ಬೆಂಗಳೂರು : ಡ್ರಗ್ಸ್ ಆರೋಪ ಸಾಬೀತಾದರೆ ನಟಿ ರಾಗಿಣಿ ಅವರಿಗೆ ಚಿತ್ರರಂಗದಿಂದ ನಿಷೇಧ ಶಿಕ್ಷೆ ಎದುರಾಗುವ ಸಾಧ್ಯತೆ ಇದೆ. ಈ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚರ್ಚೆ ಆಗಿದೆ ಎನ್ನಲಾಗಿದ್ದು, ಡ್ರಗ್ಸ್ ಜಾಲದಲ್ಲಿ ರಾಗಿಣಿ ಪಾತ್ರ ಇರುವುದು ಸಾಕ್ಷ್ಯಸಮೇತ ಸಾಬೀತಾದರೆ ಅವರನ್ನು ಚಿತ್ರರಂಗದಿಂದ ದೂರ ಇಡುವ ನಿರ್ಧಾರ ಕೈಗೊಳ್ಳಲು ನಿರ್ಧರಿಸಲಾಗಿದೆ. ಆದರೆ, ಈ ಕುರಿತು ಪ್ರತಿಕ್ರಿಯೆ ನೀಡಲು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಡಿ.ಆರ್.ಜೈರಾಜ್ ನಿರಾಕರಿಸಿದ್ದು, ಈ ಹಂತದಲ್ಲಿ …
Read More »ಕೊರೊನಾದಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗುಣಮುಖ
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೆಲ ದಿನಗಳ ಹಿಂದೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. ಇದೀಗ ಕಟೀಲ್ ಅವರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ನಳೀನ್ ಕುಮಾರ್ ಕಟೀಲ್, ಕಟೀಲು ದುರ್ಗಾಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಪ್ರೀತಿ, ಹಾರೈಕೆಯ ಫಲವಾಗಿ ಕೊರೊನಾ ಕಾಯಿಲೆಯಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲವು ದಿನಗಳ ತನಕ ಕ್ವಾರಂಟೈನ್ ನಲ್ಲಿ ಇರಲು ವೈದ್ಯರು ಸಲಹೆ ನೀಡಿದ್ದಾರೆ ಎಂದು ಹೇಳಿದ್ದಾರೆ. …
Read More »2.71 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಡಿಸಿಎಂ ಗೋವಿಂದ ಕಾರಜೋಳ ಶಂಕುಸ್ಥಾಪನೆ
ಬೆಂಗಳೂರು : ಮುಧೋಳ್ ತಾಲ್ಲೂಕಿನ 2.71 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಶಂಕುಸ್ಥಾಪನೆ ನೆರವೇರಿಸಿದರು. ಮುಧೋಳ ತಾಲ್ಲೂಕಿನ ಸೊರಗಾಂವ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ 15ಲಕ್ಷ ರೂ. ವೆಚ್ಚದ ಸಿಸಿ ರಸ್ತೆ, ಹಲಗಲಿ ಗ್ರಾಮದಲ್ಲಿ 1.40 ಕೋಟಿ ರೂ ವೆಚ್ಚದ ಕಾಗವಾಡ- ಕಲಾದಗಿ ರಾಜ್ಯ ಹೆದ್ದಾರಿ ಕಾಮಗಾರಿ, ಮಾಚಕನೂರು ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ 63ಲಕ್ಷ ರೂ ವೆಚ್ಚದ ಮೂಲಭೂತ ಸೌಕರ್ಯಗಳ …
Read More »ಸೋಂಕಿತರ ಸಂಖ್ಯೆ 4 ಲಕ್ಷಕ್ಕೆ : ಹೆಚ್ಚಿನ ಸಂಖ್ಯೆಯಲ್ಲಿ ಗುಣಮುಖ
ಬೆಂಗಳೂರು : ರಾಜ್ಯದಲ್ಲಿ ಭಾನುವಾರ ದಾಖಲೆಯ ಸಂಖ್ಯೆಯಲ್ಲಿ ಕೋವಿಡ್ ರೋಗಿಗಳು ಗುಣಮುಖರಾಗಿದ್ದರೆ, ಮತ್ತೆ 9,319 ಮಂದಿ ಕೊರೋನಾ ಸೋಂಕಿತರಾಗುವ ಮೂಲಕ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ ಒಂದು ಲಕ್ಷದ ಸಮೀಪಕ್ಕೆ ಬಂದಿದೆ. ರಾಜ್ಯದಲ್ಲಿ ಶನಿವಾರವಷ್ಟೆ9,102 ಮಂದಿ ಕೊರೋನಾ ಸೋಂಕಿನಿಂದ ಮುಕ್ತರಾಗಿ ದಾಖಲೆ ನಿರ್ಮಾಣವಾಗಿತ್ತು. ಭಾನುವಾರ ಆ ದಾಖಲೆ ಇನ್ನಷ್ಟುಉತ್ತಮಗೊಂಡು 9,575 ಮಂದಿ ಕೊರೋನಾವನ್ನು ಜಯಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಈವರೆಗೆ ಕೊರೋನಾ ಗೆದ್ದವರ ಸಂಖ್ಯೆ 2.92 ಲಕ್ಷಕ್ಕೇರಿದೆ. ಇದೇ ವೇಳೆ ಮತ್ತೆ …
Read More »ನೆರೆ ಹಾನಿ ಅಧ್ಯಯನಕ್ಕೆ ಕೇಂದ್ರ ತಂಡ ಆಗಮನ
ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ನೆರೆ ಹಾನಿ ಸಂಬಂಧ ಅಧ್ಯಯನಕ್ಕಾಗಿ ಕೇಂದ್ರದ ಅಧಿಕಾರಿಗಳ ತಂಡ ಸೋಮವಾರ ರಾಜ್ಯಕ್ಕೆ ಆಗಮಿಸಲಿದೆ. ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಕೆ.ವಿ. ಪ್ರತಾಪ್ ಅವರ ನೇತೃತ್ವದ ಎನ್‌ಡಿಆರ್‌ಎಫ್ ತಂಡ ಎರಡು-ಮೂರು ದಿನಗಳ ಕಾಲ ರಾಜ್ಯದಲ್ಲೇ ಉಳಿದುಕೊಂಡು ನೆರೆಯಿಂದ ಉಂಟಾದ ಹಾನಿ ಬಗ್ಗೆ ಅಧ್ಯಯನ ನಡೆಸುವ ಸಾಧ್ಯತೆ ಇದೆ. ಸೋಮವಾರ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳು …
Read More »ಕೊರೋನಾ ಮಧ್ಯೆ ಇಂದಿನಿಂದ ಮೆಟ್ರೋ ಸಂಚಾರ ಶುರು
ಬೆಂಗಳೂರು : ಬರೋಬ್ಬರಿ ಐದು ತಿಂಗಳ ನಂತರ ನಮ್ಮ ಮೆಟ್ರೋ ರೈಲು ಸಂಚಾರ ಸೋಮವಾರ ಮತ್ತೆ ಆರಂಭವಾಗಲಿದೆ. ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಮೆಟ್ರೋ ರೈಲು ಸಂಚಾರ ಮತ್ತೆ ಆರಂಭಿಸಲು ಪ್ರಯಾಣಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಕೇಂದ್ರದ ಮಾರ್ಗಸೂಚಿಯಂತೆ ಬಿಎಂಆರ್‌ಸಿಲ್ ಸಕಲ ಸಿದ್ಧತೆ ಮಾಡಿಕೊಂಡಿದೆ. ಕೇಂದ್ರ ಸರ್ಕಾರ ಮೆಟ್ರೋ ಸೇವೆ ಆರಂಭಿಸಲು ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಸತತ ಐದು ದಿನಗಳಿಂದ ನಮ್ಮ ಮೆಟ್ರೋ ರೈಲುಗಳನ್ನು ರಾಸಾಯನಿಕ ಬಳಸಿ ಸ್ವಚ್ಛತಾ ಮತ್ತು ಸ್ಯಾನಿಟೈಸರ್ ಸಿಂಪಡಣೆ …
Read More »ಪತಿಯನ್ನು ಕೊಲೆಗೈದು ಹೂತು ಹಾಕಿದ್ದ ಪ್ರಕರಣ: ನಾಲ್ವರು ಆರೋಪಿಗಳ ಬಂಧನ
ಬೆಳಗಾವಿ : ಅಕ್ರಮ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದ ಪತಿಯನ್ನು ಕೊಲೆ ಮಾಡಿದ ಪತ್ನಿಯು ಜೆಸಿಬಿ ಮೂಲಕ ಗುಂಡಿ ತೋಡಿಸಿ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಪ್ಪಾಣಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಪತ್ನಿ ಅನಿತಾ ಸಚಿನ್ ಭೋಪಳೆ (35), ಕೃಷ್ಣಾ ಅಲಿಯಾಸ್ ಪಿಂಟು ರಾಜಾರಾಮ್ ಘಾಟಗೆ (26), ವನಿತಾ ಚವ್ಹಾಣ (29), ಗಣೇಶ ರೇಡೇಕರ (21) ಬಂಧಿತ ಆರೋಪಿಗಳು. ಸೆಪ್ಟಂಬರ್ 3 ರಂದು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹಂಚನಾಳ ಗ್ರಾಮದಲ್ಲಿ …
Read More »ಸಾಲ ವಾಪಸ್ ಕೇಳಲು ಬಂದ ಬ್ಯಾಂಕ್ ಸಿಬ್ಬಂದಿಗೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಮಹಿಳೆ ಅವಾಜ್
ಬೆಂಗಳೂರು: ಸಾಲ ವಾಪಸ್ ಕೇಳಲು ಬಂದ ಬ್ಯಾಂಕ್ ಸಿಬ್ಬಂದಿಗೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಮಹಿಳೆ ಅವಾಜ್ ಹಾಕಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಬ್ಯಾಂಕಿನಲ್ಲಿ ಪಡೆದ ಸಾಲವನ್ನು ವಾಪಸ್ ಕೊಡಿ ಎಂದು ಕೇಳಲು ಮೂರು ಜನ ಬ್ಯಾಂಕ್ ಸಿಬ್ಬಂದಿ ಮಹಿಳೆಯ ಮನೆಗೆ ಬಂದಿದ್ದಾರೆ. ಈ ವೇಳೆ ಮಹಿಳೆ ಸುಮ್ಮನೆ ಜಗಳ ಮಾಡಿ ನಿಮ್ಮ ಮೇಲೆ ಅತ್ಯಾಚಾರದ ಕೇಸ್ ಹಾಕುತ್ತೇನೆ ಎಂದು ಅವಾಜ್ ಹಾಕಿದ್ದಾಳೆ. ಮಹಿಳೆಯ ಈ ವಿಡಿಯೋ ಸಾಮಾಜಿಕ …
Read More »ಈಜಲು ತೆರಳಿದ್ದ ನಾಲ್ವರು ಹುಡುಗರು ನೀರು ಪಾಲಾದ ಘಟನೆ
ಯಾದಗಿರಿ: ಭೀಮಾ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ಹುಡುಗರು ನೀರು ಪಾಲಾದ ಘಟನೆ ಯಾದಗಿರಿ ನಗರದ ಹೊರವಲಯದ ಗುರುಸಣಗಿ ಬ್ರಿಡ್ಜ್ ಬಳಿ ಸಂಜೆ ನಡೆದಿದೆ. ನಗರದ ಹೊರವಲಯದ ಗುರಸಣಗಿ ಬ್ರಿಡ್ಜ್ ಬಳಿಯ ಭೀಮಾ ನದಿಗೆ ಈಜಲು ಐವರು ಸ್ನೇಹಿತರು ತೆರಳಿದ್ದಾರೆ. ಇದರಲ್ಲಿ ಅಬ್ದುಲ್‍ನನ್ನು ದಡದಲ್ಲಿ ನಿಲ್ಲಿಸಿ, ಯಾದಗಿರಿಯ ಅಮಾನ್ (16), ಅಯಾನ್ (16), ರೆಹಮಾನ್ (16), ಕಲಬುರಗಿ ಮೂಲದ ರೆಹಮಾನ್ (15 ) ನಾಲ್ವರು ನದಿಗೆ ಈಜಲು ಇಳಿದಿದ್ದಾರೆ. ಈ …
Read More »ಪಿಪಿಇ ಕಿಟ್ ಧರಿಸಿ ಮಗಳಿಂದ ತಂದೆಯ ಅಂತ್ಯ ಸಂಸ್ಕಾರ
ಚಿಕ್ಕಮಗಳೂರು: ಕೊರೊನಾದಿಂದ ಮೃತಪಟ್ಟ ತಂದೆಯ ಅಂತ್ಯ ಸಂಸ್ಕಾರವನ್ನು ನಾನೇ ಮಾಡಬೇಕೆಂದು ಹಠ ಹಿಡಿದು ಮಗಳೇ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ಬಿಡದಿಯ ಟೊಯೋಟಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ 45 ವರ್ಷದ ವ್ಯಕ್ತಿಗೆ ಕೊರೊನಾ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಕೊನೆಗೆ ಕೊರೋನಾ ಚಿಕಿತ್ಸೆಯಲ್ಲಿರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಾಗಿ ವ್ಯಾಪಿಸುತ್ತಿದ್ದರಿಂದ ಇತ್ತೀಚಿಗಷ್ಟೆ ಊರಿಗೆ ಬಂದಿದ್ದ ಕುಟುಂಬ ಇಬ್ಬರು ಹೆಣ್ಣು ಮಕ್ಕಳನ್ನು …
Read More »
Laxmi News 24×7