Breaking News

ಜಿಲ್ಲೆ

ಚಿಕ್ಕಮಗಳೂರಿನಲ್ಲಿ 4 ದಿನಗಳಿಂದ ಧಾರಾಕಾರ ಮಳೆ; ಕಳಸ- ಹೊರನಾಡು ಸಂಪರ್ಕ ಬಂದ್

ಚಿಕ್ಕಮಗಳೂರು : ಮಲೆನಾಡಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಚಿಕ್ಕಮಗಳೂರಿನಲ್ಲಿ ತುಂಗಾ, ಭದ್ರಾ, ಹೇಮಾವತಿ ನದಿಗಳು ಉಕ್ಕಿ ಹರಿಯುತ್ತಿವೆ. ಇದರಿಂದ ಮಲೆನಾಡಿಗರ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಾಲ್ಕು ದಿನದ ಮಳೆಗೆ ಸುಸ್ತಾಗಿರುವ ಮಲೆನಾಡಿಗರು ಪ್ರವಾಹದ ಭೀತಿಯಲ್ಲಿದ್ದಾರೆ. ನಿನ್ನೆ ರಾತ್ರಿಯೂ ಚಿಕ್ಕಮಗಳೂರಿನಲ್ಲಿ ಎಡಬಿಡದೆ ಮಳೆ ಸುರಿದಿದೆ. ಹಲವು ಕಡೆ ರಸ್ತೆಗಳಿಗೆ ನದಿ ನೀರು ನುಗ್ಗಿದೆ. ಭದ್ರಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ರಾತ್ರಿಯಿಡೀ ಸುರಿದ ಮಳೆಗೆ ಜನ ಹೈರಾಣಾಗಿದ್ದಾರೆ. ಈಗಾಗಲೇ ಮಲೆನಾಡಿನ …

Read More »

ಕೊಡಗಿನಲ್ಲಿ ವರುಣನ ಆರ್ಭಟ: ಕುಶಾಲನಗರದ ಬಡವಾಣೆಗಳು ಜಲಾವೃತ

ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಜನ ತತ್ತರಿಸಿದ್ದಾರೆ. ಧಾರಾಕಾರ ಮಳೆಯಿಂದಾಗಿ, ಕುಶಾಲನಗರದ ಹೆಚ್ಚಿನ ಬಡಾವಣೆಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇಲ್ಲಿನ ಕುವೆಂಪು ಬಡಾವಣೆ, ಸಾಯಿ ಬಡಾವಣೆ ಹಾಗೂ ಮುಳುಸೋಗೆ ಬಡಾವಣೆಗಳಲ್ಲಿ ಸುಮಾರು 10 ಅಡಿ ಎತ್ತರದಷ್ಟು ನೀರು ನಿಂತಿದೆ. ಮನೆಗಳ ಮೊದಲ ಮಹಡಿವೆರೆಗಿನ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ. ಹಾರಂಗಿ ಜಲಾಶಯದ ಹೊರಹರಿವು ಹೆಚ್ಚಾಗಿದ್ದು, ಕಾವೇರಿ ನದಿಯ ನೀರು ಅಪಾಯ ಮಟ್ಟ ಮೀರಿ ಹರಿಯುತ್ತಿದೆ.

Read More »

ವರುಣನ ಆರ್ಭಟದಿಂದ ಕೊರೊನಾ ನಿಯಂತ್ರಣವನ್ನು ಮರೆತುಬಿಡ್ತಾ ರಾಜ್ಯ ಸರ್ಕಾರ..?

ಬೆಂಗಳೂರು: ರಾಜ್ಯದ ನಾನಾ ಭಾಗಗಳಲ್ಲಿ ವ್ಯಾಪಕ ಮಳೆ ಹಾಗೂ ಪ್ರವಾಹ ಪರಿಸ್ಥಿತಿ ನಿರ್ಮಾಣ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೊರೊನಾ ಸೋಂಕಿನ ನಿಯಂತ್ರಣವನ್ನು ಮರೆತಂತಿದೆ. ಸೋಂಕಿನ ನಿಯಂತ್ರಣದಲ್ಲಿದ್ದ ರಾಜ್ಯ ಸರ್ಕಾರಕ್ಕೆ ಸದ್ಯ ಪ್ರವಾಹ ಮತ್ತೊಂದು ಹೊಡೆತವನ್ನು ನೀಡಿದೆ. ರಾಜ್ಯದ ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕೆಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ, ಮೊದಲು ಜನ ಮತ್ತು ಜಾನುವಾರಗಳನ್ನು ರಕ್ಷಿಸುವುದು …

Read More »

ಬೆಳಗಾವಿ: ಮತ್ತೆ 392 ಮಂದಿಗೆ ಕೋವಿಡ್ ದೃಢ

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 392 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,498ಕ್ಕೆ ಏರಿದೆ. ಇಲ್ಲಿನ ವಿವಿಧ ಬಡಾವಣೆಗಳು ಮತ್ತು ತಾಲ್ಲೂಕಿನಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಿವೆ. ನಗರದ ಗುರುಪ್ರಸಾದ ಕಾಲೊನಿ, ವಿಶ್ವಕರ್ಮ ಕಾಲೊನಿ, ತಾಲ್ಲೂಕಿನ ಕೆಎಸ್‌ಆರ್‌ಪಿ ಮಚ್ಚೆ, ಸಾಂಬ್ರಾದ ಏರ್‌ಮನ್‌ ತರಬೇತಿ ಶಾಲೆ, ರಾಮದುರ್ಗ, ಗೋಕಾಕ, ಅಥಣಿ, ರಾಯಬಾಗ, ಖಾನಾಪುರ, ಸವದತ್ತಿ, ಬೈಲಹೊಂಗಲ ತಾಲ್ಲೂಕುಗಳಲ್ಲಿ ಸೋಂಕು ದೃಢಪಟ್ಟಿರುವುದು ವರದಿಯಾಗಿದೆ. ಅಂಕಲಗಿ ಪೊಲೀಸ್ ಠಾಣೆಯ ಮೂವರಿಗೆ ದೃಢ‍ಪಟ್ಟಿದೆ. …

Read More »

ಬೆಳಗಾವಿ: ಪ್ರಾಣಾಪಾಯಕ್ಕೆ ಸಿಲುಕಿದ ಶ್ವಾನಗಳು

ಬೆಳಗಾವಿ: ಸತತ ಮಳೆಯಿಂದಾಗಿ ಇಲ್ಲಿನ ಬಳ್ಳಾರಿ ನಾಲಾ (ದೊಡ್ಡ ಚರಂಡಿ) ಉಕ್ಕಿ ಹರಿಯುತ್ತಿರುವುದರಿಂದ ತಾಲ್ಲೂಕಿನ ಹಲಗಾ ಸಮೀಪದ ಗದ್ದೆಯೊಂದರಲ್ಲಿನ ಶೆಡ್‌ ಜಲಾವೃತವಾಗಿದ್ದು, ಅಲ್ಲಿದ್ದ 45ಕ್ಕೂ ಹೆಚ್ಚಿನ ನಾಯಿಗಳಿಗೆ ಪ್ರಾಣಾಪಾಯ ಎದುರಾಗಿದೆ. ನಗರದ ಪ್ರಾಣಿ ಪ್ರೇಮಿಗಳಾದ ಶಂಕರ ಹಾಗೂ ಅವರ ಪುತ್ರಿ ಶ್ವೇತಾ ದೊಡ್ಡಮನಿ ಅವರು ಬೀದಿ ನಾಯಿಗಳನ್ನು ಹಿದಿಡು ತಂದು ಅಲ್ಲಿ ಸಾಕುತ್ತಿದ್ದರು. ಈಚೆಗೆ ಕೋವಿಡ್ ಲಾಕ್‌ಡೌನ್‌ ಸಂದರ್ಭದಲ್ಲಿ ಅನ್ನ-ಆಹಾರ ಸಿಗದೆ ಕಂಗಾಲಾಗಿದ್ದ ಕೆಲವು ನಾಯಿಗಳನ್ನು ಕೂಡ ಅಲ್ಲಿ ತಂದು …

Read More »

ತಬ್ಲೀಗ್‌ ಸಮಾವೇಶ: 9 ವಿದೇಶಿಯರಿಗೆ 10 ವರ್ಷ ನಿರ್ಬಂಧ

ಬೆಂಗಳೂರು: ತಬ್ಲೀಗ್‌ ಜಮಾತ್ ಸಮಾವೇಶದ ಅಂಗವಾಗಿ ರಾಜ್ಯದಲ್ಲಿದ್ದ ಒಂಬತ್ತು ವಿದೇಶಿಯರ(ದಕ್ಷಿಣ ಆಫ್ರಿಕಾ ಮತ್ತು ಇಂಡೋನೇಷ್ಯಾದವರು) ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದು ಪಡಿಸಿರುವ ಹೈಕೋರ್ಟ್, ಮುಂದಿನ 10 ವರ್ಷ ಭಾರತಕ್ಕೆ ಭೇಟಿ ನೀಡುವುದಿಲ್ಲ ಎಂಬ ಪ್ರಮಾಣ ಪತ್ರ ಸಲ್ಲಿಸುವಂತೆ ನಿರ್ದೇಶಿಸಿದೆ. ಸಂಬಂಧಪಟ್ಟ ಪ್ರಾಧಿಕಾರ ವಿಧಿಸುವ ದಂಡದ ಮೊತ್ತ ಪಾವತಿಸಿ, ಮುಂದಿನ ಹತ್ತು ವರ್ಷಗಳವರೆಗೆ ಭಾರತಕ್ಕೆ ಭೇಟಿ ನೀಡುವುದಿಲ್ಲ ಎಂದು ಪ್ರಮಾಣ ಪತ್ರ ಸಲ್ಲಿಸಿದ ಬಳಿಕ ನಿರ್ಗಮನ ಪರವಾನಗಿ ನೀಡುವಂತೆ ವಿದೇಶಿಯರ ಪ್ರಾದೇಶಿಕ ನೋಂದಣಿ …

Read More »

ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಶುಕ್ರವಾರ ೮೭ ಕೊರೋನಾ ವರದಿಗಳು ದೃಢ

ಗೋಕಾಕ: ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಶುಕ್ರವಾರ ೮೭ ಕೊರೋನಾ ವರದಿಗಳು ದೃಢಪಟ್ಟಿವೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿರುವ ಅವರು, ಗೋಕಾಕ ನಗರದಲ್ಲಿಯೆ ಇಂದು ಒಂದೇ ದಿನದಲ್ಲಿ ಹಾಪ್ ಸೆಂಚುರಿ ಸಮೀಪಿಸಿದ್ದು, ನಗರದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಒಂದೇ ದಿನ ೪೭ ಕ್ಕೆ ಬಂದು ತಲುಪಿದೆ. ಗ್ರಾಮೀಣ ಪ್ರದೇಶ ಅಂಕಲಗಿಯಲ್ಲಿ ೧೮ ಪ್ರಕರಣಗಳು ವರದಿಯಾಗಿದ್ದು ಆತಂಕ ಹೆಚ್ಚಿಸಿದೆ. ಉಳಿದಂತೆ ಮೂಡಲಗಿ …

Read More »

ಆರ್ ಟಿ ಓ ಕಚೇರಿ ರಸ್ತೆಯ ಎರಡೂ ಬದಿಗೆ ವಾಹನಗಳ ಪಾರ್ಕಿಂಗ್ ಶುಲ್ಕ ವಸೂಲಿ……

ಬೆಳಗಾವಿ- ವಾಹನಗಳ ಪಾರ್ಕಿಂಗ್ ಗೆ ಸ್ಥಳವಿಲ್ಲ,ಆದರೂ ಆರ್ ಟಿ ಓ ಕಚೇರಿ ರಸ್ತೆಯ ಎರಡೂ ಬದಿಗೆ ವಾಹನಗಳ ಪಾರ್ಕಿಂಗ್ ಮಾಡಲು ಬೆಳಗಾವಿಯ ಕಾಂಟೋನ್ಮೆಂಟ್ ಬೋರ್ಡ್ ಅನುಮತಿ ನೀಡಿದೆ. ಈ ರಸ್ತೆಯಲ್ಲಿ ಪಾರ್ಕಿಂಗ್ ಮಾಡುವ ವಾಹನಗಳಿಂದ ಪಾರ್ಕಿಂಗ್ ಶುಲ್ಕ ವಸೂಲಿ ಮಾಡಲು ಗುತ್ತಿಗೆದಾರನನ್ನು ನೇಮಿಸಿ.ಯಾವ ವಾಹನಕ್ಕೆ ಎಷ್ಟು ಶುಲ್ಕ ಎನ್ನುವದರ ಬಗ್ಗೆ ಆರ್ ಟಿ ಓ ಕಚೇರಿಯ ಬಳಿ ಕಾಂಟೋನ್ಮೆಂಟ್ ಬೋರ್ಡ್ ದೊಡ್ಡ ಫಲಕ ಹಾಕಿದೆ. ರಸ್ತೆಯ ಇಕ್ಕೆಲುಗಳಲ್ಲಿ ವಾಹನಗಳು ಪಾರ್ಕಿಂಗ್ …

Read More »

ಯತೀಂದ್ರ ಸಿದ್ದರಾಮಯ್ಯಗೂ ಕೊರೊನಾ ಪಾಸಿಟಿವ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಕ ಇದೀಗ ಅವರ ಪುತ್ರ ಯತೀಂದ್ರರಿಗೂ ಕೊರೊನಾ ಪಾಸಿಟಿವ್ ದೃಢವಾಗಿದೆ. ಬಗ್ಗೆ ಟ್ವೀಟ್ ,ಆಡಿರುವ ಯತೀಂದ್ರ, ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ. ಆಗಸ್ಟ್ 4ರಂದು ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ಹರಡಿರುವುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ರೋಗ ಲಕ್ಷಣವಿಲ್ಲದಿದ್ದರೂ ಮಣಿಪಾಲ್ ಆಸ್ಪತ್ರೆಗೆ …

Read More »

ವರ್ಷದ ಹಿಂದೆ ಕಟ್ಟಿದ ಮನೆ ಬೀಳುವ ಆತಂಕ- ಕೊಚ್ಚಿ ಹೋದ ಅಡಿಪಾಯ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಭಾರೀ ಅವಾಂತರಗಳನ್ನು ಸೃಷ್ಟಿಸುತ್ತಿದೆ. ಇದೀಗ ಕಳೆದವರ್ಷವಷ್ಟೇ ಕಟ್ಟಿದ ಮನೆ ಸಹ ಬೀಳುವ ಹಂತ ತುಲುಪಿದ್ದು, ಅಡಿಪಾಯ ಕೊಚ್ಚಿ ಹೋಗಿದೆ.ಜಿಲ್ಲೆಯ ಮೂಡಿಗೆರೆ ಪಟ್ಟಣದ ಛತ್ರ ಮೈದಾನದಲ್ಲಿ ಮನೆಯ ಅಡಿಪಾಯ ಕುಸಿದು ಬೀಳುವ ಹಂತ ತಲುಪಿದೆ. ನಾಗಮ್ಮ ಅವರಿಗೆ ಸೇರಿದ ಮನೆ ಇದಾಗಿದ್ದು, ಮೂಡಿಗೆರೆಯಲ್ಲಿ ಮಳೆ-ಗಾಳಿ ಅಬ್ಬರದ ಹಿನ್ನೆಲೆ ಮಣ್ಣು ಹೆಚ್ಚು ಕುಸಿಯುತ್ತಿದೆ. ಹೀಗಾಗಿ ಅಡಿಪಾಯ ಸಹ ಕೊಚ್ಚಿ ಹೋಗಿದೆ. ಕಳೆದ ವರ್ಷ ಕಟ್ಟಿದ ಮನೆ, ಇದೀಗ …

Read More »