Home / ಜಿಲ್ಲೆ / ಹಾಸನ

ಹಾಸನ

ಇನ್ಮುಂದೆ ನಾವೆಲ್ಲರು ಜೆಡಿಎಸ್​ ಪರ ಕೆಲಸ ಮಾಡ್ಬೇಕು: ಕಾರ್ಯಕರ್ತರಿಂದ ಪ್ರತಿಜ್ಞೆ ಮಾಡಿಸಿದ ಎ. ಮಂಜು

ಹಾಸನ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಅರಕಲಗೂಡು ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಮಾಜಿ ಸಚಿವ ಎ. ಮಂಜು ದಿಢೀರ್ ಕಾರ್ಯಕರ್ತರ ಸಭೆ ಕರೆದಿದ್ದು, ಇನ್ನು ಮುಂದೆ ಎಲ್ಲರು ಜೆಡಿಎಸ್​ ಪರ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.   ಅರಕಲಗೂಡು ತಾಲೂಕಿನ ಹಣ್ಯಾಳು ಗ್ರಾಮದಲ್ಲಿ ಸಭೆ ಕರೆದು ಪ್ರತಿಜ್ಞೆ ಮಾಡಿಸಿದ್ದಾರೆ. ಇನ್ನು ಮುಂದೆ ನಾವೆಲ್ಲರು ಜೆಡಿಎಸ್​ನವರು, ಜೆಡಿಎಸ್ ಪಕ್ಷದಿಂದ ಎ.ಮಂಜು ಅವರನ್ನು ಗೆಲ್ಲಿಸಬೇಕು ಎಂದು ಪ್ರತಿಜ್ಞೆ ಮಾಡಿಸಿದ್ದಾರೆ. ಈ ಸಂದರ್ಭದಲ್ಲಿ ಸಾವಿರಕ್ಕೂ ಹೆಚ್ಚು …

Read More »

ಭರವಸೆ ಈಡೇರಿಸದಿದ್ದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಹಾಸನ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್, ಕುಟುಂಬದ ಯಜಮಾನಿಗೆ ₹2 ಸಾವಿರ ಸಹಾಯಧನ, 10 ಕೆ.ಜಿ. ಅಕ್ಕಿಯನ್ನು ಕೊಡುವುದಾಗಿ ಭರವಸೆ ನೀಡಿದ್ದೇವೆ.‌ ಅದನ್ನು‌ ಈಡೇರಿಸುತ್ತೇವೆ. ಒಂದು‌ ವೇಳೆ‌ ಈಡೇರಿಸದೇ ಹೋದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇವೆ’ ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ‌ ಹೇಳಿದರು.   ಇಲ್ಲಿ ಶನಿವಾರ ನಡೆದ ‘ಪ್ರಜಾಧ್ವನಿ‌’ ಯಾತ್ರೆಯಲ್ಲಿ‌ ಮಾತನಾಡಿರುವ ಅವರು, ‘ಈ ಬಗ್ಗೆ ಜಿಲ್ಲೆಯ ಪ್ರತಿಯೊಬ್ಬರಿಗೆ ಪಕ್ಷದ ಕಾರ್ಯಕರ್ತರೂ ಮನವರಿಕೆ ಮಾಡಿಕೊಡಬೇಕು. ಜಿಲ್ಲೆಯಲ್ಲಿ …

Read More »

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಾವನ್ನೇ ಬಯಸಿದರಾ ಮಾಜಿ ಶಾಸಕ?

ಹಾಸನ: ರಾಜಕಾರಣಿಗಳು ವಾಗ್ದಾಳಿ ನಡೆಸುವ ಬರದಲ್ಲಿ ಮಾತಿನ ನಿಯಂತ್ರಣ ಕಳೆದುಕೊಳ್ಳುತ್ತಾರೆ ಎಂಬುದು ಪದೇ ಪದೇ ಗೋಚರಿಸುತ್ತಿರುತ್ತದೆ. ಆದರೆ ಅದು ಮಾಜಿ ಪ್ರಧಾನಿಯೊಬ್ಬರ ಸಾವನ್ನು ಬಯಸುವ ಮಟ್ಟಕ್ಕೆ ಹೋಗುತ್ತದೆ ಎಂಬುದು ವಿಪರ್ಯಾಸ. ಇಂಥದ್ದೊಂದು ವಿವಾದವನ್ನು ಸೃಷ್ಟಿಸಿದ್ದಾರೆ ಮಾಜಿ ಶಾಸಕ ಕೆ.ಎನ್.ರಾಜಣ್ಣ.   ಸಮಾರಂಭವೊಂದರಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌರ‍ದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಶಾಸಕ ಕೆ.ಎನ್ ರಾಜಣ್ಣ, ಪರೋಕ್ಷವಾಗಿ ದೇವೇಗೌಡರ ಸಾವಿನ ಬಗ್ಗೆ ಮಾತನಾಡಿದ್ದು, ಜನಾಕ್ರೋಶಕ್ಕೆ ಗುರಿಯಾಗಿದ್ದಾರೆ.   ಹೆಚ್.ಡಿ.ದೇವೇಗೌಡರು ಈಗಾಗಲೇ …

Read More »

ಅಜಾನ್ ವಿರುದ್ಧ ಜೂನ್ 1ರಿಂದ ಮತ್ತೆ ಹೋರಾಟ: ಮುತಾಲಿಕ್

ಹಾಸನ, ಮೇ 22: “ಅಜಾನ್ ವಿಷಯದಲ್ಲಿ ಸರ್ಕಾರ ದೃಢ ನಿಲುವಿನೊಂದಿಗೆ ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ ಜೂನ್ 1ರಿಂದ ಎರಡನೇ ಸುತ್ತಿನ ಹೋರಾಟವನ್ನು ಶ್ರೀರಾಮಸೇನೆ ವತಿಯಿಂದ ಹಮ್ಮಿಕೊಳ್ಳಲಾಗುವುದು” ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಸಿದರು.   ಹಾಸನದಲ್ಲಿ ಮಾತನಾಡಿದ ಅವರು, “ಸುಪ್ರೀಂಕೋರ್ಟ್ ನಿರ್ದೇಶನದಂತೆ ಮಸೀದಿಗಳಲ್ಲಿ ಅಜಾನ್ ನಿಲ್ಲಿಸಬೇಕಾಗಿದೆ ಹಾಗೂ ನಿರ್ದಿಷ್ಟ ಪ್ರಮಾಣದ ಧ್ವನಿಯೊಂದಿಗೆ ಅಜಾನ್ ಪ್ರಸಾರ ಮಾಡುವುದಕ್ಕೆ ಸೂಚನೆ ನೀಡಲಾಗಿದ್ದರೂ ಸಹ ಬಹುತೇಕ ಮಸೀದಿಗಳಲ್ಲಿ ಇದು ಪಾಲನೆ ಆಗುತ್ತಿಲ್ಲ” …

Read More »

ಖಾವಿ ಬಟ್ಟೆತೊಟ್ಟು ಗುತ್ತಿಗೆದಾರನಿಂದ ಲಕ್ಷ-ಲಕ್ಷ ಕಿತ್ತ ಸ್ವಾಮೀಜಿಗಳು: ಪ್ರಕರಣ ದಾಖಲು

ನಾವು ಕಲ್ಲೂರು ಮಠದ ಸ್ವಾಮೀಜಿ, ಮಠಕ್ಕೆ ರಾಜಕಾರಣಿಗಳಿಂದ 350 ಕೋಟಿ ಹಣ ಬಂದಿದೆ ಎಂದು ಗುತ್ತಿಗೆದಾರನನ್ನ ನಂಬಿಸಿ 3 ಲಕ್ಷಕ್ಕೆ ಟೋಪಿ ಹಾಕಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಮೂಲದ ವಿಜಯ್‌ಕುಮಾರ್ ಅವರೇ ವಂಚನೆಗೆ ಒಳಗಾದವರು. ಮಠಕ್ಕೆ ರಾಜಕಾರಣಿಗಳಿಂದ ಅನುದಾನ ಬಂದಿದ್ದು, ಇದನ್ನು ಸಾಲದ ರೂಪದಲ್ಲಿ ಜನರಿಗೆ ನೀಡುತ್ತಿದ್ದೇವೆ ಎಂದು ನಂಬಿಸಿದ್ದಾರೆ. ಕಾವಿ ಬಟ್ಟೆ ಧರಿಸಿದ ಖದೀಮರು ಶಿವಮೊಗ್ಗದಲ್ಲಿ ವಿಜಯ್‌ಕುಮಾರ್ …

Read More »

ಹಾಸನ ಡಿಸಿ ಎಷ್ಟು ದಿನ ಆಟ ಆಡುತ್ತಾರೆ ಎಂದು ನಾನೂ ನೋಡುತ್ತೇನೆ: ಎಚ್‌.ಡಿ. ರೇವಣ್ಣ

ಹಾಸನ, ಮೇ 5: ಚೆನ್ನಾಗಿದ್ದ ತಾಲೂಕು ಕಚೇರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದಂತೆ ಡಿಸಿ ಕಚೇರಿಯನ್ನೂ ಒಡೆದರೆ ಪರಿಣಾಮ ಬೇರೆಯಾಗುತ್ತದೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಎಚ್ಚರಿಕೆ ನೀಡಿದರು. ಹಾಸನದಲ್ಲಿ ಮಾತಾನಾಡಿದ ಅವರು, ಅಧಿಕಾರ ಇದೆ ಎಂದು ದರ್ಪ ನಡೆಸೋದು ಸರಿಯಲ್ಲ. ಹಾಸನ ಜಿಲ್ಲಾಧಿಕಾರಿ ಅನ್ ಫಿಟ್ ಆಗಿದ್ದಾರೆ. ಅವರು ರಬ್ಬರ್ ಸ್ಟಾಂಪ್ ಇದ್ದಂತೆ. ರಾತ್ರೋರಾತ್ರಿ ಕಟ್ಟಡ ಹೊಡೆಯಲು ಅವರನ್ನು ಇಟ್ಟುಕೊಂಡಿದ್ದಾರೆ. ಡಿಸಿ ಎಷ್ಟು ದಿನ ಆಟ ಆಡುತ್ತಾರೆ ನಾನೂ …

Read More »

ಹುಟ್ಟುಹಬ್ಬದಂದು ಪ್ರೇಯಸಿ ಸಿಗದ ನೋವಿನಲ್ಲಿ ಎಡವಟ್ಟು ಮಾಡಿಕೊಂಡ ಹಾಸನದ ಯುವಕ:

ಹಾಸನ: ಪ್ರೀತಿಸಿದ ಯುವತಿ‌ ಕೈಕೊಟ್ಟಿದ್ದಕ್ಕೆ ಮನನೊಂದ‌ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಗಂಡಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ. ಜೀವಿತ್(29) ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿ. ಈತ ತಮ್ಮದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಕಳೆದ 9 ವರ್ಷಗಳಿಂದ ಪ್ರೀತಿಸಿ ಈಗ ಮದುವೆಯಾಗಲು ನಿರಾಕರಿಸುತ್ತಿದ್ದಾಳೆಂದು ಯುವತಿ ವಿರುದ್ಧ ಜೀವಿತ್​ ಆರೋಪಿಸಿದ್ದಾನೆ. ಮನೆಯವರ ಒತ್ತಡದಿಂದ ಆಕೆ ತನ್ನನ್ನು ನಿರಾಕರಿಸುತ್ತಿದ್ದಾಳೆ. ಒಂಬತ್ತು ವರ್ಷಗಳಿಂದ ಆಕೆಯ ಹುಟ್ಟು ಹಬ್ಬಕ್ಕೆ ನಾನೇ ಕೇಕ್‌ ಕಟ್ …

Read More »

ಎಂಎಲ್‌ಸಿ ಟಿಕೆಟ್ ರೇಸ್‌ನಲ್ಲಿ ಸೊಸೆ, ಮೊಮ್ಮಗ: ನನಗೆ ಕೆಟ್ಟ ಹೆಸರು ತರಬೇಡಿ ಎಂದ ದೇವೇಗೌಡ

ಹಾಸನ, ನವೆಂಬರ್ 12: ರಾಜ್ಯದಲ್ಲಿ ವಿಧಾನ ಪರಿಷತ್​​ ಚುನಾವಣೆ ಘೋಷಣೆಯಾಗಿದೆ. ಹೀಗಾಗಿ ಜೆಡಿಎಸ್ ಭದ್ರಕೋಟೆ ಹಾಸನದಲ್ಲಿಯೂ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ಶುರುವಾಗಿದ್ದು, ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ. ಹಾಸನ ಜಿಲ್ಲೆಯ ರಾಜಕೀಯ ಭದ್ರಕೋಟೆಯಾಗಿರುವ ಪ್ರಮುಖ ಪ್ರಾದೇಶಿಕ ಪಕ್ಷ ಎಂದರೆ ಜೆಡಿಎಸ್. ಸ್ಥಳೀಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವೇ ಇಲ್ಲಿ ಪ್ರಾಬಲ್ಯ ಹೊಂದಿದೆ. ಈ ಬಾರಿ ವಿಧಾನ ಪರಿಷತ್ ಚುನಾವಣೆಗೆ ಕೇವಲ ಮೂರು ಸಾವಿರದ ಐದುನೂರಷ್ಟು ಮಾತ್ರ ಮತದಾರರಿದ್ದು, ಈ …

Read More »

ಹಾಸನಾಂಬೆಯ ಮೊದಲ‌ ದಿನದ ದರ್ಶನೋತ್ಸವ ಆರಂಭ; ಬೆಳಿಗ್ಗೆಯೇ ದೇವಾಲಯ ದತ್ತ ಲಗ್ಗೆಯಿಟ್ಟ ಸಹಸ್ರಾರು ಭಕ್ತರು

ಹಾಸನ: ಎರಡು ವರ್ಷಗಳ ಬಳಿಕ ಸಾರ್ವಜನಿಕರಿಗೆ ಹಾಸನಾಂಬೆ ದರ್ಶನ ಭಾಗ್ಯ ದೊರೆತಿದೆ. ಹಾಸನಾಂಬೆಯ ಮೊದಲ‌ ದಿನದ ದರ್ಶನೋತ್ಸವ ಇಂದು (ಅಕ್ಟೋಬರ್ 29) ಆರಂಭವಾಗಿದ್ದು, ಬೆಳಿಗ್ಗೆಯೇ ದೇವಾಲಯ ದತ್ತ ಸಹಸ್ರಾರು ಭಕ್ತರು ಲಗ್ಗೆಯಿಟ್ಟಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಭಕ್ತರು ಹಾಸನಾಂಬೆಯ ದರ್ಶನ ಪಡೆಯುತ್ತಿದ್ದಾರೆ. ನೆನ್ನೆ ಹಾಸನಾಂಬೆ ಗರ್ಭಗುಡಿಯ ಬಾಗಿಲು ತೆರೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆ. ಆ ನಂತರ ಮಧ್ಯಾಹ್ನ …

Read More »

ಬಿಜೆಪಿ ಜತೆ ಹೊಂದಾಣಿಕೆ ಬೇಡ: ಎಚ್‌ಡಿ ರೇವಣ್ಣ

ಹಾಸನ: ‘ಜೆಡಿಎಸ್‌ ಮುಳುಗುವ ಹಡಗು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿರುವಾಗ ನಮ್ಮ ಜತೆ ಹೊಂದಾಣಿಕೆ ಮಾಡಿಕೊಂಡರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುರ್ಚಿಗೆ ಧಕ್ಕೆ ಬರಲಿದೆ’ ಎಂದು ಶಾಸಕ ಎಚ್.ಡಿ.ರೇವಣ್ಣ ಮಾರ್ಮಿಕವಾಗಿ ಹೇಳಿದರು. ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿಗೆ ಜೆಡಿಎಸ್‌ ಬೆಂಬಲನೀಡಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಯಾವ ಪಕ್ಷಕ್ಕೆ ಬೆಂಬಲ ನೀಡಬೇಕು ಎಂಬುದನ್ನು ಜೆಡಿಎಷ್‌ ವರಿಷ್ಠ ಎಚ್‌.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರು ಕಾರ್ಯಕರ್ತರ …

Read More »