Breaking News

ಜಿಲ್ಲೆ

ಅಂಬ್ಯುಲೆನ್ಸ್ ನಲ್ಲಿ ಚಿನ್ನದ ಗಣಿ ಕಾರ್ಮಿಕರ ಓಡಾಟ

ರಾಯಚೂರು: ಲಿಂಗಸುಗೂರಿನ ಹಟ್ಟಿ ಚಿನ್ನದ ಗಣಿಯಿಂದ ದೇವದುರ್ಗದ ಊಟಿ ಚಿನ್ನದ ಗಣಿಗೆ ಕೆಲಸಕ್ಕಾಗಿ ಕಾರ್ಮಿಕರನ್ನ ಅಂಬ್ಯುಲೆನ್ಸ್‍ನಲ್ಲಿ ನಿತ್ಯ ಕರೆದ್ಯೊಯ್ಯಲಾಗುತ್ತಿದೆ. ಅಂಬ್ಯುಲೆನ್ಸ್ ಪದೇ ಪದೇ ಓಡಾಡುವುದನ್ನ ಗಮನಿಸಿ ಅನುಮಾನಗೊಂಡ ದೇವದುರ್ಗ ತಾಲೂಕಿನ ವಂದಲಿ ಗ್ರಾಮಧ ಜನ ಅಂಬ್ಯುಲೆನ್ಸ್ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೋಗಿಗಳನ್ನ ಸಾಗಿಸಲು ಎಷ್ಟು ಬಾರಿ ನಿಲ್ಲಿಸಲು ಯತ್ನಿಸಿದರು ನಿಲ್ಲದ ಅಂಬ್ಯುಲೆನ್ಸ್ ನಿಯಮ ಬಾಹಿರವಾಗಿ ಕಾರ್ಮಿಕರನ್ನ ಸಾಗಣೆ ಮಾಡುತ್ತಿರುವುದಕ್ಕೆ ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ. ಗ್ರಾಮೀಣ ರಸ್ತೆಯಲ್ಲಿ ಸೈರನ್ ಹಾಕಿಕೊಂಡು ಅತೀ ವೇಗವಾಗಿ …

Read More »

ಸತೀಶಜಾರಕಿಹೊಳಿ ಪೌಂಡೇಶನ್ ಕೃತಕ ಆಮ್ಲಜನಕ ಪೂರೈಸುವ ಕೆಲಸ ಮಾಡುತ್ತಿದೆ.

ಗೋಕಾಕ: ಕೊರೊನಾ ಸೋಂಕಿನಿಂದ ಉಸಿರಾಟ  ತೊಂದರೆ ಅನುಭವಿಸುತ್ತಿವವರಿಗೆ  ಉಚಿತ  ಆಕ್ಸಿಜನ್ ಸಿಲಿಂಡರ್ ವಿತರಿಸುವ ಮೂಲಕ ಸತೀಶ ಜಾರಕಿಹೊಳಿ ಫೌಂಡೇಶನ್  ಗಮನ ಸೆಳೆಯುತ್ತಿದೆ. ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಪುತ್ರ ರಾಹುಲ್, ಹಾಗೂ ಪುತ್ರಿ ಪ್ರಿಯಾಂಕಾ  ಆಕ್ಸಿಜನ್ ಸಿಲಿಂಡರ್ ವಿತರಿಸಿದರು. ಕೋವಿಡ್ 19 ನಿಂದ ಬಳಲುತ್ತಿರುವ,  ಕೆಲವರು ಹಣವಿಲ್ಲದೇ  ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದು,  ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿರುವವರಿಗೆ  ಗಿ ಸತೀಶ ಜಾರಕಿಹೊಳಿ ಪೌಂಡೇಶನ್ ಕೃತಕ …

Read More »

ಗಣೇಶ  ಹಬ್ಬ ಮುಗಿದ ಬಳಿಕ ಪೀರಣವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿವಾದ ಬಗೆಹರಿಸಲಾಗುವುದು

ಬೆಳಗಾವಿ: ಗಣೇಶ  ಹಬ್ಬ ಮುಗಿದ ಬಳಿಕ ಪೀರಣವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ವಿವಾದ ಬಗೆಹರಿಸಲಾಗುವುದು  ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ  ಅವರು ಭರವಸೆ ನೀಡಿದ್ದಾರೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ವಿಚಾರವಾಗಿ   ಎಂಎಲ್ ಸಿ ವಿವೇಕರಾವ್ ಪಾಟೀಲ್,  ಹಾಗೂ ಹಾಲುಮತದ ಹಲವು ನಾಯಕರು ಇಂದು ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಪ್ರಕರಣ ಇತ್ಯರ್ಥ ಪಡೆಸಿ ಜಿಲ್ಲಾಡಳಿತ ವತಿಯಿಂದಲೇ ಮೂರ್ತಿ ಸ್ಥಾಪನೆ ಮಾಡುವಂತೆ  ಒತ್ತಡ …

Read More »

 ಶ್ರಾವಣ ಮಾಸ ಮುಗಿಯುತ್ತಿದ್ದಂತೆ ಜನ ಮಾಂಸದ ಅಂಗಡಿಗಳ ಮುಂದೆ

ಬೆಂಗಳೂರು: ಶ್ರಾವಣ ಮಾಸ ಮುಗಿಯುತ್ತಿದ್ದಂತೆ ಜನ ಮಾಂಸದ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಂತು ಮಾಂಸ ಖರೀದಿಸುತ್ತಿದ್ದು, ಒಂದು ತಿಂಗಳಿಂದ ಬಿಕೋ ಎನ್ನುತ್ತಿದ್ದ ಮಟನ್ ಅಂಗಡಿಗಳು ಇಂದು ಫುಲ್ ಆಗಿವೆ.ಕೊರೊನಾ ನಿಯಮಗಳನ್ನು ಪಾಲನೆ ಮಾಡುತ್ತಲೇ ಸಾಲುಗಟ್ಟಿ ನಿಂತು ಗ್ರಾಹಕರು ಮಾಂಸ ಖರೀದಿಸುತ್ತಿದ್ದಾರೆ. ಸಾಮಾಜಿಕ ಅಂತರ, ಮಾಸ್ಕ್ ಮತ್ತು ಸೈನಿಟಸರ್ ಬಳಸುತ್ತಿದ್ದಾರೆ. ಈ ಮೂಲಕ ಕೊರೊನಾ ನಿಯಮಗಳನ್ನು ಪಾಲಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಶ್ರಾವಣ ಮಾಸ ಹಿನ್ನೆಲೆ ಕಳೆದ ನಾಲ್ಕು ವಾರದಿಂದ ಮಟನ್ ಶಾಪ್ ಗಳು …

Read More »

ದುಡ್ಡು ಕೊಟ್ರೆ ರಾಜ್ಯಕ್ಕೆ ಪಾಸ್ ಇಲ್ಲದಿದ್ರು ಸಿಗುತ್ತೆ ಎಂಟ್ರಿ

ಬೆಂಗಳೂರು: ತಮಿಳುನಾಡಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದು, ಅಲ್ಲಿನ ಜನಕ್ಕೆ ಪಾಸ್ ಇದ್ದರೆ ಮಾತ್ರ ಕರ್ನಾಟಕಕ್ಕೆ ಪ್ರವೇಶ ಸಿಗುತ್ತದೆ. ಆದರೆ ಅಲ್ಲಿನ ಪೊಲೀಸರಿಗೆ ಸ್ವಲ್ಪ ಹಣ ಕೊಟ್ಟರೆ ಯಾವುದೇ ಪಾಸ್ ಇಲ್ಲದಿದ್ದರೂ ರಾಜ್ಯಕ್ಕೆ ಎಂಟ್ರಿ ಕೊಡಿಸುತ್ತಾರೆ. ಕರ್ನಾಟಕ ಸರ್ಕಾರದ ನಿರ್ಲಕ್ಷ ತಮಿಳುನಾಡು ಪೊಲೀಸರಿಗೆ ವರದಾನವಾಗಿದೆ. ಬೆಂಗಳೂರು ಹೊರವಲಯ ಆನೇಕಲ್ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ತಳಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರಿಗೆ ಹಣ ನೀಡಿದ್ರೆ ಕರ್ನಾಟಕ ಪ್ರವೇಶಿಸಬಹುದು. ತಮಿಳುನಾಡಿನಲ್ಲಿ ಕೊರೊನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆ …

Read More »

ಗಣಪನ ಅವತಾರದಲ್ಲಿ ಜೂ.ಯಶ್ ಮಿಂಚಿಂಗ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಆಗಾಗ ತಮ್ಮ ಮಕ್ಕಳ ಫೋಟೋಗಳನ್ನು ಸೋಶಿಯಲ್ ಮಿಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಐರಾ ಮತ್ತು ಜೂ.ಯಶ್ ಫೋಟೋಗಳನ್ನ ಶೇರ್ ಮಾಡಿದ ಕ್ಷಣಾರ್ಧದಲ್ಲಿ ವೈರಲ್ ಆಗುತ್ತೆ. ಇದೀಗ ನಟ ಯಶ್ ಪುತ್ರ ಗಣಪನ ಅವತಾರದಲ್ಲಿ ಮಿಂಚಿದ್ದಾನೆ. ಇತ್ತೀಚಿಗೆ ಕೃಷ್ಣ ಜನ್ಮಾಷ್ಟಮಿ ದಿನ ಐರಾ ಮತ್ತು ಜೂನಿಯರ್ ಯಶ್‍ಗೆ ರಾಧೆ ಹಾಗೂ ಕೃಷ್ಣನ ಉಡುಪು ಧರಿಸಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. …

Read More »

ಇಬ್ಬರು ಶಾಸಕರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು : ಹಿರಿಯೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮತ್ತು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕೊರೋನಾ ಪಾಸಿಟಿವ್ ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ತಮ್ಮ ಫೇಸ್ ಬುಕ್ ಪುಟದಲ್ಲಿ ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ. ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ …

Read More »

10 ತರಗತಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಬೆಂಗಳೂರು: ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅನುತ್ತೀರ್ಣಗೊಂಡ ಹಾಗೂ ಕೊರೊನಾ ಕಾರಣಕ್ಕೆ ಪರೀಕ್ಷೆ ಬರೆಯದಿರುವ ಅಭ್ಯರ್ಥಿಗಳಿಗಾಗಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಕೊರೊನಾ ಕಾರಣಕ್ಕೆ ಪರೀಕ್ಷೆ ಬರೆಯದಿರುವ ಅಭ್ಯರ್ಥಿಗಳಿಗೆ ಇದು ಪ್ರಥಮ ಪ್ರಯತ್ನ ಎಂದು ಪರಿಗಣಿಸಲಾಗುತ್ತಿದ್ದು, ಅಂಥವರು ಹೊಸದಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಅನುತ್ತೀರ್ಣಗೊಂಡ ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಬೇಕಾಗುತ್ತದೆ. ಪರೀಕ್ಷೆಗಳು ಬೆಳಗ್ಗೆ 10.30 ರಿಂದ ಆರಂಭವಾಗಲಿದ್ದು, ವೇಳಾಪಟ್ಟಿ ಈ ಕೆಳಗಿನಂತಿದೆ. ಸೆಪ್ಟಂಬರ್ 21 …

Read More »

ಆ. 24,25 ರಂದು ಬಾಗಲಕೋಟೆ, ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಡಿಕೆಶಿ ಭೇಟಿ

ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸೋಮವಾರದಿಂದ ಎರಡು ದಿನಗಳ ಕಾಲ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಸೋಮವಾರದಿಂದ ಎರಡು ದಿನಗಳ ಕಾಲ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಿಗೆ ಭೇಟಿ ನೀಡಿ ಪ್ರವಾಹ ಪೀಡಿತ ಪ್ರದೇಶವನ್ನು ವೀಕ್ಷಿಸಲಿದ್ದಾರೆ. ಸೋಮವಾರದಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಬೆಳಗಾವಿಗೆ ವಿಮಾನದ ಮೂಲಕ ಬಂದಿಳಿಯಲಿದ್ದು, ನಂತರ ಅವರು ಬೆಳಗಾವಿ ಜಿಲ್ಲೆಯಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಬಳಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಕಾರ್ಯಕಾರಿ …

Read More »

ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಆಗಸ್ಟ್ 27ರವರೆಗೂ ಭಾರಿ ಮಳೆ.

ಬೆಂಗಳೂರು: ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಆಗಸ್ಟ್ 27ರವರೆಗೂ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, …

Read More »