ಧಾರವಾಡ(ಜು.28): ಧಾರವಾಡ ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಹಣವನ್ನು ಬೇರೆಯವರ ಹೆಸರಲ್ಲಿ ಜಮಾ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ತೀವ್ರ ತರಾಟೆ ತೆಗೆದುಕೊಂಡಿದ್ದಾರೆ.ಕೇಂದ್ರ ಸಚಿವ ಪ್ರಹ್ಲಾದ್ ದೆಹಲಿಯಿಂದ ಆನ್ಲೈನ್ಲ್ಲೇ ವಿಡಿಯೋ ಸಂವಾದ ಮೂಲಕ ಧಾರವಾಡ ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ದಿಶಾ ಸಭೆ ನಡೆಸಿದರು. ಈ ವೇಳೆ ಜಿಲ್ಲಾ ಪಂಚಾಯತ್ ಸಿಇಒ ವಿರುದ್ಧ ಜೋಶಿ ಗರಂ ಆಗಿದ್ದರು. …
Read More »ನಾಲ್ಕು ಜಿಲ್ಲೆಗಳಿಗೆ ಸಚಿವ ಸ್ಥಾನ ಮರೀಚಿಕೆ?
ಕಲಬುರ್ಗಿ: ಸಚಿವ ಸ್ಥಾನಕ್ಕೆ ತೀವ್ರ ಲಾಬಿ ನಡೆಸಿದ್ದ ಮೂವರೂ ಸೇರಿದಂತೆ ಕಲ್ಯಾಣ ಕರ್ನಾಟಕದ ಐವರು ಶಾಸಕರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಿಗಮ-ಮಂಡಳಿಗೆ ನೇಮಕ ಮಾಡಿದ್ದಾರೆ. ಆ ಮೂಲಕ ಈ ಜಿಲ್ಲೆಗಳಿಗೆ ಸದ್ಯ ಸಚಿವ ಸ್ಥಾನ ದೊರೆಯುವುದಿಲ್ಲ ಎಂಬ ಸಂದೇಶವೂ ರವಾನೆಯಾದಂತಾಗಿದೆ. ಬಳ್ಳಾರಿ ಜಿಲ್ಲೆಯ ಆನಂದ ಸಿಂಗ್ ಹಾಗೂ ಬೀದರ್ ಜಿಲ್ಲೆಯ ಏಕೈಕ ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಅವರು ಸಚಿವರಾಗಿದ್ದಾರೆ. ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಿಗೆ ಸಂಪುಟದಲ್ಲಿ ಪ್ರಾತಿನಿಧ್ಯ …
Read More »ಜೈಲಿನಲ್ಲೇ ಮರ್ಡರ್ಗೆ ಸ್ಕೆಚ್; ₹1 ಕೋಟಿ ಸುಪಾರಿ ಪಡೆದಿದ್ದ ಆರೋಪಿಗಳು ಅರೆಸ್ಟ್
ಬೆಂಗಳೂರು: ಜೈಲಿನಲ್ಲೇ ಇದ್ದು ಮರ್ಡರ್ ಮಾಡೋಕೆ ಸ್ಕೆಚ್ ಹಾಕಿದ್ದ ಖತರ್ನಾಕ್ ಗ್ಯಾಂಗ್ನ ಒಂಬತ್ತು ಜನ ಆರೋಪಿಗಳನ್ನು ಪೊಲೀಸರು ಹೆರೆಮುರಿ ಕಟ್ಟಿದ್ದಾರೆ. ಕಾಮಾಕ್ಷಿಪಾಳ್ಯ ನಿವಾಸಿ ವರಲಕ್ಷ್ಮೀ ಎಂಬುವವರ ಪತಿ ಗೋವಿಂದೇ ಗೌಡನ ಹತ್ಯೆಯ ಪ್ರತೀಕಾರವಾಗಿ ಕೊಲೆ ಮಾಡಿದ ಆರೋಪಿಗಳ ಹತ್ಯೆಗೆ ವರಲಕ್ಷ್ಮೀ ಸುಪಾರಿ ನೀಡಿದ್ದರು ಎನ್ನಲಾಗಿದೆ. ವರಲಕ್ಷ್ಮೀ ಹಾಗೂ ಗೋವಿಂದೇಗೌಡನಿಗೆ ಆತ್ಮೀಯನಾಗಿದ್ದ ಚಿಕ್ಕತಿಮ್ಮೇಗೌಡ, ತಾನು ಬೆಳೆಯುತ್ತಿದ್ದಂತೆ ಇಬ್ಬರನ್ನ ದೂರ ಮಾಡಿದ್ದ. ವರಲಕ್ಷ್ಮೀ ದಂಪತಿಗೆ ಮಕ್ಕಳಿಲ್ಲದ ಕಾರಣ ಚಿಕ್ಕತಿಮ್ಮೇಗೌಡನನ್ನು ಬೆಳೆಸಿ, ಆತನಿಗೆ ಒಳ್ಳೆಯ …
Read More »ಹೋಟೆಲ್ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಮೂವರು ಅರೆಸ್ಟ್
ಬೆಂಗಳೂರು: ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಗೌರವ್, ಹೀನಾ ಹಾಗೂ ಅಣ್ಣಪ್ಪ ಬಂಧಿತರು. ಆರೋಪಿಗಳು ಲಾಡ್ಜ್ ನಡೆಸಲು ಪರವಾನಗಿ ಪಡೆದು ಅನಧಿಕೃತವಾಗಿ ವೇಶ್ಯಾವಾಟಿಕೆಗೆ ಇಳಿದಿದ್ದರು. ಕೆಲಸದ ಆಮಿಷವೊಡ್ಡಿ ಹೊರರಾಜ್ಯದಿಂದ ಹುಡುಗಿಯರನ್ನು ಕರೆಯಿಸಿ ಕಂಫರ್ಟ್ ಹೋಟೆಲ್ನಲ್ಲಿ ದಂಧೆ ನಡೆಸುತ್ತಿದ್ದರು. ಆನ್ಲೈನ್ನಲ್ಲಿ ಮೊಬೈಲ್ ನಂಬರ್ ಹಾಕಿಕೊಂಡು, ಟೆಲಿಕಾಲರ್ ಮೂಲಕ ಗಿರಾಕಿಗಳನ್ನ ಕರೆಸುತ್ತಿದ್ದರು. ಇದು ಯಾರಿಗೂ ಗೊತ್ತಾಗದಂತೆ ಒಂದೊಂದು ನಂಬರ್ ಯ್ಯೂಸ್ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ …
Read More »ತಿರುಗಿ ಬಿದ್ದ ಸಚಿವಾಕಾಂಕ್ಷಿಗಳು, ಬಿಜೆಪಿಗೆ ಶುರುವಾಯ್ತು ಹೊಸ ಟ್ರಬಲ್..!
ಬೆಂಗಳೂರು,ಜು.28- ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಉಂಟಾಗಬಹುದಾದ ಅಸಮಾಧಾನವನ್ನು ಶಮನಗೊಳಿಸಲು ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ ಬೆನ್ನಲ್ಲೇ, ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಆಕಾಂಕ್ಷಿಗಳು ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದು, ಆಡಳಿತಾರೂಢ ಕಮಲ ಪಕ್ಷ ವಿಲವಿಲ ಎನ್ನುವಂತಾಗಿದೆ. ಮಂತ್ರಿಸ್ಥಾನದ ಆಕಾಂಕ್ಷಿಯಾಗಿದ್ದವರಿಗೆ ಏಕಾಏಕಿ ನಿಗಮ ಮಂಡಳಿಗಳಿಗೆ ನೇಮಕ ಮಾಡಿದ್ದರಿಂದ ಶಾಸಕರಲ್ಲಿ ಅಸಮಾಧಾನ ಸ್ಫೋಟವಾಗಿದ್ದು, ಕೋವಿಡ್ ಸಂಕಷ್ಟದಲ್ಲಿ ಬಿಳಿ ಆನೆ ಎಂದೆ ಕರೆಯಲ್ಪಡುವ ನಿಗಮ-ಮಂಡಳಿಗಳಿಗೆ ನೇಮಕ ಮಾಡುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು …
Read More »ಟಿಪ್ಪು ಹೆಸರಿಲ್ಲದೆ ದೇಶದ ಇತಿಹಾಸ ಅಪೂರ್ಣ : ಡಿಕೆಶಿ
ಬೆಂಗಳೂರು: ದೇಶದ ಇತಿಹಾಸದಲ್ಲಿ ದಾಖಲಾದ ವಿಚಾರವನ್ನ ಬಿಎಸ್‍ವೈ ಸರ್ಕಾರ ಶಾಲಾ ಪಠ್ಯಗಳಿಂದ ಕೈಬಿಡಲು ಹೊರಟಿರುವುದು ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿರುವ ಡಿಕೆಶಿ, ಪಠ್ಯಪುಸ್ತಕದಿಂದ ಕೈ ಬಿಟ್ಟ ವಿಚಾರ ಸಂಬಂಧ ಸಂಶೋಧಕರು, ಶಿಕ್ಷಣ ತಜ್ಞರೊಂದಿಗೂ ಚರ್ಚಿಸಲಾಗುವುದು. ಇತಿಹಾಸ ತಿರುಚುವ ಮೂಲಕ ಜನರ ದಾರಿ ತಪ್ಪಿಸುತ್ತಿರುವುದನ್ನು ವಿರೋಧಿಸಬೇಕಿದೆ. ಯಾವುದೇ ಕಾರಣಕ್ಕೂ ಇತಿಹಾಸ ಮರೆಮಾಚಲು ಬಿಡುವುದಿಲ್ಲ ಎಂದು ಆಗ್ರಹಿಸಿದ್ದಾರೆ. ಟಿಪ್ಪು ಜಯಂತಿ ಆಚರಿಸುವುದು ಬಿಎಸ್‍ವೈ ಸರ್ಕಾರಕ್ಕೆ …
Read More »ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿ ರಚಿಸಿದರೆ ತುರ್ತು ಸಂದರ್ಭದಲ್ಲಿ ಪರಿಸ್ಥಿತಿ ನಿರ್ವಹಣೆಗೆ ಅನುಕೂಲವಾಗುತ್ತದೆ
ಬೆಳಗಾವಿ: ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿ ರಚಿಸಿದರೆ ತುರ್ತು ಸಂದರ್ಭದಲ್ಲಿ ಪರಿಸ್ಥಿತಿ ನಿರ್ವಹಣೆಗೆ ಅನುಕೂಲವಾಗುತ್ತದೆ. ಆದ್ದರಿಂದ ಮೂರು ದಿನಗಳಲ್ಲಿ ಸಮಿತಿಗಳನ್ನು ರಚಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು. ಜಿಲ್ಲಾಧಿಕಾರಿ ಕಚೇಯ ಸಭಾಂಗಣದಲ್ಲಿ ಮಂಗಳವಾರ (ಜುಲೈ 28) ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆಗಾಲ ಆರಂಭಗೊಂಡಿರುವುದರಿಂದ ಪ್ರವಾಹ, ಅತಿವೃಷ್ಟಿ ಸೇರಿದಂತೆ ಎಲ್ಲ ಬಗೆಯ ತುರ್ತು ಸಂದರ್ಭಗಳ ನಿರ್ವಹಣೆಗೆ …
Read More »ಬೆಳಗಾವಿ ಜಿಲ್ಲಾ ಪಂಚಾಯಿತಿ ನೂತನ ಸಿಇಒ ಆಗಿ ದರ್ಶನ ಎಚ್.ವಿ.
ಬೆಳಗಾವಿ: ಜಿಲ್ಲಾ ಪಂಚಾಯಿತಿ ನೂತನ ಸಿಇಒ ಆಗಿ ದರ್ಶನ ಎಚ್.ವಿ. ಅವರನ್ನು ನೇಮಕಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ದರ್ಶನ ಅವರನ್ನು ಬೆಳಗಾವಿ ಜಿಲ್ಲಾ ಪಂಚಾಯಿತಿಗೆ ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ಬೆಳಗಾವಿ ಜಿಪಂ ಸಿಇಒ ಆಗಿದ್ದ ಡಾ. ಕೆ.ವಿ ರಾಜೇಂದ್ರ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಇಲ್ಲಿನ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಡಾ. ಕೆ.ವಿ ರಾಜೇಂದ್ರ ಅವರನ್ನು ದಕ್ಷಿಣ ಕನ್ನಡ …
Read More »ಶೀಘ್ರದಲ್ಲಿಯೇ ಗೋಕಾಕ-ಮೂಡಲಗಿ ತಾಲೂಕುಗಳಲ್ಲಿ ಕೇಂದ್ರಿಕೃತ ಆಮ್ಲಜನಕ ಪೂರೈಕೆಯ ಘಟಕ ಆರಂಭ : ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕೊರೊನಾ ಸೋಂಕಿನ ರೋಗಿಗಳು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪುತ್ತಿರುವದರಿಂದ ಇದನ್ನು ಹೋಗಲಾಡಿಸಲು ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಕೇಂದ್ರೀಕೃತ ಆಮ್ಲಜನಕ ಪೂರೈಕೆಯ ಘಟಕವನ್ನು ಪ್ರಾರಂಭಿಸುವುದಾಗಿ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಕಿಟ್‍ಗಳನ್ನು ಹಸ್ತಾಂತರಿಸುವ ಮುನ್ನ ಅಧಿಕಾರಿಗಳೊಂದಿಗೆ ಬೆಂಗಳೂರಿನಿಂದ ದೂರವಾಣಿ ಮೂಲಕ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ಕೊರೊನಾ ರೋಗಿಗಳಿಗೆ ಸಮರ್ಪಕ ಆಕ್ಸಿಜನ್ ವ್ಯವಸ್ಥೆ ಇಲ್ಲದ್ದರಿಂದ ಸಾವನ್ನಪ್ಪುತ್ತಿದ್ದಾರೆ. ಆದ್ದರಿಂದ ಗೋಕಾಕ ಮತ್ತು ಮೂಡಲಗಿ …
Read More »ಕೊರೊನಾ ಕಾಲದಲ್ಲಿ ಶಾಲೆ ತೆರೆಯಲು ಅವಸರವಿಲ್ಲ: ಸುರೇಶ್ ಕುಮಾರ್
ಬೆಂಗಳೂರು: ಕೊರೊನಾ ಸಾಂಕ್ರಾಮಿಕ ಪ್ರಸರಣದ ಈ ಕಾಲಘಟ್ಟದಲ್ಲಿ ಶಾಲೆಗಳನ್ನು ತೆರೆಯುವ ಅವಸರ ಸರ್ಕಾರದ ಮುಂದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಕೊರೊನಾ ಸಾಮಾಜಿಕ ಸಂದರ್ಭದಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣ ಮತ್ತು ಶಾಲಾ ಚಟುವಟಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಮಂಗಳವಾರ ಶೈಕ್ಷಣಿಕ ವಲಯದಲ್ಲಿ ತೊಡಗಿಸಿಕೊಂಡಿರುವ ಸರ್ಕಾರೇತರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ವೆಬಿನಾರ್ ಸಂವಾದದಲ್ಲಿ ಮಾತನಾಡಿದ ಅವರು, ಈ ಸಾಮಾಜಿಕ ಪರಿಸ್ಥಿತಿಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಅವಸರದಲ್ಲಿ ಶಾಲೆ ತೆರೆಯುವುದಿಲ್ಲವಾದರೂ …
Read More »
Laxmi News 24×7