Breaking News

ಜಿಲ್ಲೆ

ಬೆಂಗಳೂರಿನ 36 ಆಸ್ಪತ್ರೆಗಳಿಗೆ ನೋಟಿಸ್

ಬೆಂಗಳೂರು:  ಸರ್ಕಾರದ ನಿಯಮ ಉಲ್ಲಂಘಿಸಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುತ್ತಿರುವ ಬೆಂಗಳೂರಿನ 36 ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದು ಖಚಿತ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳು ಸರ್ಕಾರದ ನಿಯಮಾವಳಿ ಪ್ರಕಾರ ಶೇ.50ರಷ್ಟು ಹಾಸಿಗೆಗಳನ್ನು ಮೀಸಲಿಡುವುದು ಕಡ್ಡಾಯವಾಗಿದೆ.   v ಆದರೆ ಕೆಲವು ಆಸ್ಪತ್ರೆಗಳು ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುತ್ತಿರುವ …

Read More »

ಅಥಣಿಯಲ್ಲಿ ಹಾಸು ಹೊಕ್ಕಾಗಿರುವ ಶರಣ ಸಂಸ್ಕೃತಿ: ಶಿವಬಸವ ಸ್ವಾಮೀಜಿ

ಅಥಣಿ: ‘ಇಲ್ಲಿ ಶರಣ ಸಂಸ್ಕೃತಿ ಹಾಸುಹೊಕ್ಕಾಗಿದೆ. ಹೊರಗಿನಿಂದ ಬಂದವರೆಲ್ಲರನ್ನೂ ತಮ್ಮವರೆಂದು ಪ್ರೀತಿ, ವಿಶ್ವಾಸ ಕೊಟ್ಟು ಜಾತಿ, ಮತವೆನ್ನದೆ ಎಲ್ಲರನ್ನೂ ಅಪ್ಪಿಕೊಳ್ಳುವ ಗುಣ ಈ ಮಣ್ಣಿನದಾಗಿದೆ’ ಎಂದು ಗಚ್ಚಿನ ಮಠದ ಶಿವಬಸವ ಸ್ವಾಮೀಜಿ ಹೇಳಿದರು. ಶೆಟ್ಟರ ಮಠದ ಮರುಳಸಿದ್ಧ ಸ್ವಾಮೀಜಿ ಅವರ 128ನೇ ಪುಣ್ಯಾರಾಧನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಭಾರತೀಯ ಆಹಾರ ಪದ್ಧತಿಯಲ್ಲಿ ದಿವ್ಯ ಔಷಧಿಗಳಿವೆ. ಆದಾಗ್ಯೂ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ಅನುಸರಿಸಿ ಸೋಂಕಿನಿಂದ ದೂರವಿರಬೇಕು’ ಎಂದು ಸಲಹೆ ನೀಡಿದರು. …

Read More »

ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ :ಡಿಸಿಎಂ ಲಕ್ಷ್ಮಣ ಸವದಿ

ರಾಯಚೂರು : ವಿಮಾನ ನಿಲ್ದಾಣ ನಿರ್ಮಾಣಕ್ಕೆ ಯೋಜನೆ ತಯಾರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಅಂತ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ರಾಯಚೂರಿನ ಪೊಲೀಸ್ ಕವಾಯತ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ಬಳಿಕ ಮಾತನಾಡಿದ ಸಚಿವರು, ವಿಮಾನ ನಿಲ್ದಾಣಕ್ಕೆ ಸಂಪುಟದ ಒಪ್ಪಿಗೆ ಪಡೆಯಲಾಗುವುದು. ವಿಮಾನ ನಿಲ್ದಾಣ ಬರುವದರಿಂದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದರು. ಈಗಾಗಲೇ ಕೇಂದ್ರ ಸರ್ಕಾರ ಐಐಐಟಿ ನೀಡಿದೆ. ಏಮ್ಸ್ ರಾಯಚೂರು ಜಿಲ್ಲೆಗೆ ಬರಬೇಕೆಂದು ನಾನು ಉಸ್ತುವಾರಿ ಸಚಿವನಾಗಿ ಪ್ರಾಮಾಣಿಕ …

Read More »

CCB List ನಲ್ಲಿ ಮುಂದಿನ ಹೆಸರುಗಳು ಆ ಹಿರಿಯ ಸ್ಟಾರ್ ನಟ ಮತ್ತು ಸೋದರರದ್ದು!

ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ ನಟ ನಟಿಯರ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸಿಸಿಬಿ ಇನ್ನೂ ಕೆಲವರ ಮೇಲೆ ಕಣ್ಣು ನೆಟ್ಟಿದೆ. ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸ್ಟಾರ್ ನಟ ಮತ್ತು ಸಹೋದರರು ಭಾಗಿಯಾಗಿರುವ ಬಗ್ಗೆ ಸಿಸಿಬಿ ಅಧಿಕಾರಿಗಳಿಗೆ ಮಹತ್ವದ ಸುಳಿವು ಸಿಕ್ಕಿದ್ದು, ಆ ಇಬ್ಬರನ್ನು ವಿಚಾರಣೆಗೆ ಕರೆಯುವ ಸಾಧ್ಯತೆಗಳಿವೆ. ಸ್ಯಾಂಡಲ್​ವುಡ್​ನ ಫ್ಯಾಮಿಲಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಈ ಸಹೋದರ ನಟರ ಪೈಕಿ 2017ರ ಗಾಂಜಾ ಪ್ರಕರಣ ಹಾಗೂ ಅಪಘಾತ ಸಂದರ್ಭದಲ್ಲಿ ಇದೇ ಕುಟುಂಬದ ಒಬ್ಬರನ್ನ ಜಯನಗರ …

Read More »

ವಿಶ್ವಕರ್ಮ ಸಮುದಾಯ ಸಾಮಾಜಿಕ, ಆರ್ಥಿಕವಾಗಿ ಬೆಳೆಯಬೇಕು: ಸತೀಶ ಜಾರಕಿಹೊಳಿ.

ವಿಶ್ವಕರ್ಮ ಸಮುದಾಯ ಸಾಮಾಜಿಕ, ಆರ್ಥಿಕವಾಗಿ ಬೆಳೆಯಬೇಕು: ಸತೀಶ ಜಾರಕಿಹೊಳಿ ಬೆಳಗಾವಿ: ವಿಶ್ವಕರ್ಮ ಸಮುದಾಯದವರು ಸಾಮಾಜಿಕವಾಗಿ, ರಾಜಕೀಯವಾಗಿ ಮುಂದೆ ಬರಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿ್ದರು. ಸಮೀಪದ ಹೊನಗಾ ಗ್ರಾಮದಲ್ಲಿ ಹಮ್ಮಿಕೊಂಡ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಯಾವುದೇ ಸಮುದಾಯ ಬೆಳೆಯಲು ಶಿಕ್ಷಣ ಪ್ರಾಮುಖ್ಯತೆ ವಹಿಸುತ್ತಿದೆ. ಹೀಗಾಗಿ ಮಕ್ಕಳನ್ನು ಶೈಕ್ಷಣಿಕವಾಗಿ ಬೆಳೆಸಬೇಕು ಎಂದ ಅವರು ಸಾಮಾಜಿಕ,ಆರ್ಥಿಕ ಮತ್ತು ರಾಜಕೀಯವಾಗಿ ಮುಂದೆ ಬರಬೇಕು ಎಂದರು. ಸಮುದಾಯದ …

Read More »

ತಂಗಡಿ ಗ್ರಾಮದಲ್ಲಿ ದಲಿತರ ಮೇಲೆ ದಬ್ಬಾಳಿಕೆ.?

ತಂಗಡಿ ಗ್ರಾಮದಲ್ಲಿ ದಲಿತರ ಮೇಲೆ ದಬ್ಬಾಳಿಕೆ ಅಥಣಿ ತಾಲೂಕಿನ ತಂಗಡಿ ಗ್ರಾಮದಲ್ಲಿ ದಲಿತರು ತಮ್ಮ ಮಾಲ್ಕಿ ಜಮೀನಿನಲ್ಲಿ ತಮಗೆ ಅನುಕೂಲ ಆಗುವ ಗೋಸ್ಕರ ರಸ್ತೆಯನ್ನು ಮಾಡಿಕೊಳ್ಳುವುದಕ್ಕೆ ಹೋದರೆ ಗ್ರಾಮದ ಬೇರೆ ಜಾತಿಯ ಪ್ರಭಾವಿ ವ್ಯಕ್ತಿಗಳು ತಮ್ಮ ತಮ್ಮ ಪ್ರಭಾವ ಬೀರಿ ರಸ್ತೆ ನಿರ್ಮಾಣಕ್ಕೆ ತಡೆ ಒಡ್ಡುತ್ತಿದ್ದಾರೆ   ಇದೇ ಸಂದರ್ಭದಲ್ಲಿ ಗ್ರಾಮದ ದಲಿತ ಯುವಕರು ಮಾತನಾಡಿ ಹಲವಾರು ವರ್ಷದಿಂದ ರಸ್ತೆ ನಿರ್ಮಾಣ ಕಾರ್ಯಕ್ಕೆ ಕೈ ಹಾಕಿದರು ಇಲ್ಲಿ ದಲಿತರ ಜಮೀನು …

Read More »

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಹಣ ಕಡಿತ ಘೋರ ಅನ್ಯಾಯ: ಈಶ್ವರ್ ಖಂಡ್ರೆ

ಬೆಂಗಳೂರು : ರಾಜ್ಯ ಬಿಜೆಪಿ ಸರಕಾರ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದ್ದು, ಈ ಭಾಗದ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಭಾಲ್ಕಿ ಶಾಸಕ ಈಶ್ವರ್ ಖಂಡ್ರೆ ಆರೋಪಿಸಿದ್ದು, ಬಜೆಟ್ ನಲ್ಲಿ ಹಂಚಿಕೆ ಮಾಡಿದ್ದ ಹಣವನ್ನೂ ಕಡಿತ ಮಾಡಿರುವುದು ಇದಕ್ಕೆ ಜ್ವಲಂತ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.   ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಯ ಹೆಸರನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಎಂದು ಮರುನಾಮಕರಣ …

Read More »

ಕಲಬುರಗಿಗೆ ಬಂದಿಳಿದ ಸಿಎಂ ಬಿಎಸ್ ವೈ: ಸಂಜೆ ಇಲ್ಲಿಂದಲೇ ದಿಲ್ಲಿ ಪ್ರವಾಸ ಆರಂಭ

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶೇಷ ವಿಮಾನ ಮೂಲಕ ಗುರುವಾರ ಕಲಬುರಗಿಗೆ ಬಂದಿಳಿದರು. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಭಾಗಿಯಾಗಲು ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಜೊತೆಗೆ ಉಪ ಮುಖ್ಯಮಂತ್ರಿಗಳು ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸಹ ಆಗಮಿಸಿದರು.   ಆರ್ ಸಿ ಡಾ‌.ಎನ್.ವಿ.ಪ್ರಸಾದ, ಐ.ಜಿ.ಪಿ. ಮನೀಷ ಖರ್ಬಿಕರ್, ಡಿಸಿ …

Read More »

ಕೃಷ್ಣರಾಜಸಾಗರ ಜಲಾಶಯಕ್ಕೆ ಭೇಟಿ ನೀಡಿದ ಆಂತರಿಕ ಭದ್ರತಾ ಪಡೆಯ ಎಡಿಜಿಪಿ ಭಾಸ್ಕರ್ ರಾವ್

ಮಂಡ್ಯ: ಆಂತರಿಕ ಭದ್ರತಾ ಪಡೆಯ ಎಡಿಜಿಪಿ ಭಾಸ್ಕರ್ ರಾವ್ ಅವರು ಕೃಷ್ಣರಾಜಸಾಗರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.   ಜಲಾಶಯದ ಭದ್ರತೆ ಬಗ್ಗೆ ಭದ್ರತಾ ಉಸ್ತುವಾರಿ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ನಂತರ ಜಲಾಶಯದ ಭದ್ರತೆ ಬಗ್ಗೆ ಕೆಲವು ಸಲಹೆ ಸೂಚನೆಗಳನ್ನು ನೀಡಿದರು. ಜಲಾಶಯದ ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಾಸುದೇವ ಜಲಾಶಯದ ಬಗ್ಗೆ ಮಾಹಿತಿ ನೀಡಿದರು. ಪ್ರಧಾನಮಂತ್ರಿ ಹುಟ್ಟುಹಬ್ಬ: …

Read More »

ರಾಜ್ಯ ಸರ್ಕಾರದಿಂದ `ಕಲ್ಯಾಣ ಕರ್ನಾಟಕಕ್ಕೆ’ ಬಂಪರ್ ಗಿಫ್ಟ್

ಕಲಬುರಗಿ : ಕಲ್ಯಾಣ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಬಂಪರ್ ಗಿಫ್ಟ್ ಘೋಷಿಸಿದ್ದು, ಇಂದು 73 ನೇ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ 1,300 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ರ ಪುತ್ತಳಿಗೆ ಪೂಜೆ ಸಲ್ಲಿಸಿ ಸಿಎಂ ಮಲಾರ್ಪಣೆ ಮಾಡಿದರು. ನಂತರ ಡಿಎಆರ್ ಮೈದಾನದಲ್ಲಿ ದ್ವಜಾರೋಹಣ ನೇರವೇರಿಸಿದರು. ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, …

Read More »