Breaking News

ಜಿಲ್ಲೆ

ಚಾಕೊಲೇಟ್ ಕೊಡುವ ನೆಪದಲ್ಲಿ ಹೇಯ ಕೃತ್ಯ: 8 ವರ್ಷದ ಬಾಲಕಿ ಮೇಲೆ ವೃದ್ಧನಿಂದ ಲೈಂಗಿಕ ದೌರ್ಜನ್ಯ

ಹುಬ್ಬಳ್ಳಿ: ಕ್ಯಾನ್ಸರ್ ಪೀಡಿತ 75 ವರ್ಷದ ವೃದ್ಧನಿಂದ 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವಂತಹ ಘಟನೆ ಹುಬ್ಬಳ್ಳಿಯ  ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನವರಿ 29ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಚಾಕೊಲೇಟ್ ಕೊಡುವುದಾಗಿ ಹೇಳಿ ಪಕ್ಕದ ಮನೆಯ ಬಾಲಕಿಯನ್ನ ಮನೆಗೆ ಕರೆಸಿಕೊಂಡು ವೃದ್ಧ ಕೃತ್ಯವೆಸಗಿದ್ದಾನೆ. ಹುಬ್ಬಳ್ಳಿಯ ಅಶೋಕನಗರ ಠಾಣೆಯಲ್ಲಿ ಪೋಕ್ಸೋ ಕೇಸ್  ದಾಖಲಾಗಿದ್ದು, ಸದ್ಯ ಆರೋಪಿ ವೃದ್ಧನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಚಾಕುವಿನಿಂದ ಪತ್ನಿಯ ಕತ್ತು ಕೊಯ್ದು ಪತಿ ಕೊಲೆಗೈದಿರುವಂತಹ …

Read More »

ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ವ್ಯಕ್ತಿ ಅನುಮಾನಾಸ್ಪದ ಸಾವು

ಬೆಂಗಳೂರು: ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ವ್ಯಕ್ತಿಯೋರ್ವ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ  ಭಾರತಿನಗರದ  ಫ್ರೂಟ್ಸ್ ಮಾರ್ಕೆಟ್ ಬಳಿ ನಡೆದಿದೆ. ಇರ್ಫಾನ್ ಮುಲ್ಲಾನಿ (26) ಮೃತ ವ್ಯಕ್ತಿ. ಜನವರಿ 30ರಂದು ಘಟನೆ ನಡೆದಿದೆ. ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ಇರ್ಫಾನ್ ಇದ್ದಕ್ಕಿದ್ದಂತೆ ನಾಲ್ಕನೇ ಫ್ಲೋರ್‌ನಿಂದ ಬಿದ್ದು ಸಾವನ್ನಪ್ಪಿದ್ದಾನೆ. ಯಾರಾದರು ಮೇಲಿಂದ ತಳ್ಳಿದ್ರಾ ಅನ್ನೋ ಅನುಮಾನವನ್ನು ಕುಟುಂಬಸ್ಥರು ವ್ಯಕ್ತಪಡಿಸುತ್ತಿದ್ದಾರೆ. ಅನುಮಾನದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಭಾರತಿನಗರ ಪೊಲೀಸರು …

Read More »

ಮೂರು ಮಕ್ಕಳನ್ನು ಕೊಲೆಗೈದು ವಿಷ ಸೇವಿಸಿದ ತಾಯಿ!

ಬಾಗಲಕೋಟೆ: ತಾಯಿಯೊಬ್ಬಳು  ಭಾನುವಾರ ಮೂರು ಮಕ್ಕಳಿಗೆ ನೇಣು ಹಾಕಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ  ಯತ್ನಿಸಿದ ಘಟನೆ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ನಡೆದಿದೆ. ರೂಪಾ ಹನುಮಂತ ಗೌಡರ (28) ಕೃತ್ಯ ಎಸಗಿದ ತಾಯಿ. ಸಮೃದ್ಧಿ ಹನುಮಂತಪ್ಪ ಗೌಡರ (5), ಪ್ರೀತಂ ಹನುಮಂತಪ್ಪ ಗೌಡರ (4), ಸುಕ್ಷೀತ ಹನುಮಂತಪ್ಪ ಗೌಡರ (2) ಮೃತ ಮಕ್ಕಳು. ಮೂವರು ಮಕ್ಕಳನ್ನು ಮನೆಯಲ್ಲಿಯೇ ನೇಣು ಹಾಕಿ ಸಾಯಿಸಿದ್ದಾಳೆ. ಮಕ್ಕಳನ್ನು ಹತ್ಯೆ ಮಾಡಿದ ಬಳಿಕ ರೂಪಾ …

Read More »

ಬೆಳಗಾವಿ: ಚೋರ್ಲಾ ಘಾಟ್ 400 ಕೋಟಿ ದರೋಡೆ ಪ್ರಕರಣದ ಆರೋಪಿ ಅರೆಸ್ಟ್

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ನಡೆದ 400 ಕೋಟಿ ಮೌಲ್ಯದ ರದ್ದಾದ ನೋಟುಗಳ ದರೋಡೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಕಿಶೋ‌ರ್ ಸಾಳ್ವೆಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್‌ ಠಾಣೆಗೆ ತೆರಳಿ ಶರಣಾಗಿದ್ದ ಕಿಶೋ‌ರ್ ಸಾಳ್ವೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣದ ಗಂಭೀರತೆಯನ್ನು ಮನಗಂಡಿರುವ ಮಹಾರಾಷ್ಟ್ರ ಸರ್ಕಾರ, ತನಿಖೆಯನ್ನು ಮತ್ತಷ್ಟು ಕಟ್ಟುನಿಟ್ಟಾಗಿ ನಡೆಸುವಂತೆ ಸೂಚನೆ ໖໖. …

Read More »

ಬುಡಾ ವಿರುದ್ಧ ವಿಜಯಕುಮಾರ್ ಪಾಟೀಲ್ ಆಕ್ರೋಶ: ಫೆ. 28 ರೊಳಗೆ ಲೇಔಟ್ ಬಿಡುಗಡೆಗೆ ಗಡುವು

ಕಳೆದ ಇಪ್ಪತ್ತು ವರ್ಷಗಳಿಂದ ಬುಡಾದಿಂದ ಯಾವುದೇ ಲೇಔಟ್ ನಿರ್ಮಾಣವಾಗಿಲ್ಲ ಎಂದು ವಿಜಯಕುಮಾರ್ ಪಾಟೀಲ ಆರೋಪಿಸಿದ್ದಾರೆ. ಇಂದು ಬೆಳಗಾವಿಯಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು. ಗುಂಟೆ ದರ ಲಕ್ಷಾಂತರ ರೂಪಾಯಿ ತಗಲುತ್ತಿದ್ದು, ಸಾರ್ವಜನಿಕರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದರು.ಮಾಸ್ಟರ್ ಪ್ಲಾನ್ ಹೆಸರಿನಲ್ಲಿ ಒಂದೂ ಲೇಔಟ್ ನಿರ್ಮಿಸದೆ ಬುಡಾ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.ಈ ಸಂಬಂಧ …

Read More »

ಪುನೀತ್ ರಾಜ್‍ಕುಮಾರ್ ವೃತ್ತದಲ್ಲಿ ಪ್ರತಿಮೆ ಅನಾವರಣಗೊಳಿಸಿದ ಯುವ ನಟ ವಿನಯ್ ರಾಜ್‍ಕುಮಾರ್

ಗೋಕಾಕ ನಗರದಲ್ಲಿರುವ ಕನ್ನಡಿಗರ ಹೆಮ್ಮೆಯ ‘ಕರ್ನಾಟಕ ರತ್ನ’ ಡಾ. ಪುನೀತ್ ರಾಜ್‍ಕುಮಾರ್ ವೃತ್ತದಲ್ಲಿ ಇಂದು ಅವರ ಭವ್ಯ ಪ್ರತಿಮೆಯನ್ನು ಯುವ ನಟ ವಿನಯ್ ರಾಜ್‍ಕುಮಾರ್ ಅವರ ಉಪಸ್ಥಿತಿಯಲ್ಲಿ ಅತ್ಯಂತ ಸಡಗರದಿಂದ ಅನಾವರಣಗೊಳಿಸಲಾಯಿತು. ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಅಮರನಾಥ ಜಾರಕಿಹೊಳಿ, ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ, ಗೋಕಾಕ ನಗರಸಭೆಯ ಸದಸ್ಯರು, ಮುಖಂಡರು ಹಾಗೂ ಅಪ್ಪು ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಮತ್ತು ಸಾವಿರಾರು ಸಂಖ್ಯೆಯಲ್ಲಿ ಅಪ್ಪು ಅಭಿಮಾನಿಗಳು ಉಪಸ್ಥಿತರಿದ್ದರು. ಪುನೀತ್ …

Read More »

ಕೊಳ್ಳೇಗಾಲದಲ್ಲಿ ವರನಿಗೆ ಚಾಕು ಇರಿತ – ಹತ್ಯೆಗೆ ಸುಪಾರಿ ಕೊಟ್ಟಿದ್ದೇ ವಧು!

ಚಾಮರಾಜನಗರ: ಕೊಳ್ಳೇಗಾಲದಲ್ಲಿ  ಕಲ್ಯಾಣ ಮಂಟಪಕ್ಕೆ ಬರುತ್ತಿದ್ದ ವರನಿಗೆ  ಚಾಕು ಇರಿತ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ವರನಿಗೆ ಚಾಕು ಇರಿತದ ಹಿಂದೆ ಇದ್ದ ಸೂತ್ರದಾರಿಯೇ ವಧು  ಎನ್ನುವುದು ತನಿಖೆಯಲ್ಲಿ ಬಯಲಾಗಿದೆ. ಡಿ.30ರಂದು ಕುಣಗಳ್ಳಿ ಗ್ರಾಮದ ರವೀಶ್ ಮತ್ತು ನಯನ ಮದುವೆ ನಡೆಯಬೇಕಿತ್ತು. ರವೀಶ್‌ ಹೊಸ ಜೀವನಕ್ಕೆ ಕಾಲಿಡುವ ಸಂತೋಷದಲ್ಲಿದ್ದರು. ಹಿಂದಿನ ದಿನ ರಿಸೆಪ್ಶನ್‌ಗೆ ರವೀಶ್‌ ಸೇರಿದಂತೆ ಸಂಬಂಧಿಕರು ಕಲ್ಯಾಣ ಮಂಟಪದತ್ತ ಹೊರಟಿದ್ದರು. ಕೊಳ್ಳೇಗಾಲದ ವೆಂಕಟೇಶ್ವರ ಮಂಟಪಕ್ಕೆ ಕಾರಿನಲ್ಲಿ ಬರುತ್ತಿದ್ದಾಗ …

Read More »

ಚಿಕ್ಕಮಗಳೂರು ಡಿಸಿಸಿ ಬ್ಯಾಂಕಿಗೆ ಸಿ.ಟಿ.ರವಿ ಅಧ್ಯಕ್ಷ, ದಿನೇಶ್ ಹೊಸೂರು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

ಚಿಕ್ಕಮಗಳೂರು: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್  ಅಧ್ಯಕ್ಷರಾಗಿ ಎಂಎಲ್‌ಸಿ ಸಿ.ಟಿ. ರವಿ ಹಾಗೂ ಉಪಾಧ್ಯಕ್ಷರಾಗಿ ಕೊಪ್ಪ ತಾಲೂಕಿನ ದಿನೇಶ್ ಹೊಸೂರು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು 13 ನಿರ್ದೇಶಕರ ಬಲ ಹೊಂದಿರುವ ಡಿಸಿಸಿ ಬ್ಯಾಂಕಿನಲ್ಲಿ ಬಿಜೆಪಿ 11 ಹಾಗೂ ಜೆಡಿಎಸ್ 2 ಸ್ಥಾನಗಳನ್ನು ಹೊಂದುವ ಮೂಲಕ ಮೈತ್ರಿಕೂಟವು ಸಂಪೂರ್ಣ ಹಿಡಿತ ಸಾಧಿಸಿತ್ತು. ಬಿಜೆಪಿಯಿಂದ ಸಿ.ಟಿ. ರವಿ ಅವರೊಂದಿಗೆ ಮಾಜಿ ಶಾಸಕರಾದ ಬೆಳ್ಳಿ ಪ್ರಕಾಶ್ ಮತ್ತು ಡಿ.ಎಸ್. ಸುರೇಶ್ ಅವರು ನೇಮಕಗೊಂಡಿದ್ದರೆ, …

Read More »

ಕ್ಷೇತ್ರದ ಅಭಿವೃದ್ಧಿಗೆ ಮೊದಲ ಪ್ರಾಶ್ಯಸ್ತ್ಯ: ಸಚಿವ ಸತೀಶ್‌ ಜಾರಕಿಹೊಳಿ

ಯಮಕನಮರಡಿ: ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ, ಜನರಿಗೆ ಆಡಳಿತಾತ್ಮಕ ಸೇವೆಗಳು ಸುಲಭವಾಗಿ, ಪಾರದರ್ಶಕವಾಗಿ ದೊರೆಯಲಿ ಎಂಬ ಆಶಯದೊಂದಿಗೆ ಹಂದಿಗನೂರು, ವಸ ವಂಟಮೂರಿ ಗ್ರಾಮದಲ್ಲಿ ಗ್ರಾಪಂ ಕಚೇರಿಯಗಳನ್ನು ಸುಸಜ್ಜಿತವಾಗಿ ನಿರ್ಮಿಸಲಾಗಿದೆ. ಈ ಕಟ್ಟಡಗಳು ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ವೇಗ ನೀಡಲಿ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಯಮಕನಮರಡಿ ಮತಕ್ಷೇತ್ರದ ಹಂದಿಗನೂರು, ಹೊಸ ವಂಟಮೂರಿ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಿದ ನೂತನ …

Read More »

ಕೇಂದ್ರ ಬಜೆಟ್‌ ರೈತರು, ಯುವಕರು, ಉದ್ಯೋಗ ಸೃಷ್ಟಿಗೆ ಪೂರಕವಾಗಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ರೈತರು, ಯುವಕರು ಮತ್ತು ಉದ್ಯೋಗ ಸೃಷ್ಟಿಗೆ ಪೂರಕವಾಗಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಟೀಕಿಸಿದ್ದಾರೆ. 2026-27ನೇ ಸಾಲಿನ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಗೆ ಈಗಾಗಲೇ ಘೋಷಿಸಲಾಗಿರುವ 5,300 ಕೋಟಿ ರೂ. ಇನ್ನು ಬಿಡುಗಡೆಯಾಗಿಲ್ಲ, ಈ ಬಾರಿಯೂ ಇದರ ಬಗ್ಗೆ ಬಜೆಟ್ ನಲ್ಲಿ …

Read More »