ಬೆಂಗಳೂರು,ಆ.24- ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಮಾಡುವ ಪ್ರಸ್ತಾವನೆ ಸದ್ಯಕ್ಕಿಲ್ಲ ಎನ್ನುವ ಮೂಲಕ ಕೇಂದ್ರ ಬಿಜೆಪಿ ವರಿಷ್ಠರು ಎಲ್ಲಾ ಉಹಾಪೋಹಗಳಿಗೂ ತೆರೆ ಎಳೆದಿದ್ದಾರೆ. ಕಳೆದ ಹಲವು ದಿನಗಳಿಂದ ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವ ಬದಲಾವಣೆಯಾಗಲಿದೆ ಎಂಬ ವದಂತಿಗಳು ಬಿಜೆಪಿ ವಲಯದಲ್ಲಿ ಕೇಳಿ ಬಂದಿದ್ದವು. ಮುಂದಿನ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಸಮರ್ಥ ನಾಯಕನಿಗೆ ಪಟ್ಟ ಕಟ್ಟಲು ತೆರೆಮರೆಯಲ್ಲಿ ಸಿದ್ದತೆಗಳು ನಡೆಯುತ್ತಿವೆ ಎಂಬ ಉಹಾಪೋಹಗಳು ಎದ್ದಿದ್ದವು. ಇದಕ್ಕೆ ಪುಷ್ಟಿ ನೀಡುವಂತೆ ಎರಡು …
Read More »ಹೇಮಾವತಿಯಲ್ಲಿ ಮುಳುಗಿ, ಶಿವನ ಮುಡಿ ಸೇರಿದ ಗೌರಿ!
ಚಿಕ್ಕಮಗಳೂರು: ಮೊನ್ನೆ ಶುಕ್ರವಾರ ಸಂಭ್ರಮದಿಂದ ಬರಮಾಡಿಕೊಂಡಿದ್ದ ಗೌರಿಯನ್ನು ನಿನ್ನೆ ಹೆಂಗಳೆಯರು ಬೇಸರದಿಂದ ಕಳಿಸಿಕೊಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿಯಲ್ಲಿ ಗೌರಿಗೆ ಹೇಮಾವತಿ ನದಿ ತೀರದಲ್ಲಿ ಪೂಜೆ ಮಾಡಲಾಯಿತು. ಹೇಮಾವತಿ ತೀರದಲ್ಲಿ ಹತ್ತಾರು ಮಹಿಳೆಯರು ಮಂಗಳ ಹಾಡಿ ಗೌರಮ್ಮನನ್ನ ಭಾರವಾದ ಮನಸ್ಸಿನಿಂದಲೇ ಕಳುಹಿಸಿಕೊಟ್ಟರು. ಇದೇ ಸಂದರ್ಭದಲ್ಲಿ ತವರು ಮನೆಗೆ ಆಗಮಿಸಿದ ಮಹಿಳೆಯರು ಗೌರಿ ಪೂಜೆಯಲ್ಲಿ ಪಾಲ್ಗೊಂಡು ಸಂಭ್ರಮಪಟ್ಟರು. ಕಳೆದ ಕೆಲವು ದಿನಗಳ ಹಿಂದೆ ಉಕ್ಕಿ ಹರಿದಿದ್ದ ಹೇಮಾವತಿ, ಸದ್ಯ ಶಾಂತಳಾಗಿದ್ದು, ನೀರಿನ …
Read More »ಕೊರೋನಾ ಸೋಂಕಿಗೆ ಬಿಜೆಪಿ ಮುಖಂಡ ಬಲಿ
ಗಂಗಾವತಿ : ನಗರದ ಬಿಜೆಪಿ ಮುಖಂಡ ಹಾಗೂ ನಗರಸಭೆ ಮಾಜಿ ಸದಸ್ಯ ದೇವಪ್ಪ ಕಾಮದೊಡ್ಡಿ (45) ಅವರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಒಂದು ವಾರದ ಹಿಂದೆ ತೀವ್ರ ಉಸಿರಾಟ ತೊಂದರೆಗೆ ಒಳಗಾಗಿ ಹುಬ್ಬಳ್ಳಿ ಕೆಎಲ್‌ಇ ಸುಚಿರಾಯು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಬೆಳಗ್ಗೆ ನಿಧನರಾದರು. ಪತ್ನಿ, ಓರ್ವ ಪುತ್ರ, ಪುತ್ರಿ ಇದ್ದಾರೆ. ಈ ಹಿಂದೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರ ಆಪ್ತ ಬೆಂಬಲಿಗರಾಗಿದ್ದ ದೇವಪ್ಪ ಕಾಮದೊಡ್ಡಿ …
Read More »ಬಾಲೆಯರು ಬಾಲ್ಯದಿಂದ ಬೆಂಕಿಗೆ ನಾಲ್ಕು ತಿಂಗಳಲ್ಲಿ 107 ಬಾಲ್ಯವಿವಾಹ
ಬೆಂಗಳೂರು: ಲಾಕ್‌ಡೌನ್ ಅವಧಿಯಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚಾಗಿದೆ. ಲಾಕ್‌ಡೌನ್‌ನ ನಿರ್ಬಂಧಗಳಿಂದ ಉಂಟಾದ ಸ್ತಬ್ಧತೆಯ ಲಾಭ ಪಡೆದು ಹಲವು ಹೆಣ್ಣು ಮಕ್ಕಳಿಗೆ ಮದುವೆ ಮಾಡಲಾಗಿದೆ. ಲಾಕ್‌ಡೌನ್‌ಗಿಂತ ಹಿಂದಿನ ಅವಧಿಗೆ ಹೋಲಿಸಿದರೆ ಲಾಕ್‌ಡೌನ್ ದಿನಗಳಲ್ಲಿ ನಡೆದ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚು ಎಂದು ಅಂಕಿ ಅಂಶಗಳು ಹೇಳುತ್ತವೆ. ಬಾಲ್ಯ ವಿವಾಹ ಮಾಡಿಯೇ ತೀರಬೇಕು ಎಂದು ಹಟಕ್ಕೆ ಬಿದ್ದವರು ವಿವಿಧ ರೀತಿಯ ತಂತ್ರ, ಕುತಂತ್ರಗಳನ್ನು ಹೆಣೆದ ವರದಿಗಳು ರಾಜ್ಯದ ವಿವಿಧೆಡೆಯಿಂದ ಬಂದಿವೆ. ಮದುವೆ …
Read More »ಬ್ಯಾರಲ್‌ನಲ್ಲಿ ಹೋಗುತ್ತಿದ್ದವರ ನೆರವಿಗೆ ಬಂದ ಸಿಎಂ : ಸಿಕ್ತು ಬೋಟ್
ಅಥಣಿ : ಬೋಟ್ ಇಲ್ಲದೇ ಪ್ಲಾಸ್ಟಿಕ್ ಬ್ಯಾರೆಲ್‌ಗಳ ಮೇಲೆ ಕುಳಿತು ಪ್ರವಾಹದ ನೀರಿನಲ್ಲಿ ಸಾಗುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿಯಲ್ಲಿ ನೆರೆ ಸಂತ್ರಸ್ತರಿಗೆ (ಮಾಂಗ ವಸ್ತಿ ಜನರು) ಬೋಟ್ ವ್ಯವಸ್ಥೆ ಕಲ್ಪಿಸಲಾಗಿದೆ. ಕೃಷ್ಣಾ ನದಿ ಪ್ರವಾಹದಿಂದಾಗಿ ಹುಲಗಬಾಳಿ ಜಲಾವೃತವಾಗಿತ್ತು. ಇಲ್ಲಿಯ ಮಾಂಗ ವಸ್ತಿ ಜನರು ಬೋಟ್ ಇಲ್ಲದೇ ಪ್ಲಾಸ್ಟಿಕ್ ಬ್ಯಾರೆಲ್‌ಗಳ ಮೂಲಕ ಪ್ರವಾಹದ ನೀರಿನಲ್ಲಿ ಸಾಗುತ್ತಿದ್ದರು. ಈ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡಿತ್ತು. ಈ ವರದಿಯನ್ನು ಗಮನಿಸಿದ …
Read More »ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆ ಬಳಿಕ ಎಚ್ಚೆತ್ತಿರುವ ರಾಜ್ಯ ಸರ್ಕಾರ
ಬೆಂಗಳೂರು/ಮೈಸೂರು: ಕೊರೊನಾ ವಾರಿಯರ್ ಆಗಿದ್ದ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆ ಬಳಿಕ ಎಚ್ಚೆತ್ತಿರುವ ರಾಜ್ಯ ಸರ್ಕಾರ ಸದ್ಯ ಡ್ಯಾಮೇಜ್ ಕಂಟ್ರೋಲ್‍ಗೆ ಮುಂದಾಗಿದೆ. ಕೋವಿಡ್ ವಾರಿಯರ್ಸ್ ಮೇಲಿನ ಒತ್ತಡ ನಿವಾರಣೆಗೆ ಸರ್ಕಾರ ದೂರು ಪೆಟ್ಟಿಗೆ ವ್ಯವಸ್ಥೆ ಏರ್ಪಡಿಸುವ ಚಿಂತನೆಯಲ್ಲಿದೆ. ಕೊರೊನಾ ವಾರಿಯರ್ಸ್ ಮೇಲಿನ ಒತ್ತಡ ನಿವಾರಣೆಗೆ ಸರ್ಕಾರದ ಕಂಪ್ಲೆಂಟ್ ಬಾಕ್ಸ್ ವ್ಯವಸ್ಥೆ ಮಾಡುವ ಕುರಿತು ಚರ್ಚೆ ನಡೆಸುತ್ತಿದೆ. ಕೊರೊನಾ ಸೇವೆ ನಿರ್ವಹಿಸುತ್ತಿರುವ ಇಲಾಖೆ, ಕಚೇರಿ, ಆಸ್ಪತ್ರೆಗಳಲ್ಲಿ ಪ್ರತ್ಯೇಕ ದೂರು ಪೆಟ್ಟಿಗೆ ಏರ್ಪಡಿಸಿ …
Read More »ಡಾಕ್ಟರ್ ನಿವೇದಿತಾ ಮತ್ತು ಡಾಕ್ಟರ್ ಸವಿತಾ ಅವರು ಹಾಸನ ರಕ್ತನಿಧಿಗೆ ಬಂದು ಬಿ – ನೆಗೆಟಿವ್ ರಕ್ತವನ್ನು ರಕ್ತದಾನ ಮಾಡಿ ಜೀವ ಉಳಿಸುವ ಕೆಲಸ ಮಾಡಿದ್ದಾರೆ .
ಹಾಸನ: ಇಂದು ಹಾಸನದ ಎಸ್.ಡಿ.ಎಂ.ಎ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಶಂಕ್ರಪ್ಪ ಎಂಬುವರಿಗೆ ರಕ್ತದ ಅಂಶ ಕಡಿಮೆ ಇರುವ ಕಾರಣ ಬಿ – ನೆಗೆಟಿವ್ ರಕ್ತ ಅವಶ್ಯಕತೆ ಇದೆ ಎಂದು ಹಾಸನದಲ್ಲಿ ಇರುವ ಎಲ್ಲಾ ರಕ್ತ ನಿಧಿಗಳಿಗೆ ಭೇಟಿ ನೀಡಿದರು ಕೂಡ ಬಿ – ನೆಗೆಟಿವ್ ರಕ್ತ ದೊರೆಯಲಿಲ್ಲ. ಹಾಗೂ ಶಂಕ್ರಪ್ಪ ಅವರು ಬೆಂಗಳೂರಿನವರಾಗಿದ್ದಾರೆ ಅವರ ಸಂಬಂಧಿಕರು ಕೂಡ ಬೇಗ ಮುಂದೆ ಬರಲು ಆಗದ ಕಾರಣ , ಅಲ್ಲೇ ಕಾರ್ಯನಿರ್ವಹಿಸುತ್ತಿದ್ದ ಡಾಕ್ಟರ್ಸ್ …
Read More »‘ಅಣ್ಣ ಮತ್ತೊಬ್ಬ ತಾಯಿ ಇದ್ದ ಹಾಗೆ. ಧನ್ಯವಾದ
ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡಾಲಿ ಎಂದೇ ಖ್ಯಾತಿಯಾಗಿರುವ ನಟ ಧನಂಜಯ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಟಾರ್ ನಟರು, ನಿರ್ದೇಶಕರು ಸೋಶಿಯಲ್ ಮೀಡಿಯಾದ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಕೊರೊನಾ ಕಾರಣದಿಂದ ಧನಂಜಯ್ ಈ ಬಾರಿ ಸರಳವಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೂ ಮೊದಲೇ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡುವುದು ಬೇಡ ಎಂದು ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಅದರಂತೆಯೇ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕವೇ ನೆಚ್ಚಿನ ನಟನಿಗೆ ಶುಭಾಶಯ …
Read More »ಕಳೆದ ರಾತ್ರಿ ಸರಣಿ ಕಳ್ಳತನ ನಡೆದಿದ್ದು, ಕಾಂಪ್ಲೆಕ್ಸ್ ನಲ್ಲಿದ್ದ ಅಂಗಡಿಗಳ ಬೀಗ ಮುರಿದು ಕಳ್ಳತನ
ಕೋಲಾರ: ನಗರದಲ್ಲಿ ಕೊರೊನಾ ಆತಂಕದ ಮಧ್ಯೆ ಕಳ್ಳರ ಕೈಚಳಕ ಆರಂಭವಾಗಿದ್ದು, ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ. ಕೋಲಾರ ನಗರದ ಅರ್ಬನ್ ಬ್ಯಾಂಕ್ ಕಾಂಪ್ಲೆಕ್ಸ್ ನಲ್ಲಿ ಕಳೆದ ರಾತ್ರಿ ಸರಣಿ ಕಳ್ಳತನ ನಡೆದಿದ್ದು, ಕಾಂಪ್ಲೆಕ್ಸ್ ನಲ್ಲಿದ್ದ ಅಂಗಡಿಗಳ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಅದೃಷ್ಟವಶಾತ್ ಅರ್ಬನ್ ಬ್ಯಾಂಕ್ ಹೊರತುಪಡಿಸಿ ಉಳಿದಂತೆ ಮೆಡಿಕಲ್ ಸ್ಟೋರ್, ಡೆಂಟಲ್ ಕ್ಲಿನಿಕ್, ಟೈಲರ್ ಅಂಗಡಿ, ಫೈನಾನ್ಸ್ ಆಫೀಸ್ ಸೇರಿದಂತೆ ಎಂಟು ಅಂಗಡಿಗಳಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಅಂಗಡಿಗಳಲ್ಲಿ …
Read More »ರೈತನ ಮಗನ ಓದಿಸುವ ಜವಾಬ್ದಾರಿಯನ್ನು ವಹಿಸಿಕೊಂಡ ಸುಧಾ ಮೂರ್ತಿಯವರು
ಬೆಂಗಳೂರು: ಇನ್ಫೋಸಿಸ್ ಸಂಸ್ಥಾಪಕಿ ಸುಧಾ ಮೂರ್ತಿಯವರು ಜಮಖಂಡಿಯ ಪ್ರತಿಭಾನ್ವಿತ ರೈತನ ಮಗನ ಓದಿಸುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಸುಧಾ ಮೂರ್ತಿಯವರು ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಪ್ರವಾಹದಲ್ಲಿ ಸಿಲುಕಿ ನಲುಗಿದ್ದ ಉತ್ತರ ಕರ್ನಾಟಕ ಜನರಿಗೆ ಸಹಾಯ ಮಾಡಿದ್ದರು. ಈಗ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಬಡ ವಿದ್ಯಾರ್ಥಿಗಳ ನೆರವಿಗೆ ನಿಂತಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸವಲಗಿ ಗ್ರಾಮದ ರೈತನ ಮಗ ಸಂಜು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ …
Read More »
Laxmi News 24×7