ಹುಬ್ಬಳ್ಳಿ: ಬಿಜೆಪಿ ಮುಖಂಡನೊಬ್ಬ ಗುಟ್ಟಾಗಿ ಎರಡನೇ ಮದುವೆಯಾಗಿದ್ದು, ಪಡೆದುಕೊಂಡ ಹಣವನ್ನು ವಾಪಸ್ ಕೇಳಿದ್ದಕ್ಕೆ ಪತ್ನಿಯನ್ನೇ ರಸ್ತೆಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಹುಬ್ಬಳ್ಳಿಯ ಅಕ್ಷಯ ಕಾಲೋನಿಯಲ್ಲಿ ಘಟನೆ ನಡೆದಿದೆ. ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿ ಬಿಜೆಪಿ ಮುಖಂಡ, ಆತನ ಮೊದಲ ಪತ್ನಿ ಮತ್ತು ಮಕ್ಕಳು ಸೇರಿಕೊಂಡು ಎರಡನೇ ಪತ್ನಿ ಹಾಗೂ ಆಕೆಯ ಸಂಬಂಧಿಕರ ಮೇಲೆ ಹಲ್ಲೆ ಮಾಡಿದ್ದಾರೆ. ಮೊದಲ ಪತ್ನಿ ಇದ್ದರೂ ಆಕೆ ಮೃತಪಟ್ಟಿರುವುದಾಗಿ ನಂಬಿಸಿದ್ದ ಬಿಜೆಪಿ ಮುಖಂಡ 2012 ರಲ್ಲಿ ಎರಡನೇ ಮದುವೆಯಾಗಿದ್ದಾನೆ. …
Read More »ರಾಜ್ಯದ ಹಲವೆಡೆ ಧಾರಾಕಾರ ಮಳೆ
ಬೆಂಗಳೂರು: ರಾಜ್ಯದ ಹಲವೆಡೆ ಧಾರಾಕಾರ ಮಳೆ ಆಗ್ತಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಡದಾಳ ಹಳ್ಳದಲ್ಲಿ ಕೊಚ್ಚಿಹೋಗ್ತಿದ್ದ ವಾಹನವನ್ನು ಸ್ಥಳೀಯರು ಹಗ್ಗ ಕಟ್ಟಿ ಎಳೆದಿದ್ದಾರೆ. ವಾಹನದಲ್ಲಿದ್ದ ಐವರನ್ನು ರಕ್ಷಣೆ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯಲ್ಲೂ ಮಳೆ ಆರ್ಭಟ ಜೋರಾಗಿದೆ. ಜಗಳೂರು ತಾಲೂಕಿನ ಸಾಲಹಳ್ಳಿ-ಹಾಲಹಳ್ಳಿ ಮಧ್ಯೆ ಇರೋ ಚೆಕ್‍ಡ್ಯಾಂ ಕೊಚ್ಚಿಕೊಂಡು ಹೋಗಿದೆ. ದಾವಣಗೆರೆ ಬಾಡಾದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ರಾಯಚೂರು ಜಿಲ್ಲೆಯಲ್ಲೂ ಧಾರಾಕಾರ ಮಳೆ ಆಗ್ತಿದೆ. ಮಸ್ಕಿ ತಾಲೂಕಿನ ಮಾರಲದಿನ್ನಿಯಲ್ಲಿರುವ ಮಸ್ಕಿ ಜಲಾಶಯದಿಂದ …
Read More »ಕೃಷ್ಣಜನ್ಮಾಷ್ಟಮಿಗೆ ಇಸ್ಕಾನ್‍ನಲ್ಲಿ ನೇರ ದರ್ಶನ ಇಲ್ಲ- ಆನ್‍ಲೈನ್ ಮೂಲಕ ನೇರ ಪ್ರಸಾರ
ಬೆಂಗಳೂರು: ಕೊರೊನಾ ಎಫೆಕ್ಟ್ ಹಬ್ಬಹರಿದಿನಗಳಿಗೆ ತಟ್ಟಿದೆ. ವರಮಹಾಲಕ್ಷ್ಮೀಹಬ್ಬ, ಗಣೇಶ್ ಚತುರ್ಥಿ, ಶ್ರೀಕೃಷ್ಣಜನ್ಮಾಷ್ಟಮಿ ಹೀಗೆ ಸಾಲು ಸಾಲು ಹಬ್ಬಗಳು ಬರಲಿವೆ. ಶ್ರೀಕೃಷ್ಣಜನ್ಮಾಷ್ಟಮಿಗೆ ಈಗಾಗಲೇ ಇಸ್ಕಾನ್‍ನಲ್ಲಿ ಸಿದ್ಧತೆ ಆರಂಭಿಸಲಾಗಿದೆ. ಕೊರೊನಾದಿಂದ ಈ ಬಾರಿ ಇಸ್ಕಾನ್‍ನಲ್ಲಿ ನೇರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಆದರೆ ಆನ್‍ಲೈನ್ ಮೂಲಕ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಆಗಸ್ಟ್ 11, 12 ರಂದು ನಡೆಯುವ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮಗಳನ್ನ ಯೂಟ್ಯೂಬ್, ಫೇಸ್‍ಬುಕ್, ಇನ್ಸ್ಟಾಗ್ರಾಮ್, ಟ್ವಿಟ್ಟರ್ ವೀಕ್ಷಿಸಬಹುದಾಗಿದೆ. ಶ್ರೀರಾಧಾಕೃಷ್ಣಚಂದ್ರ ದೇವರಿಗೆ ಮಾಡುವ ಅಭಿಷೇಕವನ್ನ ನೇರಪ್ರಸಾರ …
Read More »ಇಂದು ದೇಶಾದ್ಯಂತ ಕಾರ್ಗಿಲ್ ವಿಜಯೋತ್ಸವಸಂಭ್ರಮ……..
ನವದೆಹಲಿ: ಇಂದು ದೇಶಾದ್ಯಂತ ಕಾರ್ಗಿಲ್ ವಿಜಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕಾರ್ಗಿಲ್ ಯುದ್ಧದಲ್ಲಿ ಮಡಿದ ಸೈನಿಕರಿಗೆ ಭಾರತೀಯರು ಗೌರವ ಸಲ್ಲಿಸುತ್ತಿದ್ದಾರೆ. ಜುಲೈ 26 ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯಪತಾಕೆಯನ್ನು ಹಾರಿಸಿದ ದಿನವಾಗಿದೆ. ಅಂದರೆ 1999ರ ಜುಲೈ 26ರಂದು 60 ದಿನಗಳ ಕಾರ್ಗಿಲ್ ಕದನ ಅಂತ್ಯವಾಗಿತ್ತು. ಪಾಕ್ ಮೇಲೆ ಭಾರತೀಯ ಯೋಧರು ವಿಜಯ ಸಾಧಿಸಿದ ಸ್ಮರಣಾರ್ಥ ಇಂದು ದೇಶದೆಲ್ಲೆಡೆ ‘ಕಾರ್ಗಿಲ್ ವಿಜಯ್ ದಿವಸ್’ ಆಚರಣೆ ಮಾಡಲಾಗುತ್ತಿದೆ.ಭಾರತೀಯ ಸೈನ್ಯದ ಶೌರ್ಯ, …
Read More »ನವಲಗುಂದ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಗುಂಡಿನ ಸದ್ದು……..
ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಗುಂಡಿನ ಸದ್ದು ಮೊಳಗಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಮಲ್ಲಪ್ಪ ಕರಿ ಎಂಬಾತ ಅದೇ ಗ್ರಾಮದ ಶರಣಪ್ಪ ಕಾಳೆ ಎಂಬಾತನ ಮೇಲೆ ಗುಂಡು ಹಾರಿಸಿದ್ದಾನೆ. ಇಬ್ಬರ ಮಧ್ಯೆ ಹಣದ ವಿಚಾರವಾಗಿ ಜಗಳ ನಡೆದಿತ್ತು. ಈ ಹಿನ್ನೆಲೆಯಲ್ಲಿ ಕೋಪಗೊಂಡ ಮಲ್ಲಪ್ಪ ಗುಂಡು ಹಾರಿಸಿದ್ದಾನೆ. ಶರಣಪ್ಪನ ಹೊಟ್ಟೆ ಮತ್ತು ಕೈಗೆ ಗುಂಡು ತಗುಲಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ …
Read More »ಅಂತ್ಯ ಸಂಸ್ಕಾರವಾದ ವಾರದ ಬಳಿಕ ಕೊರೊನಾ ವರದಿ- ಜನರ ಆಕ್ರೋಶ
ಚಿಕ್ಕಮಗಳೂರು: ಕೊರೊನಾ ಸೋಂಕಿತ ವ್ಯಕ್ತಿಗಳು ಸಾವನ್ನಪ್ಪಿ ಅವರ ಅಂತ್ಯ ಸಂಸ್ಕಾರವಾದ ವಾರದ ಬಳಿಕ ವರದಿಗಳು ಬರುತ್ತಿರುವುದರಿಂದ ಜಿಲ್ಲೆಯ ಜನ ಆತಂಕಕ್ಕೀಡಾಗಿ ಆರೋಗ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಎಂಟು ಹಾಗೂ ಆರು ದಿನಗಳ ಹಿಂದೆ ಸಾವನ್ನಪ್ಪಿದ ವ್ಯಕ್ತಿಗಳ ವರದಿ ತಡವಾಗಿ ಬಂದಿದ್ದು ಆರೋಗ್ಯ ಇಲಾಖೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಜುಲೈ 14ರಂದು ಕೊಪ್ಪ ಆಸ್ವತ್ರೆಯಲ್ಲಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದ ಪಟ್ಟಣದ ಮೇಲಿನ ಪೇಟೆಯ 60 ವರ್ಷದ ವೃದ್ಧ …
Read More »ಸಿದ್ದರಾಮಯ್ಯಗೆ ಲೀಗಲ್ ನೋಟಿಸ್ ಕೊಡಲು ಸಿಎಂ ತಯಾರಿ: ರಮೇಶ್ ಜಾರಕಿಹೊಳಿ
ಬೆಳಗಾವಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಲೀಗಲ್ ನೋಟಿಸ್ ನೀಡಲು ಸಿಎಂ ಯಡಿಯೂರಪ್ಪ ಅವರು ತಯಾರಿ ಮಾಡಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಕೊರೊನಾ ವಿಚಾರದಲ್ಲಿ ಭ್ರಷ್ಟಾಚಾರ ಆರೋಪ ಮಾಡುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಲೀಗಲ್ ನೋಟಿಸ್ ನೀಡಲು ಸರ್ಕಾರದ ಮಟ್ಟದಲ್ಲಿ ತಯಾರಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಸಿದ್ದರಾಮಯ್ಯ ಆರೋಪ ಬಗ್ಗೆ ಈಗಾಗಲೇ ನಮ್ಮ …
Read More »ಬೆಳಗಾವಿ | 30ರಿಂದ ಸಿಇಟಿ ಪರೀಕ್ಷೆ: ಸಿದ್ಧತೆಗೆ ಸೂಚನೆ
ಬೆಳಗಾವಿ: ‘ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಜುಲೈ 30ರಿಂದ ಮೂರು ದಿನಗಳವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚಿಸಿದರು. ಇಲ್ಲಿನ ಜಿಲ್ಲಾ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಕೋವಿಡ್-19 ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಒಳಗಡೆ ಹಾಗೂ ಸುತ್ತಲೂ ಸೋಂಕು ನಿವಾರಕ ದ್ರಾವಣ ಸಿಂಪಡಿಸಬೇಕು. ವಿದ್ಯಾರ್ಥಿಗಳು ಅಂತರ ಕಾಯ್ದುಕೊಳ್ಳುವಂತೆ ವ್ಯವಸ್ಥೆ ಮಾಡಬೇಕು’ ಎಂದು ತಿಳಿಸಿದರು. …
Read More »ಬೆಳಗಾವಿ| ಬ್ರಾಹ್ಮಣರಿಗೆ ಮೀಸಲಾತಿ: ವೆಬಿನಾರ್ ನಾಳೆ.
ಬೆಳಗಾವಿ: ‘ರಾಜ್ಯ ಸರ್ಕಾರ ಇತ್ತೀಚೆಗೆ ಬ್ರಾಹ್ಮಣರಿಗೆ ಶೇ 10ರಷ್ಟು ಮೀಸಲಾತಿ ಜಾರಿ ಮಾಡಿ ಆದೇಶಿಸಿದೆ. ಇದರಿಂದ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಆಗುವ ಪರಿಣಾಮಗಳ ಕುರಿತು ಜುಲೈ 26ರಂದು ಸಂಜೆ 4ಕ್ಕೆ ವೆಬಿನಾರ್ ಮೂಲಕ ಚಿಂತನ-ಮಂಥನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ವಿದ್ಯಾರ್ಥಿ ಬಂಧುತ್ವ ವೇದಿಕೆ ಮತ್ತು ಮಾನವ ಬಂಧುತ್ವ ವೇದಿಕೆ ತಿಳಿಸಿವೆ. ‘ಕಲಬುರ್ಗಿಯ ಕನಕ ಗುರುಪೀಠದ ಸಿದ್ಧರಾಮಾನಂದ ಸ್ವಾಮೀಜಿ ಚಾಲನೆ ನೀಡುವರು. ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ …
Read More »ಬೆಳಗಾವಿ | 116 ಮಂದಿಗೆ ಕೋವಿಡ್ ದೃಢ…
ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 116 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಒಬ್ಬರು ಮೃತರಾಗಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ. ಚಿಕಿತ್ಸೆಗಾಗಿ ಅವರನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಗಿ ಸಂಖ್ಯೆ 48,135 ಆದ 47 ವರ್ಷದ ವ್ಯಕ್ತಿ ಜುಲೈ 14ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರು 20ರಂದು ಸಾವಿಗೀಡಾಗಿದ್ದಾರೆ. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು. ಅವರು ಬೆಳಗಾವಿ ತಾಲ್ಲೂಕಿನವರು ಎಂದು ಮಾಹಿತಿ ನೀಡಿದೆ. ಸವದತ್ತಿ ವರದಿ: ತಾಲ್ಲೂಕಿನಲ್ಲಿ 19 ಮಂದಿಗೆ ಕೋವಿಡ್ …
Read More »
Laxmi News 24×7