Breaking News

ಜಿಲ್ಲೆ

ಕೋವಿಡ್-19 ನಿರ್ವಹಣೆಯ ಹೆಸರಿನಲ್ಲಿಎರಡು ಸಾವಿರ ಕೋಟಿಗೂ ಹೆಚ್ಚು ಹಣ ಲೂಟಿ

ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಛೇರಿಯಲ್ಲಿ ಇವತ್ತು ಕರ್ನಾಟಕದ ಬಿಜೆಪಿ ಸರ್ಕಾರ ಕೋವಿಡ್-19 ನಿರ್ವಹಣೆಯ ಹೆಸರಿನಲ್ಲಿ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಎರಡು ಸಾವಿರ ಕೋಟಿಗೂ ಹೆಚ್ಚು ಹಣವನ್ನು ಲೂಟಿ ಹೊಡೆದಿದ್ದು, ಸತ್ಯಾಸತ್ಯತೆ ಪರಿಶೀಲನೆಗೆ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಖೆ ಮಾಡಿಸಬೇಕು ಹಾಗೂ ಇದರ ಬಗ್ಗೆ ಚರ್ಚಿಸಲು ಕೂಡಲೇ ವಿಧಾನ‌ಮಂಡಲದ ಅಧಿವೇಶನವನ್ನು ಕರೆಯಬೇಕು ಎನ್ನುವುದರ ಸಲುವಾಗಿ ಇವತ್ತು ಕೇಂದ್ರದ ಮಾಜಿ ಸಚಿವರು ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ …

Read More »

ಮತ್ತೆ 4ಸಾವಿರ ಕಿಟ್‌ಗಳ ಪೂರೈಕೆ

ಬೆಳಗಾವಿ: ‘ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಕೋವಿಡ್-19 ಹೊರತುಪಡಿಸಿ ಇತರ ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ತುರ್ತು ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂತಹ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಎಚ್ಚರಿಕೆ ನೀಡಿದರು. ಇಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ‘ತುರ್ತು ಚಿಕಿತ್ಸೆಗೆ ಅಗತ್ಯ ಇರುವವರಿಗೆ ತಪಾಸಣೆ ನಡೆಸಿ ಪ್ರಮಾಣಪತ್ರವನ್ನು ನೀಡಲು ಜಿಲ್ಲೆಗೆ ಮತ್ತೆ 4ಸಾವಿರ ರ‍್ಯಾಪಿಡ್ ಆಂಟಿಜೆನ್ ಕಿಟ್‌ಗಳು ಬಂದಿವೆ. ಪ್ರಮಾಣಪತ್ರ ಪಡೆದ ಬಳಿಕವೂ …

Read More »

ನನ್ನ ಖಾಸಾ ಸ್ನೇಹಿತರೊಬ್ಬರನ್ನು ಕಳೆದುಕೊಂಡ ನೋವು ನನಗಾಗಿದೆ :ರಮೇಶ ಜಾರಕಿಹೊಳಿ

ಗೋಕಾಕ:  ಗೋಕಾಕ್ ನಗರದ ಸಚ್ಛಾರಿತ್ರ್ಯದ ರಾಜಕಾರಣಿಯಾಗಿದ್ದ  ಗಿರೀಶ್ ಖೋತ್ ಅವರ ಅಕಾಲಿಕ ಮರಣದಿಂದ ನನ್ನ ಖಾಸಾ ಸ್ನೇಹಿತರೊಬ್ಬರನ್ನು ಕಳೆದುಕೊಂಡ ನೋವು ನನಗಾಗಿದೆ  ಎಂದು  ಸಚಿವ ರಮೇಶ ಜಾರಕಿಹೊಳಿ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. 3 ನೆಯ ಬಾರಿಗೆ ಗೋಕಾಕ್ ನಗರಸಭೆಗೆ ಆಯ್ಕೆಯಾಗಿದ್ದ ಖೋತ್ ಮಾದರಿ ಜನಪ್ರತಿನಿಧಿಯಾಗಿದ್ದರು. ಜನಾನುರಾಗಿ ಮತ್ತು  ಸರಳ, ಸ್ನೇಹಜೀವಿಯಾಗಿದ್ದ ಇವರು ನನ್ನ ರಾಜಕಾರಣದ ಪ್ರತಿ ಹೆಜ್ಜೆಯಲ್ಲೂ ನನ್ನ ಜೊತೆಗಿದ್ದರು. ಇವರ ಹಠಾತ್ ಅಗಲಿಕೆ ನನ್ನ ಮನಸ್ಸಿಗೆ ತೀವ್ರ ನೋವನ್ನು …

Read More »

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿಯನ್ನು ತಮ್ಮ ವಾಹನದಲ್ಲಿ ಕರೆತಂದು ಅಸ್ಪತ್ರೆಗೆ ದಾಖಲಿಸಿ ಸಚಿವ ಸಿಟಿ.ರವಿ ಮಾನವೀಯತೆ ಮೆರೆದಿದ್ದಾರೆ.

ಹಾಸನ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿಯನ್ನು ತಮ್ಮ ವಾಹನದಲ್ಲಿ ಕರೆತಂದು ಅಸ್ಪತ್ರೆಗೆ ದಾಖಲಿಸಿ ಸಚಿವ ಸಿಟಿ.ರವಿ ಮಾನವೀಯತೆ ಮೆರೆದಿದ್ದಾರೆ. ಹಾಸನ ಹೊರ ವಲಯದಲ್ಲಿ ದ್ವಿಚಕ್ರ ವಾಹನ ಅಪಘಾತವಾಗಿದ್ದು, ಅಪಘಾತದಲ್ಲಿ ಗಾಯಗೊಂಡ ಯುವತಿ ಪ್ರಜ್ಞಾಹೀನರಾಗಿ ಬಿದ್ದಿದ್ದರು. ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಸಚಿವ ಸಿಟಿ.ರವಿ, ರಸ್ತೆಯಲ್ಲಿ ಜನ ಗುಂಪು ಕಟ್ಟಿರುವುದನ್ನು ಗಮನಿಸಿ ತಮ್ಮ ವಾಹನ ನಿಲ್ಲಿಸಿ ವಿಚಾರಿಸಿದ್ದಾರೆ.ಈ ವೇಳೆ ಯುವತಿ ಪ್ರಜ್ಞಾಹೀನವಾಗಿದ್ದನ್ನು ಗಮನಿಸಿದ ಸಚಿವರು ತಕ್ಷಣ ಯುವತಿಯನ್ನು ತಮ್ಮ ವಾಹನದಲ್ಲಿ ಹಾಸನದ ಹಿಮ್ಸ್ …

Read More »

ಗೋಕಾಕ: ನಗರಸಭೆ ಸದಸ್ಯ ಗಿರೀಶ ಖೋತ್( 45) ಅಕಾಲಿಕ ಮರಣ……….

ಗೋಕಾಕ: ಮೂರು ಬಾರಿ ನಗರಸಭೆ ಸದಸ್ಯರಾಗಿ ಜನಸೇವಕರಾಗಿ ದುಡಿದಿದ್ದ  ಗಿರೀಶ ಖೋತ್ (45) ಅಕಾಲಿಕ ಮರಣ ಹೊಂದಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಸವನಗರದ ನಿವಾಸದಲ್ಲಿ ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. 14 ನೇ ವಾರ್ಡಿನ್ ಮೂರು ಬಾರಿ ಸದಸ್ಯರಗಾಗಿ ಜನಸೇವಕರಾಗಿ ದುಡಿದಿದ್ದ ಗಿರೀಶ ಖೋತ ಅವರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಅಕಾಲಿಕ ಮರಣಕ್ಕೆ ಸೌಭಾಗ್ಯ ಲಕ್ಷ್ಮಿ ಚೇರ್ಮನ್ ರಾದಂತ ಶ್ರೀ ಸಂತೋಷ್ ಜಾರಕಿಹೊಳಿ ಅವರು …

Read More »

ಸಿಎಂ ಬಿ.ಎಸ್​ ಯಡಿಯೂರಪ್ಪಗೆ ಕೊರೊನಾ ಸೋಂಕು ತಗುಲಿದ ಬೆನ್ನಲ್ಲೇ ರಾಜ್ಯಪಾಲ ಡಾ. ವಜುಭಾಯ್​ ವಾಲಾ ಕೊರೊನಾ ಪರೀಕ್ಷೆ

ಬೆಂಗಳೂರು: ಸಿಎಂ ಬಿ.ಎಸ್​ ಯಡಿಯೂರಪ್ಪಗೆ ಕೊರೊನಾ ಸೋಂಕು ತಗುಲಿದ ಬೆನ್ನಲ್ಲೇ ರಾಜ್ಯಪಾಲ ಡಾ. ವಜುಭಾಯ್​ ವಾಲಾ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಕಳೆದ ಶುಕ್ರವಾರ, ಯಡಿಯೂರಪ್ಪ ರಾಜ್ಯಪಾಲರನ್ನ ಭೇಟಿಯಾಗಿದ್ದರು. ಈ ಹಿನ್ನೆಲೆ ಸಿಎಂ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ವಜೂಭಾಯ್ ವಾಲಾ, ಅವರ ಆಪ್ತ ಸಹಾಯಕ ಹಾಗೂ ಏಡ್ ಡಿ ಕ್ಯಾಮ್(ಎಡಿಸಿ) ಕೊರೊನಾ ಟೆಸ್ಟ್​​ ಮಾಡಿಸಿಕೊಂಡಿದ್ದಾರೆ. ಮೂವರ ವರದಿಯಲ್ಲೂ ಕೊರೊನಾ ನೆಗೆಟಿವ್ ಬಂದಿದೆ ಎಂದು ರಾಜ್ಯಪಾಲರ ಕಚೇರಿಯಿಂದ ಅಧಿಕೃತ ಮಾಹಿತಿ ಸಿಕ್ಕಿದೆ. ರಾಜ್ಯಪಾಲರ …

Read More »

ಸಂಬಳ ಕೊಟ್ಟಿಲ್ಲ ಎಂದು ಎಂದು ಆತ್ಮ ಹತ್ಯೆ ಮಾಡಿಕೊಳ್ಳಲು ಮುಂದಾದ ಕರೋನಾ ಸೋಂಕಿತ..

ಬೆಳಗಾವಿ: ಕೊರೊನಾ ಸೋಂಕಿತನೋರ್ವ ಆಸ್ಪತ್ರೆಯ ಕಟ್ಟಡ ಏರಿ ಆತ್ಮಹತ್ಯೆ  ಬೆದರಿಕೆ ಹಾಕಿರುವ ಘಟನೆ ಗೋಕಾಕ್ ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆದಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದ ಈತನಿಗೆ ಸೋಮವಾರ ಬೆಳಿಗ್ಗೆ ಕೊರೊನಾ ಪಾಸಿಟಿವ್ ಬಂದಿದೆ.   ಬಳಿಕ ಆಸ್ಪತ್ರೆ ಕಟ್ಟಡ ಏರಿ ಕಳೆದ 6 ತಿಂಗಳಿಂದ ವೇತನ ನೀಡಿಲ್ಲ. ಸುಮಾರು 40 ಜನರು ಕೆಲಸ ನಿರ್ವಹಿಸುತ್ತಿದ್ದೆವೆ.   ಎಲ್ಲ ಕುಟುಂಬಗಳು ಕೊರೊನಾ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿವೆ.  ಗುತ್ತಿಗೆ ಕಾರ್ಮಿಕರಿಗೆ …

Read More »

ಕನ್ನಡ ಭಾಷೆಗೆ ಅವಮಾನಿಸಿದ ಸಚಿವ ಶ್ರೀಮಂತ ಪಾಟೀಲ ಚಿವ ಸಂಪುಟದಿಂದ ಕೈಬಿಡಬೇಕ: ಕರ್ನಾಟಕ ರಕ್ಷಣಾ ವೇದಿಕೆ

ಚಿಕ್ಕೋಡಿ : ಕನ್ನಡ ಭಾಷೆಗೆ ಅವಮಾನಿಸಿದ ಸಚಿವ ಶ್ರೀಮಂತ ಪಾಟೀಲರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿ ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಹಸೀಲ್ದಾರ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದರು. ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದಲ್ಲಿ ಈಚೆಗೆ ನಡೆದ ಸಕ್ಕರೆ ಕಾರ್ಖಾನೆಯ ಅಡಿಗಲ್ಲು ಸಮಾರಂಭದ ವೇದಿಕೆಯಲ್ಲಿ ಮರಾಠಿ ನಾಮಫಲಕ ಹಾಕುವ ಜತೆಗೆ ಸಚಿವ ಶ್ರೀಮಂತ ಪಾಟೀಲರು ಕನ್ನಡ ಭಾಷೆ ಮರೆತು ಮರಾಠಿಯಲ್ಲಿಯೇ ಮಾತನಾಡಿದ್ದಾರೆ.  ಇದು ಕನ್ನಡಿಗರಿಗೆ ನೋವುಂಟು ಮಾಡಿದ್ದಾರೆ. ಮರಾಠಿ …

Read More »

ಈ ವರ್ಷ ಸ್ವಾತಂತ್ರ್ಯೋತ್ಸವವನ್ನು ಸರಳ ರೀತಿ ಆಚರಿಸಲಾಗುತ್ತದೆ : ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ  ಈ ವರ್ಷ ಸ್ವಾತಂತ್ರ್ಯೋತ್ಸವವನ್ನು ಸರಳ ರೀತಿ ಆಚರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಸ್ವಾತಂತ್ರ್ಯ ದಿನ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಸ್ವಾತಂತ್ರೋತ್ಸವಕ್ಕೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿತ್ತು. ಆದ್ರೆ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಈ ಬಾರಿ ಸರಳ ರೀತಿಯಲ್ಲಿ ಆಚರಿಸಲಾಗುತ್ತದೆ ಎಂದು ಹೇಳಿದ್ದಾರೆ. …

Read More »

ಮಕ್ಕಳ ಪರೇಡ್, ಸಾಂಸ್ಕೃತಿಕ ಕಾರ್ಯಕ್ರಮ ಇಲ್ಲ

ಬೆಳಗಾವಿ: ‘ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು. ಇಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಆ.15ರ ಬೆಳಿಗ್ಗೆ 9ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಅಂತರ ಕಾಯ್ದುಕೊಂಡು ಭಾಗವಹಿಸಬೇಕು. ಪ್ರತಿ ವರ್ಷದಂತೆ …

Read More »