Breaking News

ಜಿಲ್ಲೆ

ಆ’ ಫೋಟೋ ಹಾಕಿ ಹೊಗಳಿದ್ದ ಸಂಜನಾ!

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರ ಸೇರಿರುವ ನಟಿ ಸಂಜನಾ ಗಲ್ರಾನಿ ಇಸ್ಲಾಂ ಧರ್ಮಕ್ಕೆ ಮತಾಂತರ ಆಗಿದ್ದಾರಾ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಮತಾಂತರ ಸುದ್ದಿಗೆ ಪುಷ್ಠಿ ಎಂಬಂತೆ ಸಂಜನಾ ಸಿನಿಮಾ ಶೂಟಿಂಗ್ ಗೆ ಬುರ್ಖಾ ಧರಿಸಿದ್ದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ಆ ಧರ್ಮವನ್ನು ಹೊಗಳಿರುವುದು ಬೆಳಕಿಗೆ ಬಂದಿದೆ. ಹೌದು, ಅಂದು ಬ್ಲಾಕ್ ಆಂಡ್ ವೈಟ್ ಫೋಟೋ ಪೋಸ್ಟ್ ಮಾಡಿದ್ದ ಸಂಜನಾ, …

Read More »

ಬಿಎಸ್‍ವೈಗೆ ಸಿಕ್ಕಿಲ್ಲ ಹೈಕಮಾಂಡ್ ಗ್ರೀನ್ ಸಿಗ್ನಲ್ – ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ಡೌಟ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಸಿಎಂ ದೆಹಲಿ ಭೇಟಿ ಅಂತ್ಯವಾಗಿದೆ. ಆದರೆ ಸಂಪುಟ ಪುನಾರಚನೆಯೋ ಅಥವಾ ಸಂಪುಟ ವಿಸ್ತರಣೆಯೋ ಅನ್ನೋ ವಿಚಾರಕ್ಕೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಅಧಿವೇಶನಕ್ಕೆ ಮುನ್ನ ಸಂಪುಟ ವಿಸ್ತರಣೆಗೆ ಒಲವು ತೋರಿದ್ದ ಸಿಎಂಗೆ ಈ ಬೆಳವಣಿಗೆ ನಿರಾಸೆ ತಂದಿದೆ. ಭಾನುವಾರ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಶುಕ್ರವಾರ ರಾತ್ರಿಯಿಂದ ಸುದ್ದಿ ಹಬ್ಬಿತ್ತು. ಆದರೆ ಹೈಕಮಾಂಡ್ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿಲ್ಲ. …

Read More »

ಹಿರಿಯ ನಾಯಕರು ಸಿಎಂ ಸ್ಥಾನದ ಪೈಪೋಟಿಯಲ್ಲಿದ್ದಾರೆ. ಸಿಎಂ ಸ್ಥಾನ, ಸಮಯ ಬಂದಾಗ ನೋಡೋಣ: ಸತೀಶ ಜಾರಕಿಹೊಳಿ

ಬೆಳಗಾವಿ:  ಪಕ್ಷದಲ್ಲಿ ಬಹಳಷ್ಟು ಹಿರಿಯ ನಾಯಕರು ಸಿಎಂ ಸ್ಥಾನದ ಪೈಪೋಟಿಯಲ್ಲಿದ್ದಾರೆ. ಮೊದಲು  ಪಕ್ಷ ಅಧಿಕಾರಕ್ಕೆ ಬರಬೇಕು. ಸದ್ಯ ಪಕ್ಷ ಅಧಿಕಾರಕ್ಕೆ ತರಬೇಕು  ಎಂಬುವುದೇ ನಮ್ಮ ಗುರಿಯಾಗಿದೆ. ಆ ನಿಟ್ಟಿನಲ್ಲಿ ರಾಜ್ಯದ್ಯಂತ ಪಕ್ಷ ಸಂಘಟನೆಗಾಗಿ ಹಗಲು ರಾತ್ರಿ ದುಡಿಯುತ್ತಿದ್ದೇವೆ.  ಸಿಎಂ ಸ್ಥಾನ, ಸಮಯ ಬಂದಾಗ ನೋಡೋಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಕಾಂಗ್ರೆಸ್ ಕಚೇರಿಯಲ್ಲಿ  ಶನಿವಾರ ಮಾಧ್ಯಮದವರೊಂದಿಗೆ  ಮಾತನಾಡಿದ ಅವರು,   ಸುವರ್ಣಸೌಧದಲ್ಲಿ  ಪ್ರತಿ ಸಲ ಅಧಿವೇಶನ ನಡೆಯಬೇಕು. …

Read More »

ಸ್ಯಾಂಡಲ್‍ವುಡ್ ನಟನ ಮಗನಿಗೂ, ನಟಿಗೆ ಸಿಸಿಬಿ ನೋಟಿಸ್ ಸಾಧ್ಯತೆ…..?

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‍ವುಡ್ ಹಿರಿಯ ನಟರೊಬ್ಬರ ಮಗ ಮತ್ತು ಓರ್ವ ನಟಿಗೆ ಸಿಸಿಬಿ ನೋಟಿಸ್ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಇಂದು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕರಾದ ಅಕುಲ್ ಬಾಲಾಜಿ, ಸಂತೋಷ್ ಕುಮಾರ್ ಮತ್ತು ಮಾಜಿ ಶಾಸಕ ಆರ್.ವಿ.ದೇವರಾಜ್ ಪುತ್ರ ಆರ್.ವಿ.ಯುವರಾಜ್ ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಈ ಮೂವರ ವಿಚಾರಣೆ ಬಳಿಕ ನಟನ ಮಗನಿಗೆ ಸಿಸಿಬಿ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ ಎನ್ನಲಾಗಿದೆ. ನಟನ ಮಗ …

Read More »

ಮನೆಗಳಿಗೆ ಮಳೆ ನೀರು ನುಗ್ಗಿ ಊಟಕ್ಕೂ ಪರದಾಟ

ರಾಯಚೂರು: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಹೀಗಾಗಿ ಜನ ಊಟಕ್ಕೂ ಪರದಾಡುವಂತ ಪರಸ್ಥಿತಿ ನಿರ್ಮಾಣವಾಗಿದೆ. ಮನೆಗಳಿಗೆ ನೀರು ನುಗ್ಗಿರುವ ರಾಯಚೂರು ನಗರದ ಜಹಿರಾಬಾದ್, ಸಿಯತಲಾಬ್ ಪ್ರದೇಶಗಳಲ್ಲಿ ತಾತ್ಕಾಲಿಕ ಪರಿಹಾರ ಕೇಂದ್ರ ತೆರೆದು ಊಟದ ವ್ಯವಸ್ಥೆ ಮಾಡಲಾಗಿದೆ. ಮನೆಯಲ್ಲಿನ ದವಸ ಧಾನ್ಯ ಹಾಗೂ ಎಲ್ಲಾ ವಸ್ತುಗಳು ನೀರುಪಾಲಾಗಿದ್ದರಿಂದ ಸಾರ್ವಜನಿಕರು ಪರದಾಡುತ್ತಿದ್ದಾರೆ. ನಿಧಾನಕ್ಕೆ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ತಗ್ಗು ಪ್ರದೇಶಗಳಲ್ಲಿರುವ ಮನೆಗಳೆಲ್ಲಾ ಸತತವಾಗಿ ಸುರಿದ ಮಳೆಯಿಂದ …

Read More »

SCP/TSP ಯೋಜನೆಯಡಿ ಉಚಿತ ಲ್ಯಾಪ್‌ಟಾಪ್ ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ವಿತರಿಸಿದರು.

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ/ಪಂಗಡಗಳ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿ ಉಚಿತ ಲ್ಯಾಪ್‌ಟಾಪ್ ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ವಿತರಿಸಿದರು. ಸುವರ್ಣ ವಿಧಾನಸೌಧದ ಸೆಂಟ್ರಲ್ ಸಭಾಂಗಣದಲ್ಲಿ ಶನಿವಾರ(ಸೆ.19) ನಡೆದ ಸಮಾರಂಭದಲ್ಲಿ ಲ್ಯಾಪ್‌ಟಾಪ್ ಗಳನ್ನು ನೀಡಲಾಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ, ದಶಮಾನೋತ್ಸವದ ಸಂಭ್ರಮದಲ್ಲಿ ಇರುವ ಅಭಿವೃದ್ಧಿ ಕೆಲಸ ಭರದಿಂದ ನಡೆಯಲಿವೆ ಎಂದರು. ಭೌಗೋಳಿಕವಾಗಿ ಹಾಗೂ ಶೈಕ್ಷಣಿಕವಾಗಿ …

Read More »

ಡ್ರಗ್ಸ್ ಕೇಸ್ – ನಟ ಸಂತೋಷ್, ಐಂದ್ರಿತಾ ಕಾಲೆಳೆದ ಪ್ರಶಾಂತ್ ಸಂಬರಗಿ

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿಯವರು ಫೇಸ್‍ಬುಕ್ ಪೋಸ್ಟ್ ಹಾಕುವ ಮೂಲಕ ಡ್ರಗ್ಸ್ ಜಾಲಕ್ಕೆ ಸಂಬಂಧಿಸದಂತೆ ಸಿಸಿಬಿ ವಿಚಾರಣೆ ಎದುರಿಸುತ್ತಿರುವ ನಟಿ ಐಂದ್ರಿತಾ ರೈ ಮತ್ತು ನಟ ಸಂತೋಷ್ ಕುಮಾರ್ ಅವರ ಕಾಲೆಳೆದಿದ್ದಾರೆ. ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ವಿಚಾರದಲ್ಲಿ ಕನ್ನಡದ ಸ್ಟಾರ್ ನಟ-ನಟಿಯರು ಸಿಲುಕಿ ಹಾಕಿಕೊಂಡಿದ್ದಾರೆ. ಇಂದು ನಿರೂಪಕ ಅಕುಲ್ ಬಾಲಾಜಿ ಮತ್ತು ನಟ ಸಂತೋಷ್ ಕುಮಾರ್ ಅವರನ್ನು ಸಿಸಿಬಿ ವಿಚಾರಣೆ ಮಾಡಿದೆ. ಈಗಾಗಲೇ ಈ ಪ್ರಕರಣದಲ್ಲಿ ನಟಿ ರಾಗಿಣಿ …

Read More »

ಬ್ರೇಕಿಂಗ್ : ದೆಹಲಿಯಿಂದ ಬೆಂಗಳೂರಿಗೆ ಸಿಎಂ ಯಡಿಯೂರಪ್ಪ ವಾಪಾಸ್ : ಸದ್ಯದಲ್ಲೇ ಸಂಪುಟ ವಿಸ್ತರಣೆ.?

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ, ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಸೇರಿದಂತೆ ಕೇಂದ್ರದ ಬಿಜೆಪಿ ವರಿಷ್ಠರ ಭೇಟಿಯ ಬಳಿಕ, ದೆಹಲಿಯಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬೆಂಗಳೂರಿಗೆ ಹಿಂದಿರುಗಿದ್ದಾರೆ. ಹೀಗಾಗಿ ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗುತ್ತಾ ಎನ್ನುವ ಕುತೂಲಹ ಮೂಡಿಸಿದೆ. BIG BREAKING : ಮುಂದಿನವಾರ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲು …

Read More »

ʼಆಕೆ ಸಂಜನಾ ಗಿಲ್ರಾನಿ ಅಲ್ಲ ಮಾಹಿರಾʼ: ನಟಿಮಣಿಯ ಬುರ್ಕಾವತಾರ ಬಯಲು..!

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುತ್ತಿರುವ ನಟಿ ‘ಸಂಜನಾ ಗಲ್ರಾನಿʼ ಬಗ್ಗೆ ಮತ್ತೊಂದು ಹೊಸ ವಿಷ್ಯ ಬಹಿರಂಗವಾಗಿದ್ದು, ಸಮಾಜೀಕ ಕಾರ್ಯಕರ್ತ ಪ್ರಶಾಂತ್‌ ಸಂಬರಗಿ ಆಕೆ ಸಂಜನಾ ಗಿಲ್ರಾನಿ ಅಲ್ಲ ಮಹಿರಾ ಎಂದು ಹೇಳಿದ್ದಾರೆ. ಹೌದು, ಪ್ರಶಾಂತ್‌ ಸಂಬರಗಿ ಈ ಕುರಿತು ಪೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದು, ‘ ಸಂಜನಾ ಮುಸ್ಲಿಂ ಧರ್ಮಕ್ಕೆ 2018ರಲ್ಲಿ ಮತಾಂತರಗೊಂಡಿದ್ದಾರೆ. ಈಗ ಅವರ ಹೊಸ ಹೆಸರು ಮಾಹಿರಾ. ನಮ್ಮ ಕರ್ನಾಟಕದಲ್ಲಿ ಲವ್ …

Read More »

ಸುರತ್ಕಲ್: ತಡೆಗೋಡೆ ಕುಸಿದು ಕಾರ್ಮಿಕ ಸಾವು, ಇಬ್ಬರು ಅಪಾಯದಿಂದ ಪಾರು

ಸುರತ್ಕಲ್: ತಡೆಗೋಡೆಯೊಂದು ಬಿದ್ದ ಪರಿಣಾಮ ಒಬ್ಬ ಕಾರ್ಮಿಕ ಮೃತಪಟ್ಟಿದ್ದು, ಇಬ್ಬರು ಕಾರ್ಮಿಕರು ಅಪಾಯದಿಂದ ಪಾರಾದ ಘಟನೆ ಕೂಳೂರಿನಲ್ಲಿ ಶನಿವಾರ ಸಂಭವಿಸಿದೆ. ಮೃತ ವ್ಯಕ್ತಿಯನ್ನು ನೀರುಮಾರ್ಗ ನಿವಾಸಿ ಉಮೇಶ (38) ಎಂದು ಗುರುತಿಸಲಾಗಿದೆ. ಉಳಿದ ಇಬ್ಬರು ಕಾರ್ಮಿಕರಾದ ಬಸವರಾಜ್ ಹಾಗೂ ನಾರಾಯಣ ಎನ್ನಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದ ಇಲ್ಲಿನ ನಿವಾಸಿ ಜಗದೀಶ್ ಎನ್ನುವವರ ಮನೆಯ ಕೆಲಸ ನಡೆಯುತಿದ್ದ ಸಂದರ್ಭ ಕಲ್ಲಿನಿಂದ ಕಟ್ಟಿದ ತಡೆಗೋಡೆ ಕುಸಿದು …

Read More »