Breaking News
Home / ಜಿಲ್ಲೆ / ಹಾವೇರಿ (page 10)

ಹಾವೇರಿ

ಸುಮಾರು 15-20 ಶಾಸಕರು ನಮ್ಮ ಪಕ್ಷಕ್ಕೆ ಬರಲು ಸಿದ್ಧರಿದ್ದಾರೆ: ಲಕ್ಷ್ಮಣ ಸವದಿ ಹೊಸ ಬಾಂಬ್

ಹಾವೇರಿ: ಬಿಜೆಪಿ ಸಂಪರ್ಕದಲ್ಲಿ ಸುಮಾರು 15-20 ಶಾಸಕರು ಇದಾರೆ. ಅವರೆಲ್ಲರೂ ನಮ್ಮ ಪಕ್ಷಕ್ಕೆ ಬರಲು ಸಿದ್ಧರಿದ್ದಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೊಸ ಬಾಂಬ್ ಸಿಡಿಸಿದ್ದಾರೆ. ಇಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾಧ್ಯಮದೊಂದಿಗೆ ಅವರು ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿ ಸರಕಾರದ ಆಡಳಿತ ನೋಡುತ್ತಿರುವ ಸುಮಾರು 15-20 ಜನ ಕಾಂಗ್ರೆಸ್ – ಜೆಡಿಎಸ್  ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ  ಎನ್ನುವ ಮೂಲಕ ಜಲಸಂಪನ್ಮೂಲ ಸಚಿವ …

Read More »

ಲಾಕ್‍ಡೌನ್ ಸಡಿಲಿಕೆಯಾದ ಹಿನ್ನೆಲೆ ಹಾವೇರಿಯಿಂದ ಅಂತರ್ ಜಿಲ್ಲಾ ಬಸ್ ಸಂಚಾರ ಆರಂಭ

ಹಾವೇರಿ: ಲಾಕ್‍ಡೌನ್ ಸಡಿಲಿಕೆಯಾದ ಹಿನ್ನೆಲೆ ಹಾವೇರಿಯಿಂದ ಅಂತರ್ ಜಿಲ್ಲಾ ಬಸ್ ಸಂಚಾರ ಆರಂಭವಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ಪ್ರಯಾಣಿಕರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಬೆಳಗ್ಗೆ ಏಳೂವರೆಗೆ ಬಸ್ ಸಂಚಾರ ಆರಂಭವಾಗಿದೆ. ಆದರೆ ನಸುಕಿನಿಂದಲೇ ಪ್ರಯಾಣಿಕರು ಬಸ್ ನಿಲ್ದಾಣದಲ್ಲಿ ಕಾದು ಕುಳಿತಿದ್ದು, ಬೇರೆ ಜಿಲ್ಲೆಗಳ ಊರುಗಳಿಗೆ ತೆರಳಲು ನೂರಾರು ಜನ ಬಸ್ ನಿಲ್ದಾಣದಲ್ಲಿ ಜಮಾಯಿಸಿ, ಬಸ್ಸಿಗಾಗಿ ಕಾಯುತ್ತಿದ್ದರು. ಈ ವೇಳೆ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡಿಲ್ಲ. ಅಲ್ಲದೆ ಬಸ್ ಬರುತ್ತಿದ್ದಂತೆ ಪ್ರಯಾಣಿಕರು ಸಾಮಾಜಿಕ ಅಂತರ ಮರೆತು …

Read More »

ಅಣ್ಣನ ಜೊತೆ ಮೀನು ಹಿಡಿಯಲು ತೆರೆಳಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಹಾವೇರಿ: ಹತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಮಾನವೀಯ ಘಟನೆ ಜಿಲ್ಲೆಯ ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಬಂಧನಕ್ಕೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಒತ್ತಾಯಿಸುತ್ತಿದ್ದು, ಹಾನಗಲ್ ಪೊಲೀಸ್ ಠಾಣೆಯ ಬಳಿ ಗ್ರಾಮಸ್ಥರು ಪೊಲೀಸರನ್ನು ಆಗ್ರಹಿಸಿದ್ದಾರೆ. ಮೇ 6ರಂದು ಅಣ್ಣನ ಜೊತೆ ಮೀನು ಹಿಡಿಯಲು ತೆರೆಳಿದ್ದ ವೇಳೆ ಕಾಮುಕ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆ ನಂತರ ಆರೋಪಿ ತಲೆ ಮರೆಸಿಕೊಂಡಿದ್ದು, ಬಾಲಕಿಯ …

Read More »

ಕೊರೊನಾ ವಾರಿಯರ್ಸ್‍ಗೆ ಪಾದ ಪೂಜೆ ಮಾಡಿ ದಾದಿಯರ ದಿನಾಚರಣೆ ಆಚರಣೆ

ಹಾವೇರಿ: ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ವಾರಿಯರ್ಸ್ ಕಾಲು ತೊಳೆದು, ಕುಂಕುಮ ಹಚ್ಚಿ, ಪೂಜೆ ಮಾಡಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿಆಲೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ನಾಲ್ವರು ದಾದಿಯರಿಗೆ ಗ್ರಾಮದ ವಿಶ್ವನಾಥ ಹಿರೇಮಠ ಮತ್ತು ಕೃಷ್ಣ ಈಳಿಗೇರ ಸ್ನೇಹ ಬಳಗದ ವತಿಯಿಂದ ಪಾದ ಪೂಜೆ ನೆರವೇರಿಸಲಾಗಿದೆ. ಈ ಮೂಲಕ ಸ್ನೇಹ ಬಳಗದ ಸದಸ್ಯರು ಕೊರೊನಾ ವಾರಿಯರ್ಸ್ ಕಾರ್ಯಕ್ಕೆ ಧನ್ಯವಾದ ಅರ್ಪಿಸಿದ್ದಾರೆ. …

Read More »

ಸವಣೂರು ಪಟ್ಟಣದ ಎಸ್.ಎಂ.ಕೃಷ್ಣ ನಗರ ಸೀಲ್‍ಡೌನ್

ಹಾವೇರಿ: ಜಿಲ್ಲೆಯ ಸವಣೂರು ಪಟ್ಟಣದ ಎಸ್.ಎಂ.ಕೃಷ್ಣ ನಗರವನ್ನು ಸೀಲ್‍ಡೌನ್ ಮಾಡಲಾಗಿದೆ. ಮುಂಬೈನಿಂದ ಬಂದಿದ್ದ ಇಬ್ಬರಿಗೆ ಕೊರೊನಾ ತಗುಲಿರೋದು ದೃಢಪಡುತ್ತಿದ್ದಂತೆ ಸೋಂಕಿತರು ವಾಸವಾಗಿದ್ದ ಎಸ್.ಎಂ.ಕೃಷ್ಣ ನಗರವನ್ನು ಜಿಲ್ಲಾಡಳಿತ ಸೀಲ್‍ಡೌನ್ ಮಾಡಿದೆ. ಸೀಲ್‍ಡೌನ್ ಮಾಡಿರೋ ಪ್ರದೇಶದಲ್ಲಿ ಯಾರೂ ಒಳಗೆ ಮತ್ತು ಹೊರಗೆ ಹೋಗದಂತೆ ಜಿಲ್ಲಾಡಳಿತ ಪ್ರವೇಶ ನಿರ್ಬಂಧಿಸಿದೆ. ಪ್ರದೇಶದ ಜನರಿಗಾಗಿ ಜಿಲ್ಲಾಡಳಿತ ಕಂಟ್ರೋಲ್ ರೂಂ ಸ್ಥಾಪಿಸಿದ್ದು, ಅಗತ್ಯ ವಸ್ತುಗಳನ್ನ ಪೂರೈಸೋದಾಗಿ ಹೇಳಿದೆ. ಎಸ್.ಎಂ.ಕೃಷ್ಣ ನಗರದ ಸುತ್ತಲಿನ 5 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಬಫರ್ …

Read More »

ಊಟ, ನೀರಿನ ಸೌಲಭ್ಯವಿಲ್ಲದೆ ಕೊರೊನಾ ವಾರಿಯರ್ಸ್ ಪರದಾಟ………..

ಹಾವೇರಿ: ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಆರೋಗ್ಯ ಇಲಾಖೆಯ ಇಬ್ಬರು ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆ ಊಟ, ಕುಡಿಯುವ ನೀಡಿನ ಸೌಲಭ್ಯ ಸಿಗದೆ ಪರದಾಡುತ್ತಿರುವ ಘಟನೆ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ನಡೆದಿದೆ. ಸವಣೂರು ಪಟ್ಟಣದ ಕೊರೊನಾ ಸೋಂಕಿತ ರೋಗಿ ಸಂಖ್ಯೆ ಪಿ-639 ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಕಾರಣ ಸ್ಟಾಪ್ ನರ್ಸ್, ಲ್ಯಾಬ್ ಟೆಕ್ನಿಷಿಯನ್, ಆಶಾ ಕಾರ್ಯಕರ್ತೆ ಅವರನ್ನು ಒಳಗೊಂಡಂತೆ ಮೂವರನ್ನು ಜಿಲ್ಲಾಡಳಿತ ನಿನ್ನೆಯಿಂದ ಪಟ್ಟಣದ ಖಾಸಗಿ ಹೊಟೇಲ್‍ನಲ್ಲಿ …

Read More »

ಮುಂಬೈನಿಂದ ಬಂದಿದ್ದ ಮೂವರಲ್ಲಿ ಓರ್ವನಿಗೆ ಕೊರೊನಾ ಸೋಂಕು,ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ಎಸ್.ಎಂ ಕೃಷ್ಣ ನಗರವನ್ನ ಜಿಲ್ಲಾಡಳಿತ ಸೀಲ್ ಡೌನ್ ಮಾಡಿದೆ.

ಹಾವೇರಿ: ಮುಂಬೈನಿಂದ ಬಂದಿದ್ದ ಮೂವರಲ್ಲಿ ಓರ್ವನಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದ್ದರಿಂದ ಸೋಂಕಿತ ವಾಸವಾಗಿದ್ದ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ಎಸ್.ಎಂ ಕೃಷ್ಣ ನಗರವನ್ನ ಜಿಲ್ಲಾಡಳಿತ ಸೀಲ್ ಡೌನ್ ಮಾಡಿದೆ. ಏಪ್ರಿಲ್ 28 ರಂದು ಗೂಡ್ಸ್ ಲಾರಿಯಲ್ಲಿ ಮೂವರು ಮುಂಬೈನಿಂದ ಸವಣೂರು ಪಟ್ಟಣಕ್ಕೆ ಬಂದಿದ್ದರು. ಅವರನ್ನ ತಪಾಸಣೆಗೆ ಒಳಪಡಿಸಿ ಸ್ಯಾಂಪಲ್ಸ್ ಕಲೆಕ್ಟ್ ಮಾಡಿ ಲ್ಯಾಬ್ ಕಳಿಸಿದ ನಂತರ ಮೂವರಲ್ಲಿ 32 ವರ್ಷದ ಓರ್ವನಿಗೆ ಕೊರೊನಾ ಸೋಂಕು ಇರೋದು ಸೋಮವಾರ ದೃಢಪಟ್ಟಿತ್ತು. …

Read More »

ಹಲವು ವಿನಾಯಿತಿಗಳ ನಡುವೆ ಮೇ 17ರವರೆಗೆ ನಿಷೇಧಾಜ್ಞೆ ಮುಂದುವರಿಕೆ ……..

ಹಾವೇರಿ: ಹಲವು ವಿನಾಯಿತಿಗಳ ನಡುವೆ ಕರೋನಾವೈರಸ್ (Coronavirus) ಕೋವಿಡ್ ನಿರ್ಭಂಧ ಜಿಲ್ಲೆಯಲ್ಲಿ ಮುಂದುವರೆದಿದೆ. ಜಿಲ್ಲೆಯಲ್ಲಿ ನಿಷೇಧಾಜ್ಞೆಯನ್ನು ಮೇ 17ರವರೆಗೆ ಮುಂದುವರಿಸಿ  ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಆದೇಶ ಹೊರಡಿಸಿದ್ದಾರೆ. ಲಾಕ್‌ಡೌನ್ (Lockdown)ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಲಾಗಿದ್ದು, ಅದರಂತೆ ಈ ಕೆಳಕಂಡ ಚಟುವಟಿಕೆಗಳನ್ನು ನಿಯಂತ್ರಿಸಿ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ಐದಕ್ಕಿಂತ ಹೆಚ್ಚು ಜನ ಗುಂಪಾಗಿ ಸೇರುವುದನ್ನು ನಿಷೇಧಿಸಿದೆ. ಅನುಮತಿ ಪಡೆದ ಬಸ್‍ಗಳನ್ನು ಹೊರತುಪಡಿಸಿ ಉಳಿದ ಯಾವುದೇ …

Read More »

ಪೊಲೀಸ್ ವರಿಷ್ಠಾಧಿಕಾರಿ-ಅಪರ ಜಿಲ್ಲಾಧಿಕಾರಿ ನಗರ ಸಂಚಾರ

ಹಾವೇರಿ:  ಹಸಿರು ವಲಯದಲ್ಲಿರುವ ಹಾವೇರಿ ಜಿಲ್ಲೆಯಲ್ಲಿ ಆಯ್ದ ಆರ್ಥಿಕ ಚಟುವಟಿಕೆಗೆ ಅನುಮತಿ ನೀಡಲಾಗಿದೆ. ಬಟ್ಟೆ-ಬಂಗಾರ ಮಾರಾಟದ ಅಂಗಡಿಗಳಿಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿದೆಯೇ ಹಾಗೂ ನಿಯಮ ಪಾಲಿಸಲಾಗತ್ತಿದೆಯೇ ಎಂಬುದನ್ನು ಪರಿಶೀಲಿಸಲು ಇಂದು ಪೊಲೀಸ್ ಹಾಗೂ ಕಂದಾಯ ಅಧಿಕಾರಿಗಳು ನಗರ ಸಂಚಾರ ಕೈಗೊಂಡು ಜಾಗೃತಿ ಮೂಡಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ, ಅಪರ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, …

Read More »

ಹಾವೇರಿ :ಬ್ಯಾಡಗಿ ಎಪಿಎಂಸಿ ಮಾರುಕಟ್ಟೆ ಸಂಪೂರ್ಣವಾಗಿ ಬಂದ್…….

ಹಾವೇರಿ(ಏ. 28): ಒಣ ಮೆಣಸಿನಕಾಯಿ ಕಣಜ ಎಂದೇ ವಿಶ್ವಪ್ರಸಿದ್ಧಿ ಪಡೆದಿರುವ ಬ್ಯಾಡಗಿ ಎಪಿಎಂಸಿ ಮಾರುಕಟ್ಟೆ ಸಂಪೂರ್ಣವಾಗಿ ಬಂದ್ ಆಗಿದೆ. ಬ್ಯಾಡಗಿ ಕೃಷಿ ಉತ್ಪನ್ನ ಮಾರುಕಟ್ಟೆ ತನ್ನದೇ ಆದ ಇತಿಹಾಸ ಹೊಂದಿದ್ದು ಮುಂಬೈ ಸರ್ಕಾರದ ಕಂದಾಯ ಇಲಾಖೆಯ ಅಧಿಸೂಚನೆ ಅನ್ವಯ 1948ರಲ್ಲಿ ಈ ಮಾರುಕಟ್ಟೆ ಸ್ಥಾಪನೆಯಾಗಿದೆ. ಅಂದಿನಿಂದ ಇಂದಿನವರೆಗೂ ಇಷ್ಟು ದಿನಗಳ ಕಾಲ ಈ ಮಾರುಕಟ್ಟೆ ಬಂದ್ ಆಗಿರುವ ದಾಖಲೆ ಇರಲಿಲ್ಲ. ಆದರೆ ಕೊರೋನಾದಿಂದಾಗಿ ಮಾರ್ಚ್19 ರಿಂದ ಸಂಪೂರ್ಣ ಲಾಕ್ ಮಾಡಲಾಗಿದೆ. …

Read More »