Breaking News

ಜಿಲ್ಲೆ

ಪ್ರಶಾಂತ್ ಸಂಬರಗಿ ಬೀದಿ ನಾಯಿ: ಗರಂ ಆದ ಸಂಜನಾ,

ಬೆಂಗಳೂರು: ಹೀರೋಗಳ ಬಳಿ 50 ಕಾರು ಇದ್ದರೂ ಯಾರೂ ಪ್ರಶ್ನೆ ಮಾಡಲ್ಲ. ಆದರೆ ನಾಯಕಿಯರ ಬಳಿ ಎರಡು ಕಾರು ಇದ್ರೆ ಪ್ರಶ್ನೆ ಮಾಡುತ್ತಾರೆ ಎಂದು ನಟಿ ಸಂಜನಾ ಗಲ್ರಾನಿ ಅವರು ಹೇಳಿದ್ದಾರೆ.ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾ ಕೇಸಿನಲ್ಲಿ ಸಂಜನಾ ಅವರ ಹೆಸರು ಕೇಳಿ ಬರುತ್ತಿದೆ. ಈ ವಿಚಾರವಾಗಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು 16 ವರ್ಷದಿಂದ ದುಡಿದ ದುಡಿಮೆಯಲ್ಲಿ ಇಷ್ಟೆಲ್ಲಾ ಸಂಪಾದನೆ ಮಾಡಿದ್ದೇನೆ. ನನಗೆ ಕಣ್ಣು ದೃಷ್ಟಿ ಆಗಿರಬೇಕು. …

Read More »

ಡ್ರಗ್‍ಗೆ ಚಿಕ್ಕನ್ ಪೀಸ್ ಎನ್ನುತ್ತಿದ್ದ ರಾಗಿಣಿ – ತುಪ್ಪದ ಬೆಡಗಿ

ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾ ಕೇಸಿನಲ್ಲಿ ಸಿಕ್ಕಿಬಿದ್ದಿರುವ ನಟಿ ರಾಗಿಣಿಯವರು ಡ್ರಗ್ಸ್ ವಿಚಾರದಲ್ಲಿ ಕೋಡ್‍ವರ್ಡ್‍ಗಳನ್ನು ಬಳಸುತ್ತಿದ್ದರು ಎಂದು ತಿಳಿದು ಬಂದಿದೆ. ಡ್ರಗ್ ಮಾಫಿಯಾ ವಿಚಾರವಾಗಿ ಇಂದು ನಟಿ ರಾಗಿಣಿಯವರನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಇಂದು ಬೆಳಗ್ಗೆ ರಾಗಿಣಿ ಮನೆ ಮೇಲೆ ದಿಢೀರ್ ದಾಳಿ ಮಾಡಿದ ಅಧಿಕಾರಿಗಳು ಅವರ ಮೊಬೈಲ್ ಫೋನ್, ಲ್ಯಾಪ್‍ಟಾಪ್ ಮತ್ತು ಕಂಪ್ಯೂಟರ್‍ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಲ್ಲಿ ಕೆಲ ಮಹತ್ವದ ಸಾಕ್ಷಿಗಳು ಸಿಕ್ಕಿವೆ ಎನ್ನಲಾಗಿದೆ. ಇದರಲ್ಲಿ ರಾಗಿಣಿ …

Read More »

ಆಸ್ಪತ್ರೆಯ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ

ಗದಗ: ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆ ಆಘಾತಗೊಂಡ ವ್ಯಕ್ತಿ ಆಸ್ಪತ್ರೆಯ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗದಗನ ಜಿಮ್ಸ್ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಜಿಮ್ಸ್ ಕೋವಿಡ್-19 ಆಸ್ಪತ್ರೆಯ 4ನೇ ಅಂತಸ್ತಿನ ಮೇಲಿಂದ ಹಾರಿ ಸಾವಿಗೆ ಶರಣಾಗಿದ್ದಾನೆ. ಮುಂಡರಗಿ ತಾಲೂಕಿನ ಸುಮಾರು 40 ವರ್ಷದ ಬಸವರಾಜ್ ಈಳಗೇರ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಗುರುವಾರ ಜಿಮ್ಸ್ ಕೋವಿಡ್-19 ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ …

Read More »

  ಟೈಗರ್ ಗ್ಯಾಂಗ್ ಅಲ್ಲ ಅದು,  ಬಿಲ್ಲಿ  ಗ್ಯಾಂಗ್: ರಮೇಶ ಜಾರಕಿಹೊಳಿ

ಬೆಳಗಾವಿ:  ಕೊಲೆ, ದರೋಡೆಗೆ ಇಳಿದಿದ್ದ ಗೋಕಾಕ ನಗರದ ಟೈಗರ್  ಗ್ಯಾಂಗ್ ಪೊಲೀಸರು ಬಂಧಿಸಿದ್ದು, ಈ ವಿಚಾರವಾಗಿ  ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.  ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋಕಾಕ ನಗರದಲ್ಲಿ ಅಕ್ರಮ ಚಟುವಟಿಕೆಯಲ್ಲಿ  ತೊಡಗಿದ್ದ ಗ್ಯಾಂಗ್ ನ್ನು ಪೊಲೀಸರು ಮಟ್ಟಹಾಕಿದ್ದಾರೆ.  ಟೈಗರ್ ಗ್ಯಾಂಗ್ ಅಲ್ಲ ಅದು,  ಬಿಲ್ಲಿ  ಗ್ಯಾಂಗ್ ಅಂತಾ ಸಚಿವ ರಮೇಶ ಜಾರಕಿಹೊಳಿ  ಲೇವಡಿ ಮಾಡಿದ್ದಾರೆ. ಡ್ರಗ್ಸ್ ವಿಚಾರವಾಗಿ ಪ್ರತಿಕ್ರಿಯಿಸಿ,   ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದವರ ಮೇಲೆ ಮುಲಾಜಿಲ್ಲದೇ   …

Read More »

ರಾಜ್ಯದಲ್ಲಿ 6 ಸಾವಿರ ದಾಟಿದ ಸಾವಿನ ಸಂಖ್ಯೆ : ಉಚಿತ ಔಷಧ ನೀಡಲು ನಿರ್ಧಾರ

ಬೆಂಗಳೂರು  : ರಾಜ್ಯದಲ್ಲಿ ಕೋವಿಡ್‌-19 ರ ಕಾರಣದಿಂದ ಗುರುವಾರ 104 ಮಂದಿ ಸತ್ತಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್‌ ನಿಂದ ಮೃತರಾದವರ ಒಟ್ಟು ಸಂಖ್ಯೆ 6 ಸಾವಿರದ ಗಡಿ ದಾಟಿದೆ. ಕಳೆದ ಆರು ತಿಂಗಳಿನಿಂದ ರಾಜ್ಯದಲ್ಲಿ ವ್ಯಾಪಕವಾಗಿ ಹಬ್ಬಿರುವ ಕೊರೋನಾ ವೈರಸ್‌ ಗೆ 6054 ಮಂದಿ ಪ್ರಾಣ ಕಳೆದುಕೊಂಡಂತೆ ಆಗಿದೆ. ರಾಜ್ಯದಲ್ಲಿ ಗುರುವಾರ 8,865 ಮಂದಿ ಹೊಸದಾಗಿ ಕೊರೋನಾ ಸೋಂಕು ಉಂಟಾಗಿದೆ. ಇದರೊಂದಿಗೆ ರಾಜ್ಯದಲ್ಲಿನ ಸಕ್ರೀಯ ಕೊರೋನಾ ಪ್ರಕರಣಗಳ ಸಂಖ್ಯೆ 96,099ಕ್ಕೆ ಏರಿಕೆಯಾಗಿದೆ. …

Read More »

ಡ್ರಗ್ಸ್‌ ದಂಧೆಗೆ ಕಡಿವಾಣ: ಆಗ್ರಹ

ಬೆಳಗಾವಿ: ‘ಡ್ರಗ್ಸ್ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಹಾಗೂ ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್‌ ಅವರಿಗೆ ಗುರುವಾರ ಮನವಿ ಸಲ್ಲಿಸಿದರು. ‘ರಾಜ್ಯದಲ್ಲಿ ಮಾದಕ ವಸ್ತುಗಳ ಜಾಲ ದೊಡ್ಡಮಟ್ಟದಲ್ಲಿ ವ್ಯಾಪಿಸಿದ್ದು, ಚಲನಚಿತ್ರ ರಂಗದ ನಟ-ನಟಿಯರು, ಪ್ರಭಾವಿಗಳು ಹಾಗೂ ರಾಜಕಾರಣಿಗಳ ಮಕ್ಕಳು ಇದರಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಶಾಲಾ-ಕಾಲೇಜುಗಳಲ್ಲೂ ಡ್ರಗ್ಸ್ ದಂಧೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. …

Read More »

ಸಾಲ ಮರುಪಾವತಿಗೆ ಪೀಡಿಸಿದರೆ ಕೇಸ್: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ

ಬೆಳಗಾವಿ: ‘ಸಾಲಗಾರರಿಗೆ ಕಿರುಕುಳ ನೀಡುವ ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದರು. ಇಲ್ಲಿ ಗುರುವಾರ ನಡೆದ ಹಣಕಾಸು ಸಂಸ್ಥೆಗಳು, ಬ್ಯಾಂಕ್ ಅಧಿಕಾರಿಗಳು ಹಾಗೂ ರೈತ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಕೆಲ ಖಾಸಗಿ ಹಣಕಾಸು ಸಂಸ್ಥೆಗಳು ಮರ್ಧ್ಯವತಿಗಳನ್ನು ಬಳಸಿಕೊಂಡು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡುತ್ತಿರುವ ಮಾಹಿತಿ ಇದೆ. ಇದು ಮುಂದುವರಿಯಬಾರದು. ಒತ್ತಾಯದಿಂದ ಸಾಲ ಮರುಪಾವತಿ ಸೇರಿದಂತೆ ಇತರ ತೊಂದರೆ …

Read More »

ವ್ಯಕ್ತಿ ಬಂಧನ: 15 ದ್ವಿಚಕ್ರವಾಹನ ವಶಕ್ಕೆ

ಅಥಣಿ: ದ್ವಿಚಕ್ರ ವಾಹನಗಳ ಕಳವು ಆರೋಪದ ಮೇಲೆ ಇಲ್ಲಿನ ಪೊಲೀಸರು ವ್ಯಕ್ತಿಯೊಬ್ಬರನ್ನು ಗುರುವಾರ ಬಂಧಿಸಿದ್ದಾರೆ. ತಾಲ್ಲೂಕಿನ ಶಿರಹಟ್ಟಿಯ ರಮಜಾನ ಹುಸೇನಸಾಬ ಐನಾಪುರ (27) ಬಂಧಿತ. ‘ಜಿಲ್ಲೆ, ಬಾಗಲಕೋಟೆ ಹಾಗೂ ನೆರೆಯ ಮಹಾರಾಷ್ಟ್ರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳವಾದ ₹ 5 ಲಕ್ಷ ಮೌಲ್ಯದ 15 ದ್ವಿಚಕ್ರವಾಹನಗಳನ್ನು ಆರೋಪಿಯಿಂದ ಜಪ್ತಿ ಮಾಡಲಾಗಿದೆ. ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಪಟ್ಟಣ ಹಾಗೂ ತಾಲ್ಲೂಕಿನಾದ್ಯಂತ ದ್ವಿಚಕ್ರವಾಹನಗಳ ಕಳವು ಪ್ರಕರಣ ಹೆಚ್ಚುತ್ತಿದ್ದುದ್ದರಿಂದ ಡಿಎಸ್‌ಪಿ ಎಸ್.ವಿ. …

Read More »

ನೇಮಕಾತಿಯಲ್ಲಿ ಅಕ್ರಮ ಆರೋಪ: ಸಿಎಂ ಕಚೇರಿ ಎದುರು ಸ್ಟಾಫ್‌ ನರ್ಸ್‌ಗಳ ಕಣ್ಣೀರು

ಬೆಂಗಳೂರು: ಸ್ಟಾಫ್‌ ನರ್ಸ್‌ ನೇಮಕಾತಿಯಲ್ಲಿ ಅಕ್ರಮವಾಗಿ ನಡೆದಿದೆ ಎಂದು ಆರೋಪಿಸಿ ಗುತ್ತಿಗೆ ಆಧಾರಿತ ಸ್ಟಾಫ್‌ ನರ್ಸ್‌ಗಳು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ ಎದುರು ಕಣ್ಣೀರಿಟ್ಟ ಘಟನೆ ಗುರುವಾರ ಜರುಗಿದೆ. ಸುಮಾರು 20 ಮಂದಿ ಸ್ಟಾಫ್ಟ್‌ ನರ್ಸ್‌ಗಳು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಭೇಟಿಗಾಗಿ ಗೃಹ ಕಚೇರಿ ಬಳಿ ಬಂದಿದ್ದರು. ಈ ವೇಳೆ ಅವರನ್ನು ಗೇಟ್‌ ಬಳಿಯ ತಡೆದ ಪೊಲೀಸರು ಮುಖ್ಯಮಂತ್ರಿ ಭೇಟಿಗೆ ಅವಕಾಶ ನಿರಾಕರಿಸಿದರು. ಇದರಿಂದ ಭಾವುಕಾರದ ಸ್ಟಾಫ್‌ ನರ್ಸ್‌ಗಳು, ಕೋವಿಡ್‌ …

Read More »

ವೃದ್ಧೆಯ ಉಸಿರುಗಟ್ಟಿಸಿ ಕೊಲೆಗೈದು ಚಿನ್ನಾಭರಣ ಲೂಟಿ

ಬೆಂಗಳೂರು : ವೃದ್ಧೆಯೊಬ್ಬರನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿರುವ ಘಟನೆ ಬಾಣಸವಾಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ಬುಧವಾರ ನಡೆದಿದೆ. ರಾಮಸ್ವಾಮಿಪಾಳ್ಯ ನಿವಾಸಿ ಕಾಂತಮ್ಮ (70) ಕೊಲೆಯಾದವರು. ಕಾಂತಮ್ಮ ಅವರ ಮೈ ಮೇಲಿದ್ದ ಚಿನ್ನಾಭರಣವನ್ನು ದುಷ್ಕರ್ಮಿಗಳು ಕಳವು ಮಾಡಿದ್ದು, ಪರಿಚಯಸ್ಥರೇ ಕೃತ್ಯ ಎಸಗಿರುವ ಸಾಧ್ಯತೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕಾಂತಮ್ಮ ಅವರಿಗೆ ಐವರು ಮಕ್ಕಳಿದ್ದು, ಮಾನಸಿಕ ಅಸ್ವಸ್ಥ ಪುತ್ರಿ ಜತೆ ರಾಮಸ್ವಾಮಿ ಪಾಳ್ಯದಲ್ಲಿ ವಾಸವಿದ್ದರು. ಉಳಿದ ಮಕ್ಕಳು …

Read More »