ಬೆಂಗಳೂರು: ಲಾಕ್‍ಡೌನ್ ಮಾರ್ಗಸೂಚಿಯನ್ನು ಸರ್ಕಾರ ಮಾರ್ಪಾಡು ಮಾಡಿದ್ದು, ಮದ್ಯ ಮಾರಾಟಕ್ಕೆ ನೀಡಿದ ಅನುಮತಿಯನ್ನು ಹಿಂಪಡೆದಿದೆ. ಮಂಗಳವಾರ ರಾತ್ರಿ 8 ಗಂಟೆಯಿಂದ ಬೆಂಗಳೂರು ಲಾಕ್ ಆಗಲಿದೆ. ಈ ಸಂಬಂಧ ಸರ್ಕಾರ ಪ್ರಕಟಿಸಿದ ಮೊದಲ ಮಾರ್ಗಸೂಚಿಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿತ್ತು. ಬೆಳಗ್ಗೆ 10 ರಿಂದ ಸಂಜೆ 5ರವೆರೆಗೆ ಮದ್ಯದ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಿತ್ತು. ಕೇವಲ ಪಾರ್ಸೆಲ್ ನೀಡಬೇಕೆಂದು ಮಾರ್ಗಸೂಚಿಯಲ್ಲಿ ಹೇಳಿತ್ತು.ಸರ್ಕಾರದ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಲೇ ಎಚ್ಚೆತ್ತ ಸರ್ಕಾರ …
Read More »ಬೆಂಗಳೂರು ಸೇರಿ ಯಾವ ಯಾವ ಜಿಲ್ಲೆಗಳಲ್ಲಿ ಲಾಕ್‍ಡೌನ್?
ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ಬ್ರೇಕ್ ಹಾಕುವ ಉದ್ದೇಶದಿಂದ ನಾಳೆ ರಾತ್ರಿಯಿಂದ ಒಂದು ವಾರದ ಮಟ್ಟಿಗೆ ಬೆಂಗಳೂರು ಅರ್ಧಂಬಂಧ ಲಾಕ್‍ಡೌನ್ ಆಗುತ್ತಿದೆ. ಆದರೆ ಜಿಲ್ಲೆಗಳನ್ನು ಲಾಕ್‍ಡೌನ್ ಮಾಡೋ ವಿಚಾರವಾಗಿ ಸರ್ಕಾರ ದೊಡ್ಡ ಗೊಂದಲ ಸೃಷ್ಟಿಸಿದೆ. ಹೈರಿಸ್ಕ್ ಜಿಲ್ಲೆಗಳಲ್ಲಿ ಲಾಕ್‍ಡೌನ್ ಜಾರಿ ಮಾಡೋ ಸಂಬಂಧ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ಸಿಎಂ ಯಡಿಯೂರಪ್ಪ ಹಿಂದೇಟು ಹಾಕಿದ್ರಾ ಎನ್ನುವ ಪ್ರಶ್ನೆ ಎದ್ದಿದೆ. ಬೆಂಗಳೂರು ಲಾಕ್‍ಡೌನ್ ವಿಚಾರದಲ್ಲಿ ಖಡಕ್ ನಿರ್ಣಯ ತೆಗೆದುಕೊಂಡ ಸಿಎಂ, ಜಿಲ್ಲೆಗಳ ಹೊಣೆಯನ್ನು ಉಸ್ತುವಾರಿ …
Read More »ರಾಣೇಬೆನ್ನೂರು ತಾಲೂಕಿನಲ್ಲಿ ಬುಧವಾರದಿಂದ ಐದು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಣೆ
ಹಾವೇರಿ: ಕೊರೊನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನಲ್ಲಿ ಬುಧವಾರದಿಂದ ಐದು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಅಧಿಕಾರಿಗಳು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರ ಸಲಹೆ ಮೇರೆಗೆ ರಾಣೇಬೆನ್ನೂರು ಶಾಸಕ ಅರುಣ್ ಕುಮಾರ್ ಗುತ್ತೂರ ಇಂದು ಈ ನಿರ್ಧಾರ ಪ್ರಕಟಿಸಿದ್ದಾರೆ. ಲಾಕ್‍ಡೌನ್ ವೇಳೆ ಹಾಲು, ದಿನಪತ್ರಿಕೆ ಮತ್ತು ವೈದ್ಯಕೀಯ ಸೇವೆಗಳಿಗೆ ಮಾತ್ರ ಅವಕಾಶವಿದ್ದು, ಉಳಿದಂತೆ ಎಲ್ಲವೂ ಲಾಕ್‍ಡೌನ್ ಆಗಲಿದೆ. ಯಾರೂ ಮನೆಯಿಂದ ಹೊರಬರದೆ …
Read More »ನಟ ದರ್ಶನ್ ಮೇಕಪ್ ಮ್ಯಾನ್ ಹೃದಯಾಘಾತದಿಂದ ಸಾವು
ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಕಪ್ ಮ್ಯಾನ್ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಸ್ವತಃ ನಟ ದರ್ಶನ್ ಅವರೇ ಟ್ವೀಟ್ ಮಾಡಿದ್ದು, ಎರಡು ದಶಕಗಳಿಂದ ನನ್ನ ಬಳಿ ಮೇಕಪ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸೀನ ಅಲಿಯಾಸ್ ಶ್ರೀನಿವಾಸ್ ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂಬುದಾಗಿ ಬರೆದುಕೊಂಡು ಸಂತಾಪ …
Read More »ಭಾರತದಲ್ಲಿ 75 ಸಾವಿರ ಕೋಟಿ ರೂ. ಹೂಡಿಕೆ ಮಾಡಲಿದೆ ಗೂಗಲ್
ಬೆಂಗಳೂರು: ಮುಂದಿನ ದಿನಗಳಲ್ಲಿ ಡಿಜಿಟಲ್ ಕ್ಷೇತ್ರದಲ್ಲಿ ಅದರಲ್ಲೂ ಭಾರತದಲ್ಲಿ ಭಾರೀ ಬೆಳವಣಿಗೆ ಆಗಲಿದೆ ಎಂಬುದನ್ನು ಊಹಿಸಿರುವ ಬಹುರಾಷ್ಟ್ರೀಯ ಕಂಪನಿಗಳು ಈಗ ದೇಶದಲ್ಲಿ ಹೂಡಿಕೆ ಮಾಡಲು ಮುಂದಾಗುತ್ತಿದ್ದು, ಗೂಗಲ್ ಒಟ್ಟು 10 ಶತಕೋಟಿ ಡಾಲರ್(75 ಸಾವಿರ ಕೋಟಿ ರೂ.) ಹೂಡಿಕೆ ಮಾಡುವುದಾಗಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಬೆಳಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದ ಬಳಿಕ ಗೂಗಲ್ ಕಂಪನಿಯ ಸಿಇಒ ಸುಂದರ್ ಪಿಚೈ 10 ಶತಕೋಟಿ ಡಾಲರ್ …
Read More »ಬೆಡ್ ನೀಡದ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದುಪಡಿಸುವಂತೆ ಸಿಎಂಗೆ ಡಿಸಿಎಂ ಸಲಹೆ
ಬೆಂಗಳೂರು: ಕೋವಿಡ್-19 ಸೋಂಕಿತರಿಗಾಗಿ ಸರಕಾರದ ವಶಕ್ಕೆ ತಮ್ಮಲ್ಲಿರುವ ಶೇ.50ರಷ್ಟು ಹಾಸಿಗೆಗಳನ್ನು ಇದುವರೆಗೂ ನೀಡದ ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳ ಮಾನ್ಯತೆಯನ್ನು ಕೂಡಲೇ ರದ್ದು ಮಾಡಬೇಕು ಎಂದು ನಗರದ ಕೋವಿಡ್ ಕೇರ್ ಕೇಂದ್ರಗಳ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದರು. ಬೆಂಗಳೂರಿನಲ್ಲಿ ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳ ಜತೆ ಸೋಮವಾರ ನಡೆಸಿದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಕಾಲಕ್ಕೆ …
Read More »ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ನಾಲ್ಕು ದಿನ ಮುಂಚೆಯೇ ಪ್ರಕಟ
ಬೆಂಗಳೂರು: ಮಾರ್ಚ್ 18ರ ಸುಮಾರಿಗೆ ಫಲಿತಾಂಶ ಬರಬಹುದೆಂದು ನಿರೀಕ್ಷಿಸಲಾಗಿದ್ದ ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ನಾಲ್ಕು ದಿನ ಮುಂಚೆಯೇ ಪ್ರಕಟವಾಗಲಿದೆ. ನಾಳೆ ಮಂಗಳವಾರ ಫಲಿತಾಂಶ ಪ್ರಕಟವಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಫೇಸ್ಬುಕ್ ಲೈವ್ನಲ್ಲಿ ಮಾತನಾಡಿದ ಸುರೇಶ್ ಕುಮಾರ್, ಮಂಗಳವಾರ ಬೆಳಗ್ಗೆ 11:30ಕ್ಕೆ ವಿದ್ಯಾರ್ಥಿಗಳ ಮೊಬೈಲ್ಗೆ SMS ಮೂಲಕ ರಿಸಲ್ಟ್ ತಲುಪಲಿದೆ. 12 ಗಂಟೆ ಬಳಿಕ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗುತ್ತದೆ …
Read More »ಬೆಂಗಳೂರು ಲಾಕ್‍ಡೌನ್-800 ಹೆಚ್ಚುವರಿ ಬಸ್‍ಗಳ ವ್ಯವಸ್ಥೆ
ಬೆಂಗಳೂರು: ಮಂಗಳವಾರ ರಾತ್ರಿ 8 ಗಂಟೆಯಿಂದ ರಾಜಧಾನಿ ಸಂಪೂರ್ಣ ಲಾಕ್‍ಡೌನ್ ಆಗಲಿದೆ. ಈ ಹಿನ್ನೆಲೆ ಬೆಂಗಳೂರಿನಿಂದ ಹೊರ ಹೋಗುತ್ತಿರುವ ಜನ ಅನಕೂಲಕ್ಕಾಗಿ 800 ಹೆಚ್ಚುವರಿ ಬಸ್ ಗಳ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಇಂದು (ಸೋಮವಾರ) ಮತ್ತು ನಾಳೆ (ಮಂಗಳವಾರ) ಪ್ರತಿದಿನ 800 ಹೆಚ್ಚುವರಿ ಬಸ್ಸುಗಳನ್ನು ಅಂದರೆ ಒಟ್ಟು 1600 ಬಸ್ಸುಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಕಾರ್ಯಾಚರಣೆಗೊಳಿಸಲಾಗುತ್ತಿದೆ. ಇದಲ್ಲದೇ ಅಗತ್ಯವಿದ್ದರೆ …
Read More »ಮದ್ಯ ಪ್ರಿಯರು ಇಷ್ಟದ ಬ್ರಾಂಡ್‍ಗಳನ್ನು ಖರೀದಿಸುವುದರಲ್ಲಿ ಫುಲ್ ಬ್ಯುಸಿ
ಮಡಿಕೇರಿ: ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ವಿಷಯ ಮುನ್ನೆಲೆಗೆ ಬಂದಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಲಾಕ್‍ಡೌನ್ ಮಾಡಲು ನಿರ್ಧರಿಸಲಾಗಿದೆ. ಹೀಗಾಗಿ ಮಡಿಕೇರಿಯಲ್ಲಿ ಮದ್ಯ ಪ್ರಿಯರು ಇಷ್ಟದ ಬ್ರಾಂಡ್‍ಗಳನ್ನು ಖರೀದಿಸುವುದರಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಒಂದು ವೇಳೆ ಇಡೀ ರಾಜ್ಯ ಅಥವಾ ಆಯ್ದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಘೋಷಿಸಿದರೆ ಎಂಬ ಮುಂದಾಲೋಚನೆಯಿಂದ ಮದ್ಯ ಪ್ರಿಯರು ತಮ್ಮಿಷ್ಟದ ಮದ್ಯದ ಬ್ರ್ಯಾಂಡ್‍ಗಳನ್ನು ಖರೀದಿಸಲು ಮುಗಿಬೀಳುತ್ತಿದ್ದಾರೆ. ಹಲವರು ಒಂದು ವಾರಕ್ಕೆ ಸಾಕಾಗುವಷ್ಟು ಮದ್ಯ …
Read More »ಮೌಢ್ಯ ವಿರುದ್ದ ನಿರಂತರ ಹೋರಾಟ ಮಾಡುತ್ತಿರುವ ವೈಚಾರಿಕ ಚಿಂತಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಬೆಳಗಾವಿ: ಮೌಢ್ಯ ವಿರುದ್ದ ನಿರಂತರ ಹೋರಾಟ ಮಾಡುತ್ತಿರುವ ವೈಚಾರಿಕ ಚಿಂತಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮತ್ತೊಂದು ಹೆಜ್ಜೆ ಮುಂದಿರಿಸಿ ಹೊಸ ಇತಿಹಾಸಕ್ಕೆ ನಾಂದಿ ಹಾಡಿದ್ದಾರೆ. ಇಲ್ಲಿನ ಸದಾಶಿವ ನಗರದ ಬುದ್ದ,ಬಸವ, ಅಂಬೇಡ್ಕರ್ ರುದ್ರಭೂಮಿಯಲ್ಲಿ ಸೋಮವಾರ ಸತೀಶ ಜಾರಕಿಹೊಳಿ ಅವರ ನೂತನ ಕಾರಿಗೆ ಪುಷ್ಪಾರ್ಚನೆ ಮಾಡುವ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮಕ್ಕೆ ನಾಡಿನ ಹೆಸರಾಂತ ಸ್ವಾಮೀಜಿಗಳು ಸಾಥ್ ನೀಡಿದರು. ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್ ಪುತ್ರಿ ಪ್ರಿಯಾಂಕಾ …
Read More »
Laxmi News 24×7