Breaking News

ಜಿಲ್ಲೆ

ಶಾಸಕ ತಿಪ್ಪಾರೆಡ್ಡಿ ಹಿರಿಯರು ನಾನು ಅವರು ಇಬ್ಬರು ಮಂತ್ರಿ ಆಗುವ ಕಾಲ ಬಹಳ ದೂರವಿಲ್ಲ. ನಾವು ಇಬ್ಬರು ಸಹ ಮಂತ್ರಿ ಆಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಹಿಂದೆ ನಡೆದ ಸಚಿವ ಸಂಪುಟ ವಿಸ್ತರಣೆ ವೇಳೆ ಕೊನೆಗಳಿಗೆಯಲ್ಲಿ ಉಮೇಶ್ ಕತ್ತಿಯಾವರಿಗೆ ಸಚಿವ ಸ್ಥಾನ ಕೈತಪ್ಪಿತ್ತು. ಆದ್ರೆ, ಈ ಬಾರಿ ಅವರಿಗೆ ಮಂತ್ರಿಗಿರಿ ಸಿಗುವ ಸಾಧ್ಯತೆಗಳು ಹೆಚ್ಚಿವೆ. ಇನ್ನು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಶಾಸಕರಿಗೆ ಸಮಾಧಾನ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ನಿಗಮ ಮಂಡಳಿಗಳನ್ನ ನೀಡಿದ್ದರು. ಹಲವರು ನಯವಾಗೆ ನಿರಾಕರಿಸಿದರೆ ಶಾಸಕ ತಿಪ್ಪಾರೆಡ್ಡಿ ಮಾತ್ರ ನನಗೆ ಅವಮಾನ ಮಾಡಲಾಗಿದೆ. ನನಗೆ ಸಚಿವ ಸ್ಥಾನ ಬೇಕು ಎಂದು ಬಹಿರಂಗವಾಗೆ ತಮ್ಮ ಅಸಮಾಧಾನ ಹೊರ ಹಾಕಿದ್ದರು. ಈಗ ಉಮೇಶ್ ಕತ್ತಿ ಸಹ ನನಗೆ ಮಂತ್ರಿ ಸ್ಥಾನ ಬೇಕು ಎಂದಿದ್ದಾರೆ.

ಬೆಳಗಾವಿ: ನಿಗಮ ಮಂಡಳಿ ನೇಮಕ ಬೆನ್ನಲ್ಲೇ ಇದೀಗ ಸಂಪುಟ ವಿಸ್ತರಣೆ ಸದ್ದು ಜೋರಾಗಿದ್ದು, ಆಗಸ್ಟ್ ಮೊದಲ ವಾರದಲ್ಲೇ ಬಿಎಸ್‌ವೈ ಕೆಲವರನ್ನ ಸಂಪುಟದಿಂದ ಕೈಬಿಟ್ಟು ಬೇರೆಯವರಿಗೆ ಚಾನ್ಸ್ ಕೊಡಲು ಚಿಂತನೆ ನಡೆಸಿದ್ದಾರೆ. ಇದರ ಮಧ್ಯೆ ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಈ ಸಲ ಮಂತ್ರಿಯಾಗುವುದು ಫಿಕ್ಸ್ ಎನ್ನುವ ಅರ್ಥದಲ್ಲಿ ಹೇಳಿಕೆ ಕೊಟ್ಟಿದ್ದಾರೆ. ಚಿಕ್ಕೋಡಿಯಲ್ಲಿ ಇಂದು (ಬುಧವಾರ) ಸುದ್ದಿಗಾರರೊಂದಿಗೆ ಮಾತನಾಡಿರುವ ಉಮೇಶ್ ಕತ್ತಿ, ರಾಜ್ಯದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆಗೆ ಸಿದ್ಧತೆಗಳು ನಡೆದಿರುವ …

Read More »

ಬೆಳಗಾವಿ | 228 ಜನರಿಗೆ ಸೋಂಕು ದೃಢ, 6 ಮಂದಿ ಸಾವು

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 228 ಮಂದಿಗೆ ಕೋವಿಡ್-19 ದೃಢಪಟ್ಟಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ನೀಡಿರುವ ಮಾಹಿತಿ ಪ್ರಕಾರ, ಆಸ್ಪತ್ರೆಗೆ ದಾಖಲಾಗಿದ್ದ 6 ಮಂದಿ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅಥಣಿ ತಾಲ್ಲೂಕಿನ 58 ವರ್ಷದ ವ್ಯಕ್ತಿ, ಬೈಲಹೊಂಗಲದ 44 ವರ್ಷದ ಪುರುಷ, ಸವದತ್ತಿಯ 65 ವರ್ಷದ ಮಹಿಳೆ, ರಾಯಬಾಗ ತಾಲ್ಲೂಕಿನ ಕುಡಚಿಯ 55 ವರ್ಷದ ಮಹಿಳೆ ಹಾಗೂ 46 ವರ್ಷದ ಪುರುಷ ಹಾಗೂ ಬೆಳಗಾವಿ ತಾಲ್ಲೂಕಿನ 54 ವರ್ಷದ …

Read More »

ಕೋವಿಡ್-19: ಪ್ರತೀ ದಿನ ತನ್ನ ದಾಖಲೆಯನ್ನು ತಾನೇ ಮುರಿಯುತ್ತಿರುವ ಕರ್ನಾಟಕ, ಕೊರೋನಾ ಪಾಸಿಟಿವ್ ದುಪ್ಪಟ್ಟು!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಅಬ್ಬರ ಹೆಚ್ಚಾಗುತ್ತಲೇ ಇದ್ದು, ಪ್ರತೀನಿತ್ಯ ಕರ್ನಾಟಕ ತನ್ನ ದಾಖಲೆಯನ್ನು ತಾನೇ ಮುರಿಯುತ್ತಿದೆ. ರಾಜ್ಯದಲ್ಲಿ ಸೋಂಕಿನ ಸರಾಸರಿ ಪಾಸಿಟಿವಿಟಿ ಪ್ರಮಾಣ ದುಪ್ಪಟ್ಟಾಗಿದೆ. ಕಳೆದ ಜು.10ರವರೆಗೆ ಪ್ರತಿ 100 ಪರೀಕ್ಷೆಗಳಲ್ಲಿ ಸರಾಸರಿ ಶೇ.4.18ರಷ್ಟಿದ್ದ ಪಾಸಿಟಿವಿಟಿ ದರ ಇದೀಗ ಶೇ.8.60ಕ್ಕೆ ಏರಿಕೆಯಾಗಿದೆ. ಅಲ್ಲದೆ, ಕಳೆದ 18 ದಿನಗಳಲ್ಲಿ ಪ್ರತಿ 100 ಪರೀಕ್ಷೆಗಳಲ್ಲಿ ಸರಾಸರಿ ಶೇ.16.88 ಮಂದಿಗೆ ಸೋಂಕು ದೃಢಪಡುವ ಮೂಲಕ ಆತಂಕ ಹೆಚ್ಚಾಗುವಂತೆ ಮಾಡಿದೆ. ರಾಜ್ಯದಲ್ಲಿ ಜು.10ರವರೆಗೆ ಪಾಸಿಟಿವಿಟಿ …

Read More »

ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನಾ ವರದಿ ಅನುಷ್ಠಾನಕ್ಕೆ ಆಡಳಿತಾತ್ಮಕ ಒಪ್ಪಿಗೆ ನೀಡಿದ ಸರ್ಕಾರ

ಬೆಳಗಾವಿ: ಉತ್ತರ ಕರ್ನಾಟಕದ ಮಹತ್ವಾಕಾಂಕ್ಷೆಯ ಕುಡಿಯುವ ನೀರಿನ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಒಪ್ಪಿಗೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ‌ ನದಿಗೆ ಅಣೆಕಟ್ಟು ನಿರ್ಮಾಣ ಮಾಡಿ. ಕಾಲುವೆ ಮುಖಾಂತರ 1.72 ಟಿಎಂಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆ ತಿರುಗಿಸುವ ಕಳಸಾ ನಾಲಾ ತಿರುವು ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನೆರಸೆ ಗ್ರಾಮದ ಬಳಿ ಬಂಡೂರ …

Read More »

ಕೋವಿಡ್ ಸೋಂಕಿತರಿಗೆ ದಿನಬಳಕೆ-ಮೆಡಿಕಲ್‌ ಕಿಟ್‌ ವಿತರಣೆ

ಗೋಕಾಕ: ಕಷ್ಟದಲ್ಲಿರುವ ಜನರಿಗೆ ಸಹಾಯ ಹಸ್ತ ಚಾಚುವ ಮೂಲಕ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾನವೀಯತೆಗೆ ಸಾಕ್ಷಿಯಾಗಿದ್ದಾರೆ ಎಂದು ಹಿರಿಯ ತಜ್ಞ ವೈದ್ಯ ಡಾ| ಆರ್‌.ಎಸ್‌. ಬೆಣಚಿನಮರಡಿ ಹೇಳಿದರು. ಮಂಗಳವಾರ ಇಲ್ಲಿಯ ಎನ್‌ಎಸ್‌ಎಫ್‌ ಅತಿಥಿ ಗೃಹದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊರೊನಾ ರೋಗಿಗಳಿಗೆ ಕೊಡಮಾಡಿದ ದಿನಬಳಕೆಯ ಮತ್ತು ಮೆಡಿಕಲ್‌ ಕಿಟ್‌ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಲಾಕ್‌ಡೌನ್‌ ಸಮಯದಲ್ಲಿ ಅರಭಾವಿ ಕ್ಷೇತ್ರದ ಪ್ರತಿ ಕುಟುಂಬಕ್ಕೆ ದಿನಸಿ ಕಿಟ್‌ ವಿತರಿಸಿದ್ದ ಶಾಸಕರು ಈಗ …

Read More »

ಇಂದು ಹಾಪ್ ಸೆಂಚುರಿ ಬಾರಿಸಿದ ಕೊರೋನಾ: ನಗರದ ಒಂದೇ ಕುಟುಂಬದ ಹತ್ತು ಜನರಿಗೆ ತಗುಲಿದ ಸೋಂಕು

ಗೋಕಾಕ: ಗೋಕಾಕ ತಾಲೂಕಿನಲ್ಲಿ ಮಾರಣಾಂತಿಕ ಕೊರೋನಾ ಸೋಂಕು ಪ್ರಥಮ ಬಾರಿಗೆ ಹಾಪ್ ಸೆಂಚುರಿ ಬಾರಿಸಿದ್ದು ಒಂದೇ ಕುಟುಂಬದ 10 ಜನರಿಗೆ ಕೊರೋನಾ ಧೃಡಪಟ್ಟಿದೆ ಎಂದು ತಾಲೂಕಾ ಆರೋಗ್ಯ ಅಧಿಕಾರಿ ಜಗದೀಶ ಜಿಂಗಿ ಮಾಹಿತಿ ನೀಡಿದ್ದಾರೆ.   ಗೋಕಾಕ ತಾಲೂಕಿನಲ್ಲಿ ಇಂದು ಒಟ್ಟು 57 ಪ್ರಕರಣಗಳು ವರದಿಯಾಗಿದ್ದು ಗೋಕಾಕ ನಗರದಲ್ಲಿಯೆ 24 ಸೋಂಕಿತರು ಪತ್ತೆಯಾಗಿದ್ದಾರೆ. ನಗರದ ವಿದ್ಯಾನಗರದ ಒಂದೇ ಕುಟುಂಬದ 10 ಜನರಿಗೆ ಕೊರೋನಾ ತಗುಲಿದ್ದು ಆತಂಕ ಹೆಚ್ಚಿಸಿದೆ. ಉಳಿದಂತೆ ಗೋಕಾಕ …

Read More »

ಸಚಿವ ಸ್ಥಾನ ಕಳೆದುಕೊಳ್ಳುವ ಭೀತಿ- ದಿಢೀರ್ ದೆಹಲಿಗೆ ದೌಡಾಯಿಸಿದ ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಚುರುಕಾಗಿದೆ. ಇದರ ನಡುವೆಯೇ ನಿಗಮ ಮಂಡಳಿಗಳ ನೇಮಕ ಮಾಡಿ ಆದೇಶ ನೀಡಿದ್ದ ಸಿಎಂ ಪರೋಕ್ಷವಾಗಿ ಸಚಿವ ಸಂಪುಟ ಪುನಾರಚನೆಗೆ ಸೂಚನೆ ನೀಡಿದ್ದಾರೆ ಎನ್ನಲಾಗಿತ್ತು. ಇದರ ನಡುವೆಯೇ ಸಚಿನ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ದೆಹಲಿಗೆ ಭೇಟಿ ನೀಡಿದ್ದಾರೆ. ನಿನ್ನೆ ರಾತ್ರಿಯೇ ದೆಹಲಿಗೆ ಭೇಟಿ ನೀಡಿರುವ …

Read More »

ಅನುಷ್ಕಾಳನ್ನು ಭೇಟಿಯಾಗದಿದ್ದರೆ ನಾನು ಬದಲಾಗುತ್ತಿರಲಿಲ್ಲ: ಪತ್ನಿಯನ್ನು ಹಾಡಿಹೊಗಳಿದ ವಿರಾಟ್

ನವದೆಹಲಿ: ಅನುಷ್ಕಾಳನ್ನು ಭೇಟಿಯಾಗದಿದ್ದರೆ ಜೀವನದಲ್ಲಿ ನಾನು ಬದಲಾಗುತ್ತಿರಲಿಲ್ಲ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಹೇಳಿದ್ದಾರೆ. ಕೊರೊನಾ ಲಾಕ್‍ಡೌನ್ ನಂತರ ಭಾರತ ಕ್ರಿಕೆಟ್ ತಂಡ ಯಾವುದೇ ಕ್ರಿಕೆಟ್ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಮನೆಯಲ್ಲೇ ಉಳಿದಿರುವ ಆಟಗಾರರು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿ ಇದ್ದಾರೆ. ಈಗ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರು ಜೊತೆ ‘ಓಫನ್ ನೆಟ್ಸ್ ವಿತ್ ಅಗರ್ವಾಲ್’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿರುವ ವಿರಾಟ್, ಪತ್ನಿಯನ್ನು ಹಾಡಿಹೊಗಳಿದ್ದಾರೆ …

Read More »

ಕಾಫಿನಾಡ ಏಕೈಕ ಕಾರ್ಖಾನೆಗೆ ಬೀಗ……….

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿದ್ದ ಕಾಫಿನಾಡ ಏಕೈಕ ಕಾರ್ಖಾನೆ ವಿಜ್ಞಾನ್ ಇಂಡಸ್ಟ್ರೀಸ್ ಲಿಮಿಟೆಡ್‍ಗೆ ಬೀಗ ಬೀಳುವ ಕಾಲ ಸನ್ನಿಹಿತವಾಗಿದ್ದು, ಕಾರ್ಖಾನೆಯನ್ನು ನೆಚ್ಚಿಕೊಂಡು ನಾಲ್ಕೈದು ದಶಕಗಳಿಂದ ಬದುಕು ಕಟ್ಟಿಕೊಂಡಿದ್ದ ಕಾರ್ಮಿಕರ ಪರಿಸ್ಥಿತಿ ಅತಂತ್ರವಾಗಿದೆ. ಪ್ರಸ್ತುತ ಕಾರ್ಖಾನೆಯಲ್ಲಿ 60 ಜನ ಪರ್ಮೆಂಟ್ ಉದ್ಯೋಗಿಗಳು, 12 ಜನ ಟ್ರೈನಿಸ್, 10 ಆಫೀಸರ್ಸ್ ಸೇರಿದಂತೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ 180 ಕಾರ್ಮಿಕರು ಕಾರ್ಖಾನೆಯಿಂದ ಬದುಕು ಕಟ್ಟಿಕೊಂಡಿದ್ದರು. ಆದರೀಗ ಕಾರ್ಖಾನೆಗೆ ಬೀಗ ಬೀಳುತ್ತೆಂದು ನೌಕರರು ಕಂಗಾಲಾಗಿದ್ದಾರೆ. …

Read More »

ಶ್ರೀಗಳೊಬ್ಬರು ಭಕ್ತರು, ಮಠ ದೂರ ಉಳಿದು ಹೊಲಗದ್ದೆಯಲ್ಲಿ ಕುರಿ ಕಾಯತೊಡಗಿದ್ದಾರೆ‌.

ಹಾವೇರಿ : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಭಕ್ತರ ಹಾಗೂ ತಮ್ಮ ಆರೋಗ್ಯದ ಸುರಕ್ಷತೆಗಾಗಿ ಶ್ರೀಗಳೊಬ್ಬರು ಭಕ್ತರು, ಮಠ ದೂರ ಉಳಿದು ಹೊಲಗದ್ದೆಯಲ್ಲಿ ಕುರಿ ಕಾಯತೊಡಗಿದ್ದಾರೆ‌. ಹೌದು. ಹಾವೇರಿ ಜಿಲ್ಲೆಯ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಅವರು ಕಳೆದ ಕೆಲ ದಿನಗಳಿಂದ ಮಠ ತೊರೆದು ಕುರಿಗಳನ್ನ ಕಾಯುತ್ತಿದ್ದಾರೆ. ಕೊರೊನಾ ಸಂಕಷ್ಟದಲ್ಲಿ ಕಾಗಿನೆಲೆ ಕನಕ ಗುರುಪೀಠ, ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿ ಮತ್ತು ಬಳ್ಳಾರಿ ಜಿಲ್ಲೆಯ …

Read More »