Breaking News

ಜಿಲ್ಲೆ

ಬೆಳಗಾವಿ | ಆರ್‌ಟಿಇ; ಶೇ 50ಕ್ಕಿಂತಲೂ ಕಡಿಮೆ ಅರ್ಜಿ ಸಲ್ಲಿಕೆ!…

ಬೆಳಗಾವಿ: ಶಿಕ್ಷಣ ಹಕ್ಕು ಕಾಯ್ದೆಗೆ (ಆರ್‌ಟಿಇ) ತಿದ್ದುಪಡಿ ತಂದ ನಂತರ ಜಿಲ್ಲೆಯಲ್ಲಿರುವ ‌ಅನುದಾನಿತ ಹಾಗೂ ಅನುದಾನ ರಹಿತ (ಖಾಸಗಿ) ಶಾಲೆಗಳಲ್ಲಿರುವ ಸೀಟುಗಳ ಬೇಡಿಕೆ ತೀವ್ರ ಕುಸಿತ ಕಂಡುಬಂದಿದೆ. ಪ್ರಸಕ್ತ ಸಾಲಿನಲ್ಲಿ ಶೇ 50ಕ್ಕಿಂತಲೂ ಕಡಿಮೆ ಬೇಡಿಕೆ ಕಂಡುಬಂದಿದೆ. ಒಟ್ಟು 1966 ಸೀಟುಗಳ ಪೈಕಿ ಕೇವಲ 883 ಸೀಟುಗಳಿಗೆ ಮಾತ್ರ ಅರ್ಜಿ ಸಲ್ಲಿಕೆಯಾಗಿರುವುದೇ ಇದಕ್ಕೆ ಸಾಕ್ಷಿ. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ 40 ಅನುದಾನಿತ ಹಾಗೂ 5 ಅನುದಾನ ರಹಿತ ಶಾಲೆಗಳು ಆರ್‌ಟಿಇ ವ್ಯಾಪ್ತಿ …

Read More »

ಹೈಕಮಾಂಡ್ ನಾಯಕರಿಗೆ ಶಾಕ್ ಕೊಟ್ಟ B.S.Y……….

ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಏರಿಕೆ ಒಂದು ವರ್ಷದ ಸಂಭ್ರಮದಲ್ಲಿರುವಾಗಲೇ ಹೈಕಮಾಂಡ್‌ ನಾಯಕರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಶಾಕ್‌ ನೀಡಿದ್ದಾರೆ. ಬಿಜೆಪಿ ಹೈಕಮಾಂಡ್, ರಾಜ್ಯ ಬಿಜೆಪಿ ಘಟಕಕ್ಕೆ ಗೊತ್ತಿಲ್ಲದೆ ನಿಗಮ ಮಂಡಳಿಗೆ ಶಾಸಕರನ್ನು ಯಡಿಯೂರಪ್ಪ ನೇಮಕ ಮಾಡಿದ್ದಾರೆ. ಈಗ ಪಕ್ಷ, ಸಂಘದ ನಿಷ್ಠಾವಂತ ಕಾರ್ಯಕರ್ತರಿಗೂ ಮಣೆ ಹಾಕದೇ ನೇಮಿಸಿದ್ದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಘಟಕ ಅಸಮಾಧಾನ ವ್ಯಕ್ತಪಡಿಸಿದೆ. ಪಕ್ಷಕ್ಕೆ ಸಂಬಂಧಿಸಿದ ಯಾವುದೇ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಮುನ್ನ ಪಕ್ಷದ ನಾಯಕರ …

Read More »

ಸಂತೆ ವ್ಯಾಪಾರಿಗಳಿಗೆ ಪೊಲೀಸರಿಂದ ಲಾಠಿ ಏಟು……..

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದೆ. ಹೀಗಾಗಿ ಕೊಡಗು ಜಿಲ್ಲೆಯಲ್ಲಿ ಸಂತೆಗಳನ್ನು ನಡೆಸದಂತೆ ನಿರ್ಬಂಧ ಹೇರಲಾಗಿದೆ. ಆದರೂ ನಿಯಮ ಉಲ್ಲಂಘಿಸಿ ಸೋಮವಾರಪೇಟೆಯಲ್ಲಿ ಇಂದು ವ್ಯಾಪಾರಿಗಳು ಸಂತೆಯಲ್ಲಿ ಅಂಗಡಿ ಹಾಕಿದ್ದರು. ವಿಷಯ ತಿಳಿದ ಪೊಲೀಸರು ಅಂಗಡಿಗಳನ್ನು ತೆರವು ಮಾಡುವಂತೆ ಖಡಕ್ಕಾಗಿ ಹೇಳಿದರೂ, ಕ್ಯಾರೆ ಎನ್ನಲಿಲ್ಲ. ಆಗ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಎಷ್ಟೇ ಎಚ್ಚರಿಕೆ ನೀಡಿದರೂ ಕೇಳದ ಹಿನ್ನೆಲೆ ಪೊಲೀಸರಿಗೆ ಬೇರೆ ದಾರಿಯಿಲ್ಲದೆ ಲಾಠಿ ರುಚಿ ತೋರಿಸಿದರು. …

Read More »

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮತ್ತೆ ಲಾಕ್‍ಡೌನ್ ಜಾರಿ ಇಲ್ಲ : ಸಿಎಂ

ಬೆಂಗಳೂರು,ಜು.27-ರಾಜ್ಯದಲ್ಲಿ ಇನ್ನು ಮುಂದೆ ಯಾವುದೇ ಕಾರಣಕ್ಕೂ ಲಾಕ್‍ಡೌನ್ ಜಾರಿ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮತ್ತೆ ಪುನರುಚ್ಚರಿಸಿದ್ದಾರೆ. ಇನ್ನು ಮುಂದೆ ಲಾಕ್‍ಡೌನ್ ಕುರಿತಂತೆ ನಾನು ಚರ್ಚೆಯನ್ನೇ ಮಾಡುವುದಿಲ್ಲ. ಈಗಾಗಲೇ 45 ದಿನ ರಾಜ್ಯದಲ್ಲಿ ಲಾಕ್‍ಡೌನ್ ಜಾರಿ ಮಾಡಲಾಗಿದೆ. ಪುನಃ ಅದರ ಬಗ್ಗೆ ಚರ್ಚೆಯೇ ಅಪ್ರಸ್ತುತ ಎಂದರು. ರಾಜ್ಯ ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕಾರ್ಯಕ್ರಮದಲ್ಲಿ ಹಮ್ಮಿಕೊಂಡಿದ್ದ ಸವಾಲುಗಳ ವರ್ಷ, ಪರಿಹಾರದ …

Read More »

ಸ್ಮಾರ್ಟ್‍ಸಿಟಿ ಯೋಜನೆಯಡಿ ಸಾಕಷ್ಟು ಅನುದಾನ ಬಿಡುಗಡೆ ಆಗಿದೆ. ಆದರೆ ರಕ್ಷಣಾ ಇಲಾಖೆಯ ಜಮೀನು ಹಸ್ತಾಂತರ ವಿಳಂಬ

ಬೆಳಗಾವಿ : ಸ್ಮಾರ್ಟ್‍ಸಿಟಿ ಯೋಜನೆಯಡಿ ಸಾಕಷ್ಟು ಅನುದಾನ ಬಿಡುಗಡೆ ಆಗಿದೆ. ಆದರೆ ರಕ್ಷಣಾ ಇಲಾಖೆಯ ಜಮೀನು ಹಸ್ತಾಂತರ ವಿಳಂಬ ಸೇರಿದಂತೆ ವಿವಿಧ ತಾಂತ್ರಿಕ ಕಾರಣಗಳಿಂದ ಕೆಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕಾಮಗಾರಿ ವ್ಯಾಪ್ತಿಯ ಖಾಸಗಿ ಆಸ್ತಿಗಳ ಸ್ವಾಧೀನ ಮತ್ತು ಜಮೀನು ಹಸ್ತಾಂತರ ಸೇರಿದಂತೆ ಎಲ್ಲ ಬಗೆಯ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿಕೊಳ್ಳಬೇಕು ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ …

Read More »

ಸರ್ಕಾರ  ನಾಲ್ವರು  ಶಾಸಕರ ಅಧ್ಯಕ್ಷ ಸ್ಥಾನವನ್ನು ವಾಪಸ್ ಪಡೆದು ಆದೇಶ ಹೊರಡಿಸಿದೆ.

ಬೆಂಗಳೂರು: ಕೆಲ ಹಿರಿಯ ಶಾಸಕರು ನಿಗಮ ಸ್ಥಾನಕ್ಕೆ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ  ರಾಜ್ಯ ಸರ್ಕಾರ  ನಾಲ್ವರು  ಶಾಸಕರ ಅಧ್ಯಕ್ಷ ಸ್ಥಾನವನ್ನು ವಾಪಸ್ ಪಡೆದು ಆದೇಶ ಹೊರಡಿಸಿದೆ. ಶಾಸಕರಾದ ಜಿ.ಎಚ್. ತಿಪ್ಪಾರಡ್ಡಿ, ಲಾಲನ್ ಮಂಡೆನ್, ಬಸವರಾಜ ದಡೆಸಗೂರು,  ಪರಣ್ಣ ಮುನವಳ್ಳಿ  ಅವರಿಗೆ ನೀಡಲಾದ ನಿಗಮ ಮಂಡಳಿ ಸ್ಥಾನವನ್ನು ವಾಪಸ್ ಪಡೆಯಲಾಗಿದೆ.  ಇಂದು ಮುಂಜಾನೆ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 24 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿದ್ದರು.  ಸಚಿವ …

Read More »

ಸಿಬ್ಬಂದಿ ಸೋಂಕು: ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿ ಸೀಲ್ ಡೌನ್!

ಚಿಕ್ಕೋಡಿ, ಜುಲೈ.27: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಚಿಕ್ಕೋಡಿಯ ಉಪ ವಿಭಾಗಾಧಿಕಾರಿ ಕಚೇರಿ ಸಿಬ್ಬಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಚಿಕ್ಕೋಡಿ ಉಪವಿಭಾಗಾಧಿಕಾರಿ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೇರಿದಂತೆ ಮಿನಿ ವಿಧಾನಸೌಧದಲ್ಲಿ 10ಕ್ಕೂ ಹೆಚ್ಚು ಕಚೇರಿಗಳನ್ನು ಸೀಲ್ ಡೌನ್ ಮಾಡಲಾಗಿದೆ. ಕೊರೊನಾ ಭಯ: ಚಿಕ್ಕೋಡಿಯಲ್ಲಿ ಸ್ವಯಂ …

Read More »

ಖಾದಿ ಮಂಡಳಿಗೆ ನೇಮಕ ನಿರೀಕ್ಷಿಸಿರಲಿಲ್ಲ, ಖುಷಿಯಾಗಿದೆ: ದುರ್ಯೋಧನ ಐಹೊಳೆ…?

ಬೆಳಗಾವಿ: ‘ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷನಾಗಿ ನೇಮಕಗೊಂಡಿರುವುದಕ್ಕೆ ಖುಷಿಯಾಗಿದೆ. ನಾನು ಈ ಹುದ್ದೆ ನಿರೀಕ್ಷಿಸಿರಲಿಲ್ಲ’ ಎಂದು ರಾಯಬಾಗದ ಶಾಸಕ ದುರ್ಯೋಧನ ಐಹೊಳೆ ಪ್ರತಿಕ್ರಿಯಿಸಿದರು. ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶ್ರಾವಣ ಸೋಮವಾರದ ದಿನ ಒಳ್ಳೆಯ ಕೊಡುಗೆ ನೀಡಿದ್ದಾರೆ. ಮಂಡಳಿಯಲ್ಲಿ ಕೆಲಸ ಮಾಡಲು ಬಹಳಷ್ಟು ಅವಕಾಶವಿದೆ. ಅದನ್ನು ಬಳಸಿಕೊಳ್ಳುತ್ತೇನೆ’ ಎಂದರು. ‘ಜಿಲ್ಲಾ ನಾಯಕರ ಸಹಕಾರ ಮತ್ತು ರಾಜಕಾರಣದಲ್ಲಿ ನನ್ನ ಗಾಡ್‌ಫಾದರ್‌ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಯಲಕ್ಕೂ ಕೊರೊನಾ ಸೋಂಕುRCU ವಿವಿ ಸಿಂಡಿಕೇಟ್ ಬ್ಯಾಂಕ್ ಸೀಲ್ ಡೌನ್

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಯಲಕ್ಕೂ ಕೊರೊನಾ ಸೋಂಕು ವಕ್ಕರಿಸಿದ್ದು, ವಿಶ್ವವಿದ್ಯಾಯಲ ಆವರಣದಲ್ಲಿರುವ ಸಿಂಡಿಕೇಟ್ ಬ್ಯಾಂಕ್ ಸಿಬ್ಬಂದಿಯೊಬ್ಬರಿಗೆ ಸೋಂಕು ದೃಢವಾಗಿದೆ. ಸಿಬ್ಬಂದಿಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ  ಸಿಂಡಿಕೇಟ್ ಬ್ಯಾಂಕ್ ಸೀಲ್ ಡೌನ್ ಮಾಡಲಾಗಿದೆ.  ನೌಕರನಿಗೆ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ  ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು.   ವರದಿ ಪಾಸಿಟಿವ್ ಬಂದಿದೆ.

Read More »

ಮಧ್ಯರಾತ್ರಿ ‘ಬಿಗ್‍ಬಾಸ್’ ಖ್ಯಾತಿಯ ಕವಿತಾ ಗೌಡ ಮನೆಗೆ ಹೋಗಿ ಚಂದನ್ ಸರ್ಪ್ರೈಸ್

ಬೆಂಗಳೂರು: ರಿಯಾಲಿಟಿ ಶೋ ‘ಬಿಗ್‍ಬಾಸ್’ ಖ್ಯಾತಿಯ ಕಿರುತೆರೆ ನಟಿ ಕವಿತಾ ಗೌಡ ಮನೆಗೆ ಮಧ್ಯರಾತ್ರಿ ನಟ ಚಂದನ್ ಹೋಗಿ ಸರ್ಪ್ರೈಸ್ ಕೊಟ್ಟಿದ್ದಾರೆ. ಭಾನುವಾರ ಕವಿತಾ ಗೌಡ ಹುಟ್ಟುಹಬ್ಬ ಇತ್ತು. ಕೊರೊನಾ ಇರುವುದರಿಂದ ಮನೆಯಲ್ಲಿಯೇ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇದೇ ವೇಳೆ ನಟ ಚಂದನ್ 12 ಗಂಟೆಗೆ ಸರಿಯಾಗಿ ಕವಿತಾ ಗೌಡ ಮನೆಗೆ ಹೋಗಿ ಅವರಿಗೆ ಸರ್ಪ್ರೈಸ್ ನೀಡಿದ್ದಾರೆ. ಅಷ್ಟೇ ಅಲ್ಲದೇ ಕವಿತಾ ಗೌಡ ಹುಟ್ಟುಹಬ್ಬಕ್ಕೆ ಉಡುಗೊರೆಯನ್ನು ಕೊಟ್ಟಿದ್ದಾರೆ. “ಸ್ನೇಹಿತರ ಹುಟ್ಟುಹಬ್ಬದ …

Read More »