Breaking News

ಜಿಲ್ಲೆ

ಸರ್ಕಾರಕ್ಕೆ ಸಿದ್ದು ಪಂಚಪ್ರಶ್ನೆ………

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ 2 ಸಾವಿರ ಕೋಟಿ ರೂ. ಹಗರಣದ ಆರೋಪ ಮಾಡಿದ ಬೆನ್ನಲ್ಲೇ ತಾನು ಹೆಣೆದ ಬಲೆಯಲ್ಲಿ ಬಿಜೆಪಿ ಸರ್ಕಾರ ಸಿಲುಕಿಕೊಳ್ತಿದೆಯಾ ಎಂಬ ಪ್ರಶ್ನೆ ಎದ್ದಿದೆ. ಈ ಪ್ರಶ್ನೆ ಏಳಲು ಕಾರಣ ಸರ್ಕಾರದ ಅನುಮಾನದ ನಡೆ. ಯಾಕಂದ್ರೆ, ಕೊರೊನಾ ವೈದ್ಯಕೀಯ ಸಲಕರಣೆಗಳ ಖರೀದಿ ಆರೋಪ ಕೇಳಿ ಬಂದ ದಿನದಿಂದಲೂ ಸರ್ಕಾರದ ಪ್ರತಿಯೊಂದು ನಡೆಯೂ ಅನುಮಾನ ಮೂಡಿಸುವಂತೆ ಇದೆ. ಆರಂಭದಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ತನಿಖೆಯನ್ನು ಸರ್ಕಾರ ತಡೆದಿತ್ತು. …

Read More »

ಗುಣಮುಖರಾದವರಲ್ಲಿ ಮತ್ತೆ ಕಾಣಿಸಿಕೊಂಡ ಕೊರೊನಾ ಸೋಂಕು……….

ಕೋಲಾರ: ಕೊರೊನಾ ಸೋಂಕಿಗೆ ತುತ್ತಾಗಿ ಸದ್ಯ ಗುಣಮುಖವಾಗಿರುವ ಜನರು ದೇವರೇ ಬದುಕಿತು ಬಡಜೀವ ಎಂದು ಕೊಳ್ಳುತ್ತಿದ್ದಾರೆ. ಆದರೆ ಹೋದೆ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿ ಎಂಬಂತೆ ಮತ್ತೆ ಸೋಂಕು ವಕ್ಕರಿಸಲಾರಂಭಿಸಿದೆ. ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದುವರೆಗೂ ಸುಮಾರು 284 ಮಂದಿ ಜನರು ಕೊರೊನಾವನ್ನು ಗೆದ್ದು ಬಂದಿದ್ದಾರೆ. ಆದ್ರೆ ಈಗ ಕೊರೊನಾ ಗೆದ್ದು ಬಂದ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ 46 ವರ್ಷದ ಮಹಿಳೆಯಲ್ಲಿ ಮತ್ತೆ ಕೊರೊನಾ ಸೋಂಕು ಪತ್ತೆಯಾಗಿದೆ. …

Read More »

ನಾಗರಪಂಚಮಿ ದಿನವೇ ದಕ್ಷಿಣ ಕನ್ನಡದ ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಬಂದ್

ಮಂಗಳೂರು: ನಾಡಿನೆಲ್ಲೆಡೆ ನಾಗರಪಂಚಮಿ. ಆದರೆ ಈ ಕೊರೊನಾ ನಾಗರಪಂಚಮಿ ಆಚರಣೆಗೂ ಅಡ್ಡಿಯಾಗಿದೆ. ನಾಗರಪಂಚಮಿ ದಿನವೇ ದಕ್ಷಿಣ ಕನ್ನಡದ ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಬಂದ್ ಆಗಿದೆ. ಇಂದು ನಡೆಯುತ್ತಿರುವ ನಾಗರಪಂಚಮಿ ಪೂಜೆಗೆ ಸಾರ್ವಜನಿಕರಿಗೆ ಅವಕಾಶ ನೀಡದಿರಲು ದೇಗುಲ ಆಡಳಿತ ಮಂಡಳಿ ನಿರ್ಧರಿಸಿದೆ. ಸಾಮಾಜಿಕ ಅಂತರ ಕಾಪಾಡಲು ಕಷ್ಟಕರವಾಗುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತಿ ವರ್ಷ ನಾಗರಪಂಚಮಿಗೆ ಲಕ್ಷಾಂತರ ಭಕ್ತರಿಂದ ಪೂಜೆ ಸಲ್ಲಿಕೆಯಾಗುತ್ತಿತ್ತು. ಆದರೆ ಈ ಬಾರಿ ಅರ್ಚಕರಿಂದ ಮಾತ್ರ …

Read More »

ಬೆಂಗಳೂರಿಗರೇ ಹುಷಾರ್, ಯಾಮಾರಿದ್ರೆ ಕೊರೋನಾ ಹೆಗಲೇರುವುದು ಗ್ಯಾರಂಟಿ..!

ಬೆಂಗಳೂರು, ಜು.24- ಪ್ರತಿ ವಾರ್ಡ್‍ಗಳಲ್ಲೂ ಕೊರೊನಾ ತನ್ನ ರೌದ್ರನರ್ತನವನ್ನು ಮುಂದುವರಿಸುತ್ತಿದೆ. ಕ್ಷಣ ಕ್ಷಣಕ್ಕೂ ಕೊರೊನಾ ಪ್ರಕರಣಗಳು ದುಪ್ಪಟ್ಟಾಗುತ್ತಿವೆ. ನಮ್ಮ ವಾರ್ಡ್‍ಗಳಲ್ಲಿ ಹೆಚ್ಚೇನೂ ಕೊರೊನಾ ಕೇಸ್‍ಗಳಿಲ್ಲ ಎಂದು ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ. ಬೆಂಗಳೂರಿನ 198 ವಾರ್ಡ್‍ಗಳ ಪೈಕಿ 197 ವಾರ್ಡ್‍ಗಳಲ್ಲಿ ಕೊರೊನಾ ತನ್ನ ಕಬಂಧಬಾಹುವನ್ನು ಚಾಚಿದೆ. 197 ವಾರ್ಡ್‍ಗಳು ಕೂಡ ಡೇಂಜರ್ ಝೋನ್‍ನಲ್ಲಿವೆ. ಬೆಂಗಳೂರಿನ 41 ವಾರ್ಡ್‍ಗಳಲ್ಲಿ 100ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ಇವೆ. 33 ವಾರ್ಡ್‍ಗಳಲ್ಲಿ 80 ರಿಂದ …

Read More »

ರಾಜ್ಯ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಗಣೇಶೋತ್ಸವ ಆಚರಿಸಲು ಅವಕಾಶ ನೀಡಲಾಗುವುದು’

ಬೆಳಗಾವಿ: ‘ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಗಣೇಶೋತ್ಸವ ಆಚರಿಸಲು ಅವಕಾಶ ನೀಡಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ನಗರದ ಗಣೇಶೋತ್ಸವ ಮಂಡಳಗಳ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ‘ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳ ಆಗುತ್ತಿರುವುದರಿಂದ ಇದನ್ನು ತಡೆಗಟ್ಟುವ ಬಗ್ಗೆ ನಾವು ಎಚ್ಚರಿಕೆ ವಹಿಸಬೇಕಿದೆ. ಆದ್ದರಿಂದ ಸರ್ಕಾರದ ನಿರ್ದೇಶನದ ಮೇರೆಗೆ ಅವಕಾಶ ಕಲ್ಪಿಸಲಾಗುವುದು. ‘ಗಣೇಶೋತ್ಸವ ಮಂಡಳಿಗಳ ಅಭಿಪ್ರಾಯಗಳನ್ನು ಕ್ರೋಢೀಕರಿಸಿ …

Read More »

ದೇವದುರ್ಗದಲ್ಲಿ ಗುಡ್ಡ ಕುಸಿತ- ಇಬ್ಬರು ಬಾಲಕರು ಸಾವು………

ರಾಯಚೂರು: ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ದೇವದುರ್ಗ ಪಟ್ಟಣದ ಗೌರಂಪೇಟೆ ಕಾಲೋನಿ ಬಳಿ ಗುಡ್ಡ ಕುಸಿದು ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಇನ್ನೋರ್ವ ಬಾಲಕನ ಕಾಲು ಮುರಿದಿದೆ. 13 ವರ್ಷದ ವಿರೇಶ್, 10 ವರ್ಷದ ರಮೇಶ್ ಮೃತ ಬಾಲಕರು. ಇನ್ನೋರ್ವ ಬಾಲಕ ಮೌನೇಶ್‍ಗೆ ಕಾಲು ಮುರಿದಿದ್ದು, ದೇವದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.ನಿರಂತರ ಮಳೆಯಿಂದಾಗಿ ಗುಡ್ಡದ ಮಣ್ಣು ಸಡಿಲವಾಗಿದ್ದು, ಬಂಡೆ ಕೆಳೆಗೆ ಉರುಳಿದೆ. ಗುಡ್ಡದ ಪಕ್ಕದಲ್ಲೇ ಮನೆಗಳಿದ್ದು, ಬಾಲಕರು ಆಟವಾಡುತ್ತಿದ್ದ ವೇಳೆ ಬಂಡೆ …

Read More »

ಕೊರೊನಾ ಸಂಕಷ್ಟವೇ ಬಂಡವಾಳ- ಮಾಟಕ್ಕೆ ಪರಿಹಾರ ಮಾಡುತ್ತೇನೆಂದು ಪೂಜಾರಿ ವಂಚನೆ

ಹಾಸನ: ಕೊರೊನಾ ಸಂಕಷ್ಟವನ್ನೇ ಬಂಡವಾಳ ಮಾಡಿಕೊಂಡ ಪೂಜಾರಿಗಳ ತಂಡ, ನಿಮಗೆ ಆಗದವರು ನಿಮ್ಮ ಜಮೀನಿನಲ್ಲಿ ಹಂದಿ ತಲೆ ಹೂತಿಟ್ಟು ಮಾಟ ಮಾಡಿಸಿದ್ದಾರೆ. ತಲೆಯನ್ನು ನಾವು ಹೊರ ತೆಗೆದು ಮಾಟದಿಂದ ಮುಕ್ತಿ ಕೊಡಿಸುತ್ತೇವೆ ಎಂದು ವಂಚಿಸುತ್ತಿದೆ. ಜಿಲ್ಲೆಯ ಗಾಣಿಗರ ಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಈ ತಂಡವನ್ನು ಗ್ರಾಮಸ್ಥರು ಪತ್ತೆಹಚ್ಚಿದ್ದಾರೆ. ದೇವರ ವಿಗ್ರಹದೊಂದಿಗೆ ಆಗಮಿಸಿದ ದಿಲೀಪ್, ತಾನೇ ತಂದಿರುವ ಹಂದಿ ತಲೆಯನ್ನು ಮೊದಲೇ ಹೂತಿಟ್ಟು, ನಂತರ ಅದೇ ಜಾಗದಲ್ಲಿ ಗುಂಡಿ ತೆಗೆಸಿ …

Read More »

ಬಿಗ್ ಬ್ರೇಕಿಂಗ್ : ರಾಜ್ಯದಲ್ಲಿ ಕೊರೋನಾ ಆಸ್ಫೋಟ, ಇಂದು 5007 ಮಂದಿಗೆ ಪಾಸಿಟಿವ್, 110 ಸಾವು..!

ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಆಸ್ಫೋಟಗೊಂಡಿದ್ದು ಕಳೆದ 24 ಗಂಟೆಯಲ್ಲಿ ಬರೋಬ್ಬರಿ 5007 ಮಂದಿಗೆ ಪಾಸಿಟಿವ್ ಬಂದಿದ್ದು, 110 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಸಂಖ್ಯೆ 85870ಕ್ಕೆ ಏರಿಕೆಯಾಗಿದೆ. ಹಾಗೂ ಒಟ್ಟು ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1724 ಏರಿಕೆಯಾಗಿದೆ.   ಇತ್ತ ರಾಜಧಾನಿ ಬೆಂಗಳೂರಲ್ಲೂ ಸಹ ಮಹಾಮಾರಿ ಅಟ್ಟಹಾಸ ಮುಂದುವರೆದಿದ್ದು ಇಂದು 2267 ಮಂದಿಯಲ್ಲಿ ಕೊರೋನಾ ಪತ್ತೆಯಾಗಿದೆ. ಜೊತೆಗೆ 50 ಮಂದಿ …

Read More »

ಕೊರೊನಾ ಪರಿಕರಣಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿಲ್ಲ.: ಡಾ.ಕೆ.ಸುಧಾಕರ್

ಬೆಂಗಳೂರು: ಕೊರೊನಾ ಪರಿಕರಣಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿಲ್ಲ. ಪ್ರಮಾಣಿಕವಾಗಿ ಕೆಲಸ ಮಾಡಿದ್ದೆವೆ ಎಂದರೆ ಭಯವೇಕೆ ? ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಿ ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ  ಸಚಿವ ಡಾ.ಕೆ.ಸುಧಾಕರ್ ಅವರಿಗೆ ಸವಾಲು ಹಾಕಿದ್ದಾರೆ. ನಿನ್ನೆ ಸಚಿವ ಸುಧಾಕರ್ ಅವರ ಮಾತಿಗೆ ಇಂದು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, “ಪ್ರಸ್ತಾವನೆ, ಮಂಜೂರಾತಿ, ಅನುಮೋದನೆ, ವೆಚ್ಚ ಅಂದರೆ ಏನು ಎಂದು ಗೊತ್ತಿಲ್ಲದೇ ನಾನು 13 ಬಜೆಟ್ ಮಂಡಿಸಿದ್ದೇನಾ..? ನಾನು …

Read More »

ಬೆಳಗಾವಿ ಜಿಲ್ಲೆಯಲ್ಲಿ ಇಂದು116 ಜನರಿಗೆ ಸೊಂಕುದೃಡ

ಬೆಳಗಾವಿ ಜಿಲ್ಲೆಯಲ್ಲಿ ಇಂದು ಶುಕ್ರವಾರ ಬಿಡುಗಡೆಯಾದ ಹೆಲ್ತ್ ಬುಲಿಟೀನ್ ನಲ್ಲಿ 116 ಜನರಿಗೆ ಸೊಂಕು ತಗಲಿದ್ದು ದೃಡವಾಗಿದೆ.   ಬೆಳಗಾವಿ ಜಿಲ್ಲೆಯಲ್ಲಿ ಇವತ್ತು ಪತ್ತೆಯಾದ 116ಜನ ಸೊಂಕಿತರು ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕಿನವರಾಗಿದ್ದಾರೆ.ಇವತ್ತಿನವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 1645 ಕ್ಕೆ ಏರಿಕೆಯಾಗಿದೆ https://youtu.be/tAGGn6JHTPE  

Read More »