ಹಾಸನ: ಎಲ್ಲೆಂದರಲ್ಲಿ ಕಸ ಬಿಸಾಡುತ್ತಿದ್ದವರಿಗೆ ಹಾಸನ ಮಹಾನಗರಪಾಲಿಕೆ ಸಿಬ್ಬಂದಿ ತಕ್ಕ ಪಾಠ ಕಲಿಸಿದ್ದಾರೆ. ಕಸ ಬಿಸಾಡಿದ್ದವರ ಮನೆಯ ಕಾಂಪೌಂಡ್ ಒಳಗೆ ಒಂದು ಲೋಡ್ ಕಸವನ್ನು ಸಿಬ್ಬಂದಿ ಸುರಿದಿದ್ದಾರೆ. ಹಾಸನ ನಗರದ ಉದಯಗಿರಿ ಬಡಾವಣೆಗೆ ಹೋಗುವ ರಸ್ತೆಯ ಕರಿಯಪ್ಪ-ದ್ಯಾವಮ್ಮ ಎಂಬುವವರಿಗೆ ಸೇರಿದ ಮನೆಯವರು ರಸ್ತೆ ಬದಿ ಕಸ ಎಸೆಯುತ್ತಿದ್ದರು. ಹಲವು ಬಾರಿ ಮಹಾನಗರಪಾಲಿಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರ. ಆದರೂ ರಸ್ತೆ ಬದಿ ಕಸ ಎಸೆಯುತ್ತಿದ್ದರು. ಬೆಳಿಗ್ಗೆ ಪೌರಕಾರ್ಮಿಕರು ಒಂದು ಲೋಡ್ ಕಸವನ್ನು …
Read More »ಮಂಡ್ಯದ ಗ್ರಾಮ ಪಂಚಾಯ್ತಿ ಇ-ಖಾತೆಗಳಲ್ಲಿ ಅಕ್ರಮ
ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಭೂ ಅಕ್ರಮಗಳು ವ್ಯಾಪಕವಾಗಿ ಸದ್ದು ಮಾಡುತ್ತಿವೆ. ನಾಗಮಂಗಲದಲ್ಲಿ ಬಗರ್ ಹುಕುಂನಲ್ಲಿ ಕೋಟ್ಯಂತ್ಯರ ರೂಪಾಯಿ ಅಕ್ರಮವಾದ ಬೆನ್ನಲ್ಲೇ ಇದೀಗ ಮಂಡ್ಯದ ಗ್ರಾಮ ಪಂಚಾಯತಿಯಲ್ಲಿ ಮತ್ತೊಂದು ಅಕ್ರಮ ಬೆಳಕಿಗೆ ಬಂದಿದೆ. ಸರ್ಕಾರ ಮನೆ ಕಟ್ಟುವವರಿಗೆ ಎಲ್ಲಾ ಸವಲತ್ತುಗಳನ್ನ ನೀಡಬೇಕೆಂದು ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿಗಳ ಮೂಲಕ ಇ-ಖಾತೆಯನ್ನ ನೀಡುತ್ತಿದೆ. ಈ ಇ-ಖಾತೆಯನ್ನ ಮಂಡ್ಯದ ಇಂಡುವಾಳು ಗ್ರಾಮ ಪಂಚಾಯತಿಯಲ್ಲಿ ಅಧಿಕಾರಿಗಳು ಸಂಪೂರ್ಣವಾಗಿ ದುರುಪಯೋಗ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. …
Read More »ಫಾರೂಕಿಯಾ ಕಾಲನಿಯಲ್ಲಿ ಯುಫಾರೂಕಿಯಾ ಕಾಲನಿಯಲ್ಲಿ ಯುಜಿಡಿ ಕಾಮಗಾರಿಗೆ ಚಾಲನೆ ನೀಡಿದ ಅಮಾನ್ ಸೇಠ್ಜಿಡಿ ಕಾಮಗಾರಿಗೆ ಚಾಲನೆ ನೀಡಿದ ಅಮಾನ್ ಸೇಠ್ ಫಾರೂಕಿಯಾ ಕಾಲನಿಯಲ್ಲಿ ಯುಜಿಡಿ ಕಾಮಗಾರಿ ಆರಂಭ 36 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಕಾರ್ಯ ದಶಕಗಳ ನೈರ್ಮಲ್ಯ ಸಮಸ್ಯೆಗೆ ಶಾಶ್ವತ ಮುಕ್ತಿ ಶಾಸಕರ ಪರವಾಗಿ ಚಾಲನೆ ನೀಡಿದ ಅಮಾನ್ ಸೇಠ್ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರ ನೇತೃತ್ವದಲ್ಲಿ ಅಭಿವೃದ್ಧಿ ಪರ್ವ ಮುಂದುವರೆದಿದ್ದು, ವೀರಭದ್ರ ನಗರದ ಫಾರೂಕಿಯಾ ಕಾಲನಿಯಲ್ಲಿ ಇಂದು ಒಳಚರಂಡಿ ವ್ಯವಸ್ಥೆಯ ಕಾಮಗಾರಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಶಾಸಕ ಆಸೀಫ್ ಸೇಠ್ ಅವರ ಪರವಾಗಿ ಯುವ ನಾಯಕ ಅಮಾನ್ ಸೇಠ್ ಅವರು ವೀರಭದ್ರ ನಗರದ 6ನೇ ಅಡ್ಡರಸ್ತೆ ಹಾಗೂ ಫಾರೂಕಿಯಾ ಕಾಲೋನಿಯಲ್ಲಿ ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಿದರು. ಇಡೀ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗಾಗಿ ಮಂಜೂರಾಗಿರುವ 36 ಕೋಟಿ ರೂಪಾಯಿ ಅನುದಾನದ ಅಡಿಯಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ನೂತನ ಯುಜಿಡಿ ವ್ಯವಸ್ಥೆಯಿಂದಾಗಿ ಈ ಭಾಗದ ನಿವಾಸಿಗಳ ದಶಕಗಳ ಕಾಲದ ನೈರ್ಮಲ್ಯ ಮತ್ತು ಚರಂಡಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ. ಕಾಮಗಾರಿ ಆರಂಭದ ವೇಳೆ ಸ್ಥಳೀಯ ನಿವಾಸಿಗಳೊಂದಿಗೆ ಸಂವಾದ ನಡೆಸಿದ ಅಮಾನ್ ಸೇಠ್, ಕ್ಷೇತ್ರದ ನಾಗರಿಕರ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸಲು ಶಾಸಕರು ಬದ್ಧರಾಗಿದ್ದಾರೆ ಎಂದು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಕಾರ್ಪೊರೇಟರ್ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು. ತಮ್ಮ ಭಾಗದ ಪ್ರಮುಖ ಸಮಸ್ಯೆಯಾಗಿದ್ದ ಒಳಚರಂಡಿ ಯೋಜನೆ ಈಗ ಅನುಷ್ಠಾನಕ್ಕೆ ಬರುತ್ತಿರುವುದಕ್ಕೆ ನಿವಾಸಿಗಳು ಸಂತಸ ವ್ಯಕ್ತಪಡಿಸಿದ್ದು, ಶಾಸಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರ ನೇತೃತ್ವದಲ್ಲಿ ಅಭಿವೃದ್ಧಿ ಪರ್ವ ಮುಂದುವರೆದಿದ್ದು, ವೀರಭದ್ರ ನಗರದ ಫಾರೂಕಿಯಾ ಕಾಲನಿಯಲ್ಲಿ ಇಂದು ಒಳಚರಂಡಿ ವ್ಯವಸ್ಥೆಯ ಕಾಮಗಾರಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಶಾಸಕ ಆಸೀಫ್ ಸೇಠ್ ಅವರ ಪರವಾಗಿ ಯುವ ನಾಯಕ ಅಮಾನ್ ಸೇಠ್ ಅವರು ವೀರಭದ್ರ ನಗರದ 6ನೇ ಅಡ್ಡರಸ್ತೆ ಹಾಗೂ ಫಾರೂಕಿಯಾ ಕಾಲೋನಿಯಲ್ಲಿ ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಿದರು. ಇಡೀ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗಾಗಿ ಮಂಜೂರಾಗಿರುವ 36 …
Read More »ಐತಿಹಾಸಿಕ ಲಕ್ಕುಂಡಿಯಲ್ಲಿ ಅಪರೂಪದ ತ್ರಿಮುಖ ನಾಗಶಿಲೆ ಪತ್ತೆ
ಗದಗ: ಐತಿಹಾಸಿಕ ಲಕ್ಕುಂಡಿಯಲ್ಲಿ 12ನೇ ದಿನ ಉತ್ಖನನದ ವೇಳೆ ಅಪರೂಪದ ತ್ರಿಮುಖ ನಾಗಶಿಲೆ ಪತ್ತೆಯಾಗಿದೆ. ಈ ನಾಗಶಿಲೆಯನ್ನ ಕಪ್ಪು ಬಳಪದ ಕಲ್ಲಿನಲ್ಲಿ ಕೆತ್ತನೆ ಮಾಡಲಾಗಿದೆ. ತ್ರಿಮುಖ, ಪಂಚಮುಖಿ, ಸಪ್ತಮುಖಿ ಶಿಲೆ ಇರುವ ಕಡೆ ನಿಧಿ.. ತ್ರಿಮುಖ ಸರ್ಪದ ಬಾಯಲ್ಲಿ ಬಿಳಿ ಅಥವಾ ಕೆಂಪು ರತ್ನ ಖಚಿತ ನಾಗಮಣಿ ಇರುತ್ತೆ ಎಂಬ ನಂಬಿಕೆ ಇದೆ. ಘಟ ಸರ್ಪ ವಿಷ್ಣುವಿನ ವಾಹನವಾಗಿದ್ದು, ಈ ತ್ರಿಮುಖ ಶಿಲೆ ಭಾರೀ ಕುತೂಹಲ ಮೂಡಿಸಿದೆ. ಇದಲ್ಲದೇ ಮುಕುಟಮಣಿ …
Read More »ಕಬ್ಬಿನ ಹುಲ್ಲು ಸಾಗಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶ – ಧಗ ಧಗ ಹೊತ್ತಿ ಉರಿದ ಟ್ರ್ಯಾಕ್ಟರ್
ಬಾಗಲಕೋಟೆ: ವಿದ್ಯುತ್ ತಂತಿ ತಗುಲಿದ್ದರಿಂದ ಕಬ್ಬಿನ ಹುಲ್ಲು (ರವದಿ) ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಧಗ ಧಗ ಹೊತ್ತಿ ಉರಿದ ಘಟನೆ ಜಮಖಂಡಿ ತಾಲ್ಲೂಕಿನ ಟಕ್ಕಳಕಿಯಲ್ಲಿ ನಡೆದಿದೆ. ವಸಂತ ಚೌಹಾಣ್ ಎಂಬುವರ ಟ್ರ್ಯಾಕ್ಟರ್, ಟ್ರೇಲರ್ ಎಲ್ಲವೂ ಸುಟ್ಟು ಹೋಗಿದೆ. ಬೆಂಕಿ ಆರಿಸಲು ಸ್ಥಳೀಯರು ಹರಸಾಹಸ ಪಟ್ಟರೂ ನಿಯಂತ್ರಣ ಮಾಡಲು ಸಾಧ್ಯವಾಗದೇ ನೋಡ ನೋಡುತ್ತಿದ್ದಂತೆ ಸುಟ್ಟುಹೋಗಿದೆ. ಟಕ್ಕಳಕಿಯಿಂದ ಸಾವಳಗಿ ಕಡೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಟ್ರ್ಯಾಕ್ಟರ್ ಎಂಜಿನ್ ಟ್ರೇಲರ್ ಹಾಗೂ ಸೊಪ್ಪು ಸೇರಿ …
Read More »ಯಳ್ಳೂರ ಗ್ರಾಮದ ವಿವಿಧ ಸಂಘಟನೆಗಳಿಂದ ಡಾ. ಪ್ರಭಾಕರ್ ಕೋರೆ ಅವರಿಗೆ ಅಭಿನಂದನಾ ಸನ್ಮಾನ
ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ್ ಕೋರೆ ಅವರಿಗೆ ‘ಪದ್ಮಶ್ರೀ’ ಪುರಸ್ಕಾರ ಲಭಿಸಿದ ಹಿನ್ನೆಲೆಯಲ್ಲಿ, ಯಳ್ಳೂರ ಗ್ರಾಮದ ವಿವಿಧ ಸಂಘಟನೆಗಳ ವತಿಯಿಂದ ಅವರಿಗೆ ಆತ್ಮೀಯ ಸನ್ಮಾನ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಮುಖಂಡರು ಕೋರೆ ಅವರ ನಿವಾಸಕ್ಕೆ ತೆರಳಿ ಗೌರವ ಸಲ್ಲಿಸಿದರು. ಸಾಹಿತ್ಯ, ಶಿಕ್ಷಣ ಹಾಗೂ ಸಮಾಜಸೇವೆಯಲ್ಲಿ ಗಣನೀಯ ಸಾಧನೆ ಮಾಡಿರುವ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ್ ಕೋರೆ ಅವರಿಗೆ ದೇಶದ ಪ್ರತಿಷ್ಠಿತ ‘ಪದ್ಮಶ್ರೀ’ ಪ್ರಶಸ್ತಿ ಘೋಷಣೆಯಾದ ಹಿನ್ನೆಲೆಯಲ್ಲಿ, ಯಳ್ಳೂರ …
Read More »ಗುತ್ತಿಗೆದಾರರಿಗೆ 38 ಸಾವಿರ ಕೋಟಿ ಬಾಕಿ, ಒಂದು ವಾರ ಕೆಲಸ ನಿಲ್ಲಿಸಿ ಪ್ರತಿಭಟನೆ: ಮಂಜುನಾಥ್ ಎಚ್ಚರಿಕೆ
ಬೆಂಗಳೂರು: ಗುತ್ತಿಗೆದಾರರಿಗೆ 38 ಸಾವಿರ ಕೋಟಿ ಬಾಕಿ ಇದೆ. ಸರ್ಕಾರ ನಮ್ಮ ಸಮಸ್ಯೆ ಬಗೆಹರಿಸಿಲ್ಲ. ಮಾ.5 ರಂದು ಬೃಹತ್ ಪ್ರತಿಭಟನೆ ಮಾಡ್ತಿದ್ದೇವೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ತಿಳಿಸಿದರು. ಚಾಮರಾಜಪೇಟೆ ಕ್ಷೇತ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗುತ್ತಿಗೆದಾರರಿಗೆ 38 ಸಾವಿರ ಕೋಟಿ ಬಾಕಿ ಇದೆ. ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಯಶಸ್ವಿಯಾಗಿ ಎರಡೂವರೆ ವರ್ಷ ಪೂರೈಸಿದ್ದಾರೆ. ಗುತ್ತಿಗೆದಾರರ ಸಮಸ್ಯೆಗಳನ್ನು ಬಗೆಹರಿಸಿಲ್ಲ. ಸಿಎಂಗೆ ಹಲವು ಬಾರಿ ಮನವಿ ಮಾಡಿದ್ರೂ …
Read More »ಹೆಲ್ಮೆಟ್ ಧರಿಸದೇ ಬೈಕ್ ಚಾಲನೆ – 6 ವರ್ಷದಲ್ಲಿ ಬರೋಬ್ಬರಿ 9.73 ಕೋಟಿ ದಂಡ ವಸೂಲಿ
ಬೀದರ್: ಜಿಲ್ಲೆಯಲ್ಲಿ ಕಳೆದ 6 ವರ್ಷಗಳಲ್ಲಿ ಹೆಲ್ಮೆಟ್ ಧರಿಸದೇ ಬೈಕ್ ಚಾಲನೆ ಮಾಡಿ ಅತೀ ಹೆಚ್ಚು ಸಂಚಾರ ನಿಮಯ ಉಲ್ಲಂಘಿಸಿದ್ದಾರೆ. ಈ ಮೂಲಕ ಬೀದರ್ ಸಂಚಾರಿ ಪೊಲೀಸರು ಬರೋಬ್ಬರಿ 9.73 ಕೋಟಿ ರೂ. ದಂಡ ವಸೂಲಿ ಮಾಡಿದ್ದಾರೆ. ಸಂಚಾರಿ ಪೊಲೀಸರು ರಸ್ತೆ ಸುರಕ್ಷತೆಗಾಗಿ ಹಗಲಿರುಳು ಶ್ರಮಿಸುತ್ತಿದ್ದರೂ ಕೂಡ ವಾಹನ ಸವಾರರು ಮಾತ್ರ ಸಂಚಾರಿ ನಿಯಮಗಳನ್ನು ಗಾಳಿಗೆ ತೂರುತ್ತಿದ್ದಾರೆ. ದಂಡದ ಮೊತ್ತ ಸಾವಿರ ದಾಟಿದರೂ ಸವಾರರ ಬೇಜವಾಬ್ದಾರಿ ಮಾತ್ರ ಕಡಿಮೆಯಾಗಿಲ್ಲ, ಹೆಲ್ಮೆಟ್ …
Read More »ಕರ್ನಾಟಕ ಹವಾಮಾನ ವರದಿ: ಇಂದು ಬೆಳಗಾವಿ, ವಿಜಯಪುರದಲ್ಲಿ ಬಿಸಿಲಿನ ತಾಪ ಹೆಚ್ಚಿರಲಿದೆ
ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಂದಿನ ಹವಾಮಾನ ಹೇಗಿದೆ? ಎಂಬುದನ್ನು ಇಲ್ಲಿ ಹೇಳಲಾಗಿದೆ. ಹವಾಮಾನ ವರದಿಗಳ ಪ್ರಕಾರ ಬೆಂಗಳೂರು ಚಳಿಯ ವಾತಾವರಣ ಇರಲಿದೆ. ರ್ನಾಟಕದಾದ್ಯಂತ ಹವಾಮಾನವು ಹೆಚ್ಚಾಗಿ ಶುಷ್ಕ ಮತ್ತು ಬಿಸಿಲಿನಿ೦ದ ಕೂಡಿರುತ್ತದೆ.ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ತಾಪಮಾನವು 30°C ನಿಂದ 34°C ವರೆಗೆ ಇರುವ ಸಾಧ್ಯತೆಯಿದೆ.ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 31°C ಮತ್ತು ಕನಿಷ್ಠ ತಾಪಮಾನ 18°C ದಾಖಲಾಗುವ ಸಂಭವವಿದೆ. ಆಕಾಶವು ಭಾಗಶಃ ಮೋಡಗಳಿಂದ ಕೂಡಿರುತ್ತದೆ. ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ …
Read More »ಕೌಟುಂಬಿಕ ಕಲಹಕ್ಕೆ ಗರ್ಭಿಣಿ ಸೊಸೆಯನ್ನ ಕೊಂದ ಮಾವ – ಆರೋಪಿ ಅರೆಸ್ಟ್
ರಾಯಚೂರು: ಹಣ ಕೊಡದಿದ್ದಕ್ಕೆ ಮಗನೋರ್ವ ಹೆತ್ತ ತಾಯಿಯನ್ನೇ ಅಟ್ಟಾಡಿಸಿ ಕೊಲೆ ಮಾಡಿದ್ದ ಘಟನೆ ಮಂಗಳವಾರ ನಗರದಲ್ಲಿ ನಡೆದಿತ್ತು. ಇಂದು ಇದೇ ರಾಯಚೂರಿನಲ್ಲಿ ಮತ್ತೊಂದು ಭೀಕರ ಘಟನೆ ನಡೆದಿದೆ. ಗರ್ಭಿಣಿ ಸೊಸೆಯನ್ನ ಕತ್ತು ಸೀಳಿ ಮಾವ ಕೊಲೆ ಮಾಡಿರುವಂತಹ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಅಣಗಿ ಗ್ರಾಮದಲ್ಲಿ ನಡೆದಿದೆ. ರೇಖಾ(25) ಕೊಲೆಯಾದ ಸೊಸೆ. ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೌಟುಂಬಿಕ ಕಲಹ: ಸೊಸೆ ಕೊಲೆ ಕೌಟುಂಬಿಕ ಕಲಹ ಹಿನ್ನೆಲೆ ಮಾವ …
Read More »
Laxmi News 24×7