ಬೆಂಗಳೂರು: ನಟಿ ರಾಧಿಕಾ ಪಂಡಿತ್ ಸದಾ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದು, ತಮ್ಮ ಮಕ್ಕಳ ಫೋಟೋ ಮತ್ತು ವಿಡಿಯೋವನ್ನು ಶೇರ್ ಮಾಡುತ್ತಿರುತ್ತಾರೆ. ಇದೀಗ ನಟಿ ರಾಧಿಕಾ ತಮ್ಮ ಮಗಳೊಂದಿಗಿನ ಮುದ್ದಾದ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ ಐರಾ ಮತ್ತು ತಮ್ಮ ಸಹೋದರನ ಮಗಳಿಗೆ ಶುಭಾಶಯ ಕೋರಿದ್ದಾರೆ. ಭಾನುವಾರ ಮಗಳ ದಿನಾಚರಣೆ ಇತ್ತು. ಹೀಗಾಗಿ ಅನೇಕ ನಟ-ನಟಿಯರು ತಮ್ಮ ಮಗಳಿಗೆ ಶುಭಾಶಯವನ್ನು ತಿಳಿಸಿದ್ದಾರೆ. ಅದೇ ರೀತಿ ನಟಿ ರಾಧಿಕಾ ಪಂಡಿತ್ ಕೂಡ ತಮ್ಮ …
Read More »ಅಧಿವೇಶನಕ್ಕೆ ಬಂದ ಶಾಸಕರಿಗೆ ಕೊರೋನಾ ಭಯ, ಈಗಾಗಲೇ ಹಲವರಿಗೆ ಪಾಸಿಟಿವ್..!
ಬೆಂಗಳೂರು, ಸೆ.28- ವಿಧಾನಸಭೆ ಅವೇಶನ ಮುಗಿದ ಬಳಿಕ ಹಲವಾರು ಮಂದಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ಸೋಂಕಿನ ಭೀತಿ ಎದುರಿಸುತ್ತಿದ್ದಾರೆ. ಈವರೆಗೆ ಶಾಸಕರಾದ ದಿನೇಶ್ ಗುಂಡುರಾವ್, ಎಚ್.ಕೆ.ಪಾಟೀಲ್ ಸೇರಿದಂತೆ ಹಲವಾರು ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಪರೀಕ್ಷೆಗೆ ಒಳಗಾದ ಬಹಳಷ್ಟು ಮಂದಿ ತಮಗೆ ಸೋಂಕಿರುವ ಬಗ್ಗ ಹೇಳಿಕೊಳ್ಳದೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಶನಿವಾರ ಮಧ್ಯ ರಾತ್ರಿ 11 ಗಂಟೆವೆರೆಗೂ ವಿಧಾನಮಂಡಲ ಮತ್ತು ವಿಧಾನಸಭೆ ಅವೇಶನ ನಡೆದಿತ್ತು. ದಿನೇಶ್ ಗುಂಡುರಾವ್, ಎಚ್.ಕೆ.ಪಾಟೀಲ್ ಭಾಗವಹಿಸಿದ್ದರು, …
Read More »ಅಧಿವೇಶನ ಯಶಸ್ವಿ ಹಾಗೂ ಅತ್ಯುತ್ತಮವಾಗಿ ನಡೆದಿದೆ : ವಿಧಾನಸಭಾಧ್ಯಕ್ಷ ಕಾಗೇರಿ
ಬೆಂಗಳೂರು,ಸೆ.28- 17ನೇ ವಿಧಾನಸಭೆಯ 7ನೇ ಅಧಿವೇಶನದ ಕಾರ್ಯಕಲಾಪಗಳು ಆರು ದಿನ, 40 ಗಂಟೆಗಳ ಕಾಲ ಅತ್ಯಂತ ಯಶಸ್ವಿಯಾಗಿ ಹಾಗೂ ಅತ್ಯುತ್ತಮವಾಗಿ ನಡೆದಿವೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.21ರಿಂದ 26ರ ರಾತ್ರಿ 11 ಗಂಟೆವರೆಗೂ ಅವೇಶನ ನಡೆಸಿದ್ದು ಶೇ.90ಕ್ಕಿಂತ ಹೆಚ್ಚಿನ ಕಾರ್ಯಕಲಾಪಗಳನ್ನು ಪೂರ್ಣಗೊಳಿಸಲಾಗಿದೆ. ಕೊರೊನಾ ಆತಂಕದ ನಡುವೆ ಕೈಗೊಂಡಿದ್ದ ಅಗತ್ಯ ಮುನ್ನೆಚ್ಚರಿಕೆ ಕ್ರಮವು ಯಶಸ್ವಿಯಾಗಿ ಅವೇಶನ ನಡೆಸಲಾಗಿದೆ ಎಂದರು. ವಿವಿಧ ಸ್ಥಾಯಿಸಮಿತಿಗಳಿಗೆ ಸದಸ್ಯರನ್ನು …
Read More »ಅಧಿಕಾರದ ಗದ್ದುಗೆ ಏರುತ್ತಿದ್ದಂತೆಯೇ ಹಸಿರು ಶಾಲಿನ ಒಳಗಿದ್ದ ಅವರ ರೈತ ವಿರೋಧಿ ಮನೋಭಾವ ಹೊರಬಂದಿದೆ
ಬೆಂಗಳೂರು: ಸರ್ಕಾರದ ಕೃಷಿ ಮಸೂದೆಗಳು ರೈತ ವಿರೋಧಿಯಾಗಿವೆ. ಭೂ ಸುಧಾರಣೆ ಮತ್ತು ಎಪಿಎಂಎಸಿ ಕಾಯ್ದೆ ತಿದ್ದುಪಡಿ ಮಾಡುತ್ತೇವೆಂದು ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿರಲಿಲ್ಲ. ಇವನ್ನ ಜಾರಿಗೆ ತರುವ ಯಾವ ನೈತಿಕತೆಯೂ ಅದಕ್ಕೆ ಇಲ್ಲ. ಈ ತಿದ್ದುಪಡಿಗಳಿಂದ ರೈತರ ಕಲ್ಯಾಣ ಆಗುತ್ತದೆ ಎಂಬ ಭರವಸೆ ಸರ್ಕಾರಕ್ಕೆ ಇದ್ದರೆ ಮೊದಲು ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರದ ಕೃಷಿ …
Read More »ಮೋದಿ, ಬಿಎಸ್‍ವೈ ಸರ್ಕಾರ ರೈತರ ಪರ ಕೆಲಸ ಮಾಡ್ತಿದೆ: ಕಟೀಲ್
ರಾಯಚೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸರ್ಕಾರ ರೈತರ ಪರವಾಗಿ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಇತ್ತೀಚೆಗೆ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿಗೆ ಮನೆಗೆ ನಳಿನ್ ಕುಮಾರ್ ಕಟೀಲ್ ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಳೀನ್‍ಗೆ ಬಿಜೆಪಿ ಮುಖಂಡರು ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಕಟೀಲ್, ಅಶೋಕ್ ಗಸ್ತಿ …
Read More »ಬಸ್ ಸಂಚಾರ ನಿಲ್ಲಿಸಿ ಪ್ರತಿಭಟನೆಗೆ ಸಹಕರಿಸಿ ಎಂದುಸಾರಿಗೆ ಇಲಾಖೆಯ ಅಧಿಕಾರಿಯ ಕಾಲಿಗೆ ಬಿದ್ದು ಕೇಳಿಕೊಂಡ ರೈತ
ಬೆಳಗಾವಿ : ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಬಸ್ ಸಂಚಾರ ನಿಲ್ಲಿಸಿ ಪ್ರತಿಭಟನೆಗೆ ಸಹಕರಿಸಿ ಎಂದು ರೈತ ಮುಖಂಡನೊಬ್ಬ ಸಾರಿಗೆ ಇಲಾಖೆಯ ಅಧಿಕಾರಿಯ ಕಾಲಿಗೆ ಬಿದ್ದು ಕೇಳಿಕೊಂಡ ಘಟನೆ ನಡೆದಿದೆ. ಸರ್ಕಾರದ ರೈತ ವಿರೋಧಿ ನೀತಿಯ ವಿರುದ್ಧ ಬಂದ್ ಗೆ ಕರೆ ನೀಡಿದ್ದೆವೆ. ಇಂತಹ ಸಂದರ್ಭದಲ್ಲಿ ಬಸ್ ಸಂಚಾರ ವ್ಯವಸ್ಥೆಯನ್ನು ನಡೆಸಿ, ಬಂದ್ ಗೆ ವಿರೋಧ ವ್ಯಕ್ತ ಪಡಿಸಿಬೇಡಿ, ಸಾರ್. ಬಸ್ ಸಂಚಾರ ನಿಲ್ಲಿಸಿ ಎಂದು ರೈತ ಮುಖಂಡ …
Read More »ರೈತರೇ ನಿಮ್ಮ ಸರ್ಕಾರವನ್ನು ಕಿತ್ತು ಒಗೆಯುತ್ತಾರೆ: ಡಿಕೆ ಶಿವಕುಮಾರ್
ಬೆಂಗಳೂರು: ಕಾಂಗ್ರೆಸ್ ಶಾಸಕರು ನಿಮ್ಮ ಸರ್ಕಾರ ತೆಗೆಯುವುದಿಲ್ಲ. ರೈತರೇ ನಿಮ್ಮ ಸರ್ಕಾರವನ್ನು ಕಿತ್ತು ಒಗೆಯುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಂ ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಕೈ ನಾಯಕರ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಹಸಿರು ಶಾಲು ಹಾಕಿಕೊಂಡು ರೈತರ ಪರವಾಗಿ ಇದ್ದೇನೆ ಎಂದು ಬೂಟಾಟಿಕೆ ಮಾಡ್ತಾರೆ. ಆದರೆ ರಾಜ್ಯದ ರೈತರು ನಿಮ್ಮ ಸರ್ಕಾರವನ್ನು ಕಿತ್ತು ಒಗೆಯುತ್ತಾರೆ. ಈ …
Read More »ಪೇಟ ತೊಟ್ಟು ಕತ್ತೆ ಮೇಲೆ ಬಂದ ವಾಟಾಳ್
ಬೆಂಗಳೂರು: ರೈತ ವಿರೋಧಿ ಮಸೂದೆಗಳ ವಿರುದ್ಧ ಇಂದು ಕರ್ನಾಟಕ ಬಂದ್ ಮಾಡಲಾಗಿದ್ದು, ರಾಜ್ಯದೆಲ್ಲೆಡೆ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಇತ್ತ ಮೆಜೆಸ್ಟಿಕ್‍ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದ ಪ್ರತಿಭಟನೆ ಮಾಡಲಾಗಿದೆ. ವಾಟಾಳ್ ನಾಗರಾಜ್ ವಿಭಿನ್ನವಾಗಿ ಪ್ರತಿಭಟನೆ ಮಾಡಿದ್ದಾರೆ. ಮೆಜೆಸ್ಟಿಕ್ ಮುಂಭಾಗ ಪೇಟ ತೊಟ್ಟು ಕತ್ತೆಯ ಮೇಲೆ ಮೆರವಣಿಗೆ ಬರುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಿದ್ದಾರೆ. ಅಲ್ಲದೇ ವಾಟಾಳ್ ಮಂಗಳವಾದ್ಯಗಳ ದೊಡ್ಡ ತಂಡದೊಂದಿಗೆ ಆಗಮಿಸಿದ್ದರು. ಇವರ ಜೊತೆಗೆ ಕನ್ನಡಪರ ಹೋರಾಟಗಾರರು ಭಾಗಿಯಾಗಿದ್ದರು. ಮಂಗಳವಾದ್ಯಗಳ ಮಧ್ಯೆ …
Read More »ದೆಹಲಿಯ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಇಂಡಿಯಾ ಗೇಟ್ ಬಳಿ ನಡು ರಸ್ತೆಯಲ್ಲೇ ಟ್ರಾಕ್ಟರ್ಗೆ ಬೆಂಕಿ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆಗಳನ್ನು ವಿರೋಧಿಸಿ ದೆಹಲಿಯ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಇಂಡಿಯಾ ಗೇಟ್ ಬಳಿ ನಡು ರಸ್ತೆಯಲ್ಲೇ ಟ್ರಾಕ್ಟರ್ಗೆ ಬೆಂಕಿ ಹಚ್ಚಿದ್ದಾರೆ.ಈ ಬಗ್ಗೆ ದೆಹಲಿಯ ಡಿಸಿಪಿ ಮಾಹಿತಿ ನೀಡಿದ್ದು, ಸುಮಾರು 15 ರಿಂದ 20 ಜನ ಗುಂಪಾಗಿ ಬಂದು ಟ್ರಾಕ್ಟ್ರ್ಗೆ ಬೆಂಕಿಯಿಟ್ಟಿದ್ದಾರೆ. ಸದ್ಯ ಹೊತ್ತಿಯುರಿಯುತ್ತಿದ್ದ ಬೆಂಕಿಯನ್ನು ಆರಿಸಲಾಗಿದ್ದು, ನಡುರಸ್ತೆಯಿಂದ ಟ್ರ್ಯಾಕ್ಟರ್ ತೆಗೆಯಲಾಗಿದೆ.ಈ ಬಗ್ಗೆ ದೆಹಲಿಯ ಡಿಸಿಪಿ ಮಾಹಿತಿ ನೀಡಿದ್ದು, ಸುಮಾರು 15 ರಿಂದ 20 ಜನ …
Read More »ದೆವ್ವ ಬಿಡಿಸುವ ನೆಪದಲ್ಲಿ ಬಾಲಕಿ ಹತ್ಯೆ
ಚಿತ್ರದುರ್ಗ: ದೆವ್ವ ಬಿಡಿಸುವುದಾಗಿ ನಂಬಿಸಿ ಮೂರು ವರ್ಷದ ಬಾಲಕಿಯನ್ನು ಪೂಜಾರಿ ಕೋಲಿನಿಂದ ಹೊಡೆದು ಸಾಯಿಸಿದ ಘಟನೆ ಹೊಳಲ್ಕೆರೆ ತಾಲ್ಲೂಕಿನ ಅಜ್ಜಿ ಕ್ಯಾತನಹಳ್ಳಿಯಲ್ಲಿ ಭಾನುವಾರ ನಡೆದಿದೆ. ಪ್ರವೀಣ್ ಹಾಗೂ ಶಾಮಲಾ ದಂಪತಿಯ ಪುತ್ರಿ ಪೂರ್ವಿಕಾ ಮೃತ ಬಾಲಕಿ. ಚೌಡಮ್ಮನ ದೇಗುಲದ ಪೂಜಾರಿ ರಾಕೇಶ್ (19) ಎಂಬಾತನನ್ನು ಚಿಕ್ಕಜಾಜೂರು ಪೊಲೀಸರು ಬಂಧಿಸಿದ್ದಾರೆ. ಮೌಢ್ಯ ನಿಷೇದ ಕಾಯ್ದೆ-2017ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ‘ಪೂರ್ವಿಕಾ ಮೂರು ದಿನಗಳಿಂದ ಸರಿಯಾಗಿ ಊಟ ಮಾಡುತ್ತಿರಲಿಲ್ಲ. ಬಾಲಕಿಗೆ ದೆವ್ವ ಹಿಡಿದಿದೆ ಎಂದಿದ್ದ …
Read More »
Laxmi News 24×7