Breaking News

ಜಿಲ್ಲೆ

ಕರ್ನಾಟಕ ಹವಾಮಾನ ವರದಿ: ಇಂದು ಬೆಳಗಾವಿ, ವಿಜಯಪುರದಲ್ಲಿ ಬಿಸಿಲಿನ ತಾಪ ಹೆಚ್ಚಿರಲಿದೆ

ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಂದಿನ ಹವಾಮಾನ ಹೇಗಿದೆ? ಎಂಬುದನ್ನು ಇಲ್ಲಿ ಹೇಳಲಾಗಿದೆ. ಹವಾಮಾನ ವರದಿಗಳ ಪ್ರಕಾರ ಬೆಂಗಳೂರು ಚಳಿಯ ವಾತಾವರಣ ಇರಲಿದೆ. ರ್ನಾಟಕದಾದ್ಯಂತ ಹವಾಮಾನವು ಹೆಚ್ಚಾಗಿ ಶುಷ್ಕ ಮತ್ತು ಬಿಸಿಲಿನಿ೦ದ ಕೂಡಿರುತ್ತದೆ.ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ತಾಪಮಾನವು 30°C ನಿಂದ 34°C ವರೆಗೆ ಇರುವ ಸಾಧ್ಯತೆಯಿದೆ.ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 31°C ಮತ್ತು ಕನಿಷ್ಠ ತಾಪಮಾನ 18°C ದಾಖಲಾಗುವ ಸಂಭವವಿದೆ. ಆಕಾಶವು ಭಾಗಶಃ ಮೋಡಗಳಿಂದ ಕೂಡಿರುತ್ತದೆ. ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ …

Read More »

ಕೌಟುಂಬಿಕ ಕಲಹಕ್ಕೆ ಗರ್ಭಿಣಿ ಸೊಸೆಯನ್ನ ಕೊಂದ ಮಾವ – ಆರೋಪಿ ಅರೆಸ್ಟ್

ರಾಯಚೂರು: ಹಣ ಕೊಡದಿದ್ದಕ್ಕೆ ಮಗನೋರ್ವ ಹೆತ್ತ ತಾಯಿಯನ್ನೇ ಅಟ್ಟಾಡಿಸಿ ಕೊಲೆ ಮಾಡಿದ್ದ ಘಟನೆ ಮಂಗಳವಾರ ನಗರದಲ್ಲಿ ನಡೆದಿತ್ತು. ಇಂದು ಇದೇ ರಾಯಚೂರಿನಲ್ಲಿ ಮತ್ತೊಂದು ಭೀಕರ ಘಟನೆ ನಡೆದಿದೆ. ಗರ್ಭಿಣಿ ಸೊಸೆಯನ್ನ ಕತ್ತು ಸೀಳಿ ಮಾವ ಕೊಲೆ ಮಾಡಿರುವಂತಹ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಅಣಗಿ ಗ್ರಾಮದಲ್ಲಿ ನಡೆದಿದೆ. ರೇಖಾ(25) ಕೊಲೆಯಾದ ಸೊಸೆ. ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೌಟುಂಬಿಕ ಕಲಹ: ಸೊಸೆ ಕೊಲೆ ಕೌಟುಂಬಿಕ ಕಲಹ ಹಿನ್ನೆಲೆ ಮಾವ …

Read More »

ನರೇಗಾ ಬಗ್ಗೆ ಚರ್ಚೆಗಾಗಿ ವಿಧಾನಮಂಡಲ ಅಧಿವೇಶನ 2 ದಿನ ವಿಸ್ತರಣೆ – ಸಿಎಂ

ಬೆಂಗಳೂರು: ಶಿವರಾತ್ರಿ ಹಬ್ಬದ ಪ್ರಯುಕ್ತ ಎಸ್.ಎಂ.ವಿ.ಟಿ. ಬೆಂಗಳೂರು (SMVT Bengaluru) ಮತ್ತು ವಿಜಯಪುರ (Vijayapura) ನಡುವೆ ವಿಶೇಷ ರೈಲು ಸಂಚರಿಸಲಿದೆ. ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಎಸ್.ಎಂ.ವಿ.ಟಿ. ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲು ಸೇವೆಗಳನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 06503: ಎಸ್.ಎಂ.ವಿ.ಟಿ. ಬೆಂಗಳೂರು – ವಿಜಯಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ದಿನಾಂಕ 2026ರ ಫೆಬ್ರವರಿ 13ರಂದು (ಶುಕ್ರವಾರ) ರಾತ್ರಿ …

Read More »

ಸಾವಿನಲ್ಲೂ ಒಂದಾದ ಅಮರ ಪ್ರೇಮಿಗಳು

ರಾಮದುರ್ಗ: ತಾಲೂಕಿನ ಮಲ್ಲಾಪೂರ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಮನಕಲಕುವ ಘಟನೆಯೊಂದು ಸಂಭವಿಸಿದೆ. ಇಲ್ಲಿನ ಹರಿಯುವ ಮಲಪ್ರಭಾ ನದಿಗೆ ಹಾರಿ ಯುವ ಜೋಡಿಯೊಂದು ತಮ್ಮ ಜೀವನದ ಪಯಣವನ್ನು ಅಂತ್ಯಗೊಳಿಸಿದೆ. ಮೃತರನ್ನು ಜಗದೀಶ ಕವಳೇಕರ ಹಾಗೂ ಗಂಗಮ್ಮಾ ತ್ಯಾಪಿ ಎಂದು ಗುರುತಿಸಲಾಗಿದೆ. ಇಬ್ಬರೂ ಮಲ್ಲಾಪೂರ ಗ್ರಾಮದ ನಿವಾಸಿಗಳಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇಂದು ಬೆಳಗಿನ ಜಾವ ನದಿಯ ದಡದಲ್ಲಿ ಇಬ್ಬರ ಶವಗಳು ತೇಲುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. …

Read More »

ಮಹಾಂತೇಶ್​​ ಬೀಳಗಿ ಪುತ್ರಿಗೆ ಅನುಕಂಪದ ನೌಕರಿ

ಬೆಂಗಳೂರು: ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ, ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯಾ ಬೀಳಗಿಗೆ ಅನುಕಂಪದ ಆಧಾರದಲ್ಲಿ ಕೆಲಸ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಉದ್ಯೋಗ ನೀಡಲಾಗಿದ್ದು, ಜ.2ರಂದು ಸಿಎಂ ನೇತೃತ್ವದಲ್ಲಿ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಅನುಕಂಪದ ಉದ್ಯೋಗ ನೀಡಲು ನಿರ್ಧರಿಸಲಾಗಿತ್ತು. ಭಾರತೀಯ ಆಡಳಿತ ಸೇವೆಗೆ ಸೇರಿದ …

Read More »

ನೇಣು ಬಿಗಿದುಕೊಂಡು ಮೆಡಿಕಲ್​​ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ; ಕಾರಣ ನಿಗೂಢ

ಧಾರವಾಡ: ಮೆಡಿಕಲ್​​ ಪಿಜಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ(ಡಿಮ್ಹಾನ್ಸ್) ಸೈಕಿಯಾಟ್ರಿಕ್ ಪಿಜಿ ವಿಭಾಗದ ಮೊದಲನೇ ವರ್ಷದ ಡಾ.ಪ್ರಜ್ಞಾ ಪಾಲೇಗರ್(24) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಶಿವಮೊಗ್ಗ ಮೂಲದ ಯುವತಿ ಎರಡು ವಾರಗಳ ಹಿಂದಷ್ಟೇ ಬಂದಿದ್ದಳು. ನಿನ್ನೆ ಆಕೆಯ ತಂದೆ-ತಾಯಿ ಕೂಡ ಬಂದು ಹೋಗಿದ್ದರು ಎನ್ನಲಾಗಿದೆ. ಇನ್ನು ಡಾ. ಪ್ರಿಯಾ ಪಾಟೀಲ್ ಜೊತೆ ಪ್ರಜ್ಞಾ ಹಾಸ್ಟೆಲ್​​ ರೂಮ್​​ ಶೇರ್​​ ಮಾಡಿಕೊಂಡಿದ್ದಳು, …

Read More »

ಬೆಳಗಾವಿಯಲ್ಲಿ ಅಕ್ಷರ ಚಿಂತನೆಯ ಸಾಹಿತ್ಯ ಸಂಭ್ರಮ: ವಿಮರ್ಶಾ ಕಮ್ಮಟಕ್ಕೆ ಚಾಲನೆ

ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಇಂದು ವಿಮರ್ಶಾತ್ಮಕ ಚಿಂತನೆಗಳ ಹೊಸ ಮನ್ವಂತರ ತೆರೆದುಕೊಂಡಿತು. ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ಒಂದು ದಿನದ ವಿಮರ್ಶಾ ಕಮ್ಮಟವು ಸಾಹಿತ್ಯಾಸಕ್ತರ ಗಮನ ಸೆಳೆಯಿತು. ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ಕರ್ನಾಟಕ ಲೇಖಕಿಯರ ಸಂಘ, ಬೆಳಗಾವಿ ಜಿಲ್ಲಾ ಘಟಕ ಹಾಗೂ ಕನ್ನಡ ಸಾಹಿತ್ಯ ಭವನ ವಿಶ್ವಸ್ಥ ಮಂಡಳಿಯ ಸಹಯೋಗದೊಂದಿಗೆ ‘ಒಂದು ದಿನದ ವಿಮರ್ಶಾ ಕಮ್ಮಟ’ವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು …

Read More »

ಆಸ್ತಿಗಾಗಿ ಕೊಲೆ ಆರೋಪ – ಮಗನ ವಿರುದ್ಧ ದೂರು ಕೊಟ್ಟ ಮರುದಿನವೇ ತಂದೆ ಅನುಮಾನಾಸ್ಪದ ಸಾವು

ಕೊಪ್ಪಳ: ಮಗನ ವಿರುದ್ಧ ದೂರು ಕೊಟ್ಟ ಮರುದಿನವೇ ತಂದೆ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ವರಣಖೇಡ ಗ್ರಾಮದಲ್ಲಿ ನಡೆದಿದೆ. ಆಸ್ತಿಗಾಗಿ ಮಗನೇ ತಂದೆಯನ್ನೇ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಮೃತರನ್ನು ವೆಂಕೋಬಾ ಹಂಚಿನಾಳ (50) ಎಂದು ಗುರುತಿಸಲಾಗಿದೆ. ಸೋಮವಾರ (ಜ.26) ಸಂಜೆ ತಮ್ಮ ಜಮೀನಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಮೃತ ವೆಂಕೋಬಾ ಮಗನ ವಿರುದ್ಧ ಕನಕಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. …

Read More »

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ – ಸರ್ಕಾರ ಸ್ಪಂದಿಸದಿದ್ರೆ ಸಾಮೂಹಿಕ ರಾಜೀನಾಮೆಗೆ ಪ್ಲಾನ್

ಬೆಂಗಳೂರು: ಸಾರಿಗೆ ನೌಕರರು ಹಾಗೂ ಸರ್ಕಾರದ ನಡುವಿನ ಜಟಾಪಟಿ ಮುಂದುವರಿದಿದ್ದು, ಬೇಡಿಕೆಗಳ ಈಡೇರಿಕೆಗೆ ಸಾರಿಗೆ ಸಂಘಟನೆಗಳು, ನಾಳೆ ಸರ್ಕಾರಕ್ಕೆ ಡೆಡ್‌ಲೈನ್ ನೀಡಿವೆ. ನಾಳೆ ಸಂಜೆಯೊಳಗೆ ಬೇಡಿಕೆ ಈಡೇರದೇ ಇದ್ರೇ ಸಾಮೂಹಿಕ ರಾಜೀನಾಮೆ ಎಚ್ಚರಿಕೆ ನೀಡಿದೆ. ಕೆಎಸ್‌ಆರ್‌ಟಿಸಿ  ಸೇರಿದಂತೆ ಕರ್ನಾಟಕದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ವೇತನ ಪರಿಷ್ಕರಣೆ ಹಾಗೂ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ …

Read More »

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಬೈರತಿ ಸುರೇಶ್

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್  ಮುಖಂಡ ರಾಜೀವ್ ಗೌಡನನ್ನ ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ ಆಗುತ್ತದೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಪ್ರಶ್ನೆ ಕೇಳಿದರು. ಪೌರಾಡಳಿತ ಇಲಾಖೆಯಲ್ಲಿ ಬ್ಯಾನರ್ ಹಾಕಲು ನಿಯಮ ಇದೆ. ಅನುಮತಿ ಪಡೆದು ಹಾಕಬಹುದು ಅಂತಿದೆ. ಶಿಡ್ಲಘಟ್ಟದಲ್ಲಿ ರಾಜೀವ್ ಗೌಡ ಅನ್ನೋರು ಮಹಿಳಾ ಅಧಿಕಾರಿಯನ್ನ ನಿಂದಿಸಿದ್ದಾರೆ. ಫೋನ್‌ನಲ್ಲಿ …

Read More »