ಬೆಳಗಾವಿ: ನಾಳೆ (ಭಾನುವಾರ) ಜಿಲ್ಲಾದ್ಯಂತ ಲಾಕ್ ಡೌನ್ ಜಾರಿ ಇರಲಿದೆ. ಅಗತ್ಯ ಸೇವೆಗಳಾದ ಮೆಡಿಕಲ್ ಶಾಪ್, ಹಾಲು, ಆಸ್ಪತ್ರೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಹೋಟೆಲ್, ಬಸ್, ಆಟೋ ಸೇರಿದಂತೆ ಎಲ್ಲ ಅಂಗಡಿ ಮುಗ್ಗಟ್ಟು, ಎಲ್ಲವೂ ಬಂದ್ ಆಗಲಿವೆ. ಅನಗತ್ಯವಾಗಿ ಬೀದಿಗಿಳಿಯುವವರ ವಿರುದ್ದ ಪೊಲೀಸರು ಕ್ರಮಕೈಗೊಳ್ಳಲಿದ್ದಾರೆ. ಕಳೆದ ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಹೇರಲಾಗಿದ್ದ ಲಾಕ್ ಡೌನ್ ತೆರವುಗೊಳಿಸಿದ್ದಾರೆ. ಆದ್ರೆ ಭಾನುವಾರದ ಲಾಕ್ ಡೌನ್ ಮುಂದುವರೆಯಲಿದೆ.
Read More »ಅಲ್ಪ ಪ್ರಮಾಣದ ಲಕ್ಷ ಇದ್ದರೆ ಮನೆಯಲ್ಲೇ ಐಸೋಲೇಷನ್ ಮಾಡ್ಕೊಳ್ಳಿ- ಬಿಬಿಎಂಪಿ ಆಯುಕ್ತ ಮನವಿ
ಬೆಂಗಳೂರು: ಕೊರೊನಾ ವೈರಸ್‍ನ ಅಲ್ಪ ಪ್ರಮಾಣದ ಲಕ್ಷಣ ಇದ್ದರೆ ದಯವಿಟ್ಟು ಮನೆಯಲ್ಲೇ ಐಸೋಲೇಷನ್ ಮಡಿಕೊಳ್ಳಿ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅಯುಕ್ತರು, ಸಿಲಿಕಾನ್ ಸಿಟಿಯಲ್ಲಿ ಕೋವಿಡ್ -19 ನಿಂದಾಗಿ ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಸೋಂಕಿತರು ಪರದಾಡುತ್ತಿದ್ದು, ಸಂಕಷ್ಟ ತಪ್ಪಿಸಲು ಹರಸಾಹಸ ಪಡುವಂತಾಗಿದೆ. ಈ ಹಿನ್ನೆಲೆಯಲ್ಲಿ ತೀರಾ ಸಮಸ್ಯೆ ಇರುವವರಿಗೆ ಮಾತ್ರ ಬೆಡ್ ಸಿಗುತ್ತದೆ. ರೋಗ ಲಕ್ಷಗಳು, ಮೈಲ್ಡ್ ಸಿಂಪ್ಟಮ್ಸ್ ಇರುವವರು …
Read More »ಖಾಸಗಿ ಆಸ್ಪತ್ರೆಗಳವರ ಕರಾಳ ಮುಖಗಳು ಒಂದೊಂದೇ ಬಯಲಾಗತೊಡಗಿವೆ.
ಬೆಂಗಳೂರು,ಜು.25- ಖಾಸಗಿ ಆಸ್ಪತ್ರೆಗಳವರ ಕರಾಳ ಮುಖಗಳು ಒಂದೊಂದೇ ಬಯಲಾಗತೊಡಗಿವೆ. ಕೋವಿಡ್ ಪೇಷೆಂಟ್‍ಗಳಿಗೆ ಹಾಸಿಗೆ ಕೊರತೆ ನೆಪ ಹೇಳಿ ಸುಲಿಗೆ ಮಾಡುತ್ತಿದ್ದ ಪ್ರಕರಣಗಳಿಗೆ ಸರ್ಕಾರ ಬ್ರೇಕ್ ಹಾಕುತ್ತಿದ್ದಂತೆ ನಾನ್ ಕೋವಿಡ್ ಪೇಷೆಂಟ್‍ಗಳಿಗೆ ಕೊರೋನಾ ಸೋಂಕಿನ ಭಯ ಮೂಡಿಸಿ ಸುಲಿಗೆ ಮಾಡುತ್ತಿರುವ ಪ್ರಕರಣಗಳು ನಡೆಯುತ್ತಿವೆ. ಸರ್ಕಾರ ಚಾಪೆ ಕೆಳಗೆ ನುಸುಳಿದರೆ ಖಾಸಗಿ ಆಸ್ಪತ್ರೆಯವರು ರಂಗೋಲಿ ಕೆಳಗೆ ನುಸುಳಿ ತಮ್ಮ ಸುಲಿಗೆ ದಂಧೆಯನ್ನು ಮುಂದುವರೆಸಿದ್ದಾರೆ.ಕೊರೋನಾ ಸೋಂಕು ಹೆಚ್ಚಾದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಲು ಸಾಧ್ಯವಿಲ್ಲದಿದ್ದಾಗ …
Read More »ಪ್ರಥಮ ಹಬ್ಬವಾದ ನಾಗರಪಂಚಮಿ ಮೇಲೆ ಈ ಬಾರಿ ಕೊರೊನಾ ಕರಿನೆರಳು ಆವರಿಸಿದೆ.
ಬೆಂಗಳೂರು,ಜು.25-ಹಿಂದೂಗಳ ಪವಿತ್ರ ಹಬ್ಬವಾದ ಹಾಗೂ ಶ್ರಾವಣ ಮಾಸದ ಪ್ರಥಮ ಹಬ್ಬವಾದ ನಾಗರಪಂಚಮಿ ಮೇಲೆ ಈ ಬಾರಿ ಕೊರೊನಾ ಕರಿನೆರಳು ಆವರಿಸಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಅದ್ಧೂರಿಯಾಗಿ ವಿಶಿಷ್ಟವಾಗಿ ನಾಗರಪಂಚಮಿಯನ್ನು ಆಚರಿಸಲಾಗುತ್ತಿತ್ತು. ಆದರೆ ಸಾಂಕ್ರಾಮಿಕ ರೋಗ ಕೊರೊನಾ ಆವರಿಸಿರುವುದರಿಂದ ನಾಗರಪಂಚಮಿ ಆಚರಣೆ ವಿರಳವಾಗಿತ್ತು. ಜನ ಸಂಪ್ರದಾಯಿಕವಾಗಿ ಸರಳವಾಗಿ ನಾಗರಪಂಚಮಿಯನ್ನು ಆಚರಿಸಿದರು. ಕೆಲವರು ತಮ್ಮ ಮನೆಯಲ್ಲಿ ಆಚರಿಸಿದರೆ ಮತ್ತೆ ಕೆಲವರು ದೇವಸ್ಥಾನಗಳಿಗೆ ತೆರಳಿ ಸಾಮಾಜಿಕ ಅಂತರ ಕಾಯ್ದುಕೊಂಡು ನಾಗದೇವರಿಗೆ ಹಾಲನ್ನೆರೆದು ಪಂಚಮಿ …
Read More »ತಪಾಸಣೆ ವೇಳೆ ಮೈಸೂರು ಜಿಲ್ಲಾಧಿಕಾರಿ ನಂಬರ್ ಕೊಟ್ಟು ಕೊರೊನಾ ಸೋಂಕಿತನೊಬ್ಬನ ಕಿತಾಪತಿ
ಮೈಸೂರು: ತಪಾಸಣೆ ವೇಳೆ ಮೈಸೂರು ಜಿಲ್ಲಾಧಿಕಾರಿ ನಂಬರ್ ಕೊಟ್ಟು ಕೊರೊನಾ ಸೋಂಕಿತನೊಬ್ಬ ಕಿತಾಪತಿ ಮಾಡಿರುವ ಘಟನೆ ಮೈಸೂರಿನ ಹೆಬ್ಬಾಳ ಬಡಾವಣೆಯಲ್ಲಿ ನಡೆದಿದೆ. ಕೊರೊನಾ ತಪಾಸಣೆಗೆ ಬಂದ ವ್ಯಕ್ತಿಯೋರ್ವ ಪರೀಕ್ಷೆ ವೇಳೆ ತನ್ನ ನಂಬರ್ ಬದಲಿಗೆ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಅವರ ನಂಬರ್ ಅನ್ನು ಜಿಲ್ಲಾಡಳಿತಕ್ಕೆ ಕೊಟ್ಟು ಯಾಮಾರಿಸಿದ್ದಾನೆ. ಇದಾದ ಬಳಿಕ ಆ ವ್ಯಕ್ತಿಯ ಕೊರೊನಾ ವರದಿ ಬಂದಿದ್ದು, ಆತನಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಕೊರೊನಾ ದೃಢಪಟ್ಟ ವ್ಯಕ್ತಿ ನೀಡಿದ ನಂಬರ್ …
Read More »ನೂರಾರು ಪಾರಿವಾಳಗಳಿಗೆ ಕಾಳು ನೀಡುವ ಕೆಲಸ:ನಿಡಸೋಸಿ ಗ್ರಾಮದಶಿವಲಿಂಗೇಶ್ವರ ಸ್ವಾಮೀಜಿ
ಚಿಕ್ಕೋಡಿ(ಬೆಳಗಾವಿ): ಮಳೆಗಾಲ ಸಂದರ್ಭದಲ್ಲಿ ಪಕ್ಷಿಗಳಿಗೆ ಆಹಾರ ಸಿಗದೆ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿರುತ್ತೆ. ಇಂಥ ಸಂದರ್ಭದಲ್ಲಿ ನೂರಾರು ಪಾರಿವಾಳಗಳಿಗೆ ಕಾಳು ನೀಡುವ ಕೆಲಸವನ್ನ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಸಿ ಗ್ರಾಮದ ದುರದುಂಡೀಶ್ವರ ಸಿದ್ಧ ಸಂಸ್ಥಾನ ಮಠದ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮಾಡುತ್ತಿದ್ದಾರೆ. ದಿನನಿತ್ಯ ಬೆಳಗ್ಗೆ ಹಾಗೂ ಸಂಜೆ ಶ್ರೀಗಳು ಬಂದರೆ ಅವರ ಸುತ್ತ ನೂರಾರು ಪಾರಿವಾಳಗಳು ಜಮಾವಣೆಗೊಳ್ಳುತ್ತವೆ. ಆ ಪಾರಿವಾಳಗಳಿಗೆ ಸ್ವಾಮಿಜಿ ಜೋಳ ಹಾಗೂ ಅಕ್ಕಿ ಕಾಳುಗಳನ್ನ ಹಾಕುತ್ತಿದ್ದಾರೆ. …
Read More »ಶಾಸಕ ಸತೀಶ ಜಾರಕಿಹೊಳಿ ಅಭಿಮಾನಿ ಬಳಗದಿಂದ ಕೊರೊನಾ ವಾರಿಯರ್ಸ್ ಶನಿವಾರ ಸನ್ಮಾನ
ಹುಕ್ಕೇರಿ: ತಾಲ್ಲೂಕಿನ ಬಸಾಪೂರ ಆರೋಗ್ಯ ಕೇಂದ್ರದಲ್ಲಿ ಶಾಸಕ ಸತೀಶ ಜಾರಕಿಹೊಳಿ ಅಭಿಮಾನಿ ಬಳಗದಿಂದ ಕೊರೊನಾ ವಾರಿಯರ್ಸ್ ಶನಿವಾರ ಸನ್ಮಾನ ಮಾಡಲಾಯಿತು. ಜೀವದ ಹಂಗು ತೊರೆದು ಕೊರೊನಾ ನಿಯಂತ್ರಣಕ್ಕೆ ಹಗಲಿರುಳ ಶ್ರಮ ಪಡುತ್ತಿರುವ ಅಂಗನವಾಡಿ ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆ ಅಧಿಕಾರಿಗಳು , ಪೊಲೀಸ್ ಸಿಬ್ಬಂದಿ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಮಂಜುನಾಥ ಪಾಟೀಲ ಹೇಳಿದರು. ಈ ಸಂದರ್ಭದಲ್ಲಿ ಕರಗುಪ್ಪಿ ಬಸಾಪೂರ ತಾಲ್ಲೂಕು ಪಂಚಾಯಿತಿ ಸದಸ್ಯ ಸೋಮನಗೌಡ ಪಾಟೀಲ …
Read More »ಹಿಡಕಲ್ ಡ್ಯಾಂನಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಮಕ್ಕಳಿಗೆ ಹಾಲು ನೀಡುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಶನಿವಾರ ಅರ್ಥಪೂರ್ಣವಾಗಿ ಆಚರಿಸಿದರು.
ಹುಕ್ಕೇರಿ: ತಾಲ್ಲೂಕಿನ ಹಿಡಕಲ್ ಡ್ಯಾಂನಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಮಕ್ಕಳಿಗೆ ಹಾಲು ನೀಡುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯನ್ನಾಗಿ ಶನಿವಾರ ಅರ್ಥಪೂರ್ಣವಾಗಿ ಆಚರಿಸಿದರು. ಜನರು ವೈಜ್ಞಾನಿಕವಾಗಿ ಯೋಚಿಸುವ ಮಟ್ಟದಲ್ಲಿದ್ದಾರೆ. ಮೂಲತಃ ಮಾಂಸಾಹಾರಿಯಾದ ಹಾವಿನ ಆಹಾರ ಹಾಲಲ್ಲ ಎಂಬ ಜಾಗೃತಿ ಮೂಡುತ್ತಿದೆ. ಹುತ್ತಕ್ಕೆ ಹಾಲೆರೆಯುವ ಬದಲು ಅದೇ ಹಾಲನ್ನು ಅಪೌಷ್ಟಿಕತೆಯಿಂದ ನರಳುವ ಮಕ್ಕಳು, ಅನಾಥರು ಹಾಗೂ ಬಡ ಜನರಿಗೆ ಹಂಚಿದರೆ ಪಂಚಮಿಗೆ ಅರ್ಥ ಬರುತ್ತದೆ ಮಾನವ ಬಂಧುತ್ವ ವೇದಿಕೆಯ ಸಂಚಾಲಕ …
Read More »ಮಗಳ ಪ್ರಿಯಕರನನ್ನ 17 ಬಾರಿ ಇರಿದು ಕೊಲೆ ಮಾಡಿದ್ದ ತಂದೆ.
ಚಿಕ್ಕಬಳ್ಳಾಪುರ: ಮಗಳ ಪ್ರಿಯಕರನನ್ನ 17 ಬಾರಿ ಇರಿದು ಕೊಲೆ ಮಾಡಿದ್ದ ತಂದೆ. ರೊಚ್ಚಿಗೆದ್ದ ಮೃತ ಯುವಕನ ಸಂಬಂಧಿಕರು ಆರೋಪಿಯ ಮನೆಯನ್ನ ಧ್ವಂಸ ಮಾಡಿ, ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಯಗವಮದ್ದಲಖಾನೆ ಗ್ರಾಮದಲ್ಲಿ ನಡೆದಿದೆ. ಹರೀಶ್ (25) ಕೊಲೆಯಾದ ಯುವಕ. ಈತನ ಪ್ರೇಯಸಿಯ ತಂದೆ ವೆಂಕಟೇಶ್ ಹಾಗೂ ಚಿಕ್ಕಪ್ಪ ಸೇರಿಕೊಂಡು ಶುಕ್ರವಾರ ತಡರಾತ್ರಿ 17 ಬಾರಿ ಇರಿದು ಕೊಲೆ ಮಾಡಿದ್ದರು. ಈಗಾಗಲೇ ಆರೋಪಿಗಳನ್ನು ಬಾಗೇಪಲ್ಲಿ ಪೊಲೀಸರು …
Read More »ಸಂಡೆ ಲಾಕ್‍ಡೌನ್ ಹಿನ್ನೆಲೆ ಗ್ರಾಮಗಳತ್ತ ಹೊರಟ ಬೆಂಗ್ಳೂರಿಗರು……..
ಬೆಂಗಳೂರು: ಸಂಡೆ ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದಿನಿಂದಲೇ ಜನರು ತಮ್ಮ ತಮ್ಮ ಸ್ವ ಗ್ರಾಮಗಳತ್ತ ಹೋಗುತ್ತಿದ್ದಾರೆ. ಇಂದು ರಾತ್ರಿ 9 ಗಂಟೆಯಿಂದ ಸಂಡೆ ಲಾಕ್‍ಡೌನ್ ಜಾರಿಯಾಗಲಿದೆ. ಹೀಗಾಗಿ ಬೆಂಗಳೂರಿಗರು ತುಮಕೂರು ರಸ್ತೆ ನವಯುಗ ಟೋಲ್ ಮುಖಾಂತರ ಜನರು ತಮ್ಮ ತಮ್ಮ ಗ್ರಾಮಗಳತ್ತ ಪ್ರಯಾಣ ಮಾಡುತ್ತಿದ್ದಾರೆ. ಹೀಗಾಗಿ ನವಯುಗ ಟೋಲ್ ಬಳಿ ವಾಹನ ದಟ್ಟಣೆ ಹೆಚ್ಚಾಗಿದೆ.ಕಳೆದ ಲಾಕ್‍ಡೌನ್ ವೇಳೆಯಲ್ಲೂ ಬೆಂಗಳೂರು ಬಿಟ್ಟು ಸಾವಿರಾರು ಜನರು ಹೋಗುತ್ತಿದ್ದರು. ಇಂದು ಕೂಡ ಕಾರು, ಬೈಕ್‍ಗಳ ಮೂಲಕ …
Read More »
Laxmi News 24×7