ಬೆಂಗಳೂರು: ಯಾರು ವಾಮಮಾರ್ಗದಲ್ಲಿ ಗೆದ್ದಿರುತ್ತಾರೆ ಅವರೇ ನಶೆಹಾದರದ ದಾಸರು. ಉಪ್ಪುತಿಂದವ ನೀರು ಕುಡಿಯುವ ಎಂದು ಜಗ್ಗೇಶ್ ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಆಕ್ರೋಶದಿಂದ ಪ್ರತಿಕ್ರಿಯಿಸಿದ್ದಾರೆ. ಸ್ಯಾಂಡಲ್‍ವುಡ್‍ನ ಕೆಲ ಕಲಾವಿದರಿಗೆ ಡ್ರಗ್ಸ್ ಪೂರೈಕೆ ವಿಚಾರವಾಗಿ ನಟ ಜಗ್ಗೇಶ್ ಅವರು ಆಕ್ರೋಶ ಭರಿತವಾಗಿ ಟ್ವೀಟ್ ಮಾಡುವ ಮೂಲಕ ಡ್ರಗ್ಸ್ ಮಾಫಿಯಾದ ಬಗ್ಗೆ ಮಾತನಾಡಿದರು. “ಸರಿಯಾಗಿ ಬಾಳಿಬದುಕುವ ನಿರ್ಧಾರ ಮಾಡಿ ಶ್ರಮಿಸುವರು ಎಲ್ಲೇ ಇದ್ದರು ಶ್ರೇಷ್ಠವಾಗಿ ಉಳಿಯುತ್ತಾರೆ. ನಾನು ನನ್ನಿಷ್ಟ, ನನ್ನ ಬದುಕು ಎನ್ನುವರ …
Read More »ಬೆಂಗಳೂರಿನ ಗಾಳಿಯಲ್ಲಿ ಹೆಚ್ಚುತ್ತಿರುವ ವಿಷಕಾರಿ ಭಾರಲೋಹ : ತಜ್ಞರಿಂದ ಎಚ್ಚರಿಕೆ
ಬೆಂಗಳೂರು : ಯೋಜಿತವಲ್ಲದ ನಗರೀಕರಣ, ಹೆಚ್ಚುತ್ತಿರುವ ಇಂಧನಗಳ ಬಳಕೆ, ಕೈಗಾರಿಕೆಗಳಿಂದ ಹೊರಸೂಸುವ ವಿಷಾನಿಲಗಳು ನಗರದಲ್ಲಿ ವಾಯು ಮಾಲಿನ್ಯಕಾರಕಗಳ ಪ್ರಮಾಣವನ್ನು ಹೆಚ್ಚಿಸಿದೆ. ಇದರ ಜೊತೆಗೆ ಆರೋಗ್ಯಕ್ಕೆ ಹಾನಿಕಾರಕವಾಗಿರುವ ಭಾರಲೋಹಗಳ ಪ್ರಮಾಣವೂ ನಗರದ ಗಾಳಿಯಲ್ಲಿ ಹೆಚ್ಚುತ್ತಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ. ಇಂಟರ್‍ನ್ಯಾಷನಲ್ ಜರ್ನಲ್ ಆಫ್ ಪ್ಯೂರ್ ಆಂಡ್ ಅಪ್ಲೈಡ್ ರೀಸರ್ಚ್ (ಐಜೆಪಿಎಆರ್) ತನ್ನ ಅಧ್ಯಯನದಲ್ಲಿ ವರದಿಯಲ್ಲಿ ನಗರದ ಪಕ್ಷಿಗಳ ಗರಿಗಳಲ್ಲಿ ಭಾರಲೋಹಗಳನ್ನು ಪತ್ತೆಯಾಗಿರುವುದಾಗಿ ತಿಳಿಸಿದೆ. ಪ್ರಾಣಿಗಳು ಹಾಗೂ ಮನುಷ್ಯರ ಕೂದಲಿನಲ್ಲೂ ಈ ಭಾರ …
Read More »ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಲ ಕ್ರಮ: ರಮೇಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿಯ ಪೀರನವಾಡಿಯಲ್ಲಿ ಸ್ಥಾಪಿಸಲಾಗಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಕುರಿತು ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ (Ramesh jarakiholi) ಹೇಳಿದರು. ಬೆಳಗಾವಿ ಸಮೀಪದ ಪೀರನವಾಡಿಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ಸಂಗೊಳ್ಳಿ ರಾಯಣ್ಣ ಪ್ರತಿಮೆ (Sangolli Rayanna statue) ವಿವಾದ ನಿನ್ನೆಯೇ ಸುಖಾಂತ್ಯವಾಗಿರುವುದು ಒಳ್ಳೆಯ ಬೆಳವಣಿಗೆ. ಸಂಗೊಳ್ಳಿ ರಾಯಣ್ಣ ಮತ್ತು ಛತ್ರಪತಿ ಶಿವಾಜಿ ಇಬ್ಬರೂ ದೇಶದ …
Read More »ಚಿತ್ರರಂಗದ ಮಂದಿ ಡ್ರಗ್ಸ್ ಮಾಫಿಯಾದಲ್ಲಿ ಸಿಲುಕಿದೆ:ಇಂದ್ರಜಿತ್ ಲಂಕೇಶ್
ಬೆಂಗಳೂರು: ಪೊಲೀಸ್ ಇಲಾಖೆ ನ್ಯಾಯ ಕೊಡಬೇಕು. ಚಿತ್ರರಂಗ ಸ್ವಚ್ಛ ಆಗಬೇಕು ಅನ್ನೊದು ನನ್ನ ಉದ್ದೇಶ ಎಂದು ಪೊಲೀಸ್ ಕಮಿಷನರ್ ಕಮಲ್ ಪಂತ್ ಹೇಳಿಕೆಗೆ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಮಾತನಾಡಿದ ಇಂದ್ರಜಿತ್ ಲಂಕೇಶ್, ಪೊಲೀಸ್ ಕಮಿಷನರ್ ಅವರ ತನಿಖೆಗೆ ಸಹಕರಿಸುತ್ತೀನಿ, ಭದ್ರತೆ ಕೊಡುತ್ತೀನಿ ಅಂತ ಹೇಳಿರೋದು ಸಂತೋಷ. ಆದರೆ ಪೊಲೀಸ್ ಇಲಾಖೆ ಚಿತ್ರರಂಗಕ್ಕೆ ನ್ಯಾಯ ಕೊಡಬೇಕು ಎಂದು ಕಮಲ್ ಪಂತ್ ಅವರ ಹೇಳಿಕೆಯನ್ನು ಸ್ವಾಗತಿಸಿದ್ದಾರೆ. ಅಲ್ಲದೇ ಚಿತ್ರರಂಗ ಸ್ವಚ್ಛ ಆಗಬೇಕು …
Read More »ನೂತನ ಶಿಕ್ಷಣ ನೀತಿ ಜಾರಿ; ರಾಜ್ಯಪಾಲರ ಜತೆ ಡಿಸಿಎಂ ಮಹತ್ವದ ಚರ್ಚೆ
ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ, ರಾಜ್ಯಪಾಲ ವಜೂಭಾಯಿ ವಾಲ ಅವರ ಜತೆ ಮಹತ್ವದ ಮಾತುಕತೆ ನಡೆಸಿದರು. ಶುಕ್ರವಾರ ಬೆಂಗಳೂರಿನಲ್ಲಿ ರಾಜಭವನಕ್ಕೆ ಭೇಟಿ ನೀಡಿದ ಡಿಸಿಎಂ, ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಈವರೆಗೆ ಸರಕಾರ ಕೈಗೊಂಡಿರುವ ಕ್ರಮಗಳು, ಕಾರ್ಯಪಡೆ ರಚನೆ, ಆ ಕಾರ್ಯಪಡೆ ಜತೆ ನಡೆಸಿರುವ ಸಭೆಗಳು, ವಿಚಾರ ವಿನಿಮಯ ಇತ್ಯಾದಿ …
Read More »ರಾಯಣ್ಣ ಪ್ರತಿಮೆ ವಿವಾದ ಸುಖಾಂತ್ಯ ಕಂಡ ಬೆನ್ನಲ್ಲೇ ಸಚಿವರ ದಂಡೇ ಪೀರನವಾಡಿಗೆ ಭೇಟಿ
ಬೆಳಗಾವಿ: ಪೀರನವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ಸುಖಾಂತ್ಯ ಕಂಡ ಬೆನ್ನಲ್ಲೇ ಸಚಿವರ ದಂಡೇ ಪೀರನವಾಡಿಗೆ ಭೇಟಿ ನೀಡುತ್ತಿದೆ. ಶನಿವಾರ ಬೆಳಗ್ಗೆ ಸಚಿವರಾದ ರಮೇಶ ಜಾರಕಿಹೊಳಿ ಮತ್ತು ಕೆ.ಎಸ್. ಈಶ್ವರಪ್ಪ ಹಾಗೂ ಎನ್ ನಾಗೇಶ್ ಅವರು ಸ್ಥಳಕ್ಕೆ ಭೇಟಿ ನೀಡಿ ಸಂಗೊಳ್ಳಿ ರಾಯಣ್ಣ ಹಾಗೂ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಕಳೆದೊಂದು ವಾರದಿಂದ ರಾಜ್ಯದ ಗಮನ ಸೆಳೆದಿತ್ತು. ಬೆಂಗಳೂರು ಸೇರಿ ರಾಜ್ಯದ ಎಲ್ಲಡೆಯಿಂದ ರಾಯಣ್ಣ …
Read More »ತೀವ್ರ ವಿವಾದ ಸೃಷ್ಠಿಸಿದ್ದ ಪೀರನವಾಡಿಯ ಸಂಗೋಳ್ಳಿ ರಾಯಣ್ಣನ ಪುತ್ಥಳಿ ಪ್ರತಿಷ್ಠಾಪನಾ ಸ್ಥಳಕ್ಕೆ ಭೇಟಿ ನೀಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ.
ಬೆಳಗಾವಿ:ತೀವ್ರ ವಿವಾದ ಸೃಷ್ಠಿಸಿದ್ದ ಪೀರನವಾಡಿಯ ಸಂಗೋಳ್ಳಿ ರಾಯಣ್ಣನ ಪುತ್ಥಳಿ ಪ್ರತಿಷ್ಠಾಪನಾ ಸ್ಥಳಕ್ಕೆ ಭೇಟಿ ನೀಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದ್ರು. ನಿನ್ನೆಯಷ್ಟೇ ಪೀರನವಾಡಿಯಲ್ಲಿ ವಿವಿಧ ಸಂಘಟನೆಗಳ ವತಿಯಿಂದ ನೂತನವಾಗಿ ಸ್ಥಾಪಿಸಲಾಗಿರುವ ನೂತನ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಚಿವದ್ವಯರು ಪೀರನವಾಡಿ …
Read More »ಪೀರನವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಪ್ರಕರಣ ಸೌಹಾರ್ದತೆಯಿಂದ ಇತ್ಯರ್ಥವಾಗಿದೆ.
ಪೀರನವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಪ್ರಕರಣ ಸೌಹಾರ್ದತೆಯಿಂದ ಇತ್ಯರ್ಥವಾಗಿದೆ. ಇಬ್ಬರು ಮಹಾನ್ ನಾಯಕರಿಗೆ ಅಗೌರವ ಆಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ನಿನ್ನೆಯ ಮೂರ್ತಿ ಪ್ರತಿಷ್ಠಾಪನೆ ಹಾಗೂ ಲಾಠಿ ಚಾರ್ಜ್ ಕುರಿತು ದಾಖಲಾಗಿರುವ ಪ್ರಕರಣಗಳನ್ನ ವಾಪಸ್ ಪಡೆಯುವ ಕುರಿತು ಸಿಎಂ ಜತೆಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದ್ರು. ಕನ್ನಡ ಪರ ಹೋರಾಟಗಾರರ ಮೇಲೆ ಕೇಸ್ ವಿಚಾರ ಹಿಂಪಡೆಯಬೇಕೆಂಬ ಒತ್ತಡಗಳ …
Read More »ಬಿಜೆಪಿ ಶಾಸಕ ಅಭಯ ಪಾಟೀಲಗೆ ಕೋವಿಡ್-19 ದೃಢ
ಬೆಳಗಾವಿ: ಇಲ್ಲಿನ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ ಅವರಿಗೆ ಶುಕ್ರವಾರ ಕೋವಿಡ್-19 ದೃಢಪಟ್ಟಿದೆ. ‘ಅವರು ಹೋಂ ಐಸೊಲೇಷನಲ್ಲಿದ್ದಾರೆ. ಕುಟುಂಬದವರ ಪರೀಕ್ಷಾ ವರದಿ ಬರುವುದು ಬಾಕಿ ಇದೆ’ ಎಂದು ಸಹೋದರ ಸಂತೋಷ ಪಾಟೀಲ ‘ಪ್ರಜಾವಾಣಿ’ಗೆ ಖಚಿತಪಡಿಸಿದರು. ಶಾಸಕರು ಆ.25ರಂದು ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದರು.
Read More »ನಮ್ಮದೇ ನೆಲದಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಕನ್ನಡಿಗರು ಹರಸಾಹಸ ಪಡಬೇಕಾ…?
ಬೆಂಗಳೂರು : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕರ್ನಾಟಕದ ಅಸ್ಮಿತೆ. ಅಂತಹವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ನಾಡದ್ರೋಹದ ಕೆಲಸ. ನಮ್ಮದೇ ನೆಲದಲ್ಲಿ ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡಲು ಕನ್ನಡಿಗರು ಇಷ್ಟು ಹರಸಾಹಸ ಪಡಬೇಕೇ? ಎಂದು ನಿಖಿಲ್ ಕುಮಾರ ಸ್ವಾಮಿ ಪ್ರಶ್ನಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರು ಅವರು ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ನಮ್ಮ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಪ್ರತಿಷ್ಠಾಪನೆ ವಿರೋಧಿಸಿ ಪುಂಡಾಟಿಕೆ ಮಾಡುತ್ತಿರುವ ಕೆಲವು ಸಂಘಟನೆಗಳನ್ನು ಸರ್ಕಾರ ಕೂಡಲೇ …
Read More »
Laxmi News 24×7