ 80 ಸಾವಿರ ಬೆಡ್‍ಗಳ ಐಸೋಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಿದೆ. ಹುಬ್ಬಳ್ಳಿ ನೈರುತ್ಯ ರೈಲ್ವೆ ವತಿಯಿಂದ 312 ಐಸೋಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದರು. ಹುಬ್ಬಳ್ಳಿಯ ರೈಲ್ವೆ ವರ್ಕಶಾಪ್ ನಲ್ಲಿ ನಿರ್ಮಿಸಲಾಗಿರುವ ಐಸೋಲೇಷನ್ ಬೋಗಿಗಳನ್ನು ವೀಕ್ಷಿಸಿ ನಂತರ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಿನಂತೆ ದೇಶಾದ್ಯಂತ 20 ಸಾವಿರ ಐಸೋಲೇಷನ್ …
Read More »ಯುವಕನಿಗೆ ಬಂದಿದ್ದು ಜಾಂಡೀಸ್ ರೋಗ, ಕೊಂದಿದ್ದು ಮಾತ್ರ ಕೊರೋನಾ..!
ಹುಬ್ಬಳ್ಳಿ,ಏ10- ಆ ಯುವಕನಿಗೆ ಯಾವುದೇ ಹೇಳಿಕೊ ಳ್ಳುವಂತಹ ಮಾರಣಾಂತಿಕ ಕಾಯಿಲೆ ಇರಲಿಲ್ಲ.ಆದರೆ ಅವನಿಗೆ ಕರೋನಾ ವೈರಸ್ ಸೋಂಕು ತಗುಲಿರಬಹುದೆಂದು ಶಂಕೆ ವ್ಯಕ್ತಪಡಿಸಿ ಯುವಕನನ್ನು ಬಲಿ ಪಡೆಯಲಾಯಿತು ಎನ್ನಲಾಗಿದೆ. ಹೌದು ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ಏ. 3ರಂದು ಮೃತಪಟ್ಟ ಧಾರವಾಡದ 31 ವರ್ಷದ ಎಂಜಿನಿಯರ್ ರಾಜು ನಾಯ್ಕ್ ಸಾವು ಇದಕ್ಕೆ ಜ್ವಲಂತ ಸಾಕ್ಷಿ. ನ್ಯುಮೋನಿಯಾ, ಜಾಂಡೀಸ್‌ನಿಂದ ಬಳಲುತ್ತಿದ್ದ ರಾಜುಗೆ ಕೋವಿಡ್-19 ಇರಬಹುದೆಂದು ಶಂಕಿಸಿ ಬೇರಾವುದೇ ಚಿಕಿತ್ಸೆ ನೀಡಲೇ ಇಲ್ಲ ಕೋವಿಡ್-19 ವರದಿ …
Read More »ಹುಬ್ಬಳ್ಳಿಯಲ್ಲಿ ಆಸ್ಪತ್ರೆಗೆ ನುಗ್ಗಿ ಜನರ ಮೇಲೆ ಉಗುಳಿದಾತ ಪೊಲೀಸರ ವಶಕ್ಕೆ
ಹುಬ್ಬಳ್ಳಿ: ಕೊರೊನಾ ವೈರಸ್ ಭೀತಿ ನಡುವೆ ಆಸ್ಪತ್ರೆಗೆ ನುಗ್ಗಿ ಜನರ ಮೇಲೆ ಉಗುಳುವ ಮೂಲಕ ಸೋಂಕು ಹರಡಲು ಯತ್ನಿಸಿದ ಕಿಡಿಗೇಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಆಜಾದ್ ಪಾರ್ಕ್ ನಿವಾಸಿ ಇನಾಯತ್ ಉಲ್ಲಾಖಾನ್ ಈ ಕೃತ್ಯವೆಸೆಗಿದ ಆರೋಪಿ ಎಂದು ಗುರುತಿಸಲಾಗಿದೆ. ಗದಗ ರಸ್ತೆ ಇಸಿಎಸ್‍ಎಚ್ ಆಸ್ಪತ್ರೆಗೆ ಮಾರ್ಚ 3ರ ಮಧ್ಯಾಹ್ನ 1 ಗಂಟೆಗೆ ಏಕಾಏಕಿ ಪ್ರವೇಶ ಮಾಡಿದಲ್ಲದೇ, ಅಲ್ಲಿದ್ದ ಜನರ ಮೇಲೆ ಇನಾಯತ್ ಉಗುಳಿದ್ದಾನೆ. ಕೊರೊನಾ ಸೋಂಕು ಪರಸ್ಪರ ಅಂತರ …
Read More »ಲಾಕ್‌ಡೌನ್ ಅನ್ನೇ ದುರ್ಬಳಕೆ ಮಾಡಿಕೊಂಡ ಪೊಲೀಸ್,ಪೊಲೀಸ್ ವಾಹನದ ದುರ್ಬಳಕೆ
ಲಾಕ್‌ಡೌನ್ ಅನ್ನೇ ದುರ್ಬಳಕೆ ಮಾಡಿಕೊಂಡ ಪೊಲೀಸ್ ಪೊಲೀಸ್ ವಾಹನದ ದುರ್ಬಳಕೆ ಸರ್ಕಾರ ಇವರಿಗೆ ವಾಹನ ಕೊಟ್ಟಿದ್ದು ಸಂತೆ ಮಾಡೋಕಾ…? ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ಸಿಪಿಐ ವಾಹನ ದುರ್ಬಳಕೆ ತರಕಾರಿ, ದಿನಬಳಕೆ ವಸ್ತು ಖರೀದಿಗೆ ಸರ್ಕಾರಿ ವಾಹನ ಬಳಕೆ ಬೆಂಡಿಗೇರಿ ಠಾಣೆ ಸಿಪಿಐ ಅರುಣಕುಮಾರ ಸಾಳಂಖೆ ವಾಹನ ದುರ್ಬಳಕೆ ಅಧಿಕಾರಿಗಳಿಲ್ಲದಿದ್ರೂ ಮಕ್ಕಳನ್ನ ಕರೆತಂದು ಎಣ್ಣೆ ಖರೀದಿಗೆ ಮುಂದಾದ ಪೊಲೀಸರು ಕಣ್ಮಚ್ಚಿ ಕುಳಿತ ಹು-ಧಾ ಮಹಾನಗರ ಪೊಲೀಸ್ ಆಯುಕ್ತರು ಈ ರೀತಿ …
Read More »ಪುಣೆಯಿಂದ ಆಗಮಿಸಿದ್ದ ವ್ಯಕ್ತಿ ಸಾವಿಗೆ ಕೋವಿಡ್ 19 ಕಾರಣವಲ್ಲ: ಕಿಮ್ಸ್ ಸ್ಪಷ್ಟನೆ
ಹುಬ್ಬಳ್ಳಿ: ಮಹಾರಾಷ್ಟ್ರದ ಪುಣೆಯಿಂದ ಬಂದಿದ್ದ ಎಂಜಿನಿಯರ್ ಸಾವಿಗೆ ಕೋವಿಡ್ 19 ವೈರಸ್ ಕಾರಣವಲ್ಲ ಎಂದು ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ ಸ್ಪಷ್ಟನೆ ನೀಡಿದ್ದಾರೆ. ಅತಿಯಾದ ಜಾಂಡಿಸ್ ಹಾಗೂ ಶಂಕಿತ ಬ್ಲಡ್ ಕ್ಯಾನ್ಸರ್ ಇತ್ತು. ಹೀಗಾಗಿ ಆತ ನಿನ್ನೆ ಮಧ್ಯಾಹ್ನ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾನೆ. ಆತನ ವರದಿ ನೆಗೆಟಿವ್ ಬಂದಿದೆ ಎಂದು ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ತಿಳಿಸಿದ್ದಾರೆ. ಧಾರವಾಡದ ದೊಡ್ಡನಾಯಕನಕೊಪ್ಪ ಬಡಾವಣೆಯ ನಿವಾಸಿ ರಾಜು ನಾಯಕ್ ಎಂಬವರು ಜ್ವರ ನೆಗಡಿ ಕೆಮ್ಮು …
Read More »ಹುಬ್ಬಳ್ಳಿ:ಪೊಲೀಸರ ಮೇಲೆ ನಡೆದ ಕಲ್ಲು ತೂರಾಟ ಪೂರ್ವನಿಯೋಜಿತ ಕೃತ್ಯ ಎಂಬ ಅನುಮಾನ
ಹುಬ್ಬಳ್ಳಿ ಏ,4- ಹುಬ್ಬಳ್ಳಿಯ ಮಂಟೂರು ರಸ್ತೆಯ ಅರಳಿಕಟ್ಟಿ ಕಾಲೋನಿಯಲ್ಲಿ ಪೊಲೀಸರ ಮೇಲೆ ನಡೆದ ಕಲ್ಲು ತೂರಾಟ ಪೂರ್ವನಿಯೋಜಿತ ಕೃತ್ಯ ಎಂಬ ಅನುಮಾನ ಕಾಡುತ್ತಿದೆ.ಪೊಲೀಸರ ಕಣ್ತಪ್ಪಿಸಿ ಒಂದು ಕೋಮಿನ ಜನರು ಪ್ರಾರ್ಥನೆ ನಡೆಸಲು ಮುಂದಾಗಿದ್ದರು. ಆದ್ರೆ ಇದನ್ನು ಪ್ರಶ್ನಿಸಲಯ ಹೋದ ಪೊಲೀಸರ ಮೇಲೆ ಆ ಸಮುದಾಯದ ಮಹಿಳೆಯರು ಹಾಗೂ ಪುರುಷರು ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ. ಇದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಪೊಲೀಸರು ಪ್ರಾರ್ಥನೆ ತಡೆಯಲು ಬರುತ್ತಾರೆ ಎಂದು ಪೂರ್ವನಿಯೋಜಿಯವಾಗಿ ಕಲ್ಲು …
Read More »ಸುಮಾರು 135 ವರ್ಷಗಳಿಂದ ನಡೆಯುತ್ತ ಬಂದಿದ್ದ ದಾಸೋಹ ಶನಿವಾರದಿಂದ ಸ್ಥಗಿತ:ಸಿದ್ಧಾರೂಢ ಸ್ವಾಮಿ
ಹುಬ್ಬಳ್ಳಿ: ಕೋವಿಡ್ 19 ವೈರಸ್ ಭೀತಿಯ ಹಿನ್ನೆಲೆಯಲ್ಲಿ ಸಿದ್ಧಾರೂಢ ಸ್ವಾಮಿಗಳ ಮಠದಲ್ಲಿ ಸುಮಾರು 135 ವರ್ಷಗಳಿಂದ ನಡೆಯುತ್ತ ಬಂದಿದ್ದ ದಾಸೋಹ ಶನಿವಾರದಿಂದ ಸ್ಥಗಿತಗೊಂಡಿದೆ. ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮಿಗಳು ದೇಶದ ಎಲ್ಲ ಕ್ಷೇತ್ರಗಳನ್ನು ಸಂಚರಿಸುತ್ತ,ಅಜ್ಞಾನ ನಿವಾರಿಸಿ ಸನ್ಮಾರ್ಗ ತೋರುತ್ತ 1877ರಲ್ಲಿ ತಮ್ಮ 41ನೇ ವಯಸ್ಸಿನಲ್ಲಿ ಹುಬ್ಬಳ್ಳಿಗೆ ಆಗಮಿಸಿದರು. ತಮ್ಮನ್ನು ಭೇಟಿ ಮಾಡಲು ಆಗಮಿಸುವ ಭಕ್ತರು ಹಸಿವಿನಿಂದ ಹೋಗಬಾರದೆಂಬ ಉದ್ದೇಶದಿಂದ ಸುಮಾರು 1885-87ರಲ್ಲಿ ಅನ್ನಸಂತರ್ಪಣೆ ಆರಂಭಿಸಿದ್ದರು. ಅಂದಿನಿಂದ ಅನ್ನಸಂತರ್ಪಣೆ ಪ್ರತಿದಿನ ನಿರಂತರವಾಗಿ …
Read More »