Breaking News

ಜಿಲ್ಲೆ

ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವವು ಅಂತ್ಯಗೊಂಡಿದ್ದು, ಜಪಾನ್‌ ದೇಶದದ ʻಲಾಸ್ಟ್‌ ಲ್ಯಾಂಡ್‌ʼ , ಮರಾಠಿಯ ʻಸಬರ್‌ ಬೊಂದಾʼ ಮತ್ತು ʻವನ್ಯಾʼ ಚಿತ್ರಗಳು ಚಿತ್ರೋತ್ಸವದ ಏಷ್ಯಾ, ಭಾರತ ಮತ್ತು ಕನ್ನಡ ವಿಭಾಗಗಳಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿಗಳನ್ನು  ತನ್ನದಾಗಿಸಿಕೊಂಡಿವೆ. ಅತ್ಯುತ್ತಮ ಪ್ರಶಸ್ತಿ ವಿಜೇತರಿಗೆ ಪಾರಿತೋಷಕದ ಜೊತೆಗೆ 10 ಲಕ್ಷ ರೂ. ನಗದು ಬಹುಮಾನ ನೀಡಲಾಯಿತು. ದ್ವಿತೀಯ ಮತ್ತು ತೃತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿಗಳನ್ನು ಗೆದ್ದವರಿಗೆ ತಲಾ ಐದು ಲಕ್ಷ ರೂ. ಮತ್ತು ಎರಡು …

Read More »

5 ವರ್ಷ ಸಿದ್ದರಾಮಯ್ಯ ಯಾಕೆ ಸಿಎಂ ಆಗಿರಬಾರದು: ಪರಮೇಶ್ವರ್‌

ಚಿಕ್ಕಮಗಳೂರು: ಐದು ವರ್ಷ ಸಿದ್ದರಾಮಯ್ಯ  ಅವರು ಯಾಕೆ ಸಿಎಂ ಆಗಿರಬಾರದು ಎಂದು ಗೃಹ ಸಚಿವ ಜಿ.ಪರಮೇಶ್ವರ್‌  ಪ್ರಶ್ನಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಎಂಬ ಯತೀಂದ್ರ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದರೆ ಅದು ಸಂತೋಷ. ರಾಜ್ಯಕ್ಕೆ ಸದ್ಯ ಒಂದು ಸ್ಥಿರವಾದ ಆಡಳಿತ ನೀಡುತ್ತಿರುವ ಸರ್ಕಾರದ ಅವಶ್ಯಕತೆಯಿದ್ದು, ಸಿದ್ದರಾಮಯ್ಯನವರು ಅಂತಹ ಆಡಳಿತವನ್ನು ಯಶಸ್ವಿಯಾಗಿ ನಡೆಸುತ್ತಿದ್ದಾರೆ. …

Read More »

ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂ ನಿರ್ಧರಿಸುತ್ತಾರೆ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಿಭಜನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ನಿರ್ಧಾರ ಕೈಗೊಳ್ಳಬೇಕೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಬೆಳಗಾವಿಯ ಶ್ರೀನಗರದಲ್ಲಿ 40 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಜಿಲ್ಲಾ ಬಾಲಭವನದ ಒಳಾಂಗಣ ಬಾಕ್ಸ್ ಕ್ರಿಕೆಟ್ ಮೈದಾನವನ್ನು ಉದ್ಘಾಟಿಸಿ, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯನ್ನು ವಿಭಜಿಸಬೇಕೆಂದು ಈಗಾಗಲೇ ಹಲವು ಬಾರಿ ಜಿಲ್ಲೆಯ ಮುಖಂಡರೆಲ್ಲರೂ ಸೇರಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೇವೆ. ಆದರೆ …

Read More »

ಕೋಲಾರ | ವ್ಹೀಲಿಂಗ್‌ ಮಾಡ್ತಿದ್ದ ಐವರು ಪುಂಡರು ಅರೆಸ್ಟ್‌

ಕೋಲಾರ: ಬೈಕ್‌ ವ್ಹೀಲಿಂಗ್‌ ಮಾಡ್ತಿದ್ದ ಐವರನ್ನು ಮಾಲೂರು (Maluru) ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರು ಮೂಲದ ಸೈಯದ್ ನಹೀಂ, ಮಹಮ್ಮದ್ ಇಂಜುಮಾನ್, ಇಕ್ಬಾಲ್ ಶೇಕ್ ವಿಕ್ರಂ ಹಾಗೂ ಮಹಮ್ಮದ್ ತೋಹಿದ್ ಎಂದು ಗುರುತಿಸಲಾಗಿದೆ. ಇವರೆಲ್ಲ ಮಾಲೂರು ತಾಲೂಕಿನ ಲಕ್ಕೂರು ಗ್ರಾಮದ ಬಳಿ ವ್ಹೀಲಿಂಗ್‌ ಮಾಡುತ್ತಿದ್ದರು. ಆರೋಪಿಗಳು ಬಳಸಿದ್ದ ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಮಾಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆರೋಪಿಗಳನ್ನು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ

Read More »

ಪರಸ್ಪರ ಒಪ್ಪಿಗೆಯಿಂದ ಪ್ರೇಮವಿವಾಹ ಇಬ್ಬರ ಸಾವಿಗೆ  ಕಾರಣ

ಚಿಕ್ಕೋಡಿ: ಪರಸ್ಪರ ಒಪ್ಪಿಗೆಯಿಂದ ಯುವಕ-ಯುವತಿ ಮಾಡಿಕೊಂಡ ಪ್ರೇಮವಿವಾಹ ಇಬ್ಬರ ಸಾವಿಗೆ  ಕಾರಣವಾಗಿದೆ. ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಠಾಣೆ ವ್ಯಾಪ್ತಿಯ ಕಮತನೂರಿನ ಪ್ರೇಮಿಗಳಿಬ್ಬರೂ ಕುಟುಂಬಸ್ಥರಿಗೆ ತಿಳಿಯದಂತೆ ನೋಂದಣಾಧಿಕಾರಿ ಕಚೇರಿಯಲ್ಲಿ ಮದುವೆ ಮಾಡಿಕೊಂಡಿದ್ದಾರೆ. ತಂಗಿ ಮನೆತನದ ಕಳೆದಿದ್ದಾಳೆಂದು ಬೇಸರಗೊಂಡು ವಧುವಿನ ಅಣ್ಣ ಪ್ರಶಾಂತ ನಿಕ್ಕಂ(೨೫)ಬುಧವಾರ ಬೆಳಗ್ಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮದುವೆಯಾದ ಯುವಕನನ್ನು ಪ್ರೀತಿಸುತ್ತಿದ್ದ ಮತ್ತೋರ್ವ ಯುವತಿ ಕಮತನೂರ ಗ್ರಾಮದ ರಕ್ಷಿತಾ ಕಾಂಬಳೆ (20), ತನಗೆ ಮೋಸವಾಗಿದೆ ಎಂಬ ನೋವಿನಿಂದ ಅದೇ …

Read More »

Belagavi-ಹೆಚ್ಚುವರಿ ವಿಮಾನಯಾನಕ್ಕೆ ಶೀಘ್ರ ಕ್ರಮ

ಬೆಳಗಾವಿ: ಬೆಳಗಾವಿಯಿಂದ ವಿಮಾನ ಸಂಚಾರ ಕಡಿಮೆಯಾಗಿರುವುದನ್ನು ಖಂಡಿಸಿ ವಾಣಿಜ್ಯೋದ್ಯಮ ಸಂಘ ಪ್ರತಿಭಟನೆಗೆ ಮುಂದಾಗಿದ್ದರಿಂದ ವಿವಿಧ ಖಾಸಗಿ ವಿಮಾನಯಾನ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ವಿಮಾನ ನಿಲ್ದಾಣ ಅಧಿಕಾರಿಗಳು ಗುರುವಾರ ಸಂಘದ ಕಚೇರಿಗೆ ಭೇಟಿ ನೀಡಿ ಚರ್ಚಿಸಿದರು. ಸಂಚಾರ ದಟ್ಟಣೆ ಇದ್ದರೂ ಬೆಳಗಾವಿಯಿಂದ ಸಂಚರಿಸುತ್ತಿದ್ದ ಹಲವಾರು ವಿಮಾನಗಳು ಏಕಾಏಕಿ ರದ್ದಾಗುತ್ತಿರುವುದು ಉದ್ಯಮಗಳ ಕಾರ್ಯಚಟುವಟಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿತ್ತು. ಜತೆಗೆ ಬೆಳಗಾವಿ ಅಭಿವೃದ್ಧಿಗೆ ಇದು ಹಿನ್ನಡೆಯುಂಟು ಮಾಡುವ ಆತಂಕ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ವಾಣಿಜ್ಯೋದ್ಯಮ …

Read More »

ವೀರಶೈವ ಲಿಂಗಾಯತ ಧರ್ಮ ಸಮನ್ವಯತೆಯ ಧರ್ಮ : ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು

ವೀರಶೈವ ಲಿಂಗಾಯತ ಧರ್ಮ ಸಮನ್ವಯತೆಯ ಧರ್ಮ : ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಬಾಗಲಕೋಟೆ: ಸಮಾನತೆಯನ್ನು ಭೋದಿಸುವ ಮೂಲಕ ಎಲ್ಲ ಸಮುದಾಯಗಳೊಡನೆ ಸಮನ್ವಯವನ್ನು ಸಾಧಿಸಿದ ಶಿಕ್ಷಣ, ಅನ್ನ, ಉದ್ಯೋಗ ನೀಡುವ ಮೂಲಕ ಎಲ್ಲರ ಪ್ರಗತಿಗೆ ಕಾರಣವಾಗಿರುವ ಸಮಾಜ ವೀರಶೈವ ಲಿಂಗಾಯತ ಸಮಾಜ ಎಂದು ಸವದತ್ತಿಯ ಮೂಲಿಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಹೇಳಿದರು. ನಗರದ ಟೀಕಿನಮಠದ ಮಲ್ಲಿಕಾರ್ಜುನ ದೇಶಿಕರ ನಿರಂಜನ ಚರಪಟ್ಟಾಧಿಕಾರ ಮಹೋತ್ಸವದ ನಿಮಿತ್ಯ ಚರಂತಿಮಠದ ಆವರಣದಲ್ಲಿ ಶುಕ್ರವಾರ ನಡೆದ ಧರ್ಮತತ್ವ ಚಿಂತನೆ …

Read More »

ಡಾ.ಕೋರೆಗೆ ಗೋವಾ ಮಾಜಿ ಸಿಎಂ ಕಾಮತ ಸನ್ಮಾನ

ಬೆಳಗಾವಿ: ಗೋವಾದ ಮಾಜಿ ಮುಖ್ಯಮಂತ್ರಿ, ಹಾಲಿ ಸಚಿವ ದಿಗಂಬರ ಕಾಮತ, ಗುರುವಾರ ನಗರದಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆಯವರನ್ನು ಸನ್ಮಾಸಿದರು ಈ ವೇಳೆ ಮಾತನಾಡಿ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪೂರ್ವ ಸೇವೆ ಗುರುತಿಸಿ ಡಾ.ಕೋರೆಯವರಿಗೆ  ಪದ್ಮಶ್ರೀ ಪ್ರಶಸ್ತಿ ಸಂದಿರುವುದು ಅವರ ಸಾಧನೆಗೆ ಸಲ್ಲಿಸಿದ ಗೌರವವಾಗಿದೆ ಎಂದು ಶ್ಲಾಘಿಸಿದರು. ಸೋಮಣ್ಣ ಭೇಟಿ: ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಫೆ.7ರಂದು ಡಾ.ಕೋರೆಯವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ನಗರಕ್ಕೆ …

Read More »

5 ವರ್ಷವೂ ನಮ್ಮ ತಂದೆಯವರೇ ಸಿಎಂ: ಯತೀಂದ್ರ ಸಿದ್ದರಾಮಯ್ಯ ಪುನರುಚ್ಚಾರ

ಮೈಸೂರು: ಐದು ವರ್ಷವೂ ನಮ್ಮ ತಂದೆಯವರೇ ಸಿಎಂ. ಇದು ಈಗ ಸೆಟ್ಲಡ್ ವಿಚಾರ ಎಂದು ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಮೈಸೂರಿನಲ್ಲಿ  ಸ್ಫೋಟಕ ವಿಚಾರ ಬಹಿರಂಗಪಡಿಸಿದ ಸಿಎಂ ಪುತ್ರ ಯತೀಂದ್ರ, ಹೈಕಮಾಂಡ್ ಈ ಬಗ್ಗೆ ನಮ್ಮ ತಂದೆಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಯಾರೋ ಕೆಲವರು ನಾಯಕತ್ವ ಬದಲಾವಣೆ ಬಗ್ಗೆ ಪ್ರಯತ್ನ ಮಾಡಿದ್ದರು. ಆ ಪ್ರಯತ್ನಕ್ಕೆ ಹೈಕಮಾಂಡ್ ಸೊಪ್ಪು ಹಾಕಿಲ್ಲ. ಅಲ್ಲಿಗೆ ಸಿದ್ದರಾಮಯ್ಯನವರು 5 ವರ್ಷ ಸಿಎಂ ಆಗಿ ಅಧಿಕಾರ …

Read More »

ದಾವಣಗೆರೆ | ಸನ್ಯಾಸತ್ವ ಸ್ವೀಕರಿಸಿದ ಇಂಜಿನಿಯರಿಂಗ್ ವಿದ್ಯಾರ್ಥಿನಿ

ದಾವಣಗೆರೆ: ನಗರದ  ಚೌಕಿಪೇಟೆಯ 26 ವರ್ಷದ ಯುವತಿಯೊಬ್ಬರು ಸಂಸಾರ ತೊರೆದು ಸನ್ಯಾಸತ್ವ ಸ್ವೀಕರಿಸಿದ್ದಾರೆ. ಮುಖೇಶ್ ಕುಮಾರ್ ಹಾಗೂ ಸುನೀತಾ ಅವರ ಪುತ್ರಿ ಆಂಚಲ್ ಕುಮಾರಿ (26) ಜೈನ ಧೀಕ್ಷೆ ಪಡೆದಿದ್ದಾರೆ. ಅವರು ಖಾಸಗಿ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಓದುತ್ತಿದ್ದರು. ಅಲ್ಲದೇ ಕಾಲೇಜಿನಲ್ಲಿ ಟಾಪರ್ ಆಗಿದ್ದರು. ಇಂದು (ಫೆ.6) ಸೂರತ್‌ನಲ್ಲಿ ಅವರು ಸನ್ಯಾಸ ಧೀಕ್ಷೆ ಪಡೆದಿದ್ದಾರೆ. ಯುವತಿಯ ಆಯ್ಕೆಯನ್ನು ಕುಟುಂಬಸ್ಥರು ಸಹ ಖುಷಿಯಿಂದ ಒಪ್ಪಿಕೊಂಡಿದ್ದಾರೆ. ಇತ್ತೀಚಿಗೆ ಆಂಚಲ್ ಕುಮಾರಿಯವರು ಆಧ್ಯಾತ್ಮದ ಕಡೆ …

Read More »