Breaking News

ಜಿಲ್ಲೆ

ಮಹಾನಗರದಲ್ಲಿ ಶೀಘ್ರದಲ್ಲಿಯೇ 100 ಎಕರೆ ಪ್ರದೇಶದಲ್ಲಿ ಹುಬ್ಬಳ್ಳಿ ಮಾದರಿಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ: ಮಹಾನಗರದಲ್ಲಿ ಶೀಘ್ರದಲ್ಲಿಯೇ 100 ಎಕರೆ ಪ್ರದೇಶದಲ್ಲಿ ಹುಬ್ಬಳ್ಳಿ ಮಾದರಿಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ

ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಶೀಘ್ರದಲ್ಲಿಯೇ 100 ಎಕರೆ ಪ್ರದೇಶದಲ್ಲಿ ಹುಬ್ಬಳ್ಳಿ ಮಾದರಿಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ ಮಾಡಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ. ಬೆಳಗಾವಿಯ ಜಿಲ್ಲಾ ಕ್ರೀಡಾಂಗಣ ದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯ ಬಳಿಕ ಮಾದ್ಯಮಗೋಷ್ಠಿ ನಡೆಸಿದ ಅವರು,ಮುಂದಿನ ವರ್ಷ ಬೆಳಗಾವಿ ಜಿಲ್ಲಾ ಕ್ರೀಡಾಂಗಣದ ಲೀಜ್ ಅವಧಿ ಮುಗಿಯುತ್ತದೆ ಮುಂದಿನ ವರ್ಷ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮ ಎಲ್ಲಿ ನಡೆಯುತ್ತದೆ ಎಂದು ಮಾದ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಉತ್ತರಿಸಿದ …

Read More »

“ನಮಗಿಲ್ಲದ ಸೌಲಭ್ಯ ಹಾಲಿವುಡ್‍ಗೆ ನೀಡುವುದು ಸರಿಯಲ್ಲ”

ಬೆಂಗಳೂರು,- ಕನ್ನಡದ ನೆಲ- ಜಲ, ಸವಲತ್ತುಗಳನ್ನು ಬಳಸಿಕೊಂಡು ಬೃಹತ್ತಾಗಿ ಬೆಳೆದಿರುವ ಐಟಿಬಿಟಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ನಿರ್ದೇಶಕ ಮೀನಾ ನಾಗಾರಾಜ್ ಅವರಿಗೆ ತಾಕೀತು ಮಾಡಿದ್ದಾರೆ.   ಐಟಿಬಿಟಿ ಸಂಸ್ಥೆಗಳು ಕನ್ನಡಿಗರನ್ನು ಕಡೆಗಣಿಸುತ್ತಿವೆ, ಅಲ್ಲದೆ ಕನ್ನಡಿರಿಗೆ ಸಿಗಬೇಕಾದ ಉದ್ಯೋಗಗಳು ಅನ್ಯಭಾಷಿಕರ ಪಾಲಾಗುತ್ತಿವೆ ಎಂಬ ದೂರುಗಳು ಪ್ರಾಕಾರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಕನ್ನಡ …

Read More »

ಆರ್‌ಸಿಬಿಗೆ ಕಿಚ್ಚ ಸುದೀಪ್- ರಚಿತಾ ರಾಮ್ ರಾಯಭಾರಿ..?

ಬೆಂಗಳೂರು, – ರನ್ನ, ಮುಕುಂದ ಮುರಾರಿ ಚಿತ್ರಗಳಲ್ಲಿ ಒಟ್ಟಾಗಿ ನಟಿಸಿದ್ದ ಕಿಚ್ಚ ಸುದೀಪ್ ಹಾಗೂ ಡಿಂಪಲ್‍ಕ್ವೀನ್ ರಚಿತಾರಾಮ್ ಮುಂಬರುವ ಐಪಿಎಲ್‍ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಆರ್‍ಸಿಬಿ ತಂಡದ ರಾಯಭಾರಿಯಾಗುತ್ತಾರೆ ಎಂಬ ಸುದ್ದಿ ದಟ್ಟವಾಗಿ ಹರಿದಾಡುತ್ತಿದೆ. ಸೆಪ್ಟೆಂಬರ್ 19 ರಿಂದ ನವೆಂಬರ್ 10ರವರೆಗೆ ಯುಎಇಯಲ್ಲಿ ನಡೆಯಲಿರುವ ಐಪಿಎಲ್ 13ರಲ್ಲಿ ಆರ್‍ಸಿಬಿ ತಂಡಕ್ಕೆ ಕಿಚ್ಚ ಸುದೀಪ್ ಹಾಗೂ ರಚಿತಾರಾಮ್ ತಂಡದ ರಾಯಭಾರಿಯಾಗಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದರೂ ಕೂಡ ಇದರ ಬಗ್ಗೆ ಆರ್‍ಸಿಬಿ ತಂಡದ …

Read More »

ಸ್ವಯಂಕೃತ ಅಪರಾಧದಿಂದ ‘ಕಾವೇರಿ’ ಕೋಪಕ್ಕೆ ತುತ್ತಾದರಾ ಕೊಡಗಿನ ಜನ?

ಮಡಿಕೇರಿ: ಕೊಡಗಿನ ಕುಲದೇವತೆ ಕಾವೇರಿ ಮಾತೆಯ ಭಕ್ತರು ನಾಡಿನೆಲ್ಲೆಡೆ ಇದ್ದಾರೆ. ತಲಕಾವೇರಿಯಲ್ಲಿ ಹುಟ್ಟಿ ನಾಡಿನುದ್ದಕ್ಕೂ ಜೀವಕಳೆ ತುಂಬುವ ಜೀವನದಿ. ಆದರೆ ಕೊಡಗಿನ ಜನರಿಗೆ ಮಾತ್ರ ಕಣ್ಣೀರು ತರಿಸುತ್ತಿದ್ದಾಳೆ. ಕಾವೇರಿ ನದಿ ಹೀಗೆ ತನ್ನೊಡಲ ಜನರಿಗೆ ಸಂಕಷ್ಟ ತಂದಿಟ್ಟಿರುವುದಕ್ಕೆ ಜನರ ಸ್ವಯಂಕೃತ ಅಪರಾಧವೇ ಕಾರಣ ಎಂದು ತಲಕಾವೇರಿ ಮೂಲಸ್ವರೂಪ ರಕ್ಷಣಾ ಸಮಿತಿ ಆರೋಪ ಮಾಡಿದೆ. 2005 ರಲ್ಲಿ ತಲಕಾವೇರಿಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಹಲವು ಕಾಮಗಾರಿಗಳನ್ನು ಮಾಡಲಾಯಿತು. ಇದರ ಪರಿಣಾಮ ಬ್ರಹ್ಮಗಿರಿ ಬೆಟ್ಟದಲ್ಲಿ …

Read More »

ಸಿಂಡಿಕೇಟ್ ಬ್ಯಾಂಕ್ ಲಾಕರಿನಲ್ಲಿ ಈ ರಾಷ್ಟ್ರಧ್ವಜವನ್ನು ಇಡುತ್ತಾರೆ. ಇದನ್ನು ಆಗಸ್ಟ್ 15 ಬಂದಾಗ ಮಾತ್ರ ಅಲ್ಲಿಂದ ತಂದು ಧ್ವಜಾರೋಹಣ ಮಾಡುತ್ತಾರೆ.

ಧಾರವಾಡ: ಬ್ಯಾಂಕ್ ಲಾಕರಿನಲ್ಲಿ ಸಹಜವಾಗಿ ಚಿನ್ನದ ಒಡವೆ, ಹಣ ಅಥವಾ ಆಸ್ತಿ ದಾಖಲೆಗಳನ್ನು ಇಟ್ಟಿರುವುದನ್ನ ನೋಡಿದ್ದೆವೆ. ಆದರೆ ಧಾರವಾಡ ನಗರದ ಗಾಂಧಿನಗರ ನಿವಾಸಿಯೊರ್ವರು ರಾಷ್ಟ್ರಧ್ವಜವನ್ನು ತಮ್ಮ ಬ್ಯಾಂಕ್ ಲಾಕರಿನಲ್ಲಿ ಇಟ್ಟಿರುತ್ತಾರೆ. ಗಂಗಾಧರ ಕುಲಕರ್ಣಿ(86) ಅವರು ತಮ್ಮ ಸಿಂಡಿಕೇಟ್ ಬ್ಯಾಂಕ್ ಲಾಕರಿನಲ್ಲಿ ಈ ರಾಷ್ಟ್ರಧ್ವಜವನ್ನು ಇಡುತ್ತಾರೆ. ಇದನ್ನು ಆಗಸ್ಟ್ 15 ಬಂದಾಗ ಮಾತ್ರ ಅಲ್ಲಿಂದ ತಂದು ಧ್ವಜಾರೋಹಣ ಮಾಡುತ್ತಾರೆ. ಕಳೆದ 7 ವರ್ಷಗಳಿಂದ ಬ್ಯಾಂಕ್ ನಲ್ಲಿ ಇಟ್ಟಿದ್ದಾರೆ. ಒಟ್ಟು 73 ವರ್ಷಗಳ …

Read More »

ಕೋವಿಡ್‍ನಿಂದ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆ ,ಬೆಳಗ್ಗೆ 9 ಗಂಟೆಗೆ ಸಿಎಂ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಬೆಂಗಳೂರು: ಇಂದು 74ನೇ ಸ್ವಾತಂತ್ರ್ಯ ದಿನಾಚರಣೆ. ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಾಜ್ಯ ಸರ್ಕಾರದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತದೆ.ರಾಜ್ಯ ರಾಜಧಾನಿಯಲ್ಲಿ ಸಿಎಂ ಯಡಿಯೂರಪ್ಪ ಧ್ವಜಾರೋಹಣ ಮಾಡಲಿದ್ದಾರೆ.       ಉಳಿದ ಜಿಲ್ಲಾ ಕೇಂದ್ರಗಳಲ್ಲಿ ಸ್ಥಳೀಯ ಉಸ್ತುವಾರಿ ಸಚಿವರು ಧ್ವಜಾರೋಹಣ ಮಾಡಲಿದ್ದಾರೆ. ಇನ್ನೂ ಕೆಲ ಜಿಲ್ಲೆಗಳಲ್ಲಿ ಡಿಸಿಗಳಿಂದ ಧ್ವಜಾರೋಹಣ ಆಗಲಿದೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಬೆಳಗ್ಗೆ 9 …

Read More »

ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಬೀಳಲು ಕಾಂಗ್ರೆಸ್ ಪಕ್ಷವೇ ಕಾರಣ:ವಿಶ್ವನಾಥ್ ಆರೋಪಿ

ಮೈಸೂರು:  ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಬೀಳಲು ಕಾಂಗ್ರೆಸ್ ಪಕ್ಷವೇ ಕಾರಣ ಅಂತಾ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಆರೋಪಿಸಿದ್ದಾರೆ. ಡಿಜೆ ಹಳ್ಳಿ ಗಲಭೆ ವಿಚಾರವಾಗಿ  ಮಾತನಾಡಿದ ಅವರು, ಗಲಭೆಗೂ ಬಿಜೆಗೂ ಯಾವುದೇ ಸಂಬಂಧ ಇಲ್ಲ. ಇದು ಕಾಂಗ್ರೆಸ್ ಹಾಗೂ ಸ್ಥಳೀಯ ಸಂಘಟನೆಗೂ ನಡೆಯುತ್ತಿರುವ ಗಲಭೆ. ಸಿಎಎ ಹೋರಾಟದಲ್ಲಿ ಮಾಡಿದ ಪ್ರಚೋದನಕಾರಿ ಭಾಷಣಗಳು ಇದಕ್ಕೆಲ್ಲಾ ಕಾರಣ.  . ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ ಕಾಂಗ್ರೆಸ್ …

Read More »

ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹ:

ಚಿಕ್ಕೋಡಿ : ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವ ಜತೆಗೆ ಗ್ರಾಮಗಳನ್ನು ಸ್ಥಳಾಂತರಕ್ಕೆ ಒತ್ತಾಯಿಸಿ ಶುಕ್ರವಾರ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನವರ ಅವರಿಗೆ ಮನವಿ ಸಲ್ಲಿಸಿದರು. ಕಳೆದ ವರ್ಷ ಪ್ರವಾಹ ಬಂದಾಗ ನೆರೆ ಸಂತ್ರಸ್ತರಿಗೆ ಸರಕಾರ ಕೇವಲ 10 ಸಾವಿರ ರೂ.ಪರಿಹಾರಧನ ನೀಡಿ ಕೈ ತೊಳೆದುಕೊಂಡಿದೆ. ಅದು ಸಹ ಕೆಲವರಿಗೆ ಮುಟ್ಟಿಲ್ಲ. ಹೀಗಾಗಿ ಪ್ರವಾಹ ಸಂತ್ರಸ್ತರ ಕುಟುಂಬಗಳಿಗೆ ಕೂಡಲೇ ಧನ ಸಹಾಯ ಒದಗಿಸಬೇಕು. ಪ್ರವಾಹ ಸಂತ್ರಸ್ತರ ಮನೆ …

Read More »

ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಗಲಭೆ ಮತ್ತು ಕೊರೊನಾ ನಿಯಂತ್ರಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ:ಬಿ.ಆರ್.ಸಂಗಪ್ಪಗೋಳ

ಚಿಕ್ಕೋಡಿ: ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಗಲಭೆ ಮತ್ತು ಕೊರೊನಾ ನಿಯಂತ್ರಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ಆರೋಪಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಶಾಸಕರ ಮೇಲೆ ಮತ್ತು ಪೊಲೀಸ ಅಧಿಕಾರಿಗಳ ಮೇಲೆ ಹಲ್ಲೆ ನಡೆಯುತ್ತಿರುವುದನ್ನು ಕಂಡರೇ ಬೆಂಗಳೂರು ಬಿಹಾರ ಆಗಿದಂತೆ ಕಾಣುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗೀಳಿಸುವ ಹುನ್ನಾದ ಬಿಜೆಪಿ ಪಕ್ಷದಲ್ಲಿರುವ ಕೆಲವು …

Read More »

ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆ  ಕೊನೆಗೆ ಎಚ್ಚತ್ತ ಅಧಿಕಾರಿಗಳು  ರಸ್ತೆ ದುರಸ್ತಿಗೆ ಮುಂದಾಗಿದ್ದಾರೆ.

ಕಿತ್ತೂರು:  ನಿರಂತರ ಮಳೆಯಿಂದಾಗಿ ತೆಗ್ಗು, ಗುಂಡಿ ಬಿದ್ದು ಸಂಪೂರ್ಣ  ಹಾಳಾಗಿದ್ದ  ನೇಗಿನಾಳ- ಬೈಲಹೊಂಗಲ ರಸ್ತೆ  ದುರಸ್ತಿ ಮಾಡುವಂತೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆ  ಕೊನೆಗೆ ಎಚ್ಚತ್ತ ಅಧಿಕಾರಿಗಳು  ರಸ್ತೆ ದುರಸ್ತಿಗೆ ಮುಂದಾಗಿದ್ದಾರೆ. ಎಂ.ಕೆ ಹುಬ್ಬಳ್ಳಿಯಿಂದ ನೇಗಿನಾಳ ಮಾರ್ಗವಾಗಿ ಬೈಲಹೊಂಗಲ ತಲುಪುವ ರಸ್ತೆ ಸಂಪೂರ್ಣ ನಾಶವಾಗಿತ್ತು. 1 ಕೀಮಿ ವರೆಗೂ ರಸ್ತೆ ಸಂಪೂರ್ಣ ಹಾಳಾಗಿದ್ದು, ತಗ್ಗು , ಗುಂಡಿಯಲ್ಲಿ  ಮಳೆ ನೀರು  ತುಂಬಿದ್ದರಿಂದ ಸಣ್ಣ ಪುಟ್ಟ ಅಪಘಾತಗಳು ಸಂಭವಿಸಿ ವಾಹನ ಸವಾರರು …

Read More »