ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನ ಮಾಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕರಿಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ನೇರ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು ಜಿಲ್ಲೆಯ ಬಿಜೆಪಿ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ನಿಮಗೆ ಸಚಿವ ಸ್ಥಾನ ಬೇಕಾದರೆ ನೀವು ಸಚಿವರಾಗಿ. ಆದರೆ ಜಿಲ್ಲಾ …
Read More »ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ
ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆ ಈ ಬಾರಿ ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧ ವಿಧಿಸಿದ್ದ ಸರಕಾರ ವ್ಯಾಪಕ ವಿರೋಧದ ನಂತರ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಈಗ ಗಣೇಶೋತ್ಸವಕ್ಕೆ ಸಂಬಂಧಪಟ್ಟಂತೆ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದ್ದು, ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿಯನ್ನು ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೊರೊನಾ ಪರಿಸ್ಥಿತಿ ಹಿನ್ನೆಲೆ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರಕಾರ ಮಾರ್ಗಸೂಚಿಗಳನ್ನು …
Read More »ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಬಿಸಿಯೂಟ ಸಿಬ್ಬಂದಿ ಪ್ರತಿಭಟನೆ
ಶಿವಮೊಗ್ಗ: ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಬಿಸಿಯೂಟ ಸಿಬ್ಬಂದಿ ಜಿಲ್ಲೆಯಲ್ಲಿ ಇಂದು ಪ್ರತಿಭಟನೆ ನಡೆಸಿದರು. ನಗರದ ಕೋರ್ಟ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ನಡೆಸಿದ ಸಿಬ್ಬಂದಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೊರೊನಾ ಬಂದ ದಿನದಿಂದ ಬಿಸಿಯೂಟ ಸಿಬ್ಬಂದಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಬಿಸಿಯೂಟ ಸಿಬ್ಬಂದಿಗೆ ವೇತನ ನೀಡುವಂತೆ ಹಲವು ದಿನದಿಂದ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇವೆ. ಅಲ್ಲದೇ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದೇವೆ. ಆದರೂ ಸರ್ಕಾರ ಮಾತ್ರ ನಿರ್ಲಕ್ಷ್ಯ ವಹಿಸುತ್ತಿದೆ …
Read More »ಬೆಂಗಳೂರಿನ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ.
ಬೆಂಗಳೂರಿನ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಷ್ಟದ ಅಂದಾಜು ಮಾಡಲಾಗಿದೆ. ಇದುವರೆಗಿನ ಲೆಕ್ಕದ ಪ್ರಕಾರ 9 ಕೋಟಿ 50 ಲಕ್ಷ ರೂ.ಗೂ ಹೆಚ್ಚು ನಷ್ಟವಾಗಿದೆ. ಆಸ್ತಿ ಪಾಸ್ತಿ ನಷ್ಟ, ವಾಹನಗಳ ನಷ್ಟಗಳ ಬಗ್ಗೆ ಅಂದಾಜು ಹಾಕಲಾಗಿದೆ. ಸದ್ಯ ದಾಖಲಾಗಿರುವ ಎಫ್‌ಐಆರ್ ಗಳ ಅನ್ವಯ ಲೆಕ್ಕ ಹಾಕಲಾಗಿದೆ. ಮುಂದಿನ ದಿನಗಳಲ್ಲಿ ನಷ್ಟದ ಅಂದಾಜು ಇನ್ನೂ ಹೆಚ್ಚಾಗಬಹುದು ಎಂದು ಹೇಳಲಾಗಿದೆ. ಬೆಂಗಳೂರಿನ …
Read More »ಕುಂದಾನಗರಿಯಲ್ಲಿ ವರುಣನ ಅಬ್ಬರ : ಮಹಾಮಳೆಗೆ ಧರೆಗುರುಳಿದ ಮನೆಗಳು
ಬೆಳಗಾವಿ: ಬೆಳಗಾವಿಯಲ್ಲಿ ಜಿಲ್ಲಿಯಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ವರುಣನ ಆರ್ಭಟಕ್ಕೆ ಜಿಲ್ಲೆಯ ಜನರು ಹೈರಾಣಾಗಿ ಹೋಗಿದ್ದಾರೆ. ಹಲವೆಡೆ ಮಹಾಮಳೆಗೆ ಅವಾಂತರಗಳು ಸೃಷ್ಟಿಯಾಗಿವೆ. ಇತ್ತ ಬಿಟ್ಟು ಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಮನೆಗಳು ಧರೆಗುರುಳಿದ್ದು, ಕುಟುಂಬಸ್ಥರು ಕಂಗಾಲಾಗಿದ್ದಾರೆ. ಗ್ರಾಮದ ರುದ್ರಪ್ಪ ಕುಂಬಳಿ ಮತ್ತು ಬಸಲಿಂಗಪ್ಪ ಕುಂಬಳಿ ಎಂಬುವವರಿಗೆ ಸೇರಿದ ಮನೆಗಳು ಬಿದ್ದಿವೆ. ಇತ್ತ ಹಾನಿಗೊಳಗಾದ ಮನೆಯಲ್ಲೇ ಕುಟುಂಬಸ್ಥರು ಜೀವ ಕೈಯ್ಯಲ್ಲಿ ಹಿಡಿದು …
Read More »ಸರ್ಕಾರದ ಮಾರ್ಗಸೂಚಿಯನುಸಾರ ಗಣೇಶೋತ್ಸವ ಆಚರಿಸಲು ಬೀದರ್ ಜಿಲ್ಲಾಧಿಕಾರಿ ಮನವಿ
ಬೀದರ್ : ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದಶಿಗಳು ಆದೇಶ ಹೊರಡಿಸಿ ತಿಳಿಸಿದ ಮಾರ್ಗಸೂಚಿನುಸಾರ ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೀದರ ಜಿಲ್ಲೆಯ ಗಣೇಶೋತ್ಸವ ಮಂಡಳದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಕೋವಿಡ್-19 ಸೋಂಕು ಹರಡುತ್ತಿರುವುದರಿಂದ ಗಣೇಶೋತ್ಸವವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ಆಚರಿಸಲು ಮನವಿ ಮಾಡಿದರು. ಧರ್ಮದ ವಿರುದ್ಧ ಮಾಡಿರುವ ಮಾರ್ಗಸೂಚಿ ಎಂದು …
Read More »ಬೆಳಗಾವಿ ಜಿಲ್ಲೆಗೆ ಘಟಪ್ರಭಾ ಜಲಕಂಟಕ..!
ಬೆಳಗಾವಿ: ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಕಳೆದ ವರ್ಷ ಭೀಕರ ಪ್ರಳಯಕ್ಕೆ ತತ್ತರಿಸಿದ್ದ ಗೋಕಾಕ್ ನಗರ ಈ ವರ್ಷವೂ ಪ್ರವಾಹ ಪರಿಸ್ಥಿತಿಯನ್ನ ಅನುಭವಿಸುತ್ತಿದೆ. ಬೆಳಗಾವಿ ಜಿಲ್ಲೆಯ ನಗರಕ್ಕೆ ಘಟಪ್ರಭಾ ಕಂಟಕ ಎದುರಾಗಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಗೋಕಾಕ್‌ನ ಮಹಾಲಿಂಗೇಶ್ವರ ನಗರಕ್ಕೆ ನೀರು ನುಗ್ಗಿದ್ದು, 3 ಕಾಲೋನಿಗಳು ಸಂಪೂರ್ಣ ಜಲಾವೃತವಾಗಿವೆ. ಮನೆಗಳು, ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದ ಹಿನ್ನೆಲೆ ಸ್ಥಳಾಂತರಕ್ಕೆ ಜನ ಪರಾಡುತ್ತಿರುವ ಪರಸ್ಥಿತಿ ಎದುರಾಗಿದೆ. …
Read More »ದೇಶದಲ್ಲಿ 27 ಲಕ್ಷ ಗಡಿದಾಟಿದ ಕೋವಿಡ್ 19 ಸೋಂಕಿತರ ಸಂಖ್ಯೆ
ನವದೆಹಲಿ: ದೇಶದಲ್ಲಿ ಕೋವಿಡ್ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 55,079 ಹೊಸ ಕೇಸ್ಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 27,02,743ಕ್ಕೆ ಏರಿಕೆಯಾಗಿದ್ರೆ, 876 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 51,797ಕ್ಕೆ ಬಂದು ನಿಂತಿದೆ. 27,02,743 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 19,77,780ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 6,73,166 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ …
Read More »ರಾಜ್ಯದಲ್ಲಿ ಕಳೆದ ಒಂದು ತಿಂಗಳಲ್ಲಿ ಕೋವಿಡ್ ಸೋಂಕಿಗೆ 3,030 ಮಂದಿ ಬಲಿ
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ತಿಂಗಳಲ್ಲಿ ಸರಿಸುಮಾರು ಮೂರು ಸಾವಿರದಷ್ಟು ಕೋವಿಡ್ ವೈರಸ್ ಸೋಂಕಿತರ ಸಾವಾಗಿದೆ. ಈ ಮೂಲಕ ಒಟ್ಟಾರೆ ಸೋಂಕಿಗೆ ಬಲಿಯಾದವರ ಸಂಖ್ಯೆ ನಾಲ್ಕು ಸಾವಿರ ಗಡಿದಾಟಿದೆ. ಸೋಮವಾರ 115 ಮಂದಿ ಸೋಂಕು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದು ವರದಿಯಾಗಿದ್ದು, ಒಟ್ಟಾರೆ ಸಂಖ್ಯೆ 4062ಕ್ಕೆ ಏರಿಕೆಯಾಗಿದೆ. ಒಂದು ತಿಂಗಳ ಹಿಂದಷ್ಟೆ (ಜುಲೈ 16ಕ್ಕೆ) ಸೋಂಕಿತರ ಸಾವಿನ ಸಂಖ್ಯೆ ಒಂದು ಸಾವಿರ ಗಡಿದಾಟಿತ್ತು. ಆ ನಂತರ ನಿತ್ಯ ಸರಾಸರಿ ನೂರು ಸೋಂಕಿತರು ಸಾವು …
Read More »ಮುಖ್ಯ ಶಿಕ್ಷಕರನ್ನು ಕೊರೊನಾ ಸೇವೆಯಿಂದ ಕೈ ಬಿಡಿ- ಸುರೇಶ್ ಕುಮಾರ್
ಬೆಂಗಳೂರು: ಶಾಲಾ ಮುಖ್ಯೋಪಾಧ್ಯಾಯರನ್ನು ಕೋವಿಡ್ ಸೇವೆಯಿಂದ ಮುಕ್ತಿಗೊಳಿಸಲು ಸಚಿವ ಸುರೇಶ್ ಕುಮಾರ್ ಸೂಚಿಸಿದ್ದಾರೆ. ಈ ಸಂಬಂಧ ಆಯುಕ್ತರಿಗೆ ಪತ್ರ ಬರೆದಿರುವ ಸಚಿವರು, ಕೋವಿಡ್ ಸಂದರ್ಭದಲ್ಲಿ ಸರ್ಕಾರಿ ಶಾಲಾ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರುಗಳನ್ನು ತುರ್ತು ಸೇವೆಗೆ ಬಳಸಿಕೊಳ್ಳಲಾಗಿದೆ. ಶೈಕ್ಷಣಿಕ ಚಟುವಟಿಕೆಗಳಿಗೆ ಶಾಲೆಗಳಲ್ಲಿ ಶಿಕ್ಷಕರ, ವಿಶೇಷವಾಗಿ ಮುಖ್ಯ ಶಿಕ್ಷಕರ ಅಲಭ್ಯತೆಯ ಹಿನ್ನೆಲೆಯಲ್ಲಿ ಪ್ರತಿಕೂಲ ಪರಿಣಾಮವನ್ನು ಬೀರುತ್ತಿದೆ ಎಂದು ಬರೆದಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳ ಕಲಿಕೆಯನ್ನು ಮುಂದುವರಿಸುವ ದೂರದೃಷ್ಟಿ ಯೋಜನೆಯಾದ ವಿದ್ಯಾಗಮನ ಅನುಷ್ಠಾನ, ಮಧ್ಯಾಹ್ನ ಉಪಹಾರ …
Read More »
Laxmi News 24×7