Breaking News

ಜಿಲ್ಲೆ

ಸಾಂಬ್ರಾ ವಿಮಾನ ನಿಲ್ದಾಣ ಪ್ರವೇಶ ದ್ವಾರದಲ್ಲಿ ರೈತರ ಪ್ರತಿಭಟನೆ

ಬೆಳಗಾವಿ: ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ರೈತ ಸಂಘ ಹಾಗೂ ಹಸಿರುಸೇನೆಯವರು ಸಾಂಬ್ರಾ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಧರಣಿ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಮಾನನಿಲ್ದಾಣದಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದು, ಇದೇ ವೇಳೆ ರೈತರು ಹೊರಗಡೆ ಧರಣಿ ನಡೆಸುತ್ತಿದ್ದಾರೆ. ನಮ್ಮ ಭೂಮಿ ನಮ್ಮ ಹಕ್ಕು ಅದನ್ನು ಕಿತ್ತುಕೊಳ್ಳಲು ಸರ್ಕಾರ ಹುನ್ನಾರ ನಡೆಸಿದೆ. ಬಂಡವಾಳಶಾಹಿಗಳು, ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂದು ಆರೋಪಿಸಿದರು. ಹೋದ ವರ್ಷ ನೆರೆ …

Read More »

ಜಲಾಶಯಕ್ಕೆ ಸಿಎಂ ಭೇಟಿ : ಬಿಗಿ ಭದ್ರತೆ, ಶೃಂಗಾರಗೊಂಡ ಆಲಮಟ್ಟಿ ಜಲಾಶಯ

ವಿಜಯಪುರ: ಇಂದು ಸಿ ಎಮ್ ಯಡಿಯೂರಪ್ಪನವರು ಆಲಮಟ್ಟಿ ಜಲಾಶಯಕ್ಕೆ ಇಂದು ಮದ್ಯಾಹ್ನ ಆಗಮಿಸುವ ಹಿನ್ನಲೆಯಲ್ಲಿ ಆಲಮಟ್ಟಿ ತಳಿರು ತೋರಣಗಳು, ಪುಷ್ಪಗಳಿಂದ ಶೃಂಗಾರಗೊಂಡಿದೆ. ಈಗಾಗಲೇ ಜಿಲ್ಲಾಡಳಿತ ಮತ್ತು ಕೆ.ಬಿ.ಜಿ ಎನ್.ಎಲ್ ಅಧಿಕಾರಿಗಳು ಪೂರ್ವ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಪತ್ರಕರ್ತರಿಗೂ ನಿರ್ಬಂಧ ವಿಧಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡಿ ಒಳ ಬಿಡಲಾಗುತ್ತಿದೆ. ಸಿಎಂ ಸ್ವಾಗತ ಕೋರಿ ಆಲಮಟ್ಟಿ ಜಲಾಶಯ, ಪ್ರವೇಶ ದ್ವಾರ, ವೃತ್ತ ಸೇರಿದಂತೆ ಪಟ್ಟಣದಲ್ಲಿ ಹೂವಿನ ಅಲಂಕಾರ …

Read More »

ಹೆಲಿಕಾಪ್ಟರ್‍ನಲ್ಲಿ ಸಿಎಂ ಬಿಎಸ್‍ವೈ ವೈಮಾನಿಕ ಸಮೀಕ್ಷೆ ಮಂಗಳವಾರ ಹೆಲಿಕಾಪ್ಟರ್‍ನಲ್ಲಿ ಪ್ರವಾಹ ಪ್ರದೇಶಗಳನ್ನು ಸಿಎಂ ಯಡಿಯೂರಪ್ಪ ಸಮೀಕ್ಷೆ ನಡೆಸಿ ನೆರೆ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿ, ಬಾಗಲಕೋಟೆ ಮತ್ತಿತರ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಿದರು. ಹೆಲಿಕಾಪ್ಟರ್‍ನಲ್ಲಿ ಸಿಎಂ ಬಿಎಸ್‍ವೈ ವೈಮಾನಿಕ ಸಮೀಕ್ಷೆ ಮಂಗಳವಾರ ಹೆಲಿಕಾಪ್ಟರ್‍ನಲ್ಲಿ ಪ್ರವಾಹ ಪ್ರದೇಶಗಳನ್ನು ಸಿಎಂ ಯಡಿಯೂರಪ್ಪ ಸಮೀಕ್ಷೆ ನಡೆಸಿ ನೆರೆ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡರು. ಈ ವೇಳೆ ಸಿಎಂ ಬಿಎಸ್‍ವೈಗೆ ಕಂದಾಯ ಸಚಿವರಾದ ಆರ್.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.

Read More »

ಕೊರೊನಾ ವಾರಿಯರ್ ಗಳನ್ನ ಅಶ್ಲೀಲ ಪದಗಳಿಂದ ನಿಂದಿಸಿದ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.

ಹಾಸನ: ಕೊರೊನಾ ವಾರಿಯರ್ ಗಳನ್ನ ಅಶ್ಲೀಲ ಪದಗಳಿಂದ ನಿಂದಿಸಿದ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಅಶ್ಲೀಲವಾಗಿ ತಮ್ಮನ್ನು ನಿಂದಿಸಿದ ಕುಟುಂಬಸ್ಥರ ವಿರುದ್ಧ ವೈದ್ಯಕೀಯ ಸಿಬ್ಬಂದಿ ಆಕ್ರೋಶ ಹೊರ ಹಾಕಿದ್ದಾರೆ. ಆಲೂರು ತಾಲೂಕಿನ ಹಳ್ಳಿಯೊಂದರಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನ ಸೋಂಕು ದೃಢಪಟ್ಟಿತ್ತು. ಹೀಗಾಗಿ ಅವರ ಮನೆ ಸೀಲ್‍ಡೌನ್ ಮಾಡಲು ಅಧಿಕಾರಿಗಳು ತೆರಳಿದ್ದರು. ಆದ್ರೆ ಮನೆಯವರು ಒಂದು ವರದಿಯಲ್ಲಿ ನೆಗೆಟಿವ್ ಎಂದಿದೆ. ಮತ್ತೊಂದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ ಎಂದು ವರದಿಯ …

Read More »

ಸೋಂಕಿತೆ ಆಸ್ಪತ್ರೆಗೆ ದಾಖಲಾಗುವಾಗ ಮಾಂಗಲ್ಯ ಸರವಿತ್ತು, ಮೃತದೇಹದ ಮೇಲೆ ಇರಲಿಲ್ಲ!

ಚಿಕ್ಕಮಗಳೂರು: ಕೊರೊನಾ ಸೋಂಕಿತೆ ಆಸ್ಪತ್ರೆಗೆ ದಾಖಲಾಗುವಾಗ ಕೊರಳಲ್ಲಿ ಮಾಂಗಲ್ಯ ಸರವಿತ್ತು. ಆದರೆ ಮೃತರಾದ ಬಳಿಕ ಮೃತದೇಹ ಹೊರ ತಂದಾಗ ಮಾಂಗಲ್ಯ ಸರ ಹಾಗೂ ಕೈಯಲ್ಲಿದ್ದ ಉಂಗುರ ಇಲ್ಲದಂತಾಗಿತ್ತು. ಈ ಕುರಿತು ಆಸ್ಪತ್ರೆ ಸಿಬ್ಬಂದಿಯನ್ನು ವಿಚಾರಿಸಿದಾಗ ಗೊತ್ತಿಲ್ಲ ಎಂದಿದ್ದರು. ಆದರೆ 13 ದಿನದ ಬಳಿಕ ಕಳ್ಳನೇ ಮಾಂಗಲ್ಯ ಸರ ಇಟ್ಟು ಹೋದನಂತೆ. ಈ ಘಟನೆ ಜಿಲ್ಲೆಯಲ್ಲಿ ಆಗಸ್ಟ್ 10ರಂದು ನಡೆದಿತ್ತು. ನಾಲ್ಕೈದು ತಿಂಗಳಿಂದ ಕೊರೊನಾ ವಾರಿಯರ್ ಆಗಿ ಕೆಲಸ ಮಾಡುತ್ತಿರೋ ವೈದ್ಯರು, …

Read More »

ನಾಲ್ಕು ತಿಂಗಳಲ್ಲಿ ಬಯಲುಸೀಮೆ ಕೋಲಾರ ಜನರ ದಾಹ ನೀಗಲಿದೆ.

ಕೋಲಾರ: ಮುಂದಿನ ನಾಲ್ಕು ತಿಂಗಳಲ್ಲಿ ಬಯಲುಸೀಮೆ ಕೋಲಾರ ಜನರ ದಾಹ ನೀಗಲಿದೆ. ಯರಗೋಳ್ ಯೋಜನೆ ಮೂಲಕ 4 ನಗರಗಳಿಗೆ ಕುಡಿಯುವ ನೀರು ಲಭ್ಯವಾಗಲಿದೆ.ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳ್ ಗ್ರಾಮದಲ್ಲಿ ಬೃಹದಾಕಾರವಾಗಿ ಆಣೆಕಟ್ಟು ತಲೆ ಎತ್ತಿದೆ. ಕೋಲಾರ ಸೇರಿದಂತೆ ಮೂರು ತಾಲೂಕುಗಳಿಗೆ ಕುಡಿಯುವ ನೀರು ಒದಗಿಸಲು 2008 ರಲ್ಲಿ ಯರಗೋಳ್ ಯೋಜನೆ ಆರಂಭವಾಗಿತ್ತು. ಕೋಲಾರ, ಬಂಗಾರಪೇಟೆ ಮತ್ತು ಮಾಲೂರು ಪಟ್ಟಣಗಳಿಗೆ ಹಾಗೂ 45 ಇನ್ನಿತರ ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಲು ಅಂದಿನ …

Read More »

ಫೈರಿಂಗ್ ಪ್ರಕರಣವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಶಿವಮೊಗ್ಗ: ಫೈರಿಂಗ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಕ್ಸಲ್ ಶೋಭಾಳನ್ನು ಜಿಲ್ಲೆಯ ತೀರ್ಥಹಳ್ಳಿ ನ್ಯಾಯಾಲಯಕ್ಕೆ ಇಂದು ಹಾಜರು ಪಡಿಸಲಾಗಿದೆ. 2012ರಲ್ಲಿ ಬರ್ಕಣ ಫಾಲ್ಸ್ ಬಳಿ ನಡೆದಿದ್ದ ಫೈರಿಂಗ್ ಪ್ರಕರಣದಲ್ಲಿ ನಕ್ಸಲ್ ಶೋಭಾ ಭಾಗಿಯಾಗಿದ್ದಳು ಎಂದು ದೂರು ದಾಖಲಿಸಲಾಗಿತ್ತು. ಫೈರಿಂಗ್ ಪ್ರಕರಣದ ನಂತರ ಶೋಭಾ ತಲೆ ಮರೆಸಿಕೊಂಡಿದ್ದಳು. ಕಳೆದ ಮಾರ್ಚ್‍ನಲ್ಲಿ ಶೋಭಾಳನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿತ್ತು. ಶೋಭಾ 11 ನಕ್ಸಲ್ ಪ್ರಕರಣಗಳ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಆರೋಪವಿದ್ದು, ಇವಳ ವಿರುದ್ಧ ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನ ವಿವಿಧ ಪೊಲೀಸ್ …

Read More »

ಕ್ಲಬ್‍ಗಳಲ್ಲಿ ಎಣ್ಣೆ ಇಲ್ಲದೆ ಮೋಜು ಮಾಡಬಹುದು

ಬೆಂಗಳೂರು: ಸಾಮಾಜಿಕ ಕಬ್‍ಗಳಲ್ಲಿ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆದರೆ ಕೆಲ ನಿರ್ಬಂಧಗಳನ್ನು ಹೇರಿದೆ.ಅಂತರಾಜ್ಯ ಪ್ರಯಾಣಿಕರು ರಾಜ್ಯಕ್ಕೆ ಪ್ರವೇಶಿಸಬೇಕಾದರೆ ಪಾಲಿಸಬೇಕಾದ ಕೊರೊನಾ ನಿಯಮಗಳಲ್ಲಿ ಸಹ ರಾಜ್ಯಸರ್ಕಾರ ಸಡಿಲಿಕೆ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಸಾಮಾಜಿಕ ಕ್ಲಬ್‍ಗಳನ್ನು ತೆರೆಯಲು ಸಹ ಅನುಮತಿ ನೀಡಿದೆ. ಕ್ಲಬ್ ಗಳಲ್ಲಿ ಮೇಜಿನ ಮೇಲೆ ಆಹಾರ ವ್ಯವಸ್ಥೆಯನ್ನು ಕಲ್ಪಿಸಲು ಅವಕಾಶ ನೀಡಲಾಗಿದ್ದು, ಸಾಮಾಜಿಕ ಕ್ಲಬ್ ಗಳಲ್ಲಿ ಮದ್ಯ ಸರಬರಾಜನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಅಲ್ಲದೆ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮ ಗೋಕಾಕ : ಸತತ ಪರಿಶ್ರಮ, ಸ್ಪಷ್ಟ ಗುರಿ ಮತ್ತು ಉತ್ತಮ ಮಾರ್ಗದರ್ಶನವಿದ್ದರೆ ಮಾತ್ರ ಉತ್ತಮ ಸಾಧನೆಗೈಯಲು ಸಾಧ್ಯವಾಗುತ್ತದೆ ಎಂದು ಮೂಡಲಗಿ ತಹಶೀಲ್ದಾರ ದಿಲ್‍ಶಾದ್ ಮಹಾತ್ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದ ಆವರಣದಲ್ಲಿ ಕಳೆದ ಶನಿವಾರದಂದು ಜರುಗಿದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಸಾಧಕ ವಿದ್ಯಾರ್ಥಿಗಳ ಸತ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಮ್ಮ ಮುಂದಿನ ಜೀವನ …

Read More »

ಬೇರೆ ರಾಜ್ಯಗಳಿಂದ ಬರೋ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕರ್ನಾಟಕಕ್ಕೆ ಬೇರೆ ರಾಜ್ಯಗಳಿಂದ ಬರೋ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಸರಕುಗಳ ಅಂತರ-ರಾಜ್ಯ ಚಲನೆಗೆ ಯಾವುದೇ ನಿರ್ಬಂಧಗಳಿರುವದಿಲ್ಲ. ಅಂತರ-ರಾಜ್ಯ ಪ್ರಯಾಣಕ್ಕೆ ಸಂಬಂಧಿಸಿದಂತೆ ಹಿಂದಿನ ಎಲ್ಲ ಸುತ್ತೋಲೆಗಳನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ. ಸೇವಾಸಿಂಧು ಪೋರ್ಟಲ್ ನಲ್ಲಿ ನೋಂದಣಿ, ಗಡಿ ಭಾಗಗಳಲ್ಲಿ ವೈದ್ಯಕೀಯ ತಪಾಸಣೆ, ಜಿಲ್ಲೆಗಳಲ್ಲಿ ತಪಾಸಣೆ, ಪ್ರಯಾಣಿಕರ ವರ್ಗೀಕರಣ, ಕೈಗಳ ಮೇಲೆ ಮುದ್ರೆ, ಮನೆ ಬಾಗಿಲುಗಳಿಗೆ ಪೋಸ್ಟರ್ ಹಚ್ಚುವಿಕೆ ಈ ಎಲ್ಲ ಷರತ್ತುಗಳನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರಿಗೆ ಸರ್ಕಾರ …

Read More »