ರಾಜ್ಯ ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಮತ್ತೆ ಹೊಸದೆಹಲಿಗೆ ಹೊರಟಿದ್ದಾರೆ. ಕಳೆದ ಒಂದೂವರೆ ತಿಂಗಳಲ್ಲಿ ಸಚಿವರು ಮೂರನೇ ಬಾರಿ ದೆಹಲಿಗೆ ಪ್ರಯಾಣ ಬೆಳೆಸಿರುವುದು ಕುತೂಹಲ ಕೆರಳಿಸಿದೆ. ಜಲಸಂಪನ್ಮೂಲ ಸಚಿವಾಲಯದ ಮಾಹಿತಿಯಂತೆ ಸಚಿವ ರಮೇಶ ಜಾರಕಿಹೊಳಿ ಬುಧವಾರ ದೆಹಲಿಗೆ ತೆರಳುವರು. ಅಂದು ರಾಜ್ಯದ ನೀರಾವರಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚಿಸುವರು. ದೆಹಲಿಯಲ್ಲಿ ಶುಕ್ರವಾರದವರೆಗೂ ಜಾರಕಿಹೊಳಿ ವಾಸ್ತವ್ಯ ಕಾರ್ಯಕ್ರಮ ನಿಗದಿಯಾಗಿದೆ. ಸಚಿವ ರಮೇಶ ಜಾರಕಿಹೊಳಿ …
Read More »ಲಾಕ್‌ಡೌನ್: ವಲಸೆ ಕಾರ್ಮಿಕರ ಸಾವು, ನೌಕರಿ ನಷ್ಟದ ಬಗ್ಗೆ ಸರ್ಕಾರ ಲೆಕ್ಕ ಇಟ್ಟಿಲ್ಲ
ನವದೆಹಲಿ: ಕೊರೊನಾವೈರಸ್ ವ್ಯಾಪಿಸುವುದನ್ನು ತಡೆಯಲು ಕೇಂದ್ರ ಸರ್ಕಾರ ಲಾಕ್‍ಡೌನ್ ಘೋಷಿಸಿದಾಗ ದೇಶದಲ್ಲಿ ಸಂಭವಿಸಿದ ವಲಸೆ ಕಾರ್ಮಿಕರ ಸಾವು ಮತ್ತು ಉದ್ಯೋಗ ನಷ್ಟದ ಬಗ್ಗೆ ಸರ್ಕಾರದ ಬಳಿ ಅಂಕಿ ಅಂಶ ಇಲ್ಲ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಲೋಕಸಭೆಯಲ್ಲಿ ಹೇಳಿದೆ. ತಮ್ಮ ಊರಿಗೆ ಮರಳಲು ಬಯಸುವ ವಲಸೆ ಕಾರ್ಮಿಕರನ್ನು ಬಲವಂತವಾಗಿ ಉಳಿಸಿಕೊಳ್ಳುವ ಯಾವುದೇ ವರದಿಯೂ ಅದರಲ್ಲಿ ಇರಲಿಲ್ಲ ಎಂದು ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ …
Read More »‘ಒಟಿಟಿ ಕರೆ, ಚಾಟ್‌ಗೆ ನಿಯಂತ್ರಣ ಬೇಕಿಲ್ಲ’
ನವದೆಹಲಿ: ‘ವಾಟ್ಸ್‌ಆಯಪ್, ಮೆಸೆಂಜರ್, ವೈಬರ್‌ನಂತಹ ಕಂಪನಿಗಳು ಒಟಿಟಿ ಮೂಲಕ ಒದಗಿಸುವ ಕರೆ ಮತ್ತು ಚಾಟಿಂಗ್ ಸೇವೆಗಳಿಗೆ ನಿಯಮಾವಳಿಗಳ ನಿಯಂತ್ರಣದ ಅವಶ್ಯಕತೆ ಇಲ್ಲ’ ಎಂದು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಹೇಳಿದೆ. ದೂರಸಂಪರ್ಕ ಕಂಪನಿಗಳು ಒದಗಿಸುವ ಸೇವೆಗಳಿಗೂ, ಇಂತಹ ಕಂಪನಿಗಳು ಒಟಿಟಿ ಮೂಲಕ ಒದಗಿಸುವ ಸೇವೆಗಳಿಗೂ ತೀರಾ ವ್ಯತ್ಯಾಸವಿಲ್ಲ. ಹೀಗಾಗಿ ಒಟಿಟಿ ದೂರಸಂಪರ್ಕ ಸೇವಾ ಕಂಪನಿಗಳಿಗೂ ನಿಯಂತ್ರಣ ಹೇರಬೇಕು ಎಂದು ಭಾರತದ ಹಲವು ದೂರಸಂಪರ್ಕ ಕಂಪನಿಗಳು ಟ್ರಾಯ್‌ಗೆ ಮನವಿ ಸಲ್ಲಿಸಿದ್ದವು. ‘ದೂರಸಂಪರ್ಕ …
Read More »ಮೂವಿ ಮಾಫಿಯಾಗೆ ಆದಿತ್ಯ ನಂಟು!: ಉದ್ಧವ್ ಪುತ್ರನ ವಿರುದ್ಧ ಬಾಲಿವುಡ್ ನಟಿ ಕಂಗನಾ ಆರೋಪ
ಮುಂಬಯಿ: ಮಹಾರಾಷ್ಟ್ರ ಸರಕಾರದ ವಿರುದ್ಧ ವಾಗ್ಧಾಳಿ ನಡೆಸುತ್ತಲೇ ಇರುವ ಬಾಲಿವುಡ್ ನಟಿ ಕಂಗನಾ ರಣೌತ್ ಸೋಮವಾರ ಸಿಎಂ ಉದ್ಧವ್ ಠಾಕ್ರೆಯವರ ಪುತ್ರ ಆದಿತ್ಯ ಠಾಕ್ರೆಗೆ ಟಾಂಗ್ ನೀಡಿದ್ದಾರೆ. ಆದಿತ್ಯ ಅವರ ಸ್ನೇಹಿತರ ವಿರುದ್ಧ ಧ್ವನಿಯೆತ್ತಿದ್ದಕ್ಕೆ ನನ್ನನ್ನು ಶಿವಸೇನೆ ಟಾರ್ಗೆಟ್ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಆದಿತ್ಯ ಠಾಕ್ರೆ ಅವರು ಮೂವಿ ಮಾಫಿಯಾ, ಸುಶಾಂತ್‌ರ ಕೊಲೆಗಾರರು ಮತ್ತು ಡ್ರಗ್ ದಂಧೆಕೋರರೊಂದಿಗೆ ಸ್ನೇಹ ಹೊಂದಿದ್ದಾರೆ. ಮೂವಿ ಮಾಫಿಯಾವನ್ನು ನಾನು ಬಯಲಿಗೆಳೆಯಲು ಮುಂದಾಗಿದ್ದೇ ಸಿಎಂ ಉದ್ಧವ್‌ಗೆ …
Read More »ಹಿಂಬದಿಯಿಂದ ಲಾರಿ ಡಿಕ್ಕಿ, ಕಾರ್ ಅಪ್ಪಚ್ಚಿ- ಮೂವರು ದಾರುಣ ಸಾವು
ಚಿಕ್ಕಬಳ್ಳಾಪುರ: ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಚಿಕ್ಕಬಳ್ಳಾಪುರ ತಾಲೂಕು ದೊಡ್ಡಪ್ಯಾಯಲಗುರ್ಕಿ ಬಳಿ ರಾತ್ರಿ 1 ಗಂಟೆಗೆ ಘಟನೆ ಸಂಭವಿಸಿದ್ದು, ಹಿಂಬದಿಯಿಂದ ಲಾರಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ತಾಯಿ ಹಾಗೂ ಇಬ್ಬರು ಗಂಡು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಂದೆ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಲಾರಿ ಡಿಕ್ಕಿ ಹೊಡೆತಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಗುರುತಿಸಲು …
Read More »ಯೋಗೇಶ್ ಗೌಡ ಕೊಲೆ ಪ್ರಕರಣ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಸಿಬಿಐ ವಿಚಾರಣೆ…………..!
ಬೆಂಗಳೂರು: ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಕೊಲೆ ಪ್ರಕರಣದ ಸಿಬಿಐ ತನಿಖೆ ಮತ್ತೆ ಚುರುಕು ಪಡೆದಿದೆ. ಇಂದು ಮಾಜಿ ಮಂತ್ರಿ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಸಿಬಿಐ ವಿಚಾರಣೆ ಎದುರಿಸಿದ್ದಾರೆ. ನೋಟಿಸ್ ಜಾರಿ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಸಿಬಿಐ ಕಚೇರಿಗೆ ಬೆಳಗ್ಗೆ 10.30ಕ್ಕೆ ಹಾಜರಾದ ವಿಜಯ್ ಕುಲಕರ್ಣಿಗೆ 7 ಗಂಟೆಗಳ ಕಾಲ ಸಿಬಿಐ ಫುಲ್ ಡ್ರಿಲ್ ಮಾಡಿದೆ. ವಿಚಾರಣೆ ಬಳಿಕ ಮಾತನಾಡಿದ ಅವರು, ಈ ಪ್ರಕರಣದಲ್ಲಿ 537 …
Read More »ಕ್ರೇನ್‍ನಲ್ಲಿ ಚಾರ್ಮಾಡಿ ಘಾಟ್‍ಗೆ ಜೋತು ಬಿದ್ದು ದಾಖಲೆ ಪತ್ರಗಳನ್ನು ತಂದ ಆರೀಫ್
ಚಿಕ್ಕಮಗಳೂರು: ಚಾರ್ಮಾಡಿ ಘಾಟ್‍ನಲ್ಲಿ ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಪ್ರಮುಖ ದಾಖಲೆ ಪತ್ರಗಳು ಹಾರಿ ಹೋಗಿದ್ದು, ಇವುಗಳನ್ನು ಸ್ಥಳೀಯ ಸ್ನೇಕ್ ಆರೀಫ್ ಎಂಬವರು ಮಾಲೀಕರಿಗೆ ವಾಪಸ್ ನೀಡಿ ಮಾನವೀಯತೆ ಮೆರೆದಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ಬೆಳಗ್ಗೆ ರಸ್ತೆಯಲ್ಲಿ ಮಂಜು ಕವಿದಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರೊಂದು ಮಗುಚಿ ಬಿದ್ದಿತ್ತು. ಪರಿಣಾಮ ಕಾರಿನಲ್ಲಿದ್ದ ಐವರಿಗೂ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದರು. ಈ ವೇಳೆ ಕಾರಿನಲ್ಲಿದ್ದ …
Read More »ನಟಿ ರಾಗಿಣಿ ಐ.ಪಿ.ಎಸ್. ಇವಾಗ ಕೈದಿ ನಂಬರ್ ……{ಡ್ರಗ್ ಮಾಫಿಯಾ ಕೇಸಲ್ಲಿ}
ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ ಮಾಫಿಯಾ ಕೇಸಲ್ಲಿ ನಟಿ ರಾಗಿಣಿ ದ್ವಿವೇದಿ ಜೈಲು ಪಾಲಾಗಿದ್ದಾರೆ. ಸಿಸಿಬಿ ಕಸ್ಟಡಿಯ ಅಂತ್ಯವಾದ ಹಿನ್ನೆಲೆಯಲ್ಲಿ ರಾಗಿಣಿಯನ್ನು 1ನೇ ಎಸಿಎಂಎಂ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟಿ ರಾಗಿಣಿ ಮೊದಲ ದಿನ ಸರಿಯಾಗಿ ನಿದ್ದಯಿಲ್ಲದೆ ಕಳೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಜೈಲಿನಲ್ಲಿ ರಾತ್ರಿ ಸಿಸಿಬಿಯವರು ಕೊಟ್ಟಿದ್ದ ರಾತ್ರಿ ಊಟ ತಿಂದಿದ್ದಾರೆ. ರೋಟಿ, ದಾಲ್ ತಿಂದು ಜೈಲು ರಾತ್ರಿಯ ವಾಸ್ತವ್ಯಕ್ಕೆ …
Read More »ರಾಜ್ಯದಲ್ಲಿ 7 ಸಾವಿರ ಪೊಲೀಸರಿಗೆ ಕೊರೊನಾ, 55 ಸಾವು
ಚಿಕ್ಕಮಗಳೂರು: ಕೊರೊನಾ ನಿಯಂತ್ರಿಸುವಲ್ಲಿ ಜಿಲ್ಲಾ ಪೊಲೀಸರ ಕಾರ್ಯ ಶ್ಲಾಘನೀಯ ಅವರಿಗೆ ಅಭಿನಂದನೆ ಹಾಗೂ ಕೃತಜ್ಞತೆ ಹೇಳಲು ಬಂದಿದ್ದೇನೆ ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ. ಜಿಲ್ಲೆಗೆ ಭೇಟಿ ನೀಡಿದ್ದ ಪ್ರವೀಣ್ ಸೂದ್ ಅವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಹೊತ್ತು ಅಧಿಕಾರಿಗಳ ಜೊತೆ ಸಭೆ ನಡೆಸಿದರು. ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಕೋವಿಡ್ ನಿರ್ವಹಣೆ ತುಂಬಾ ಚೆನ್ನಾಗಿತ್ತು. ಈಗ ಸಂಖ್ಯೆ ಹೆಚ್ಚಾಗ್ತಿರೋದಕ್ಕೆ …
Read More »I.M.A.ಬಹುಕೋಟಿ ವಂಚನೆ ಪ್ರಕರಣ ಹಿರಿಯ ಐಪಿಎಸ್ ಅಧಿಕಾರಿಗಳಾದ ಹೇಮಂತ ನಿಂಬಾಳಕರ್ ಮತ್ತು ಅಜಯ್ ಹಿಲೋರಿ ವಿರುದ್ಧ ಸಿಬಿಐ ವಿಚಾರಣೆ
ಬೆಂಗಳೂರು – ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿಗಳಾದ ಹೇಮಂತ ನಿಂಬಾಳಕರ್ ಮತ್ತು ಅಜಯ್ ಹಿಲೋರಿ ವಿರುದ್ಧ ಸಿಬಿಐ ವಿಚಾರಣೆ ನಡೆಸಲು ಸರಕಾರ ಅನುಮತಿ ನೀಡಿದೆ. ಈ ಸಂಬಂಧ ಸುದೀರ್ಘ ಕಾನೂನುಗಳನ್ನು ಪರಿಶೀಲಿಸಿದ ಸರಕಾರ, ಅಡ್ವೋಕೇಟ್ ಜನರಲ್ ಸಲಹೆ ಪಡೆದು ಸಿಬಿಐ ಕೋರಿಕೆಯಂತೆ ಮತ್ತು ಸಿಬಿಐ ನಡೆಸಿರುವ ಪ್ರಾಥಮಿಕ ತನಿಖಾ ವರದಿಯನ್ನು ಉಲ್ಲೇಖಿಸಿ ತನಿಖೆಗೆ ಒಪ್ಪಿಗೆ ಸೂಚಿಸಿದೆ. ಐಎಂಎ ವಂಚನೆ ಪ್ರಕರಣ ಹೊರಬರುವ ಕೆಲವೇ ಸಮಯ …
Read More »
Laxmi News 24×7