ಬೆಂಗಳೂರು: ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ ಅಂಗೀಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದಾರೆ. ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಬೆನ್ನುಮೂಳೆ ಮುರಿಯುವ ಕೆಲಸ ಮಾಡುತ್ತಿವೆ ಎಂದು ಆರೋಪಿಸಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಸಂಸತ್ ನಲ್ಲಿ ವಿರೋಧಪಕ್ಷಗಳ ಅಭಿವ್ಯಕ್ಕಿ ಸ್ವಾತಂತ್ರ್ಯದ ಕೊರಳನ್ನು ಹಿಚುಕಿ, ರೈತರ ಪಾಲಿಗೆ ಮರಣಶಾಸನವಾಗಿರುವ ಕೃಷಿ ಉತ್ಪನ್ನ ಮಾರಾಟ ಮತ್ತು …
Read More »ವಿಜಯಪುರ: ನೇಣು ಬಿಗಿದುಕೊಂಡು ಮಹಿಳಾ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ
ವಿಜಯಪುರ : ಎಂಕಾಂ ಅಂತಿಮ ವರ್ಷದ ಕೊನೆಯ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಆವರಣದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಭಾನುವಾರ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮೂಲತಃ ಕಲಬುರಗಿ ನಗರದ ಐಶ್ವರ್ಯ ಶಂಕರ ನಾಟಿಕಾರ (24) ಎಂಬ ವಿದ್ಯಾರ್ಥಿನಿಯೇ ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾಳೆ. ತಂಗಿ ಆತ್ಮಹತ್ಯೆಗೆ ಕಾರಣವೆಂದು ಭಾವನನ್ನೇ ಹತ್ಯೆಗೈದ ಯೋಧ ವಿದ್ಯಾರ್ಥಿನಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರ ತನಿಖೆಯಿಂದ ಸಾವಿನ ನಿಖರ …
Read More »ಪ್ರಧಾನಿ ಮೋದಿ ಭಾವಚಿತ್ರ ಹಚ್ಚೆ ಹಾಕಿಸಿಕೊಂಡ ಮಹಿಳೆ
ಪಿರಿಯಾಪಟ್ಟಣ : ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಅಂಗವಾಗಿ ಪಟ್ಟಣದ ಮಹಿಳಾ ಅಭಿಮಾನಿಯೊಬ್ಬರು ಅವರ ಎಡಗೈ ಮೇಲೆ ಮೋದಿ ಅವರ ಭಾವಚಿತ್ರದ ಹಚ್ಚೆ ಹಾಕಿಸಿ ಅಭಿಮಾನ ತೋರಿದ್ದಾರೆ. ಹಲವು ಸಾಮಾಜಿಕ ಚಟುವಟಿಕೆ ಮೂಲಕ ಗುರುತಿಸಿಕೊಂಡಿರುವ ಪಟ್ಟಣದ ನಿವಾಸಿ ಶುಭಾಗೌಡ ಹಚ್ಚೆ ಹಾಕಿಸಿಕೊಂಡವರು. ನರೇಂದ್ರ ಮೋದಿ ಅವರು ದೇಶದ ಪ್ರಧಾನ ಮಂತ್ರಿಯಾದಾಗಿನಿಂದ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದು ಭಾರತವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ದು, ಇಡೀ ವಿಶ್ವವೇ ಭಾರತದತ್ತ ತಿರುಗಿ …
Read More »ಪೋಲೀಸರ ಕಣ್ತಪ್ಪಿಸಿ ಬಸ್ಸಿನಲ್ಲಿ ಬೆಳಗಾವಿಯ ಸುವರ್ಣಸೌಧಕ್ಕೆ ಬಂದ ವಾಟಾಳ್ ನಾಗರಾಜ್
ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸಬೇಕೆಂದು ಆಗ್ರಹಿಸಿ ಹೋರಾಟ ನಡೆಸಲು ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಪೋಲೀಸರ ಕಣ್ತಪ್ಪಿಸಿ ಬೆಳಗಾವಿ ಸುವರ್ಣ ಸೌಧಕ್ಕೆ ಕನ್ನಡದ ಪರ ಚಳುವಳಿಯ ಹೋರಾಟಗಾರ ವಾಟಾಳ್ ನಾಗರಾಜ್ ಬಂದಿದ್ದಾರೆ. ಈ ಕುರಿತಂತೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಸುದ್ದಿಗಾರರು ನಿಮ್ಮನ್ನ ಪೋಲೀಸರು ಬೆಳಗಾವಿಗೆ ಆಗಮಿಸಲು ಬಿಡುವುದಿಲ್ಲ ಹಿರೆ ಬಾಗೇವಾಡಿಯಲ್ಲೆ ಬಂಧಿಸುತ್ತಾರೆ. ಹೇಗೆ ಆಗಮಿಸುವಿರಿ ಎಂದಿದ್ದರು. ಈ ಸಾರಿ …
Read More »ಚಾರ್ಮಾಡಿಯಲ್ಲಿ ಪ್ರವಾಸಿಗರ ಮೋಜು ಮಸ್ತಿ, ಅಪಾಯದ ಸ್ಥಳದಲ್ಲಿ ಸೆಲ್ಫಿಗಿಲ್ಲ ಬ್ರೇಕ್..!
ಬಣಕಲ್, : ಕಾಫಿ ನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಚಾರ್ಮಾಡಿ ಘಾಟಿ ಭಾಗದಲ್ಲಿ ಅಲ್ಲಲ್ಲಿ ಧರೆ ಕುಸಿತ ಕಂಡು ಬಂದಿದ್ದರೂ ಪ್ರವಾಸಿಗರಿಗೆ ಮಾತ್ರ ಚಾರ್ಮಾಡಿ ಘಾಟ್‍ನಲ್ಲಿ ಮೋಜು ಮಸ್ತಿಗೆ ಕಡಿವಾಣ ಇಲ್ಲದಂತಾಗಿದೆ.ನಿನ್ನೆ ಭಾರೀ ಮಳೆ ಸುರಿಯುತ್ತಿದ್ದರೂ ಚಾರ್ಮಾಡಿ ರಸ್ತೆಯಲ್ಲಿ ಪ್ರವಾಸಿಗರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ ಏರುತ್ತಲೇ ಇದೆ. ಪ್ರವಾಸಿಗರು ಅಪಾಯದ ಸ್ಥಳದಲ್ಲಿ ಸೆಲ್ಫಿ ತೆಗೆಯುವುದು, ಜಲಪಾತದ ಅಪಾಯದ ಸ್ಥಳಗಳನ್ನು ಏರುವುದು ಮಾಡಿಕೊಂಡು ಬರುತ್ತಿದ್ದಾರೆ. ಚಾರ್ಮಾಡಿಯಲ್ಲಿ ಅಪಾಯವಿದ್ದರೂ ಪ್ರವಾಸಿಗರು ಮಾತ್ರ ಯಾವುದೇ …
Read More »ಧಾರವಾಡದ ಹೆಸರು-ಉದ್ದು ಖರೀದಿಗೆ ಕೇಂದ್ರ ಗ್ರೀನ್ ಸಿಗ್ನಲ್
ನವದೆಹಲಿ, – ಧಾರವಾಡ ಜಿಲ್ಲಾಯ ರೈತರ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಧಾರವಾಡ ಜಿಲ್ಲಾಯಲ್ಲಿ ಖರೀದಿ ಕೇಂದ್ರಗಳ ಮೂಲಕ ಹೆಸರುಕಾಳು ಹಾಗೂ ಉದ್ದು ಖರೀದಿಯನ್ನು ಕೂಡಲೇ ಆರಂಭಿಸಲು ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಈ ಬಗ್ಗೆ ಆದೇಶ ಪ್ರತಿ ಹೊರಡಿಸಿದ್ದು , ರೈತರಿಗೆ ಸಂತಸ ತಂದಿದೆ. ಈ ವಿಷಯವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದು ಜಿಲ್ಲಾಯ ರೈತರು …
Read More »ನಿಲ್ಲದ ಮಳೆ : ಕರಾವಳಿ, ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಭೀತಿ
ಬೆಂಗಳೂರು, – ನಿಲ್ಲದ ಮಳೆಗೆ ಕರಾವಳಿ ತತ್ತರಗೊಂಡಿದೆ. ಉತ್ತರ ಕರ್ನಾಟಕದಲ್ಲಿ ಮತ್ತೇ ಪ್ರವಾಹದ ಭೀತಿ ಎದುರಾಗಿದೆ. ಭಾರೀ ಮಳೆಗೆ ನಿನ್ನೆ ಇಬ್ಬರು ಮೃತಪಟ್ಟಿದ್ದು ಇಂದು ತುಂಗಾಭದ್ರ ನದಿಯಲ್ಲಿ ಎತ್ತಿನಬಂಡಿ ಸಮೇತ ಇಬ್ಬರು ಕೊಚ್ಚಿಹೋಗಿದ್ದಾರೆ. ಕಲಬುರಗಿಯಲ್ಲಿ ಕಮಲಾಪುರ ತಾಲೂಕಿನ ಶ್ರೀಚಂದ ಗ್ರಾಮದಲ್ಲಿ ಯುವಕನೋರ್ವ ಬೈಕ್ ಸಮೇತ ಕೊಚ್ಚಿಹೋಗಿದ್ದಾನೆ. ಹಾವೇರಿ ಜಿಲ್ಲೆ ರಾಣೇಬೆನ್ನೂರಿನ ಕೋಣನ ತಂಬಗಿಯ ನದಿ ಭಾಗದಲ್ಲಿ ಮರಳು ತುಂಬುತ್ತಿದ್ದ ಇಬ್ಬರು ಪ್ರವಾಹದ ಪಾಲಾಗಿದ್ದಾರೆ. ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು …
Read More »‘ಬೆಂಗಳೂರು ಅಭಿವೃದ್ಧಿ ಕುರಿತು ಮೋದಿಗಿರುವ ಕಲ್ಪನೆ ಅದ್ಭುತ’
ಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿಯವರು ವ್ಯಕ್ತಿಯಲ್ಲ, ದೇವಮಾನವ. ಅವರನ್ನು ನಾನು ರಾಜರ್ಷಿ ಎಂದು ಕರೆಯುತ್ತೇನೆ. ಬೆಂಗಳೂರು ಅಭಿವೃದ್ಧಿ ಕುರಿತು ಅವರ ಕಲ್ಪನೆ, ಅವರಿಗಿರುವ ಮಾಹಿತಿ ನನ್ನನ್ನು ಅಚ್ಚರಿಗೊಳಿಸಿದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಭಾನುವಾರ ಹುಬ್ಬಳ್ಳಿ ಹಾಗೂ ಬೆಂಗಳೂರು ನಡುವಿನ ವರ್ಚುವಲ್ ರಾರಯಲಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಅವರ ಜನ್ಮದಿನದ ನಿಮಿತ್ತ ದೆಹಲಿಗೆ ತೆರಳಿ ಭೇಟಿಯಾಗಿ 40 ನಿಮಿಷ ಅವರೊಡನೆ ಮಾತನಾಡಿದ್ದೆ. …
Read More »ಸೀರೆ ಉಟ್ಟಾಗ ಹಾವು ಹಿಡಿಯೋದು ಕಷ್ಟ -ಉರಗ ತಜ್ಞೆಯ ಸಾಹಸಕ್ಕೆ ಸ್ಥಳೀಯರು ಫುಲ್ ಫಿದಾ!
ಬೆಳಗಾವಿ: ಮದುವೆಗೆ ತೆರಳುವ ಬದಲು ಮನೆಯೊಂದರಲ್ಲಿ ಸಿಲುಕಿದ್ದ ನಾಗರಹಾವನ್ನು ಉರಗ ತಜ್ಞೆ ನಿರ್ಜರಾ ಚಿಟ್ಟಿ ಬರಿಗೈಯಲ್ಲೇ ರಕ್ಷಣೆ ಮಾಡಿರುವ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ನಿರ್ಜರಾ ಹಾಗೂ ಆಕೆಯ ಪತಿ ಆನಂದ್ ಮೂಲತಃ ವನ್ಯಜೀವಿ ತಜ್ಞರು. ಬೆಳಗಾವಿ ನಿವಾಸಿಗಳಾದ ದಂಪತಿ ತಮ್ಮ ಸಂಬಂಧಿಕರ ಮದುವೆಗೆ ತೆರಳಲು ನಿನ್ನೆ ಸಜ್ಜಾಗುತ್ತಿದ್ದರಂತೆ. ಈ ನಡುವೆ ದಂಪತಿಗೆ ನಮ್ಮ ಮನೆಯಲ್ಲಿ ನಾಗರಹಾವು ಒಂದು ಸಿಲುಕಿಕೊಂಡಿದೆ. ದಯವಿಟ್ಟು ಬಂದು ಅದನ್ನು ಅಲ್ಲಿಂದ ಹೊರೆತೆಗೆಯಿರಿ ಅಂತಾ ನಗರದ …
Read More »ಯಲ್ಲಮ್ಮನಗುಡ್ಡದ ಎಣ್ಣೆ ಹೊಂಡದಲ್ಲಿ ಧುಮ್ಮಿಕ್ಕುತ್ತಿದೆ ಮಳೆ ನೀರು.
ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಗೆ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದ ಎಣ್ಣೆ ಹೊಂಡದಲ್ಲಿ ಮಳೆ ನೀರು ಧುಮ್ಮಿಕ್ಕುತ್ತಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದ ರೇಣುಕಾ ಯಲ್ಲಮ್ಮ ದೇವಸ್ಥಾನದ ಹೊರವಲಯದಲ್ಲಿರುವ ಎಣ್ಣೆ ಹೊಂಡದಲ್ಲಿ ಮಳೆ ನಿರು ಧುಮ್ಮಿಕ್ಕುತ್ತಿದೆ. ಆದರೆ ಯಲ್ಲಮ್ಮ ದೇವಸ್ಥಾನದ ಆವರಣಕ್ಕೆ ಮಳೆ ನೀರು ನುಗ್ಗಿಲ್ಲ. ಗುಡ್ಡದ ಮೇಲಿಂದ ಹರಿದು ಬರುತ್ತಿರುವ ಅಪಾರ ಪ್ರಮಾಣದ ನೀರು ಎಣ್ಣೆ ಹೊಂಡದ ಮೂಲಕ ಕಾಲುವೆಯತ್ತ ಹರಿಯುತ್ತಿದೆ.
Read More »
Laxmi News 24×7