ಬೆಳಗಾವಿ: ಗುಡಿ ಗಂಡಾರಗಳಲ್ಲಿ ದೇವರಿಲ್ಲ. ಈ ದೇಶವನ್ನು ಕಟ್ಟಿದ ಶ್ರಮಜೀವಿಗಳೇ ನಿಜವಾದ ದೇವರುಗಳು ಎಂದು ಬಸವ ಭೀಮ ಸೇನೆಯ ಅಧ್ಯಕ್ಷ ಆರ್.ಎಸ್.ದರ್ಗೆ ಹೇಳಿದ್ದಾರೆ. ಬಸವ ಪಂಚಮಿಯ ಅಂಗವಾಗಿ ಬಸವ ಭೀಮ ಸೇನೆಯ ವತಿಯಿಂದ ಜುಲೈ 27 ರÀವರೆಗೆ ಹಮ್ಮಿಕೊಂಡಿರುವ ನಮ್ಮ ನಡೆ ನಮ್ಮ ಸಮುದಾಯಗಳ ಕಡೆ ಎಂಬ ಅಭಿಯಾನದ ಅಂಗವಾಗಿ ಗುರುವಾರದಂದು ಅಲೆಮಾರಿ ಬುಡಕಟ್ಟು ಜನಾಂಗದ ಹೋರಾಟಗಾರ ಮಲ್ಲೇಶ ಹೆಳವರ ಅವರನ್ನು ಶ್ರೀನಗರದಲ್ಲಿಯ ಅವರ ನಿವಾಸದಲ್ಲಿ ಸತ್ಕರಿಸಿ ಅವರು ಮಾತನಾಡಿದರು. …
Read More »ಬೆಂಗಳೂರಿನಲ್ಲಿ ಮತ್ತೆರಡು ಕೋವಿಡ್ ಕೇರ್ ಸೆಂಟರ್ ತೆರೆಯಲು ಮುಂದಾದ ಸರ್ಕಾರ
ಬೆಂಗಳೂರು,ಜು.16- ಕೊರೋನಾ ಮಟ್ಟಹಾಕಲು ಕಠಿಣ ಕ್ರಮಗಳನ್ನು ತೆಗೆದುಕೊಂಡು ದಿಟ್ಟ ಹೋರಾಟ ಮಾಡುತ್ತಿರುವ ರಾಜ್ಯ ಸರ್ಕಾರ ಇದೀಗ ನಗರದಲ್ಲಿ ಮತ್ತೆರಡು ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕೋವಿಡ್-19 ನಿರ್ವಹಣೆಯ ಉಸ್ತುವಾರಿ ವಹಿಸಿಕೊಂಡಿರುವ ಅಧಿಕಾರಿಗಳು ನಿನ್ನೆಯಷ್ಟೇ ಉನ್ನತ ಮಟ್ಟದ ಸಭೆಯೊಂದನ್ನು ನಡೆಸಿದ್ದು, ಸಭೆಯಲ್ಲಿ ಬೆಂಗಳೂರು ನಗರದಲ್ಲಿ 2 ಕೋವಿಡ್ ಕೇರ್ ಕೇಂದ್ರಗಳನ್ನು ತೆರೆಯಲು ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ. ಈಗಾಗಲೇ ನಗರದಲ್ಲಿ 8 ಕೋವಿಡ್ ಕೇರ್ ಕೇಂದ್ರಗಳು ಅಸ್ತಿತ್ವದಲ್ಲಿದ್ದು, …
Read More »ಜಿಲ್ಲಾಸ್ಪತ್ರೆಯಲ್ಲಿ 14 ಮಂದಿಗೆ ಕೊರೊನಾ ಪಾಸಿಟಿವ್- ಆಸ್ಪತ್ರೆ ಸೀಲ್ ಡೌನ್…..
ಉಡುಪಿ: ಜಿಲ್ಲಾ ಸರ್ಕಾರಿ ಆಸ್ಪತ್ರೆಗೂ ಕೋವಿಡ್ 19 ಆವರಿಸಿದ್ದು, ಜಿಲ್ಲಾಸ್ಪತ್ರೆಯನ್ನು ಸೀಲ್ ಮಾಡಲಾಗಿದೆ. ಆಸ್ಪತ್ರೆಯ ವೈದ್ಯರು, ರೋಗಿಗಳು, ಸಿಬ್ಬಂದಿ ಸೇರಿ ಒಟ್ಟು 14 ಮಂದಿಗೆ ಸೋಂಕಾಗಿದೆ ಎಂಬ ಮಾಹಿತಿಯಿದೆ. ಗ್ಯಾಂಗ್ರಿನ್ ಸಮಸ್ಯೆಗೆ ದಾಖಲಾಗಿದ್ದ ರೋಗಿಗೆ ಕೊರೊನಾ ಆವರಿಸಿದ್ದು, ಶಸ್ತ್ರಚಿಕಿತ್ಸೆಯ ನಂತರ ಜ್ವರಕ್ಕೆ ತುತ್ತಾಗಿದ್ದರು. ಈತನ ವಾರ್ಡ್‍ನಲ್ಲಿದ್ದ ಒಟ್ಟು 9 ರೋಗಿಗಳಿಗೂ ಸೋಂಕು ತಗುಲಿದೆ. ಚಿಕಿತ್ಸೆ ನೀಡಿದ ಇಬ್ಬರು ವೈದ್ಯರು, ಓರ್ವ ನರ್ಸ್ ಗೆ ಕೊರೊನಾ ಅಂಟಿದೆ. ಫ್ಲೋರ್ ಸ್ವಚ್ಛತಾ ಕೆಲಸ …
Read More »ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಮೂರು ತಾಲೂಕುಗಳಲ್ಲಿ ಲಾಕ್‍ಡೌನ್…….
ಚಿಕ್ಕೋಡಿ(ಬೆಳಗಾವಿ): ಮಂಗಳವಾರ ರಾತ್ರಿಯಿಂದ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕುಗಳಲ್ಲಿ ಲಾಕ್‍ಡೌನ್ ಜಾರಿಯಾಗಿದೆ. ಮುಂದಿನ ಒಂದು ವಾರಗಳ ಲಾಕ್‍ಡೌನ್ ಜಾರಿಯಲ್ಲಿದ್ದು, ಅಗತ್ಯ ಸೇವೆ ಹೊರತುಪಡಿಸಿ ವ್ಯಾಪಾರ ವಹಿವಾಟು, ಸಾರಿಗೆ ಸಂಚಾರ ಸಂಪೂರ್ಣ ಸ್ಥಬ್ಧವಾಗಿದೆ. ಅನಗತ್ಯವಾಗಿ ಹೊರಗಡೆ ಓಡಾಡದಂತೆ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಲ್ಲೇ ಅತೀ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣ ಹೊಂದಿರುವ ಅಥಣಿ ಪಟ್ಟಣದಲ್ಲಿ ಅನಗತ್ಯವಾಗಿ ಓಡಾಡುತಿದ್ದವರಿಗೆ ಪೊಲೀಸರು ಲಾಠಿ ಏಟು ನೀಡದ್ದಾರೆ. ಅಥಣಿ …
Read More »ಬೆಂಗಳೂರು ಬಿಟ್ಟು ಬಂದ ಜನರೆಲ್ಲಾ ಈಗ ಕೃಷಿಯಲ್ಲಿ ತೊಡಗಿಕೊಂಡಿರುವರು
ತುಮಕೂರು: ಇಷ್ಟು ದಿನ ಕೃಷಿ ಜಮೀನುಗಳೆಲ್ಲಾ ಬೀಳುಬಿಡುತಿದ್ದರು. ಕಾರಣ ನಗರದತ್ತ ಯುವಕರು ಮುಖ ಮಾಡುತಿದ್ದರು. ಆದರೆ ಈಗ ಬೀಳು ಬಿಟ್ಟ ಜಮೀನೆಲ್ಲಾ ಹಸನಾಗುತ್ತಿದೆ. ಅದರಲ್ಲಿ ಬೆಳೆ ಬೆಳೆಯಲಾಗುತ್ತಿದೆ. ಇದೆಲ್ಲಾ ಕೊರೋನಾ ಎಫೆಕ್ಟ್. ಬೆಂಗಳೂರು ಬಿಟ್ಟು ಬಂದ ಜನರೆಲ್ಲಾ ಈಗ ಕೃಷಿಯಲ್ಲಿ ತೊಡಗಿಕೊಂಡಿರಿವುದೇ ಇದಕ್ಕೆ ಕಾರಣ. ತುಮಕೂರು ಜಿಲ್ಲೆಯಲ್ಲಿ ಈಗ ಕೃಷಿ ಚಟುವಟಿಕೆಗಳು ಜೋರಾಗಿದೆ. ಇಷ್ಟು ದಿನ ಬೀಳು ಬಿಡುತಿದ್ದ ಜಮೀನುಗಳಲ್ಲಿ ವಿವಿಧ ರೀತಿಯ ಕೃಷಿ ಮಾಡಲಾಗುತ್ತಿದೆ. ಕೊರೋನಾದಿಂದ ಬೆಂಗಳೂರು ಬಿಟ್ಟು …
Read More »ಶಿವಯೋಗಿ ಮಠದ ಪರಮ ಪೂಜ್ಯ ಹಾಲಸ್ವಾಮಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಶಿವಮೊಗ್ಗ : ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕು ರಾಂಪುರದ ಶಿವಯೋಗಿ ಮಠದ ಪರಮ ಪೂಜ್ಯ ಹಾಲಸ್ವಾಮಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಹಲವು ದಿನಗಳಿಂದ ತೀವ್ರ ತರ ಉಸಿರಾಟದ ತೊಂದರೆಯಿಂದ ನರಳುತ್ತಿದ್ದರು. ಭಕ್ತರು ಎಷ್ಟೇ ವಿನಂತಿಸಿದರೂ ಆಸ್ಪತ್ರೆಗೆ ಹೋಗಲು ನಿರಾಕರಿಸಿದ್ದರು. ಕೊನೆಗೆ ಎರಡು ದಿನಗಳ ಹಿಂದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಕೋವಿಡ್ ಕೇಂದ್ರಕ್ಕೆ ಕರೆತರಲಾಗಿತ್ತು. ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ದಾವಣಗೆರೆ ಜಿಲ್ಲೆ ಸಾಸ್ವೆಹಳ್ಳಿ ಸಮೀಪದ ರಾಂಪುರ ಮಹಾಸಂಸ್ಥಾನದ ಹಾಲಸ್ವಾಮಿ ಅವರಿಗೆ …
Read More »ಜಿಲ್ಲೆಯಲ್ಲಿ ಮೂರು ದಿನದಲ್ಲಿ ಕೊರೊನಾಗೆ ನಾಲ್ಕು ಜನ ಪ್ರಾಣ ತೆತ್ತಿದ್ದು ಜಿಲ್ಲೆಯ ಜನ ಕಂಗಾಲಾಗಿದ್ದಾರೆ.
ಚಿಕ್ಕಮಗಳೂರು: ಸೋಮವಾರ ಎರಡು, ಮಂಗಳವಾರ ಒಂದು, ಬುಧವಾರ ಒಂದು ಎಂಬಂತೆ ಜಿಲ್ಲೆಯಲ್ಲಿ ಮೂರು ದಿನದಲ್ಲಿ ಕೊರೊನಾಗೆ ನಾಲ್ಕು ಜನ ಪ್ರಾಣ ತೆತ್ತಿದ್ದು ಜಿಲ್ಲೆಯ ಜನ ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದ್ದು ಜಿಲ್ಲೆಯ ಜನ ತೀವ್ರ ಆತಂಕಕ್ಕೀಡಾಗಿದ್ದಾರೆ. ಜಿಲ್ಲೆಯ 72 ವರ್ಷದ ವೃದ್ಧೆ ಕೊರೊನಾಗೆ ಬಲಿಯಾಗಿದ್ದಾರೆ. ಅಸ್ತಮಾ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೊರೊನಾಗೆ …
Read More »ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದಕ್ಕೆ ಬೆಳಗಾವಿಯಲ್ಲಿ 124, ಕಲಬುರಗಿಯಲ್ಲಿ 106 ಮಂದಿ ವಿರುದ್ಧ ಎಫ್‌ಐಆರ್
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ರಾಕೆಟ್ ವೇಗದಲ್ಲಿ ಏರಿಕೆಯಾಗುತ್ತಿದ್ದು, ಇದಕ್ಕೆ ಕ್ವಾರಂಟೈನ್‌ಗಳು ಒಂದು ರೀತಿಯಲ್ಲಿ ಕಾರಣರಾಗಿದ್ದಾರೆ. ಇಲ್ಲಿಯವರೆಗೆ ಬರೋಬ್ಬರಿ 1.51 ಲಕ್ಷ ಮಂದಿ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಹೌದು. ಕೋವಿಡ್ 19 ಸೋಂಕಿತರ ಪ್ರಥಮ ಸಂಪರ್ಕ ಮತ್ತು ದ್ವಿತೀಯ ಸಂಪರ್ಕಿತರು 14 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ. ಆದರೆ ಕರ್ನಾಟಕದಲ್ಲಿ 2.25 ಲಕ್ಷ ಮಂದಿ ಈ ನಿಯಮವನ್ನು ಉಲ್ಲಂಘಿಸಿ ಸುತ್ತಾಟ ಮಾಡಿದ್ದಾರೆ. ಈ ಪೈಕಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅತಿ ಹೆಚ್ಚು …
Read More »ಪ್ಲಾಸ್ಮಾ ದಾನ ಮಾಡಿದವರಿಗೆ 5 ಸಾವಿರ ರೂ. ಭತ್ಯೆ: ಸಚಿವ ಸುಧಾಕರ್
ಬೆಂಗಳೂರು: ಕೊರೊನಾದಿಂದ ಗುಣಮುಖರಾದವರು ಪ್ಲಾಸ್ಮಾ ದಾನ ಮಾಡಿದರೇ ಅವರಿಗೆ 5 ಸಾವಿರ ರೂ. ಭತ್ಯೆ ನೀಡುವುದಾಗಿ ಸರ್ಕಾರ ಘೋಷಿಸಿದೆ. ಗುಣಮುಖರಾದವರು 14-28 ದಿನಗಳ ಒಳಗೆ ಒಬ್ಬ ವ್ಯಕ್ತಿ ಒಂದು ಬಾರಿಯಷ್ಟೇ ದಾನ ಮಾಡಲು ಅವಕಾಶವಿದೆ. ಈಗಾಗಲೇ ದೆಹಲಿಯಲ್ಲಿ ಪ್ಲಾಸ್ಮಾ ಬ್ಯಾಂಕ್ ಆರಂಭಿಸಲಾಗಿದ್ದು, ಕೊರೊನಾದಿಂದ ಗುಣಮುಖರಾದವರು ಪ್ಲಾಸ್ಮಾ ದಾನವಾಗಿ ನೀಡುತ್ತಿದ್ದಾರೆ. ರಾಜ್ಯದಲ್ಲಿ ಕೊರೊನಾ ಮಹಾಮಾರಿ ಇನ್ನಷ್ಟು ವ್ಯಾಪಿಸೋ ಬಗ್ಗೆ ಎಚ್ಚರಿಕೆ ಬೆನ್ನಲ್ಲೇ ಸರ್ಕಾರ ಹೊಸ ಹೊಸ ಕ್ರಮಕ್ಕೆ ಮುಂದಾಗಿದೆ. ವಾರದ ಲಾಕ್‍ಡೌನ್ …
Read More »ಸತತ 3 ಗಂಟೆ ಸುರಿದ ಭಾರೀ ಮಳೆ- ಹಳ್ಳದಲ್ಲಿ ಕೊಚ್ಚಿ ಹೋಗ್ತಿದ್ದ ಮಹಿಳೆಯ ರಕ್ಷಣೆ
ಯಾದಗಿರಿ: ಕೊರೊನಾ ದಾಳಿಯಿಂದ ಯಾದಗಿರಿ ಜಿಲ್ಲೆಯ ಜನರು ನಲುಗಿ ಹೋಗಿದ್ರೆ, ಕೊರೊನಾಕ್ಕಿಂತ ನಾನೇನು ಕಮ್ಮಿಯಿಲ್ಲ ಎನ್ನುವಂತೆ ವರುಣರಾಯ ಸತತ ಮೂರು ಗಂಟೆಗಳ ಕಾಲ ಅಬ್ಬರಿಸಿದ್ದಾನೆ. ಮಳೆರಾಯನ ಅಬ್ಬರಕ್ಕೆ ರಸ್ತೆ, ಜಮೀನು ಕೊಚ್ಚಿ ಹೋಗಿವೆ. ಹಳ್ಳಗಳು ತುಂಬಿ ನದಿಯಂತೆ ಹರಿಯುತ್ತಿವೆ. ಜಮೀನಿನಲ್ಲಿ ಮಳೆ ನೀರು ಸಾಗರದಂತೆ ನಿಂತಿವೆ. ರೈತರು ಕೆಲಸ ಮುಗಿಸಿ ಊರಿಗೆ ತೆರಳದಂತಹ ಪರಿಸ್ಥಿತಿ ಯಾದಗಿರಿಯ ವಿವಿಧ ಹಳ್ಳಿಗಳಲ್ಲಿ ನಿರ್ಮಾಣವಾಗಿದೆ. ಹಳ್ಳದಲ್ಲಿ ಕೊಚ್ಚಿ ಹೋಗುತ್ತಿದ್ದ ಮಹಿಳೆಯನ್ನು ಸ್ಥಳೀಯರು ಸಕಾಲಕ್ಕೆ ರಕ್ಷಣೆ …
Read More »
Laxmi News 24×7