Breaking News

ಜಿಲ್ಲೆ

ಮಯೂರಿ ಬರ್ತ್‍ಡೇ ಸಂಭ್ರಮಕ್ಕೆ ಕಿಕ್ಕೇರಿಸಿತು ‘ಆದ್ಯಂತ’ ಫಸ್ಟ್ ಲುಕ್!

ಕಿರುತೆಯಿಂದ ಕಲಾಯಾನ ಆರಂಭಿಸಿ ಹಿರಿತೆರೆಯಲ್ಲೂ ಯಶಸ್ವಿ ನಾಯಕಿಯಾಗಿ ನೆಲೆ ಕಂಡುಕೊಂಡಿರುವವರು ಮಯೂರಿ ಕ್ಯಾತರಿ. ಪ್ರಬುದ್ಧವಾದ ನಿರ್ಧಾರಗಳ ಮೂಲಕ ಚೆಂದದ ಪಾತ್ರಗಳನ್ನ ಆಯ್ಕೆ ಮಾಡಿಕೊಳ್ಳುತ್ತಿರೋ ಮಯೂರಿ ಇತ್ತೀಚೆಗಷ್ಟೇ ಸಾಂಸಾರಿಕ ಜೀವನಕ್ಕೆ ಅಡಿಯಿರಿಸಿದ್ದಾರೆ. ಆ ಖುಷಿಯಲ್ಲಿರೋ ಅವರ ಪಾಲಿಗೆ ಈ ಬಾರಿಯ ಹುಟ್ಟುಹಬ್ಬ ನಿಜಕ್ಕೂ ಸ್ಪೆಷಲ್ಲು. ಅದನ್ನು ಮತ್ತೂ ಕಳೆಗಟ್ಟಿಸುಯವಂತೆ ‘ಆದ್ಯಂತ’ ಚಿತ್ರದ ಚೆಂದದ ಫಸ್ಟ್ ಲುಕ್ ಬಿಡುಗಡೆಗೊಂಡಿದೆ.   ಆದ್ಯಂತ ಮಯೂರಿ ನಾಯಕಿಯಾಗಿ ನಟಿಸಿರೋ ಚಿತ್ರ. ಅವರ ಪಾಲಿಗಿದು ಮಹತ್ವಾಕಾಕ್ಷೆಯ ಮೈಲಿಗಲ್ಲು. …

Read More »

ಆನ್ ಲೈನ್ ನಲ್ಲಿ ಪುಸ್ತಕ ಲೋಕಾರ್ಪಣೆ

ಬೆಂಗಳೂರು, ಜು.12- ಹಿರಿಯ ಸಾಹಿತಿ ಡಾ.ಜಿ.ಕೃಷ್ಣಪ್ಪ ಅವರು ರಚಿಸಿರುವ ಕುವೆಂಪು ಹನುಮದ್ದರ್ಶನ(ಶ್ರೀ ರಾಮಾಯಣ ದರ್ಶನಂ-ಒಂದು ಚಿತ್ರಣ) ಗ್ರಂಥ ವನ್ನು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಲೋಕಾರ್ಪಣೆ ಮಾಡಿದರು. https://youtu.be/I1U-UG-NHuk ನಗರದಲ್ಲಿಂದು ತಮ್ಮ ನಿವಾಸದಲ್ಲಿ ಆನ್ ಲೈನ್ ಮೂಲಕವೇ ಬಿಡುಗಡೆ ಮಾಡಿದ ಅವರು, ಶ್ರೀ ರಾಮಾಯಣ ದರ್ಶನಂ ವಿಶೇಷ ಗ್ರಂಥವಾಗಿದ್ದು, ಡಾ.ಜಿ.ಕೃಷ್ಣಪ್ಪ ಅವರು ಹನುಮದ್ದರ್ಶನ ಕುರಿತು ಹೆಚ್ಚಿನ ಮಾಹಿತಿ ಬೆಳಕು ಚೆಲ್ಲಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಮಹಮದೀಯರ ಕನ್ನಡ …

Read More »

ಡೆತ್ ನೋಟ್ ಬರೆದಿಟ್ಟು ನಿರ್ಮಾಪಕ ಆತ್ಮಹತ್ಯೆ………

ಉಡುಪಿ: ಡೆತ್ ನೋಟ್ ಬರೆದಿಟ್ಟು ನಿರ್ಮಾಪಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಬೀಜಾಡಿ ಗ್ರಾಮದಲ್ಲಿ ನಡೆದಿದೆ. ನಾಗೇಶ್ ಕುಮಾರ್ (64) ನೇಣಿಗೆ ಶರಣಾದ ನಿರ್ಮಾಪಕ. ಮೃತ ನಾಗೇಶ್ ಕುಮಾರ್ ಚಲನಚಿತ್ರ ನಿರ್ದೇಶನಕ್ಕೆ 28 ಲಕ್ಷ ಹಣ ಹೂಡಿದ್ದರು. ‘ಭೂಮಿಕ ಪ್ರೊಡಕ್ಷನ್’ ಹೆಸರಿನ ಭರತ್ ನಾವುಂದ ನಿರ್ದೇಶನದ ಚಲನಚಿತ್ರಕ್ಕೆ ಹಣ ಹೂಡಿಕೆ ಮಾಡಿದ್ದರು. ಆದರೆ ಹಣ ವಾಪಸ್ ಬಾರದ ಹಿನ್ನೆಲೆಯಲ್ಲಿ ನಿರ್ಮಾಪಕ ನಾಗೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೀಜಾಡಿ ಗ್ರಾಮದ …

Read More »

ಕೊರೊನಾ ಮಹಾಮಾರಿಗೆ ಬಾಗಲಕೋಟೆ ಜಿಲ್ಲೆಯಲ್ಲಿ ಇಂದು ಮೂವರು ಬಲಿ

ಬಾಗಲಕೋಟೆ: ಕೊರೊನಾ ಮಹಾಮಾರಿಗೆ ಜಿಲ್ಲೆಯಲ್ಲಿ ಇಂದು ಒಟ್ಟು ಮೂವರು ಬಲಿಯಾಗಿದ್ದು, ಜಿಲ್ಲೆಯ ಜನರಲ್ಲಿ ಆತಂಕವನ್ನುಂಟು ಮಾಡಿದೆ. ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮದ 44 ವರ್ಷದ ವ್ಯಕ್ತಿ ಮೃತರಾಗಿದ್ದು, ರೋಗಿ ನಂ.8300 ಸಂಪರ್ಕದಿಂದಾಗಿ ಇವರಿಗೆ ಸೋಂಕು ತಗುಲಿತ್ತು. ಬಾಗಲಕೋಟೆ ನವನಗರದ 28 ಸೆಕ್ಟರ್ ನಿವಾಸಿ, 77 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ಈ ಇಬ್ಬರು ಸೋಂಕಿತರು ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದರು. ಬಿಪಿ, ಡಯಾಬಿಟಿಸ್‍ಗೆ ತುತ್ತಾಗಿದ್ದರು. ಜೂನ್ 10ರಂದು ತೀವ್ರ ಉಸಿರಾಟ ತೊಂದರೆ …

Read More »

ಸಂಡೆ ಲಾಕ್‌ಡೌನ್ : ಬೆಂಗಳೂರು ಸೇರಿ ಕರ್ನಾಟಕ ಸ್ಥಬ್ದ, ಎಲ್ಲೆಲ್ಲಿ ಏನೇನಾಯ್ತು..?

ಬೆಂಗಳೂರು : ಅಂಕೆ ಮೀರಿ ಶರವೇಗದಲ್ಲಿ ಹಬ್ಬುತ್ತಿರುವ ಕೊರೋನಾ ನಿಯಂತ್ರಿಸಲು ರಾಜ್ಯ ಸರ್ಕಾರ ಜಾರಿ ಮಾಡಿರುವ ಎರಡನೇ ಭಾನುವಾರದ ಲಾಕ್ ಡೌನ್ ಗೂ ಈ ವಾರವೂ ಬಹುತೇಕ ಯಶಸ್ವಿಯಾಗಿದೆ. ಕೆಲವು ಕಡೆ ಸಣ್ಣ ಪುಟ್ಟ ಗೊಂದಲ, ಹೊರತುಪಡಿಸಿದರೆ, ಈ ಭಾರಿ ಸಾರ್ವಜನಿಕರೇ ಸ್ವಯಂಪ್ರೇರಿತರಾಗಿ ತಮ್ಮ ಪ್ರಯಾಣಕ್ಕೆ ನಿರ್ಬಂಧ ಹಾಕಿಕೊಂಡಿದ್ದು ವಿಶೇಷವಾಗಿತ್ತು. ಲಾಕ್ ಡೌನ್ ಶನಿವಾರ ರಾತ್ರಿ 8 ಗಂಟೆಯಿಂದಲೇ ಜಾರಿಯಾಗಿದ್ದು, ಭಾನುವಾರ ರಾಜ್ಯದಾದ್ಯಂತ ಬಹುತೇಕ ಎಲ್ಲಾ ವಹಿವಾಟುಗಳು ಸಂಪೂರ್ಣ ಸ್ಥಗಿತಗೊಂಡಿವೆ. …

Read More »

ಗೋಕಾಕ್ ತಾಲೂಕಿನಲ್ಲಿ ಲಾಕ್‍ಡೌನ್………

ಬೆಳಗಾವಿ: ಕೊರೊನಾ ಚೈನ್ ಕಟ್ ಮಾಡುವ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಒಂದು ವಾರ ಲಾಕ್‍ಡೌನ್ ಮಾಡಲಾಗಿದೆ. ಇದೀಗ ಬೆಂಗಳೂರು ಮಾದರಿಯಲ್ಲಿ ಗೋಕಾಕ್ ತಾಲೂಕಿನಲ್ಲಿ 7 ರಿಂದ 10 ದಿನ ಲಾಕ್‍ಡೌನ್ ಮಾಡಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಘೋಷಣೆ ಮಾಡಿದ್ದಾರೆ. ಸಂಡೇ ಲಾಕ್‍ಡೌನ್ ಮಧ್ಯೆ ಸಚಿವರಿಂದ ಕೋವಿಡ್ ಟಾಸ್ಕ್ ಫೋರ್ಸ್ ಸಭೆ ಮಾಡಲಾಗಿದೆ. ಗೋಕಾಕ್ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ …

Read More »

ಜ್ಞಾನಾರ್ಜನೆ ಎಂದೂ ಮುಗಿಯದ ಕಾಯಕ’- ಕ್ವಾರಂಟೈನ್‍ನಲ್ಲಿ ಪುಸ್ತಕದ ಮೊರೆಹೋದ ಸಿಎಂ

ಬೆಂಗಳೂರು: ಕೊರೊನಾ ಭೀತಿಯಿಂದ ಸ್ವಯಂ ಕ್ವಾರಂಟೈನ್ ಅಗಿರುವ ಸಿಎಂ ಯಡಿಯೂರಪ್ಪನವರು ಪುಸ್ತಕಗಳನ್ನು ಓದುವ ಮೂಲಕ ಕಾಲಕಳೆಯುತ್ತಿದ್ದಾರೆ. ಸಿಎಂ ಅವರ ಗೃಹ ಕಚೇರಿ ಕೃಷ್ಣಾ, ಅಧಿಕೃತ ನಿವಾಸ ಕಾವೇರಿ ಮತ್ತು ಅವರ ಧವಳಗಿರಿಯ ನಿವಾಸದಲ್ಲಿ ಕೆಲಸ ಮಾಡುವ ಕೆಲ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಕಾರಣದಿಂದ ಯಡಿಯೂರಪ್ಪನವರು ಶುಕ್ರವಾದಿಂದ ಐದು ದಿನಗಳ ಕಾಲ ತಮ್ಮ ಕಾವೇರಿ ನಿವಾಸದಲ್ಲಿ ಕ್ವಾರಂಟೈನ್ ಆಗಿದ್ದಾರೆ. ಈ ವೇಳೆ ಪುಸ್ತಕಗಳನ್ನು ಓದುತ್ತಾ ಸಮಯ ದೂಡುತ್ತಿರುವ ಬಿಎಸ್‍ವೈ, ಬಿಡುವಿನ …

Read More »

ಜಿಲ್ಲಾಧಿಕಾರಿಗಳು ಜೊತೆ ಸಭೆ ಮಾಡಿದ ನಂತರ ಉಳಿದ ಜಿಲ್ಲೆಗಳನ್ನು ಲಾಕ್‍ಡೌನ್ ಮಾಡುವ ಬಗ್ಗೆ ತೀರ್ಮಾನ

ಬೆಂಗಳೂರು: ಕೊರೊನಾ ಸ್ಪೀಡ್ ಕಟ್ ಮಾಡುವ ಹಿನ್ನೆಲೆಯಲ್ಲಿ ಏಳು ದಿನ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಲಾಕ್‍ಡೌನ್ ಮಾಡಲಾಗಿದೆ. ಸೋಮವಾರ ಜಿಲ್ಲಾಧಿಕಾರಿಗಳು ಜೊತೆ ಸಭೆ ಮಾಡಿದ ನಂತರ ಉಳಿದ ಜಿಲ್ಲೆಗಳನ್ನು ಲಾಕ್‍ಡೌನ್ ಮಾಡುವ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಅಶೋಕ್, ಬೆಂಗಳೂರು ಲಾಕ್‍ಡೌನ್ ಅವಧಿಯಲ್ಲಿ ವೈದ್ಯಕೀಯ ಸಂಬಂಧಿತ ಫ್ಯಾಕ್ಟರಿಗಳನ್ನು ತೆರೆಯಲು ಅವಕಾಶ ನೀಡಲು ಸಿಎಂ ಒಪ್ಪಿದ್ದಾರೆ. …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಲಿಸ್ಟ್ ಕೊಡಲಿ ಅದರ ಪ್ರಕಾರ ಬಂಧಿಸುತ್ತೇವೆ

ಗೋಕಾಕ :ಗೋಕಾಕ ನ ಖಾಸಗಿ ವೈದ್ಯ ಡಾ. ಹೊಸಮನಿ ಅವರು ಎರಡು ಲಕ್ಷ ಬಿಲ್ ಮಾಡಿದ್ದಕ್ಕೆ ಗಲಾಟೆಯಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಲಿಸ್ಟ್ ಕೊಡಲಿ ಅದರ ಪ್ರಕಾರ ಬಂಧಿಸುತ್ತೇವೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಭಾನುವಾರ ಗೋಕಾಕನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಗೋಕಾಕನಲ್ಲಿ ಖಾಸಗಿ ವೈದ್ಯ ಡಾ. ಹೊಸಮನಿ ಮೃತಪಟ್ಟ ವ್ಯಕ್ತಿಗೆ ಎರಡು ಲಕ್ಷ ರು. ಬಿಲ್ ಮಾಡಿರುವ ಪ್ರಕರಣಕ್ಕೆ ಸಂಬoಧಿಸಿದoತೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕೆಂದು …

Read More »

ಅಂತರ್ ಜಿಲ್ಲಾ ಸಂಚಾರವನ್ನು ನಿರ್ಬಂಧಿಸುವಂತೆ ಹೆಚ್ಡಿಕೆ ಒತ್ತಾಯ…………..

ಬೆಂಗಳೂರು, ಜು.11-ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಲಾಕ್ ಡೌನ್ ಗೆ ಸರ್ಕಾರ ನಿರ್ಧಾರ ಮಾಡಿರುವ ಬೆನ್ನಲ್ಲೇ ಸರಕು ಸಾಗಣೆ ವಾಹನಗಳನ್ನು ಹೊರತುಪಡಿಸಿ ಅಂತರ್ ಜಿಲ್ಲಾ ಸಂಚಾರವನ್ನು ನಿರ್ಬಂಧಿಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ಕೊರೋನ ವೈರಸ್ ಸಮುದಾಯಕ್ಕೆ ಹಬ್ಬುತ್ತಿರುವ ಹಿನ್ನಲೆಯಲ್ಲಿ ಪರಿಸ್ಥಿತಿಯನ್ನು ಮನಗಂಡು ಇತರೆ ಗಂಭೀರ ಜಿಲ್ಲೆಗಳಲ್ಲಿಯೂ ಲಾಕ್ ಡೌನ್ ಮತ್ತೆ ಜಾರಿಗೊಳಿಸಿದರೆ ಸಾರ್ವಜನಿಕ ಸ್ವಾಸ್ಥ್ಯದ ಹಿತದೃಷ್ಟಿಯಿಂದ ನಾನು …

Read More »