Breaking News

ಹಾಸನ

ಹಾಸನದಲ್ಲಿ ಕೊರೊನಾ ಭೀತಿ- ಸಾಮಾಜಿಕ ಅಂತರ ಮರೆತು ಗ್ರಾಮ ಪಂಚಾಯಿತಿಯಲ್ಲಿ ಗಲಾಟೆ

ಹಾಸನ: ಹಾಸನದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಭೀತಿ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಕಚೇರಿಯೊಳಗೆ ಜನಪ್ರತಿಗಳು, ಅಧಿಕಾರಿಗಳ ಜೊತೆ ಸಾರ್ವಜನಿಕರು ವಾಕ್ಸಮರ ನಡೆಸಿ ಪರಸ್ಪರ ಹಲ್ಲೆ ನಡೆಸಿದ್ದಾರೆ. ಚನ್ನರಾಯಪಟ್ಟಣ ತಾಲೂಕಿನ, ಕೆಂಬಾಳು ಗ್ರಾಮದಲ್ಲಿ ಘಟನೆ ನಡೆದಿದ್ದು, ಕೆಂಬಾಳು ಗ್ರಾಮದ ವ್ಯಾಪ್ತಿಯಲ್ಲಿ ಬರುವ ಅಂಗಡಿಗಳಿಂದ ಶುಲ್ಕ ವಿಧಿಸುವ ಸಲುವಾಗಿ ತೀರ್ಮಾನ ತೆಗೆದುಕೊಳ್ಳಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು. ಇದಕ್ಕೆ ಅಪಸ್ವರ ವ್ಯಕ್ತಪಡಿಸಿದ ಅಂಗಡಿ ಮಾಲೀಕರು, ಸ್ಥಳೀಯರು ಪಂಚಾಯಿತಿಯಲ್ಲಿ …

Read More »

ಮುಂಬೈನಿಂದ ಬಂದವರ ಕ್ವಾರಂಟೈನ್- ಅಂಬುಲೆನ್ಸ್‌ಗೆ ಕಲ್ಲು ತೂರಾಟ…………

ಹಾಸನ: ಮುಂಬೈನಿಂದ ಬಂದವರನ್ನು ಜಿಲ್ಲೆಯ ಹೊಳೆನರಸೀಪುರದಲ್ಲಿ ಕ್ವಾರಂಟೈನ್ ಮಾಡುತ್ತಿರುವುದಕ್ಕೆ ವಿರೋಧಿಸಿ ಅಂಬ್ಯುಲೆನ್ಸ್ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ. ಹೊಳೆನರಸೀಪುರ ತಾಲೂಕಿನ ದೇವರ ಮುದ್ದನಹಳ್ಳಿ ಬಳಿ ಘಟನೆ ನಡೆದಿದ್ದು, ಮುಂಬೈನಿಂದ ಬಂದವರನ್ನು ಇಲ್ಲಿ ಕ್ವಾರಂಟೈನ್ ಮಾಡಿದರೆ ಹಳ್ಳಿಯ ಜನರಿಗೂ ಕೊರೊನಾ ಬರುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ವಾರಂಟೈನ್ ಮಾಡಲು ಕರೆದೊಯ್ದಿದ್ದ ಆಂಬುಲೆನ್ಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮೇ.15ರಂದು ಮುಂಬೈನಿಂದ ಬಂದಿದ್ದ ಒಂದೇ ಕುಟುಂಬದ ನಾಲ್ವರನ್ನು …

Read More »

ಹಾಸನದಲ್ಲಿ ಮತ್ತೆ ಮೂವರಿಗೆ ಕೊರೊನಾ- ಜಿಲ್ಲೆಯಲ್ಲಿ 12ಕ್ಕೇರಿದ ಸೋಂಕಿತರ ಸಂಖ್ಯೆ

ಹಾಸನ: ಜಿಲ್ಲೆಯಲ್ಲಿ ಇಂದು ತಂದೆ-ಮಗ ಸೇರಿದಂತೆ ಮತ್ತೆ ಮೂವರಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಎಲ್ಲರೂ ಮುಂಬೈನಿಂದ ವಾಪಸ್ ಬಂದವರಾಗಿದ್ದಾರೆ. ಈ ಹಿಂದೆ ಹಾಸನದಲ್ಲಿ ಒಂಬತ್ತು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಅವರೆಲ್ಲರೂ ಚನ್ನರಾಯಪಟ್ಟಣ ತಾಲೂಕಿನವರಾಗಿದ್ದು, ಮುಂಬೈಯಿಂದ ವಾಪಸ್ಸಾದವರಾಗಿದ್ದರು. ಇಂದು ಮತ್ತೆ ಮೂರು ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಹಾಸನದಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ 12ಕ್ಕೆ ಏರಿದೆ. ಮೂವರಲ್ಲಿ ಇಬ್ಬರು ಚನ್ನರಾಯಪಟ್ಟಣ ಮೂಲದ ತಂದೆ ಮತ್ತು ಮಗನಾಗಿದ್ದು, ಮುಂಬೈನಿಂದ ಸ್ವಂತ …

Read More »

ಕೊರೊನಾದಿಂದ ಕಲ್ಯಾಣ ಮಂಟಪ ಮಾಲೀಕರಿಗೆ 50 ಕೋಟಿ ನಷ್ಟ

ಹಾಸನ: ಕೊರೊನಾ ವೈರಸ್ ಜಿಲ್ಲೆಯ ಕಲ್ಯಾಣ ಮಂಟಪದ ಮಾಲೀಕರನ್ನು ಅತಂತ್ರ ಸ್ಥಿತಿಗೆ ದೂಡಿದೆ. ಹಾಸನ ನಗರದಲ್ಲೇ ಕಲ್ಯಾಣ ಮಂಟಪ ಮಾಲೀಕರಿಗೆ ಬರೋಬ್ಬರಿ 50 ರಿಂದ 60 ಕೋಟಿ ನಷ್ಟ ಆಗಿದೆ ಎಂದು ಹಾಸನ ಕಲ್ಯಾಣ ಮಂಟಪದ ಅಧ್ಯಕ್ಷ ದಿನೇಶ್ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ದಿನೇಶ್ ಅವರು, ಕಲ್ಯಾಣ ಮಂಟಪ ಮಾಲೀಕರು ಈಗಾಗಲೇ ಮದುವೆಗೆ ಬುಕ್ ಮಾಡಿದವರ ಹಣ ವಾಪಸ್ ಕೊಡಲು ಅಸಾಹಯಕತೆ ತೋಡಿಕೊಂಡಿದ್ದಾರೆ. ಈ ಕುರಿತು ಹಾಸನ …

Read More »

ಗ್ರೀನ್ ಝೋನ್‍ನಲ್ಲಿದ್ದ ಹಾಸನ ಜಿಲ್ಲೆಗೆ ಮುಂಬೈ ಕಂಟಕ!…….

ಹಾಸನ: ಗ್ರೀನ್ ಝೋನ್‍ನಲ್ಲಿದ್ದ ಹಾಸನ ಜಿಲ್ಲೆಗೆ ಮಹಾಮಾರಿ ಕೊರೊನಾ ಕಾಲಿಟ್ಟಿದೆ. ಮುಂಬೈಯಿಂದ ಹಾಸನಕ್ಕೆ ಆಗಮಿಸಿದ ಒಂದೇ ಕುಟುಂಬದ ನಾಲ್ವರಿಗೆ ಸೋಂಕು ದೃಢ ಪಟ್ಟಿದೆ. ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನ ಐವರಲ್ಲಿ ಕೊರೊನಾ ದೃಢಪಟ್ಟಿದೆ. ಚನ್ನರಾಯಪಟ್ಟಣ ತಾಲೂಕಿನ ಐವರು ಮೇ 10ರಂದು ಮುಂಬೈನಿಂದ ಬಂದಿದ್ದರು. ಅದರಲ್ಲಿ ಒಂದೇ ಕುಟುಂಬದ ನಾಲ್ವರು ಒಂದೇ ಕಾರಿನಲ್ಲಿ ಬಂದಿದ್ದರು. ಒಂದೇ ಫ್ಯಾಮಿಲಿಯ ಇಬ್ಬರು ಮಕ್ಕಳು, ಓರ್ವ ಮಹಿಳೆ, ಓರ್ವ ಪುರುಷನಲ್ಲಿ ಸೋಂಕು ದೃಢಪಟ್ಟಿದೆ. ಕಾರ್ ಚಾಲಕನ …

Read More »

ಲಾಕ್‍ಡೌನ್ ಎಫೆಕ್ಟ್ – ಸೈಕಲ್ ಹತ್ತಿ ಉತ್ತರಪ್ರದೇಶಕ್ಕೆ ಹೊರಟ ನಾಲ್ವರು ಯುವಕರು

ಹಾಸನ: ಕೊರೊನಾ ವೈರಸ್ ಹಾವಳಿಯಿಂದ ದೇಶಾದ್ಯಂತ ಜಾರಿಯಲ್ಲಿರುವ ಲಾಕ್‍ಡೌನ್‍ನಿಂದಾಗಿ ತಮ್ಮ ರಾಜ್ಯಕ್ಕೆ ತೆರಳಲು ಸಾಧ್ಯವಾಗದೆ ನಾಲ್ವರು ಯುವಕರು ಹಾಸನದಲ್ಲೇ ಉಳಿದಿದ್ದರು. ಆದರೆ ಈಗ ಹೊಸದಾಗಿ ಸೈಕಲ್ ಖರೀದಿಸಿ ತಮ್ಮ ರಾಜ್ಯದತ್ತ ಪ್ರಯಾಣ ಬೆಳೆಸಿದ್ದಾರೆ. ಉತ್ತರಪ್ರದೇಶದಿಂದ ಹಾಸನಕ್ಕೆ ಕೂಲಿ ಕೆಲಸಕ್ಕೆ ಬಂದಿದ್ದ ಕಾರ್ಮಿಕರು ಲಾಕ್‍ಡೌನ್ ನಂತರ ವಾಪಸ್ ತಮ್ಮ ರಾಜ್ಯಕ್ಕೆ ತೆರಳಲಾಗದೇ ಇಲ್ಲಿಯೇ ಉಳಿದುಕೊಂಡಿದ್ದರು. ಇದೀಗ ಲಾಕ್‍ಡೌನ್ ಸಡಿಲಿಕೆ ಮಾಡಿದ್ದರು ಕೂಡ ವಾಪಸ್ ತೆರಳಲು ಬಸ್ ಇಲ್ಲದಂತಾಗಿದೆ. ಇತ್ತ ಸ್ವಂತ ವಾಹನ …

Read More »

2021ರ ಮಾರ್ಚ್ ವೇಳೆಗೆ ಎತ್ತಿನಹೊಳೆ ಕಾಮಗಾರಿ ಮೊದಲ ಹಂತಕ್ಕೆ ಚಾಲನೆ; ಸಚಿವ ರಮೇಶ್ ಜಾರಕಿಹೊಳಿ

ಶಾಸಕರಾದ ಎಚ್.ಕೆ. ಕುಮಾರಸ್ವಾಮಿ ಹಾಗೂ ಕೆ.ಎಂ. ಶಿವಲಿಂಗೇಗೌಡ ಅವರು ಯೋಜನೆ ಬಗ್ಗೆ ಸಚಿವರಿಗೆ ಮಾಹಿತಿ ನೀಡಿ ತುರ್ತಾಗಿ ಕಾಮಗಾರಿಗಳು ಪೂರ್ಣವಾಗಬೇಕು. ಭೂಮಿ ಕಳೆದುಕೊಂಡವರಿಗೆ ತ್ವರಿತವಾಗಿ ಪರಿಹಾರ ವಿತರಣೆಯಾಗಬೇಕು ಹಾಗೂ ಮೊದಲ ಹಂತದ ಯೋಜನೆ ಆದಷ್ಟು ಬೇಗ ಮುಗಿಯಬೇಕು ಎಂದು ಮನವಿ ಮಾಡಿದರು. ಹಾಸನ: ಜಲ ಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳೆ ಅವರು ಇಂದು ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ಎತ್ತಿನ ಹೊಳೆ ಯೋಜನೆ ಕಾಮಗಾರಿ ಪರಿಶೀಲನೆ  ನಡೆಸಿದರು. ಸಕಲೇಶಪುರ ತಾಲ್ಲೂಕಿನ …

Read More »

ನಮಗೆ ಕೊರೊನ ಬಂದುಬಿಡುತ್ತೆ ಎಂಬ ರೀತಿಯ ಭೀತಿ ಸಚಿವರಲ್ಲಿದೆ:ಗೋಪಾಲಸ್ವಾಮಿ ವ್ಯಂಗ್

ಹಾಸನ: ಗ್ರೀನ್‍ಝೋನ್‍ನಲ್ಲಿರುವ ಹಾಸನ ಜಿಲ್ಲೆಗೆ ಹೊಸ ಸವಾಲು ಎದುರಾಗಿದೆ. ಮುಂಬೈನಿಂದ ಚನ್ನರಾಯಪಟ್ಟಣಕ್ಕೆ ಮೂರು ಸಾವಿರ ಜನ ಆಗಮಿಸಲು ಕಾಯುತ್ತಿರುವ ಬಗ್ಗೆ ಎಂಎಲ್‍ಸಿ ಗೋಪಾಲಸ್ವಾಮಿ ಮಾಹಿತಿ ನೀಡಿದ್ದು, ಅವರೆಲ್ಲರನ್ನು ಸಮರ್ಪಕವಾಗಿ ಕ್ವಾರಂಟೈನ್ ಮಾಡುವ ಬಗ್ಗೆ ಎಚ್ಚರಿಕೆ ವಹಿಸಲು ಸೂಚಿಸಿದ್ದಾರೆ. ಮುಂಬೈನಿಂದ ಆಗಮಿಸಿದ್ದ ಮಂಡ್ಯ ಜಿಲ್ಲೆ, ನಾಗಮಂಗಲ ಮೂಲದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿತ್ತು. ಆತ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ 5 ಗ್ರಾಮಗಳಿಗೆ ಭೇಟಿ ನೀಡಿ ಸ್ನೇಹಿತರು, ಸಂಬಂಧಿಕರನ್ನು ಭೇಟಿ …

Read More »

ವಾರದಲ್ಲಿ 3 ದಿನ ಮಾತ್ರ ಮದ್ಯ ಖರೀದಿ – ಹಾಸನ ಡಿಸಿ ಸ್ಪಷ್ಟನೆ……….

ಹಾಸನ: ಜಿಲ್ಲೆ ಗ್ರೀನ್‍ಝೋನ್‍ಗೆ ಸೇರಿದರೂ ಕೂಡ ವಾರದಲ್ಲಿ ಮೂರು ದಿನ ಮಾತ್ರ ಮದ್ಯ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಉಳಿದಂತೆ ಎಂದಿನಂತೆ ಲಾಕ್‍ಡೌನ್ ಮೇ 17ರವರೆಗೆ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾತನಾಡಿರುವ ಜಿಲ್ಲಾಧಿಕಾರಿ ಆರ್.ಗಿರೀಶ್, ಮಂಗಳವಾರ, ಗುರುವಾರ, ಶನಿವಾರ ಮಾತ್ರ ಹಾಸನದಲ್ಲಿ ಮದ್ಯ, ದಿನಸಿ ವಸ್ತು ಸೇರಿದಂತೆ ಇತರೆ ವಸ್ತು ಕೊಳ್ಳಲು ಅಂಗಡಿಗಳನ್ನು ತೆರೆಯಬಹುದು. ಉಳಿದ ದಿನಗಳು ಎಂದಿನಂತೆ ಲಾಕ್‍ಡೌನ್ ಮುಂದುವರಿಯಲಿದೆ. ಮೇ …

Read More »

ಕೋವಿಡ್ ಇರಬೇಕು ಇಲ್ಲ ನಾವಿರಬೇಕು. ಏಕೆಂದರೆ ಕೋವಿಡ್ ನಮ್ಮನ್ನು ಬಿಟ್ಟು ಅಷ್ಟು ಬೇಗ ಹೋಗಲ್ಲ: ಶ್ರೀರಾಮುಲು

ಹಾಸನ: ಕೋವಿಡ್ ಇರಬೇಕು ಇಲ್ಲ ನಾವಿರಬೇಕು. ಏಕೆಂದರೆ ಕೋವಿಡ್ ನಮ್ಮನ್ನು ಬಿಟ್ಟು ಅಷ್ಟು ಬೇಗ ಹೋಗಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ. ಜನರ ಜೊತೆಗೆ ಸರ್ಕಾರ ಕೆಲಸ ಮಾಡುತ್ತಿದೆ. ಇಷ್ಟು ದಿನ ನಾವು ತಾಳ್ಮೆಯಿಂದ ಇದ್ದೇವೆ. ಮುಂದೆಯೂ ಯಾರು ತಾಳ್ಮೆ ಕಳೆದುಕೊಳ್ಳಬೇಡಿ. ಕೋವಿಡ್ ನಮ್ಮನ್ನು ಅಷ್ಟು ಬೇಗ ಬಿಟ್ಟು ಹೋಗಲ್ಲ. ನಾವು ಕೂಡ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಶ್ರೀರಾಮುಲು ಹೇಳಿದರು. ಕೊರಾನಾ ವಾರಿಯರ್ಸ್ ವಿರುದ್ಧ ಹಲ್ಲೆ …

Read More »