ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬ ದೇವಿಯ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆಯುತ್ತಿದ್ದರು. ಆದರೆ ಕೊರೊನಾದಿಂದಾಗಿ ಈ ವರ್ಷ ಹಾಸನಾಂಬ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಿಲ್ಲ. ಆದರೆ ಈ ವಿಷಯದಲ್ಲಿ ಜನ-ಪ್ರತಿನಿಧಿಗಳ ಇಬ್ಬಗೆ ನೀತಿ ಹಾಸನ ಜನರ ಕೋಪಕ್ಕೆ ಕಾರಣವಾಗಿದೆ. ಹಾಸನ ನಗರದ ಹೊಸಲೈನ್ ರಸ್ತೆಯಲ್ಲಿರುವ ಹಾಸನಾಂಬ ದೇವಾಲಯದ ಬಾಗಿಲನ್ನು ವರ್ಷಕ್ಕೊಮ್ಮೆ ಮಾತ್ರ ತೆರೆದು ಭಕ್ತಾದಿಗಳ ದರ್ಶನಕ್ಕೆ ಅವಕಾಶ ಮಾಡಿಕೊಡುವುದು ಬಹಳ …
Read More »ರೈತ ವಿರೋಧಿ ಮಸೂದೆ ವಿರುದ್ಧ ಜೆಡಿಎಸ್ ಶಾಸಕ ಏಕಾಂಗಿ ಪ್ರತಿಭಟನೆ
ಹಾಸನ: ಸದಾ ಒಂದಿಲ್ಲೊಂದು ವಿಶೇಷ ಪ್ರತಿಭಟನೆಯಲ್ಲಿ ಭಾಗಿಯಾಗುವ ಶಾಸಕರಾದ ಎ.ಟಿ.ರಾಮಸ್ವಾಮಿ ಇಂದು ಅರಕಲಗೂಡು ತಾಲೂಕು ಕಚೇರಿ ಮುಂದೆ ರಾಜ್ಯ ಸರ್ಕಾರದ ಕಾಯ್ದೆ ಜಾರಿ ವಿರುದ್ಧ ಏಕಾಂಗಿ ಪ್ರತಿಭಟನೆ ನಡೆಸಿದರು. ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಏಕಾಂಗಿ ಪ್ರತಿಭಟನೆ ನಡೆಸಿದ ಶಾಸಕರು ತಮ್ಮದೇ ಆದ ರೀತಿಯಲ್ಲಿ ಬಂದ್‍ಗೆ ಬೆಂಬಲ ಸೂಚಿಸಿದ್ದು ವಿಶೇಷವಾಗಿತ್ತು. ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಹೆಸರನ್ನು ಹೊಂದಿರುವ ರಾಮಸ್ವಾಮಿಯವರು ಜೆಡಿಎಸ್ ಪಕ್ಷದ ನಿಷ್ಠಾವಂತ ರಾಜಕೀಯ ಮುಖಂಡರಲ್ಲಿ ಒಬ್ಬರು. ನೇರ ಮಾತುಗಾರಿಕೆಯಿಂದ …
Read More »ಹೋಟೆಲ್ ಓಪನ್ ಮಾಡಿದರೆ, ಊಟ ತಿಂದು ಬಿಲ್ ಕೊಡಬೇಡಿ ಎಂದ ಹೋರಾಟಗಾರರಿಗೆ ವಾಟಾಳ್ ನಾಗರಾಜ್
ಹಾಸನ: ಹೋಟೆಲ್ ಓಪನ್ ಮಾಡಿದರೆ, ಊಟ ತಿಂದು ಬಿಲ್ ಕೊಡಬೇಡಿ ಎಂದು ಹೋರಾಟಗಾರರಿಗೆ ವಾಟಾಳ್ ನಾಗರಾಜ್ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಸುಮಾರು 3 ಸಾವಿರ ಕನ್ನಡಪರ ಸಂಘಟನೆಗಳು ಮತ್ತು ರೈತರು ಒಂದಾಗಿ ಬಂದ್‍ಗೆ ಬೆಂಬಲವನ್ನು ಕೊಟ್ಟಿದೆ. ಕನ್ನಡ ಒಕ್ಕೂಟದ ಮುಖಂಡರುಗಳಾದ ಸಾ.ರಾ. ಗೋವಿಂದ್, ಶಿವರಾಮೇಗೌಡ, ನಾರಾಯಣಗೌಡ, ಪ್ರವೀಣ್ ಶೆಟ್ಟಿ, ಕೆ.ಆರ್ ಕುಮಾರ್, ಮಂಜುನಾಥ್ ದೇವ್, ಗಿರೀಶ್ ಗೌಡ ಸೇರಿದಂತೆ ಅನೇಕ ಸಂಘಟನೆಗಳು ಬಂದ್‍ಗೆ ಕೈಜೋಡಿಸಿದೆ ಎಂದು ತಿಳಿಸಿದರು. ಮುಖ್ಯಮಂತ್ರಿ …
Read More »ಕೊರೊನಾ ಬಂದಿದೆ ಮುಟ್ಟಿ ನೋಡೋಣ ಎಂದು ಮಹಿಳೆಯೊಬ್ಬರು ಹೆದರಿಸುತ್ತಾ ರಸ್ತೆಯಲ್ಲಿ ಓಡಾಡಿ ಕೆಎಸ್‍ಆರ್ ಟಿಸಿ ಬಸ್‍ಗೆ ಅಡ್ಡಲಾಗಿ ಮಲಗಿ ರಂಪಾಟ
ಹಾಸನ: ಮಾನಸಿಕ ಅಸ್ವಸ್ಥೆಯಂತೆ ಕಾಣುತ್ತಿದ್ದ ಮಹಿಳೆಯೊಬ್ಬಳು ಕೆಎಸ್‍ಆರ್ ಟಿಸಿ ಬಸ್‍ಗೆ ಅಡ್ಡಲಾಗಿ ಮಲಗಿ ರಂಪಾಟ ಮಾಡಿದ ಘಟನೆ ಹಾಸನದಲ್ಲಿ ನಡೆದಿದೆ. ನಗರದ ಎಸ್‍ಪಿ ಕಚೇರಿ ಸಮೀಪ ನನಗೆ ಕೊರೊನಾ ಬಂದಿದೆ ಮುಟ್ಟಿ ನೋಡೋಣ ಎಂದು ಮಹಿಳೆಯೊಬ್ಬರು ಹೆದರಿಸುತ್ತಾ ರಸ್ತೆಯಲ್ಲಿ ಓಡಾಡಿದ್ದಾರೆ. ಮಹಿಳೆ ಅಡ್ಡ ಬಂದ ಪರಿಣಾಮ ಕೆಎಸ್‍ಆರ್ ಟಿಸಿ ಬಸ್ ಡ್ರೈವರ್ ಬ್ರೇಕ್ ಹಾಕಿದ್ದಾನೆ. ಈ ವೇಳೆ ಬಸ್ ಕೆಳಗೆ ಅಡ್ಡಲಾಗಿ ಮಲಗಿದ ಮಹಿಳೆ ಬಸ್ ಮುಂದೆ ಹೋಗದಂತೆ ಅಡ್ಡ …
Read More »ನನಗೆ ಕೊರೊನಾ ವೈರಸ್ ಬಂದಿದೆ ಮುಟ್ಟಿ ನೋಡೋಣ ಎಂದು ಮಹಿಳೆಯೊಬ್ಬರು ಹೆದರಿಸುತ್ತಾ ರಸ್ತೆಯಲ್ಲಿ ಓಡಾಡಿದ್ದಾಳೆ.
ಹಾಸನ : ಮಾನಸಿಕ ಅಸ್ವಸ್ಥೆಯಂತೆ ಕಾಣುತ್ತಿದ್ದ ಮಹಿಳೆಯೊಬ್ಬಳು ಕೆ.ಎಸ್.ಆರ್.ಟಿ.ಸಿ ಬಸ್ ಒಂದಕ್ಕೆ ಅಡ್ಡಲಾಗಿ ಮಲಗಿ ರಂಪಾಟ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ನಗರದ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಮೀಪದಲ್ಲಿ, “”ನನಗೆ ಕೊರೊನಾ ವೈರಸ್ ಬಂದಿದೆ ಮುಟ್ಟಿ ನೋಡೋಣ” ಎಂದು ಮಹಿಳೆಯೊಬ್ಬರು ಹೆದರಿಸುತ್ತಾ ರಸ್ತೆಯಲ್ಲಿ ಓಡಾಡಿದ್ದಾಳೆ. ಮಹಿಳೆ ಅಡ್ಡ ಬಂದ ಪರಿಣಾಮ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಬ್ರೇಕ್ ಹಾಕಿದ್ದಾನೆ. ಈ ವೇಳೆ ಬಸ್ ಕೆಳಗೆ ಅಡ್ಡಲಾಗಿ ಮಲಗಿದ ಮಹಿಳೆ ಬಸ್ …
Read More »ಆನ್‍ಲೈನ್ ಅಪ್ಲಿಕೇಶನ್ ಬಳಸಿ ಕ್ರಿಕೆಟ್ ಬೆಟ್ಟಿಂಗ್- ಐವರ ಬಂಧನ
ಹಾಸನ: ಆನ್‍ಲೈನ್ ಅಪ್ಲಿಕೇಶನ್ ಬಳಸಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಐವರು ಆರೋಪಿಗಳನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.ಆಕಾಶ್, ಕುಮಾರಸ್ವಾಮಿ, ಪೂರ್ಣಚಂದ್ರ, ಅವಿನಾಶ, ನಿರಂಜನ್ ಬಂಧಿತ ಆರೋಪಿಗಳು. ಇವರಲ್ಲಿ ಆಕಾಶ್ ಗ್ರಾಮ ಪಂಚಾಯಿತಿಯೊಂದರಲ್ಲಿ ಡಾಟಾ ಎಂಟ್ರಿ ಮಾಡುವ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಬಂಧಿತರಿಂದ 5 ಮೊಬೈಲ್, ನೋಟ್ ಬುಕ್ ವಶಕ್ಕೆ ಪಡೆಯಲಾಗಿದೆ. ಸತ್ಯಮಂಗಲ ಬಡಾವಣೆಯ ಕಾಂಪ್ಲೆಕ್ಸ್ ಒಂದರಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಪೊಲೀಸರು …
Read More »ಮಳೆಯಿಂದ ರೈತ ಮಹಿಳೆಯ ಮನೆ ಕುಸಿತ – ಎತ್ತುಗಳಿಗೆ ಗಾಯ, 3 ಮೇಕೆ ಸಾವು
ಹಾಸನ: ನಿರಂತರ ಮಳೆಯಿಂದ ರೈತ ಮಹಿಳೆಯ ಮನೆ ಮತ್ತು ಕೊಟ್ಟಿಗೆ ಕುಸಿದು ಬಿದ್ದಿರುವ ಘಟನೆ ಹಾಸನ ಜಿಲ್ಲೆ, ಅರಕಲಗೂಡು ತಾಲೂಕಿನ ಪುಟ್ಟಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಮಳೆಗೆ ಸಂಪೂರ್ಣ ಮನೆ ಕುಸಿದು ಬಿದಿದ್ದು, ಈ ವೇಳೆ ಕೊಟ್ಟಿಗೆಯಲ್ಲಿದ್ದ ಮೂರು ಮೇಕೆ ಸಾವನ್ನಪ್ಪಿವೆ ಜೊತೆಗೆ ಎರಡು ಎತ್ತುಗಳಿಗೆ ಗಾಯವಾಗಿದೆ. ಆದರೆ ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಣಾಪಾಯದಿಂದ ಪಾರಾಗಿದ್ದಾರೆಕಳೆದೊಂದು ವಾರದಿಂದ ನಿರಂತರವಾಗಿ ಮಳೆಯಾಗಿದ್ದ ಪರಿಣಾಮ ಶಿಥಿಲಗೊಂಡಂತಾಗಿದ್ದ, ರೈತ ಮಹಿಳೆ ಜಯಮ್ಮ ಅವರ ಮನೆ ಮತ್ತು ಕೊಟ್ಟಿಗೆ …
Read More »ಹೆಚ್‍ಡಿ.ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಪ್ರವಾಸದಲ್ಲಿದ್ದು, ಕೆಲಕಾಲ ಹಾಸನದ ಖಾಸಗಿ ರೆಸಾರ್ಟ್‍ನಲ್ಲಿ ವಿಶ್ರಾಂತಿ
ಹಾಸನ: ಮಾಜಿ ಮುಖ್ಯಮಂತ್ರಿ ಹೆಚ್‍ಡಿ.ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಪ್ರವಾಸದಲ್ಲಿದ್ದು, ಕೆಲಕಾಲ ಹಾಸನದ ಖಾಸಗಿ ರೆಸಾರ್ಟ್‍ನಲ್ಲಿ ವಿಶ್ರಾಂತಿ ಪಡೆದಿದ್ದಾರೆ. ಇತ್ತೀಚೆಗಷ್ಟೇ ಕುಟುಂಬ ಸಮೇತ ಮಡಿಕೇರಿಗೆ ಪ್ರವಾಸ ತೆರಳಿದ್ದ ಕುಮಾರಸ್ವಾಮಿಯವರು, ಅಲ್ಲಿ ಒಂದು ರೆಸಾರ್ಟ್‍ನಲ್ಲಿ ವಾಸ್ತವ್ಯ ಹೂಡಿದ್ದರು. ಈಗ ಹಾಸನದ ಬೇಲೂರು, ಹಳೆಬೀಡು, ಗೊರೂರಿಗೆ ಭೇಟಿ ನೀಡುವ ಸಲುವಾಗ ಪತ್ನಿ, ಮಗ, ಸೊಸೆ ಜೊತೆಯಲ್ಲಿ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಕಳೆದ ಎರಡು ದಿನದ ಹಿಂದೆ ಮಾಜಿ ಸಚಿವ ಹೆಚ್‍ಡಿ ರೇವಣ್ಣ ವಿರುದ್ಧ ಅರಕಲಗೂಡು …
Read More »ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ
ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ಎಚ್‍ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಹಿರಿಯ ಪುತ್ರ ಸೂರಜ್ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಎಚ್.ಡಿ.ರೇವಣ್ಣ ಹಿರಿಯ ಪುತ್ರ ಡಾ.ಸೂರಜ್ ರೇವಣ್ಣ ಹಾಸನದ ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಇದೀಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಡಾ.ಸೂರಜ್ ರೇವಣ್ಣ ಹೊಳೆನರಸೀಪುರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ …
Read More »ಖ್ಯಾತ ಮಕ್ಕಳ ತಜ್ಞನನ್ನೇ ಬಲಿ ಪಡೆದ ಕೊರೊನಾ!
ಹಾಸನ: ಕಿಲ್ಲರ್ ಕೊರೊನಾ ಸೋಂಕಿಗೆ ಹಾಸನದ ಮತ್ತೊಬ್ಬ ವೈದ್ಯ ಬಲಿಯಾಗಿದ್ದಾರೆ. ಹಾಸನದ ಖ್ಯಾತ ಮಕ್ಕಳ ತಜ್ಞ ಡಾ. ರಾಜೀವ್ (64) ಇಂದು ಕೊರೊನಾಗೆ ಕೊನೆಯುಸಿರೆಳೆದಿದ್ದಾರೆ. ಎರಡು ವಾರಗಳ ಹಿಂದೆ ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗಿದ್ರು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಜಿಲ್ಲೆಯಲ್ಲಿ ಸೇವೆ ಮಾಡುತ್ತಿದ್ದ ಡಾ.ರಾಜೀವ್ ವೈದ್ಯರಾಗಿ ಜಿಲ್ಲೆಯಲ್ಲಿ ಅಪಾರ ಹೆಸರು ಮಾಡಿದ್ದರು. ಮೂಲತಃ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಬಾನುಗೊಂದಿ ಗ್ರಾಮದವರಾಗಿದ್ದರು. …
Read More »