Breaking News

ಜಿಲ್ಲೆ

ಕೊರೊನಾ ಎಫೆಕ್ಟ್- ಸೆಕ್ಯೂರಿಟಿ ಗಾರ್ಡ್ ಆದ ಸ್ಯಾಂಡಲ್‍ವುಡ್ ನಟ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಕೊರೊನಾ ಪರಿಣಾಮ ಕನ್ನಡದಲ್ಲಿ ಅನೇಕ ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಪೋಷಕ ನಟರಾಗಿ ಕಾಣಿಸಿಕೊಂಡಿರುವ ಹಿರಿಯ ನಟರೊಬ್ಬರು ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿದ್ದಾರೆ. ಹಿರಿಯ ನಟ ಶ್ರೀನಾಥ್ ವಸಿಷ್ಠ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿದ್ದಾರೆ. ಶ್ರೀನಾಥ್ ವಸಿಷ್ಠ ಅಪಾರ್ಟ್‍ಮೆಂಟ್‍ನಲ್ಲಿದ್ದ ಸೆಕ್ಯೂರಿಟಿ ಗಾರ್ಡ್‌ಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಇತರ ಸಿಬ್ಬಂದಿ ಕೂಡ ಕ್ವಾರಂಟೈನ್ ಆಗಿದ್ದಾರೆ. …

Read More »

ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‌ ಎಷ್ಟು ಖಾಲಿ ಇದೆ ಎಂಬ ಮಾಹಿತಿಯನ್ನು ನೀವು ಮೊಬೈಲ್‌ನಲ್ಲೇ ತಿಳಿಯಬಹುದು.

ಬೆಂಗಳೂರು: ಇನ್ನು ಮುಂದೆ ಬೆಂಗಳೂರಿನಲ್ಲಿರುವ ಸರ್ಕಾರಿ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‌ ಎಷ್ಟು ಖಾಲಿ ಇದೆ ಎಂಬ ಮಾಹಿತಿಯನ್ನು ನೀವು ಮೊಬೈಲ್‌ನಲ್ಲೇ ತಿಳಿಯಬಹುದು. ಕೋವಿಡ್‌ 19 ನಿಂದಾಗಿ ಈಗ ಇತರ ರೋಗಿಗಳಿಗೂ ಆಸ್ಪತ್ರೆಗಳಲ್ಲಿ ಬೆಡ್‌ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ಬಿಬಿಎಂಪಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿರುವ ಖಾಲಿ ಎಷ್ಟಿದೆ ಎಂಬ ಮಾಹಿತಿಯನ್ನು ತಿಳಿಸಲು ಮುಂದಾಗಿದೆ. ಈ ಸಂಬಂಧ ಬಿಬಿಎಂಎಂಪಿಯ ಕೋವಿಡ್‌ 19 ವೆಬ್‌ಸೈಟ್‌ನಲ್ಲೇ …

Read More »

ಬೆಂಗಳೂರಿನಿಂದ ಮುಂದುವರಿದ ವಲಸೆ- ಬೆಳ್ಳಂಬೆಳಗ್ಗೆ ವಾಹನ ದಟ್ಟಣೆ ಶುರು

ಬೆಂಗಳೂರು: ಇಂದು ರಾತ್ರಿ 8 ಗಂಟೆಯ ಬಳಿಕ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದು ಕೂಡ ಜನ ಬೆಂಗಳೂರು ತೊರೆಯುತ್ತಿದ್ದಾರೆ. ಕುಟುಂಬ ಸಮೇತ ಗಂಟು ಮೂಟೆ ಕಟ್ಟಿಕೊಂಡು ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ ಇವತ್ತು ಗುಳೆ ಹೋಗುವವರ ಸಂಖ್ಯೆ ಕಡಿಮೆಯಾಗಿದೆ. ಮೆಜೆಸ್ಟಿಕ್‍ನಿಂದ ಗುಳೆ ಹೋಗುವವರ ಸಂಖ್ಯೆ ಕಡಿಮೆಯಾಗಿದೆ. ಒಂದು ವಾರ ಲಾಕ್‍ಡೌನ್ ಇದೆ. ಹೀಗಾಗಿ ಊರಲ್ಲಿ ಇದ್ದು ಬರೋಣ …

Read More »

ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ರಾಜ್ಯದ ಹಲವೆಡೆ ಮುಂಗಾರು ಮಳೆ ಚುರುಕುಗೊಂಡಿದ್ದು, ಇನ್ನೊಂದೆಡೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ …

Read More »

ಉ. ಕರ್ನಾಟಕ, ಮಲೆನಾಡು, ಕರಾವಳಿ ಭಾಗದ ಹಲವೆಡೆ ಮಳೆ………….

ಬೆಂಗಳೂರು: ಉತ್ತರ ಕರ್ನಾಟಕ, ಮಲೆನಾಡು ಮತ್ತು ಕರಾವಳಿ ಭಾಗದ ಹಲವೆಡೆ ಮಳೆ ಮುಂದುವರೆದಿದ್ದು, ಹಳ್ಳಕೊಳ್ಳಗಳು ತುಂಬುತ್ತಿವೆ. ಕೆಲವೆಡೆ ಪ್ರವಾಹ ಪರಿಸ್ಥಿತಿಯೂ ಕಂಡುಬರಲು ಶುರುವಾಗಿದೆ. ಈ ಬೆನ್ನಲ್ಲೇ ಸರ್ಕಾರ ಎಚ್ಚೆತ್ತಿದೆ. ಇಂದು ನಡೆದ ಡಿಸಿಗಳ ಸಭೆಯಲ್ಲಿ ಮಳೆ ಮತ್ತು ಪ್ರವಾಹ ಸಂಬಂಧ ಮಾಹಿತಿ ಪಡೆದ ಸಿಎಂ ಯಡಿಯೂರಪ್ಪ, ಹೆಚ್ಚು ಮಳೆ ಆಗುತ್ತಿರುವ ಪ್ರದೇಶದಲ್ಲಿ ಜನರ ಸ್ಥಳಾಂತರಕ್ಕೆ ಮೊದಲೇ ಸ್ಥಳ ಗುರುತಿಸುವಂತೆ ಸೂಚಿಸಿದರು. ಮಹಾರಾಷ್ಟ್ರದ ಕೋಲ್ಹಾಪುರ ಡಿಸಿ ಜೊತೆ ಸತತ ಸಂಪರ್ಕದಲ್ಲಿದ್ದು, ಕೃಷ್ಣಾ …

Read More »

ಹಾವೇರಿಯಲ್ಲಿ ಪಿಡಿಒ ಸೇರಿ ಆರು ಜನರಿಗೆ ಕೊರೊನಾ- ಓರ್ವ ಸೋಂಕಿತ ಸಾವು

ಹಾವೇರಿ: ಜಿಲ್ಲೆಯಲ್ಲಿ ಇಂದು ಒರ್ವ ಕೋವಿಡ್-19 ನಿಂದ ಮೃತಪಟಿದ್ದು, ಪಿಡಿಒ ಸೇರಿ ಒಟ್ಟು ಆರು ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸವಣೂರಿನ ಮಾಸೂರ ನಗರದ 45 ವರ್ಷದ ವ್ಯಕ್ತಿ ತೀವ್ರ ಜ್ವರ ಮತ್ತು ಉಸಿರಾಟದ ತೊಂದರೆಯಿಂದ ಜುಲೈ 9ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಮರುದಿನ ಜುಲೈ 10ರಂದು ಮೃತಪಟ್ಟಿದ್ದಾರೆ. ಆ ದಿನವೇ ಇವರ ಗಂಟಲು ದ್ರವವನ್ನು ಸಂಗ್ರಹಿಸಿ ಲ್ಯಾಬ್‍ಗೆ ಕಳುಹಿಸಲಾಗಿತ್ತು. ಜುಲೈ 12ರಂದು ಪಾಸಿಟಿವ್ ಎಂದು ದೃಢಪಟ್ಟಿತ್ತು. ಹಾವೇರಿ ತಾಲೂಕು …

Read More »

ಚಿಕ್ಕೋಡಿ -ಸದಲಗಾಹೋಬಳಿ ಮಟ್ಟದಲ್ಲಿ ಒಂದರಂತೆ ಒಟ್ಟು  4 ಸುಸಜ್ಜಿತವಾದ ಸರ್ಕಾರಿ ವಸತಿ ನಿಲಯಗಳಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದೆ.

ಚಿಕ್ಕೋಡಿ – ಚಿಕ್ಕೋಡಿ -ಸದಲಗಾ ಮತ ಕ್ಷೇತ್ರದಲ್ಲಿ ಹೋಬಳಿ ಮಟ್ಟದಲ್ಲಿ ಒಂದರಂತೆ ಒಟ್ಟು  4 ಸುಸಜ್ಜಿತವಾದ ಸರ್ಕಾರಿ ವಸತಿ ನಿಲಯಗಳಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದೆ. ಶಾಸಕ ಗಣೇಶ ಹುಕ್ಕೇರಿ ಅವರ ವಿನೂತನವಾದ ಯೋಜನೆ ಇದಾಗಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಇಂತಹ ಕೇರ್ ಸೆಂಟರ್ ಸ್ಥಾಪಿಸಿದ್ದಾರೆ. ಕರ್ನಾಟಕದಲ್ಲಿಯೇ ಶಾಸಕರೊಬ್ಬರ ಮುಂದಾಳತ್ವದಲ್ಲಿ ನಡೆಯುತ್ತಿರುವ ಕೋವಿಡ್ ಕೇರ್ ಸೆಂಟರ್ ಇದಾಗಿದೆ. ಕೇಂದ್ರಕ್ಕೆ ಬರುವ ರೋಗಿಗಳಿಗೆ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ಆರೈಕೆ ಮಾಡಲು ಕೇರ್ …

Read More »

ಬೆಂಗಳೂರು ಲಾಕ್‌ಡೌನ್ : ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ, ಏನುರುತ್ತೆ..? ಏನಿರಲ್ಲ..? ಇಲ್ಲಿದೆ ಡೀಟೇಲ್ಸ್

ಬೆಂಗಳೂರು-ರಾಜ್ಯವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ನಾಳೆಯಿಂದ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಸಂಪೂರ್ಣವಾಗಿ ಸ್ತಬ್ಧಗೊಳ್ಳಲಿದ್ದು, ಅದಕ್ಕಾಗಿ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟಗೊಂಡಿವೆ. ಕಂಟೈನ್‍ಮೆಂಟ್ ಝೋನ್ ಹೊರತುಪಡಿಸಿ ಉಳಿದು ಭಾಗಗಳಲ್ಲಿ ಕೆಲವು ವಿನಾಯ್ತಿಗಳನ್ನು ಸರ್ಕಾರ ನೀಡಿದೆ. ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಎರಡೂ ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಧಿಸಲಾಗಿದೆ. ಈ ಒಂದು …

Read More »

ರಾಯಚೂರು, ಸಿಂಧನೂರು ಒಂದು ವಾರ ಸಂಪೂರ್ಣ ಲಾಕ್‍ಡೌನ್……….

ರಾಯಚೂರು: ಜಿಲ್ಲೆಯಲ್ಲಿ ಕಳೆದ 15 ದಿನಗಳಲ್ಲಿ 250 ಪಾಸಿಟಿವ್ ಪ್ರಕರಣ ದಾಖಲಾದ ಹಿನ್ನೆಲೆ ಒಂದು ವಾರ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ರಾಯಚೂರು ಹಾಗೂ ಸಿಂಧನೂರು ನಗರಗಳನ್ನ ಮಾತ್ರ ಜುಲೈ 15 ರಿಂದ 22 ರವರೆಗೆ ಸಂಪೂರ್ಣ ಲಾಕ್‍ಡೌನ್ ಮಾಡಲಾಗುತ್ತಿದೆ ಅಂತ ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಹೇಳಿದ್ದಾರೆ. ಇನ್ನುಳಿದ ತಾಲೂಕು ಪ್ರದೇಶಗಳಲ್ಲಿ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಬಳಿಕ …

Read More »

ಕೊರೊನಾ ಪಾಸಿಟಿವ್ ಬಂದ್ರೂ ಸಾರ್ವಜನಿಕವಾಗಿ ಟೀ ಕುಡಿದು ಹರಟೆ ಹೊಡೆದ ಪೊಲೀಸ್ ಸಿಬ್ಬಂದಿ

ಯಾದಗಿರಿ: ಕೊರೊನಾ ಪಾಸಿಟಿವ್ ಬಂದು, ಕೊವಿಡ್ ಆಸ್ಪತ್ರೆಗೂ ಹೋಗುವ ಮುನ್ನ ಪೊಲೀಸ್ ಸಿಬ್ಬಂದಿ ನಿರ್ಲಕ್ಷ್ಯ ತೋರಿದ ಘಟನೆ ನಡೆದಿದೆ. ಇಂದು ಗುರುಮಠಕಲ್ ಪಿಎಸ್ ಐ ಸೇರಿದಂತೆ 16 ಪೊಲೀಸ್ ಸಿಬ್ಬಂದಿಗೆ ಕೊರೊನಾ ಧೃಡಪಟ್ಟಿದೆ. ಈಗಾಗಲೇ ಠಾಣೆಯನ್ನು ಸೀಲ್ ಡೌನ್ ಸಹ ಮಾಡಲಾಗಿದೆ. ಹೀಗಾಗಿ ಸಿಬ್ಬಂದಿಯನ್ನು ಕೋವಿಡ್ ಆಸ್ಪತ್ರೆಗೆ ಕರೆತರಲು ಸರ್ಕಾರಿ ಬಸ್ ಗುರುಮಿಠಕಲ್ ಪಟ್ಟಣಕ್ಕೆ ಹೋಗಿತ್ತು. ಪಟ್ಟಣ ಸರ್ಕಲ್ ಇನ್ಸ್‍ಪೆಕ್ಟರ್ ಕಚೇರಿ ಎದುರು ಬಸ್ ನಿಂತಿದ್ದ ವೇಳೆ ಅದರಿಂದ ಕೆಳಗಿಳಿದ …

Read More »