ಬೆಂಗಳೂರು – ರಾಜ್ಯದಲ್ಲಿ ಇಂದು 3693 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಬೆಳಗಾವಿಯಲ್ಲಿ 95 ಜನರಿಗೆ ಸೋಂಕು ಪತ್ತೆಯಾಗಿದೆ. ಬೆಂಗಳೂರಿನಲ್ಲಿ 2208, ಧಾರವಾಡದಲ್ಲಿ 157, ಬಳ್ಳಾರಿ 133, ವಿಜಯಪುರ 118, ಮೈಸೂರು 93, ಕಲಬುರಗಿ 89, ಉಡುಪಿ 80, ಉತ್ತರ ಕನ್ನಡ 75 ಜನರಿಗೆ ಸೋಂಕು ಪತ್ತೆಯಾಗಿದೆ.
Read More »ಖಾನಾಪುರದ ಈ ಹೋಟೆಲ್ ನಲ್ಲಿ ಯಾರಾದ್ರೂ ತಿಂಡಿ ತಿಂದ್ರೆ ಪರೀಕ್ಷೆ ಮಾಡಿಸಿಕೊಳ್ಳಿ
ಖಾನಾಪುರ – : ಖಾನಾಪುರ ತಾಲೂಕು ಇಲ್ಲಿಯವರೆಗೆ ಕೊರೋನಾ ರಹಿತವಾಗಿ ಗುರುತಿಸಿಕೊಂಡಿತ್ತು. ತಾಲೂಕಿನಲ್ಲಿ ಕೋವಿಡ್-೧೯ ಗೆ ಮೊದಲ ಬಲಿಯಾಗಿದೆ. ಪಟ್ಟಣದ ರೇಣುಕಾ ಹೊಟೇಲ್ ಉದ್ಯಮಿ ೩ ದಿನಗಳ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹೆದ್ದಾರಿಗೆ ಹೊಂದಿಕೊಂಡಿರುವ ಹೊಟೆಲನ್ನು ಸೀಲಡೌನ್ ಮಾಡಲಾಗಿದೆ. ಶಾಸಕಿ ಡಾ.ಅಂಜಲಿ ನಿಂಬಾಳಕರ, ತಹಶೀಲದಾರ ರೇಷ್ಮಾ ತಾಳಿಕೋಟೆ, ಪಂ.ಪ.ಮುಖ್ಯಾಧಿಕಾರಿ ವಿವೇಕ ಬನ್ನೆ, ಪೋಲಿಸ್ ಅಧಿಕಾರಿಗಳು, ಡಾ.ನಾಂದ್ರೆ , ಸರ್ವ ಪಕ್ಷಗಳ ಮುಖಂಡರು ಸೇರಿ ಹೊಟೇಲ್ …
Read More »ಲಾಕಡೌನ್ ಜಾರಿಯಲ್ಲಿದ್ದರೂ ಜನಜೀವನಕ್ಕೆ ಎಂದಿನಂತೆಯೇ ಇದೆ.
ಗೋಕಾಕದಲ್ಲಿ ಲಾಕಡೌನ್ ಜಾರಿಯಲ್ಲಿದ್ದರೂ ಜನಜೀವನಕ್ಕೆ ಎಂದಿನಂತೆಯೇ ಇದೆ. ಲಾಕಡೌನ್ ಲೆಕ್ಕಕ್ಕಿಲ್ಲದಂತೆ ಜನ ಓಡಾಡುತ್ತಿದ್ದಾರೆ. ಲಾಕಡೌನ್ ಆದ ಪ್ರದೇಶದಲ್ಲಿ ಹೇಳೊರಿಲ್ಲ,ಕೇಳೊರಿಲ್ಲ ಅನ್ನೋ ಸ್ಥಿತಿ ಇದ ಕೊರೋನಾ ಸೋಂಕು ತಡೆಗೆ ಲಾಕ್‍ಡೌನ್ ಘೋಷಿಸಲಾಗಿದೆ. ಆದರೆ ಗೋಕಾಕ ಜನತೆ ಲಾಕ್‍ಡೌನ್ ನಿಯಮಗಳನ್ನು ಉಲ್ಲಂಘಿಸಿ ಹೇಗೆ ಬೇಕೋ ಹಾಗೆ ವರ್ತಿಸುತ್ತಿದ್ದಾರೆ. ಇದೆಲ್ಲ ಗೊತ್ತಿದ್ದರೂ ಗೋಕಾಕ ತಹಸೀಲ್ದಾರ್ ತಲೆ ಕೆಡಿಸಿಕೊಳ್ಳುತ್ತಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುತ್ತಿಲ್ಲ.ವಸ್ತುಸ್ಥಿತಿಯನ್ನು ಪರಿಶೀಲಿಸುತ್ತಿಲ್ಲ. ಕೊರಾನಾ ಕೇಸ್‍ಗಳು ಹೆಚ್ಚುತ್ತಿವೆ. ಇದನ್ನು ತಡೆಯಲು ಲಾಕ್‍ಡೌನ್ ಘೋಷಿಸಲಾಗಿತ್ತು. …
Read More »ಗೋಕಾಕ ನಗರದ ವಾರ್ಡ್ ಗಳಲ್ಲಿ ಸದಸ್ಯರೊಂದಿಗೆ ಕೊರೊನಾ ವಾರಿಯರ್ಸ್ ಗಳು ಜಾಗೃತಿ ಮೂಡಿಸಿದರು.
ಗೋಕಾಕ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗೋಕಾಕ ನಗರದ ವಾರ್ಡ್ ಗಳಲ್ಲಿ ಸದಸ್ಯರೊಂದಿಗೆ ಕೊರೊನಾ ವಾರಿಯರ್ಸ್ ಗಳು ಜಾಗೃತಿ ಮೂಡಿಸಿದರು. ನಗರಸಭೆ ಕಂದಾಯ ಅಧಿಕಾರಿ ಎಸ್. ಕೆ. ಹಳ್ಳೂರು, ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸ್ ಸಿಬ್ಬಂದಿಗಳು ನಗರದ ಪ್ರತಿಯೊಂದು ವಾರ್ಡ್ ಗೆ ಸದಸ್ಯರೊಂದಿಗೆ ಭೇಟಿ ನೀಡಿ ಜನರಿಗೆ ಕೊರೊನಾ ಸೋಂಕಿನ ಕುರಿತು ಜಾಗೃತಿ ಮೂಡಿಸಿ ಆರೋಗ್ಯ ರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಜತೆಗೆ ಕಡ್ಡಾಯವಾಗಿ …
Read More »ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೋಂ ಕ್ವಾರಂಟೈನ್
ಬೆಂಗಳೂರು: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೋಂ ಕ್ವಾರಂಟೈನ್ ಆಗಿದ್ದಾರೆ. ಕಾರು ಚಾಲಕನಿಗೆ ಕೊರೊನಾ ಪಾಸಿಟಿವ್ ದೃಢ ಪಟ್ಟ ಹಿನ್ನೆಲೆಯಲ್ಲಿ ಭಾಸ್ಕರ್ ರಾವ್ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಭಾಸ್ಕರ್ ರಾವ್ ಕಾರು ಚಾಲಕ ಕೋವಿಡ್ ಪರೀಕ್ಷೆ ಮಾಡಿಸಿದ್ದರು. ಇಂದು ಪಾಸಿಟಿವ್ ಎಂದು ಗೊತ್ತಾದ ಬಳಿಕ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಭಾಸ್ಕರ್ ರಾವ್, ಚಾಲಕನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ 4 ದಿನಗಳ ಕಾಲ …
Read More »ನಮಾಜ್‍ಗೆ ಅವಕಾಶ ಕೇಳಿದ ಮುಸ್ಲಿಂ ಮುಖಂಡರ ವಿರುದ್ಧ ಉಮೇಶ್ ಕತ್ತಿ ಗರಂ………..
ಚಿಕ್ಕೋಡಿ(ಬೆಳಗಾವಿ): ನಮಾಜ್ ಮಾಡಲು ಅವಕಾಶ ಕೇಳಿದ ಮುಸ್ಲಿಂ ಮುಖಂಡರ ಮೇಲೆ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಗರಂ ಆಗಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಹುಕ್ಕೇರಿ ಪಟ್ಟಣದಲ್ಲಿ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ತುರ್ತು ಸಭೆ ನಡೆಸಿದ್ದಾರೆ. ಈ ವೇಳೆ ಅಭಿಪ್ರಾಯ ಸಂಗ್ರಹಿಸಿ ಒಂದು ವಾರ ಹುಕ್ಕೇರಿ ತಾಲೂಕು ಲಾಕ್‍ಡೌನ್ ಮಾಡಲು ತೀರ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ …
Read More »ಪಾಸಿಟಿವ್ ಬಂದ ಕುಟುಂಬದವ್ರ ಜೊತೆ ಕ್ವಾರಂಟೈನ್‍ಗೆ ಪಂಚಾಯತ್ ಸದಸ್ಯ ವಿರೋಧ
ಬಾಗಲಕೋಟೆ: ಪಾಸಿಟಿವ್ ಬಂದ ಮನೆಯವರು ಹಾಗೂ ಪಕ್ಕದ ಮನೆಯವರನ್ನು ಒಂದೇ ಕಡೆ ಕ್ವಾರಂಟೈನ್ ಮಾಡಿರೋದಕ್ಕೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಇತರೆ ಎರಡು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಪ್ರಸಂಗ ನಡೆದಿದೆ. ಈ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ನಲ್ಲಿರುವ ಕ್ವಾರಂಟೈನ್ ಸೆಂಟರ್ ಆವರಣದಲ್ಲಿ ನಡೆದಿದೆ. ಕ್ವಾರಂಟೈನ್ ಸೆಂಟರ್ ಆವರಣದಲ್ಲಿ ಗುಡಿಸಲು ಹಾಕಿಕೊಂಡು ಕುಳಿತ ಕುಳಗೇರಿ ಕ್ರಾಸ್ ಗ್ರಾಪಂ ಸದಸ್ಯ ಹನುಮಂತ ನರಗುಂದ ಪ್ರಸನ್ನ ಹಾಗೂ ಮಂಜುನಾಥ …
Read More »ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಅಮಾನವೀಯತೆಗೆ ವೃದ್ಧ ಬಲಿ……….
ಬೆಳಗಾವಿ: ಮಹಾಮಾರಿ ಕೊರೊನಾನಿಂದಾಗಿ ಬೆಡ್, ಅಂಬುಲೆನ್ಸ್, ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಅನೇಕರು ಸಾವನ್ನಪ್ಪುತ್ತಿರುವ ಅಮಾನವೀಯ ಘಟನೆ ಪ್ರತಿದಿನ ಬೆಳಕಿಗೆ ಬರುತ್ತಿವೆ. ಇದೀಗ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಸಿಬ್ಬಂದಿಯ ಅಮಾನವೀಯತೆಗೆ ವೃದ್ಧ ಬಲಿಯಾಗಿದ್ದಾರೆ. ಕೋವಿಡ್ ಕೇರ್ ಸೆಂಟರಿನಲ್ಲಿ ಕೊರೊನಾ ಸೋಂಕಿತ ವೃದ್ಧ ಬೆತ್ತಲೆಯಾಗಿ ನೆಲದ ಮೇಲೆ ಒದ್ದಾಡಿ ಸಾವನ್ನಪ್ಪಿದ್ದಾರೆ. ಜಿಲ್ಲೆ ಅಥಣಿ ತಾಲೂಕಿನ ರಡ್ಡೇರಟ್ಟಿ ಗ್ರಾಮದ 65 ವರ್ಷದ ಸೋಂಕಿತ ಮೃತಪಟ್ಟಿದ್ದಾರೆ. ಸೋಮವಾರ ಬೆಳಗ್ಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ವೃದ್ಧ …
Read More »ನಿಷೇದಾಜ್ಞೆ ಇದ್ದರುಚಾಮುಂಡಿ ಬೆಟ್ಟ ಏರಿದ ಶೋಭಾ ಕರಂದಾ ಜ್ಲೆ
ಮೈಸೂರು: ಆಷಾಢ ಮಾಸದ ಕೊನೆ ಶುಕ್ರವಾರ ಹಿನ್ನೆಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಬರಿಗಾಲಲ್ಲಿ ಮೈಸೂರಿನ ಚಾಮುಂಡಿ ಬೆಟ್ಟ ಹತ್ತಿದ್ದಾರೆ. ಶೋಭಾ ಕರಂದ್ಲಾಜೆ ಅವರು ಪ್ರತಿ ಆಷಾಢ ಮಾಸದಲ್ಲೂ ಮೈಸೂರಿಗೆ ಬಂದು ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತುತ್ತಾರೆ. ಬಳಿಕ ತಾಯಿ ಚಾಮುಂಡಿಯ ದರ್ಶನ ಪಡೆದುಕೊಳ್ಳುತ್ತಾರೆ. ಅದರಂತೆಯೇ ಇಂದು ನಾಲ್ಕನೇ ಆಷಾಢ ಶುಕ್ರವಾರವಾದ ಹಿನ್ನೆಲೆಯಲ್ಲಿ ಈ ಬಾರಿಯೂ ಶೋಭಾ ಕರಂದ್ಲಾಜೆ ಮುಂಜಾನೆಯೇ ಬರಿಗಾಲಲ್ಲಿ ಚಾಮುಂಡಿ ಬೆಟ್ಟ ಹತ್ತಿ, ತಾಯಿಯ ದರ್ಶನ ಪಡೆದುಕೊಂಡಿದ್ದಾರೆ. ಆಷಾಢ …
Read More »ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು…………………
ಮೈಸೂರು: ಕತ್ತು ಕೊಯ್ದುಕೊಂಡು ಯುವ ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಂಜನಗೂಡು ತಾಲೂಕಿನ ದುಗ್ಗಹಳ್ಳಿ ಗ್ರಾಮದಲ್ಲಿ ನಡೆದಿದೆ. ಇವರಿಬ್ಬರು ಜುಲೈ 9 ರಂದು ಆತ್ಮತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜೊಂದರಲ್ಲಿ ಇಬ್ಬರು ವ್ಯಾಸಂಗ ಮಾಡುತ್ತಿದ್ದು, ಕಾಮರ್ಸ್ ವಿಭಾಗದಲ್ಲಿ ಕ್ಲಾಸ್‍ಮೇಟ್ಸ್ ಆಗಿದ್ದರು. ಕಾಲೇಜಿನಲ್ಲೇ ಇಬ್ಬರ ಮಧ್ಯೆ ಪ್ರೇಮಾಂಕುರವಾಗಿದೆ. ಆದರೆ ಇಬ್ಬರ ಮದುವೆಗೆ ಜಾತಿ ಅಡ್ಡಿಯಾಗಿತ್ತು. ಅಲ್ಲದೆ ಇವರಿಬ್ಬರು ಅಪ್ರಾಪ್ತರು ಅನ್ನೋ ಹಿನ್ನೆಲೆ ಕೂಡ ಇತ್ತು. …
Read More »
Laxmi News 24×7