ಹಾಸನ: ಪ್ರತಿ ಕ್ವಿಂಟಾಲ್‍ಗೆ 10,300 ರೂ. ನಂತೆ ಬೆಂಬಲ ಬೆಲೆಯೊಂದಿಗೆ ಕೊಬ್ಬರಿ ಖರೀದಿಸುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜೂ.11ರ ಸರ್ಕಾರಿ ಆದೇಶದಂತೆ ಕೊಬ್ಬರಿಯನ್ನು ಬೆಂಬಲ ಬೆಲೆಯೊಂದಿಗೆ ಖರೀದಿಸಲು ಖರೀದಿ ಕೇಂದ್ರಗಳನ್ನು ತರಬೇಕಿದೆ. ಕೇಂದ್ರ ಸರ್ಕಾರ ಬೆಂಬಲಬೆಲೆಯೊಂದಿಗೆ ಕೊಬ್ಬರಿ ಖರೀದಿಸಲು ನೆಫೆಡ್ ಸಂಸ್ಥೆಯನ್ನು ಗುರುತಿಸಿದ್ದು, ರಾಜ್ಯ ಸರ್ಕಾರ ಸಹಕಾರ ಮಾರಾಟ ಮಂಡಳಿ ಮೂಲಕ ಖರೀದಿಸಲು ಸೂಚನೆ ನೀಡಿದೆ. ಅದರಂತೆ …
Read More »ಸ್ನೇಹಿತನ ಕೊಲೆಯಲ್ಲಿ ಅಂತ್ಯವಾಯ್ತು ಎಣ್ಣೆ ಪಾರ್ಟಿ..!
ಹಾಸನ ; ಮದ್ಯದ ಅಮಲು ಮನುಷ್ಯ ರನ್ನು ಯಾವ ರೀತಿ ದಿಕ್ಕುತಪ್ಪಿಸುತ್ತದೆ ಹಾಗೂ ಜೀವಕ್ಕೆ ಎರವಾಗುತ್ತದೆ ಎಂಬುದಕ್ಕೆ ಹಲವು ಉದಾಹರಣೆಗಳನ್ನು ನಾವು ಕಂಡಿದ್ದೇವೆ . ಅದೇ ರೀತಿ ಇಂದು ಮದ್ಯದ ಮತ್ತಿನಲ್ಲಿ ಯುವಕನೊಬ್ಬ ತನ್ನ ಸ್ನೇಹಿತನನ್ನೇ ಕೊಲೆಗೈದ ಘಟನೆ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಗ್ರಾಮದಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ಗ್ರಾಮದ ಪ್ರವೀಣ್ ಕೊಲೆಯಾದ ಯುವಕ. ಅದೇ ಗ್ರಾಮದ ಸಂತೋಷ್ ಹತ್ಯೆಗೈದ …
Read More »ಮುಂಬೈಯಿಂದ ಬಂದವರನ್ನು ಹೆಚ್ಚು ದಿನ ಕ್ವಾರಂಟೈನ್ ಮಾಡಲು ಸಿಎಂ ಗಮನಕ್ಕೆ ತರುತ್ತೇವೆ: ಸಚಿವ ಗೋಪಾಲಯ್ಯ
ಹಾಸನ: ಬಾಂಬೆಯಿಂದ ಬಂದವರನ್ನು ಹೆಚ್ಚು ದಿನ ಕ್ವಾರಂಟೈನ್ ಮಾಡುವ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಹೊರರಾಜ್ಯದಿಂದ ಬಂದವರ ಕ್ವಾರಂಟೈನ್ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಮುಂಬೈಯಿಂದ ಬಂದವರನ್ನು ಕ್ವಾರಂಟೈನ್‍ನಲ್ಲಿ ಇಟ್ಟು ನೆಗೆಟಿವ್ ವರದಿ ಬಂದ ನಂತರವೇ ಮನೆಗೆ ಕಳುಹಿಸಲಾಗುವುದು. ಹೊರರಾಜ್ಯದಿಂದ ಬಂದವರನ್ನು ಈಗ ಏಳು ದಿನ ಕ್ವಾರಂಟೈನ್ ಮಾಡಲಾಗುತ್ತಿದೆ. …
Read More »ಹೋಟೆಲ್‍ನಲ್ಲಿ ಊಟ ಎಂಜಲು ಮಾಡುತ್ತಿರುವ ವಿಡಿಯೋ ವೈರಲ್
ಹಾಸನ: ಜನರು ಕೊರೊನಾ ಭೀತಿಯಲ್ಲಿರುವಾಗ ಹಾಸನದಲ್ಲಿ ಭಯ ಹುಟ್ಟಿಸುವ ಘಟನೆಯೊಂದು ನಡೆದಿದ್ದು, ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ಹೋಟೆಲ್ ಮಾಲೀಕನ ಮಗನೊಬ್ಬ ಗ್ರಾಹಕರಿಗೆ ನೀಡಲು ಇಟ್ಟಿರುವ ಆಹಾರವನ್ನು ಎಂಜಲು ಮಾಡುತ್ತಿದ್ದಾನೆ ಎಂಬ ಅಡಿಬರಹದ ವಿಡಿಯೋ ಹಾಸನದಲ್ಲಿ ವೈರಲ್ ಆಗಿದೆ. ಓರ್ವ ವ್ಯಕ್ತಿ ಹೋಟೆಲ್ ಒಳಗೆ ನಿಂತುಕೊಂಡು ಗ್ರಾಹಕರಿಗೆ ನೀಡಲು ಪಾತ್ರೆಯೊಳಗೆ ಸಂಗ್ರಹಿಸಿಟ್ಟಿರುವ ಆಹಾರವನ್ನು ಸ್ಟಿಕ್‍ನಿಂದ ಪದೇ ಪದೆ ತಿನ್ನುತ್ತಿದ್ದಾನೆ. ಇದನ್ನು ಅಲ್ಲೇ ಇದ್ದವರೊಬ್ಬರು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದು, …
Read More »ರೇವಣ್ಣನ ಮೇಲೆ ಎಂಎಲ್‍ಸಿ ಗೋಪಾಲಸ್ವಾಮಿ ಆಕ್ರೋಶ………..
ಹಾಸನ: ಜಿಲ್ಲೆಯಲ್ಲಿ ಕೊರೊನಾ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ನಡುವೆ ಕೊರೊನಾ ವಿರುದ್ಧ ಹೋರಾಡಲು ಬಳಸಬಹುದಾಗಿದ್ದ ಸುಮಾರು 112 ಕೋಟಿ ಹಣ ಮಾಜಿ ಸಚಿವ ರೇವಣ್ಣ ಅವರಿಂದ ಬಳಕೆಯಾಗದೆ ವಾಪಸ್ಸಾಗುವ ಪರಿಸ್ಥಿತಿ ಬಂದಿದೆ ಎಂದು ಎಂಎಲ್‍ಸಿ ಗೋಪಾಲಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. 15ನೇ ಹಣಕಾಸಿನಲ್ಲಿ ಜಿಲ್ಲಾಪಂಚಾಯ್ತಿ, ತಾಲೂಕು ಪಂಚಾಯ್ತಿ ಹಾಗೂ ಗ್ರಾಮ ಪಂಚಾಯ್ತಿ ಮೂರಕ್ಕೂ ಸೇರಿ ಹಾಸನ ಜಿಲ್ಲೆಗೆ ಸುಮಾರು 112 ಕೋಟಿ ಹಣ ಬಂದಿದೆ. ಈ ಹಣವನ್ನು ಅಭಿವೃದ್ಧಿ …
Read More »ಕೊರೊನಾ ಮಧ್ಯೆ ರೈತರಿಗೆ ಮತ್ತೊಂದು ಸಂಕಷ್ಟ- ಹಾಲಿಗೆ ಸರಿಯಾದ ಬೆಲೆ ನೀಡದ್ದಕ್ಕೆ ಆಕ್ರೋಶ
ಹಾಸನ: ಕೊರೊನಾ ಲಾಕ್‍ಡೌನ್‍ನಿಂದಾಗಿ ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ಬದುಕು ಬೀದಿಗೆ ಬಂದಿದೆ. ಈ ವೇಳೆ ರೈತರು ಹಾಲು ಉತ್ಪಾದನೆ ಮಾಡಿ ಒಂದಷ್ಟು ಬದುಕು ಕಟ್ಟಿಕೊಂಡಿದ್ರು. ಆದರೆ ಈಗ ಹಾಲಿಗೆ ಫ್ಯಾಟ್ ಬರುತ್ತಿಲ್ಲ ಎಂದು ನೆಪ ಹೇಳಿ ಒಂದು ಲೀಟರ್ ಹಾಲಿಗೆ ಕೇವಲ 9 ರೂಪಾಯಿ ಕೊಡುತ್ತಿದ್ದು, ಕಂಗಾಲಾದ ರೈತರು ಹೋರಾಟಕ್ಕೆ ಮುಂದಾಗಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಸಂತೆಶಿವರ ಗ್ರಾಮದ ಸುತ್ತಮುತ್ತಲಿನ ರೈತರು ಕೊರೊನಾ ಭಯ …
Read More »ಹಾಸನ:ಪೊಲೀಸ್ ಪೇದೆ ಸೇರಿದಂತೆ ಒಟ್ಟು 14 ಜನರಿಗೆ ಕೊರೊನಾ ಪಾಸಿಟಿವ್
ಹಾಸನ: ಇಂದು ಜಿಲ್ಲೆಯಲ್ಲಿ ಪೊಲೀಸ್ ಪೇದೆ ಸೇರಿದಂತೆ ಒಟ್ಟು 14 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಸೋಂಕಿತರ ಸಂಖ್ಯೆ 99ಕ್ಕೆ ಏರಿಕೆ ಕಂಡಿದೆ. ಪೊಲೀಸ್ ಪೇದೆ ಮತ್ತು ಅರಳಿಕಟ್ಟೆ ಪಕ್ಕದ ರಸ್ತೆಯ ನಿವಾಸಿ ಸೇರಿದಂತೆ ಹಾಸನದಲ್ಲಿಂದು ಮತ್ತೆ 14 ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಹಾಸನ ನಗರದ ಸತ್ಯವಂಗಲ ಹಾಗೂ ಉತ್ತರ ಬಡಾವಣೆಯ ಒಂದು ರಸ್ತೆ ಸೀಲ್‍ಡೌನ್ ಮಾಡಲಾಗಿದೆ. ಕೊರೊನಾ ದೃಢಪಟ್ಟಿರುವ ಪೇದೆ ಹಾಸನ ನಗರದ ಪೊಲೀಸ್ …
Read More »ಹಾಸನದಲ್ಲಿ ಕೊರೊನಾ ಭೀತಿ- ಸಾಮಾಜಿಕ ಅಂತರ ಮರೆತು ಗ್ರಾಮ ಪಂಚಾಯಿತಿಯಲ್ಲಿ ಗಲಾಟೆ
ಹಾಸನ: ಹಾಸನದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಭೀತಿ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಕಚೇರಿಯೊಳಗೆ ಜನಪ್ರತಿಗಳು, ಅಧಿಕಾರಿಗಳ ಜೊತೆ ಸಾರ್ವಜನಿಕರು ವಾಕ್ಸಮರ ನಡೆಸಿ ಪರಸ್ಪರ ಹಲ್ಲೆ ನಡೆಸಿದ್ದಾರೆ. ಚನ್ನರಾಯಪಟ್ಟಣ ತಾಲೂಕಿನ, ಕೆಂಬಾಳು ಗ್ರಾಮದಲ್ಲಿ ಘಟನೆ ನಡೆದಿದ್ದು, ಕೆಂಬಾಳು ಗ್ರಾಮದ ವ್ಯಾಪ್ತಿಯಲ್ಲಿ ಬರುವ ಅಂಗಡಿಗಳಿಂದ ಶುಲ್ಕ ವಿಧಿಸುವ ಸಲುವಾಗಿ ತೀರ್ಮಾನ ತೆಗೆದುಕೊಳ್ಳಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು. ಇದಕ್ಕೆ ಅಪಸ್ವರ ವ್ಯಕ್ತಪಡಿಸಿದ ಅಂಗಡಿ ಮಾಲೀಕರು, ಸ್ಥಳೀಯರು ಪಂಚಾಯಿತಿಯಲ್ಲಿ …
Read More »ಮುಂಬೈನಿಂದ ಬಂದವರ ಕ್ವಾರಂಟೈನ್- ಅಂಬುಲೆನ್ಸ್‌ಗೆ ಕಲ್ಲು ತೂರಾಟ…………
ಹಾಸನ: ಮುಂಬೈನಿಂದ ಬಂದವರನ್ನು ಜಿಲ್ಲೆಯ ಹೊಳೆನರಸೀಪುರದಲ್ಲಿ ಕ್ವಾರಂಟೈನ್ ಮಾಡುತ್ತಿರುವುದಕ್ಕೆ ವಿರೋಧಿಸಿ ಅಂಬ್ಯುಲೆನ್ಸ್ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ. ಹೊಳೆನರಸೀಪುರ ತಾಲೂಕಿನ ದೇವರ ಮುದ್ದನಹಳ್ಳಿ ಬಳಿ ಘಟನೆ ನಡೆದಿದ್ದು, ಮುಂಬೈನಿಂದ ಬಂದವರನ್ನು ಇಲ್ಲಿ ಕ್ವಾರಂಟೈನ್ ಮಾಡಿದರೆ ಹಳ್ಳಿಯ ಜನರಿಗೂ ಕೊರೊನಾ ಬರುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ವಾರಂಟೈನ್ ಮಾಡಲು ಕರೆದೊಯ್ದಿದ್ದ ಆಂಬುಲೆನ್ಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮೇ.15ರಂದು ಮುಂಬೈನಿಂದ ಬಂದಿದ್ದ ಒಂದೇ ಕುಟುಂಬದ ನಾಲ್ವರನ್ನು …
Read More »ಹಾಸನದಲ್ಲಿ ಮತ್ತೆ ಮೂವರಿಗೆ ಕೊರೊನಾ- ಜಿಲ್ಲೆಯಲ್ಲಿ 12ಕ್ಕೇರಿದ ಸೋಂಕಿತರ ಸಂಖ್ಯೆ
ಹಾಸನ: ಜಿಲ್ಲೆಯಲ್ಲಿ ಇಂದು ತಂದೆ-ಮಗ ಸೇರಿದಂತೆ ಮತ್ತೆ ಮೂವರಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಎಲ್ಲರೂ ಮುಂಬೈನಿಂದ ವಾಪಸ್ ಬಂದವರಾಗಿದ್ದಾರೆ. ಈ ಹಿಂದೆ ಹಾಸನದಲ್ಲಿ ಒಂಬತ್ತು ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಅವರೆಲ್ಲರೂ ಚನ್ನರಾಯಪಟ್ಟಣ ತಾಲೂಕಿನವರಾಗಿದ್ದು, ಮುಂಬೈಯಿಂದ ವಾಪಸ್ಸಾದವರಾಗಿದ್ದರು. ಇಂದು ಮತ್ತೆ ಮೂರು ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಹಾಸನದಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ 12ಕ್ಕೆ ಏರಿದೆ. ಮೂವರಲ್ಲಿ ಇಬ್ಬರು ಚನ್ನರಾಯಪಟ್ಟಣ ಮೂಲದ ತಂದೆ ಮತ್ತು ಮಗನಾಗಿದ್ದು, ಮುಂಬೈನಿಂದ ಸ್ವಂತ …
Read More »