ಚಾಮರಾಜನಗರ: ಸಫಾರಿಗೆ ಹೋಗಿ ಪ್ರಾಣಿಗಳನ್ನು ಮೊಬೈಲ್‍ನಲ್ಲಿ ಸೆರೆ ಹಿಡಿಯುತ್ತಿದ್ದ ಪ್ರವಾಸಿಗರಿಗೆ ಅರಣ್ಯ ಇಲಾಖೆ ಶಾಕ್ ನೀಡಿದೆ. ಇನ್ಮುಂದೆ ಸಫಾರಿಗೆ ತೆರಳುವ ಪ್ರವಾಸಿಗರು ಮೊಬೈಲ್ ಬಳಸದಂತೆ ನಿಷೇಧವೇರಿದೆ. ಇದು ವನ್ಯ ಪ್ರಾಣಿಗಳ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ. ವನ್ಯಪ್ರಿಯರು ಅರಣ್ಯ ಇಲಾಖೆ ನಿರ್ಧಾರಕ್ಕೆ ತಲೆ ಬಾಗಿದ್ರೆ,ಪ್ರವಾಸಿಗರು ವಿರೋಧ ವ್ಯಕ್ತಪಡಿಸ್ತಿದ್ದಾರೆ. ಹೌದು. ಸಫಾರಿ ಅಂದ್ರೆ ಯಾರಿಗಿಷ್ಟವಿಲ್ಲ ಹೇಳಿ, ಕಾಡಿಗೆ ಹೋದ್ರೆ ಸಾಕು ಒಂದು ರೌಂಡ್ ಸಫಾರಿಗೆ ಹೋಗಿಬರಬೇಕು ಅನ್ಸುತ್ತೆ. ವನ್ಯ ಪ್ರಾಣುಗಳಾದ ಹುಲಿ, ಆನೆ …
Read More »ಮನೆಯ ಹಿತ್ತಲಲ್ಲೇ ಅಕ್ರಮ ಗಾಂಜಾ ಗಿಡ ಬೆಳೆಸಿದ ಆರೋಪಿಗಳು: ಓರ್ವನ ಬಂಧನ
ಮಂಡ್ಯ: ತಮ್ಮ ಮನೆಯ ಹಿತ್ತಲಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಇಬ್ಬರು ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿರುವ ಕೆ.ಆರ್.ಪೇಟೆ ಗ್ರಾಮಾಂತರ ಪೋಲೀಸರು ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ಬೂಕನಕೆರೆ ಹೋಬಳಿಯ ಬಳ್ಳೆಕೆರೆ ನಾಟನಹಳ್ಳಿಯ ಜೇಟ್ ಕುಂಟಣ್ಣನ ಬೋರೇಗೌಡರ ಮಗ ಮಂಜೇಗೌಡ(45) ಬಂಧಿತ ಆರೋಪಿಯಾಗಿದ್ದು ಇದೇ ಗ್ರಾಮದ ಮತ್ತೊಬ್ಬ ಆರೋಪಿ ರಾಜೇಗೌಡ ಬಿನ್ ಲೇಟ್ ಈರೇಗೌಡ(58) ತಲೆ ಮರೆಸಿಕೊಂಡಿದ್ದಾನೆ. ಘಟನೆಯ ವಿವರ: ಆರೋಪಿಗಳಾದ ಮಂಜೇಗೌಡ ಮತ್ತು ರಾಜೇಗೌಡ ಅವರು ತಮ್ಮ ವಾಸದ ಮನೆಯ …
Read More »ಕೋವಿಡ್ ಕಳವಳ- ಸೆ.15: 7576 ಹೊಸ ಪ್ರಕರಣ ; 7406 ಡಿಸ್ಚಾರ್ಜ್ ; 97 ಸಾವು
ಬೆಂಗಳೂರು: ಸೋಮವಾರ ಸಾಯಂಕಾಲದಿಂದ ಮಂಗಳವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7576 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ. ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7406 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 97 ಸೋಂಕಿತರು ಮೃತಪಟ್ಟಿದ್ದಾರೆ. ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 4,75,265ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಇದೀಗ ಒಟ್ಟು 3,69,229 ಕೋವಿಡ್ ಸೊಂಕಿತರು …
Read More »ಕೋವಿಡ್ ದಿಂದ ಗುಣಮುಖರಾದವರ ಸಂಖ್ಯೆ ಅಧಿಕ
ಚಿತ್ರದುರ್ಗ: ಜಿಲ್ಲೆಯಲ್ಲಿ 5034 ಕೋವಿಡ್ ಸೋಂಕಿತರಿದ್ದು, ರಾಜ್ಯಕ್ಕೆ ಹೋಲಿಸಿದಾಗ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ರೇಟ್ ಶೇ. 9.70 ಇದೆ. ಮರಣ ಪ್ರಮಾಣ ಶೇ. 0.65 ಹಾಗೂ ಗುಣಮುಖರಾದವರ ಪ್ರಮಾಣ ಶೇ. 75.66 ಇದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ತಾಲೂಕುಗಳ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವಿಡ್-19ಗೆ ಚಿಕಿತ್ಸೆ ನೀಡುತ್ತಿದ್ದು, ಸಾರ್ವಜನಿಕರು ಚಿಕಿತ್ಸೆ ಪಡೆದುಕೊಳ್ಳಬಹುದು ಎಂದರು. ಎಲ್ಲರಿಗೂ ಜಿಲ್ಲಾ …
Read More »ಬೆಂಗಳೂರು, : ರಾಜ್ಯದ ಒಟ್ಟು 6,025 ಗ್ರಾಮ ಪಂಚಾಯಿತಿಗಳ ಪೈಕಿ 5,800 ಪಂಚಾಯಿತಿಗಳ ಅಧಿಕಾರ
ಬೆಂಗಳೂರು, : ರಾಜ್ಯದ ಒಟ್ಟು 6,025 ಗ್ರಾಮ ಪಂಚಾಯಿತಿಗಳ ಪೈಕಿ 5,800 ಪಂಚಾಯಿತಿಗಳ ಅಧಿಕಾರ ಅವಧಿ ಜೂನ್ ತಿಂಗಳಲ್ಲೇ ಮುಗಿದಿದ್ದು, ನಿಯಮದ ಪ್ರಕಾರ ಅಧಿಕಾರವದಿ ಕೊನೆಗೊಳ್ಳುವ ಮುನ್ನವೇ ಚುನಾವಣೆ ನಡೆಸಬೇಕು. ಆದರೆ ಕೊರೋನಾ ಭೀತಿಯಿಂದ ಮುಂದೂಡಲಾಗಿದ್ದು. ಇದೀಗ ಚುನಾವಣೆ ನಡೆಸಲು ರಾಜ್ಯ ಚುನಾವಣೆ ಆಯೋಗ ಎಲ್ಲಾ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆ. ಕೊರೋನಾ ಭೀತಿ ನಡುವೆಯೂ ಕರ್ನಾಟಕದಲ್ಲಿ ಚುನಾವಣೆಗೆ ಮುಹೂರ್ತ ಫಿಕ್ಸ್ ಕಂದಾಯ ಇಲಾಖೆಗೆ ಮಹತ್ವದ ಸೂಚನೆ ಕಂದಾಯ ಇಲಾಖೆಯಲ್ಲಿನ ಅಧಿಕಾರಿಗಳ ವರ್ಗಾವಣೆಗೆ ರಾಜ್ಯ …
Read More »ಜೇವರ್ಗಿ ಸಂಕೇಶ್ವರ ರಾಜ್ಯ ಹೆದ್ದಾರಿ ಸಂcಪೂರ್ಣ ಹಾಳಾಗಿದ್ದು: ವಾಹನ ಸವಾರರು ಆಕ್ರೋಶ.
ಅಥಣಿ: ಅಥಣಿ ಪಟ್ಟಣದಿಂದ ಐಗಳಿ ಕ್ರಾಸ್ ವರೆಗೆ ವಿಜಯಪುರ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟು ಹೋಗಿದ್ದು ರಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಥಣಿ ಇಂದ ವಿಜಯಪುರ ಅಂತಾರಾಜ್ಯ ರಸ್ತೆ ಸಂಚಾರಕ್ಕೆ ಅಪಾಯ ಮಟ್ಟಕ್ಕೆ ಹೋಗಿದ್ದು ವಾಹನ ಸವಾರರು ಕೈಯಲ್ಲಿ ಜೀವ ಹಿಡಿದು ಸಂಚರಿಸುವ ಸ್ಥಿತಿ ಏರ್ಪಟ್ಟಿದೆ. ದಿನನಿತ್ಯ ಸಾವಿರಾರು ವಾಹನಗಳು ಈ ರಸ್ತೆಯಿಂದ ಪಕ್ಕದ ಮಹಾರಾಷ್ಟ್ರ, ಹಾಗೂ ತೆಲಂಗಾಣ ರಾಜ್ಯಕ್ಕೆ ಅಥಣಿ ಮಾರ್ಗವಾಗಿ ಸಂಪರ್ಕ ಕಲ್ಪಿಸುವ …
Read More »ಎಸ್‌ಡಿಪಿಐ ರೀತಿ ತರಬೇತಿ ಕೊಡುತ್ತಾರಂತಾ?: ಕಾಂಗ್ರೆಸ್‌ಗೆ ಬಿ.ಸಿ.ಪಾಟೀಲ ಪ್ರಶ್ನೆ
ಬೆಳಗಾವಿ: ‘ಎಸ್‌ಡಿಪಿಐ ರೀತಿ ತರಬೇತಿ ಕೊಡುತ್ತಾರಂತಾ?’ ‘ಆರ್‌ಎಸ್‌ಎಸ್ ರೀತಿ ನಮ್ಮ ಶತ್ರುಗಳನ್ನೂ ತಯಾರಿಸುವುದಿಲ್ಲ’ ಎಂಬ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಕೃಷಿ ಸಚಿವ ಬಿ.ಸಿ. ಪಾಟೀಲ ತಿರುಗೇಟು ನೀಡಿದ್ದು ಹೀಗೆ. ‘ಬೆಂಗಳೂರಿನ ಕೆ.ಜೆ. ಹಳ್ಳಿ, ಡಿ.ಜೆ. ಹಳ್ಳಿಯಲ್ಲಿ ಗಲಾಟೆ ಮಾಡಿದವರ‍್ಯಾರು? ಶತ್ರುಗಳನ್ನು ತಯಾರಿಸುತ್ತಿರುವವರು ಅವರೇ. ದೇಶದ್ರೋಹಿಗಳು ಅವರಲ್ಲೇ ಜಾಸ್ತಿ ಜನ ಇದ್ದಾರೆ. ಕೋಮು ಗಲಭೆಗೆ ಪ್ರಚೋದಿಸುತ್ತಾರೆ’ ಎಂದು ದೂರಿದರು. ‘ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಬಗ್ಗೆ ಪ್ರಶ್ನಿಸುವ ಯೋಗ್ಯತೆ ಕಾಂಗ್ರೆಸ್‌ನವರಿಗೆ …
Read More »ಎಲ್ಲವನ್ನೂ ಬಿಎಸ್‌ವೈ ಮಾಡುವುದಾದರೆ ನಿಮ್ಮ ಕೆಲಸವೇನು: ಲಕ್ಷ್ಮಣ ದಸ್ತಿ ಪ್ರಶ್ನೆ
ಕಲಬುರ್ಗಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಳೆದ ವರ್ಷವೇ ಹೇಳಿದ್ದರು. ಅವರನ್ನು ಭೇಟಿ ಮಾಡಿ ನಿರಂತರವಾಗಿ ಒತ್ತಡ ಹಾಕಿಲ್ಲ. ಎಲ್ಲವನ್ನೂ ಮುಖ್ಯಮಂತ್ರಿ ಮಾಡುವುದಾದರೆ ನಿಮ್ಮ ಕೆಲಸವೇನು ಎಂದು ಹೈದರಾಬಾದ್ ಕರ್ನಾಟಕ ಜನಪರ ಸಂಘರ್ಷ ಸಮಿತಿ ಅಧ್ಯಕ್ಷ ಲಕ್ಷ್ಮಣ ದಸ್ತಿ ಜನಪ್ರತಿನಿಧಿಗಳ ಕಾರ್ಯವೈಖರಿಯನ್ನು ಟೀಕಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರಂತರವಾಗಿ ಒತ್ತಡ ಹಾಕಿದರೆ ಮಾತ್ರ ಈ ಭಾಗದ ಜನತೆಯ ಬೇಡಿಕೆಗಳು …
Read More »ಐಷಾರಾಮಿ ಮನೆ, ಕಾರು.. ಹೀಗಿದೆ ನೋಡಿ ‘ಪಂಜರದ ಗಿಣಿ’ ರಾಗಿಣಿಯ ಆಸ್ತಿಪಾಸ್ತಿ!
ಬೆಂಗಳೂರು: ಡ್ರಗ್ಸ್ ದಂಧೆ ಕೇಸ್ ತನಿಖೆ ಆರಂಭವಾಗುತ್ತಿದ್ದಂತೆ ನಶೆರಾಣಿಯರು ಫುಲ್ ಶೇಕ್ ಆಗಿಬಿಟ್ಟಿದ್ದಾರಂತೆ. ಹೌದು, ಇದೀಗ ಮಾದಕ ನಟಿಯರು ಮಾಡಿರುವ ಬೇನಾಮಿ ಆಸ್ತಿಗೆ ಗುನ್ನಾ ಬೀಳುವ ಸಾಧ್ಯತೆಯಿದೆ ಅನ್ನೋ ಮಾತು ಕೇಳಿಬಂದಿದೆ. ಈ ಕುರಿತು ಬೇರೆಲ್ಲೂ ಇಲ್ಲದ ರೋಚಕ ಸಂಗತಿಯ ಕಂಪ್ಲೀಟ್ ಡಿಟೇಲ್ಸ್ ಟಿವಿ 9ಗೆ ಲಭ್ಯವಾಗಿದೆ. ಹೌದು, CCB ಆಯ್ತು, ED ಬಂದು ಹೋಯ್ತು! ಇದೀಗ ಮತ್ತೊಂದು ಕೇಂದ್ರ ಸಂಸ್ಥೆ ತನಿಖೆಗೆ ಸಿದ್ಧತೆ ನಡೆಸಿದೆ. ಯಸ್, CCB, ED ಬಳಿಕ …
Read More »ಉದ್ಘಾಟನೆ ನೆಪದಲ್ಲಿ ಮತ್ತೆ ಐದಾರು ಕಿ.ಮೀ. ಬಸ್ ಚಲಾಯಿಸಿದ ರೇಣುಕಾಚಾರ್ಯ
ದಾವಣಗೆರೆ, : ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುವ ಹೊನ್ನಾಳಿ ಬಿಜೆಪಿ ಶಾಸಕ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಮತ್ತೆ ಸುದ್ದಿಯಾಗಿದ್ದಾರೆ. ಹೌದು.. ಹೊನ್ನಾಳಿ ಡಿಪೋದ 6 ಬಸ್‌ಗಳನ್ನ ಉದ್ಘಾಟನೆ ಮಾಡಿದರು. ಬಳಿಕ ಸಿಕ್ಕಿದ್ದೇ ಚಾನ್ಸ್ ಅಂತ ಬಸ್ ಚಲಾಯಿಸಿಕೊಂಡು ನಗರ ಪ್ರದಕ್ಷಿಣೆ ಹಾಕಿದರು. ಸರಾಗವಾಗಿ ಪಟ್ಟಣದಲ್ಲಿ ಐದಾರು ಕಿ.ಮೀ. ಬಸ್ ಓಡಿಸಿದ ರೆಣುಕಾಚಾರ್ಯ ಅವರಿಗೆ ಕಾರ್ಯಕರ್ತರು ಜೈಕಾರ ಹಾಕಿದರು. ಲೈಸನ್ಸ್ ಇಲ್ಲದೇ ಸರ್ಕಾರಿ ಬಸ್ ಓಡಿಸಿದ ಶಾಸಕ: …
Read More »
Laxmi News 24×7