Breaking News

ಜಿಲ್ಲೆ

7 ಖಾಸಗಿ ಆಂಬುಲೆನ್ಸ್‌ಗಳನ್ನು ಬಾಡಿಗೆಗೆ ಪಡೆಯಲು ಜಿಲ್ಲಾಡಳಿತ ನಿರ್ಧರಿಸಿದೆ.

ಹುಬ್ಬಳ್ಳಿ: ಜಿಲ್ಲೆಯಾದ್ಯಂತ ದಿನೇ ದಿನೇ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಸೋಂಕಿತರನ್ನು ಕರೆ ತರಲು ಹೆಚ್ಚುವರಿಯಾಗಿ 7 ಖಾಸಗಿ ಆಂಬುಲೆನ್ಸ್‌ಗಳನ್ನು ಬಾಡಿಗೆಗೆ ಪಡೆಯಲು ಜಿಲ್ಲಾಡಳಿತ ನಿರ್ಧರಿಸಿದೆ. ಗ್ರಾಮಗಳ ಮಟ್ಟದಲ್ಲೂ ಕೊರೊನಾ ಹರಡುತ್ತಿದೆ. ಪ್ರಕರಣಗಳು ಏರುಗತಿಯಲ್ಲೇ ಸಾಗಿದರೆ, ಹುಬ್ಬಳ್ಳಿಯಲ್ಲಿರುವ ಕಿಮ್ಸ್‌ ಕೋವಿಡ್-19 ಆಸ್ಪತ್ರೆಗೆ ಜಿಲ್ಲೆಯ ವಿವಿಧ ಭಾಗಗಳಿಂದ ಸೋಂಕಿತರನ್ನು ಕರೆ ತರುವುದು ಸವಾಲಾಗಲಿದೆ. ಹಾಗಾಗಿ, ಆಂಬುಲೆನ್ಸ್‌ಗಳ ಕೊರತೆ ಎದುರಾಗದಿರಲೆಂದು, ಮುಂಜಾಗ್ರತಾ ಕ್ರಮವಾಗಿ ಆಂಬುಲೆನ್ಸ್‌ಗಳನ್ನು ಬಾಡಿಗೆಗೆ ಪಡೆಯಲು ತೀರ್ಮಾನಿಸಲಾಗಿದೆ. ಏಳು ಮೀಸಲು: ‘ಸದ್ಯ ಏಳು ಆಂಬುಲೆನ್ಸ್‌ಗಳನ್ನು …

Read More »

ಮಂಡ್ಯದ ‘ಡ್ರೋನ್ ಸ್ಪೆಷಲಿಸ್ಟ್’ನ ಅಸಲಿಯತ್ತು ಈಗ ಬೆಳಕಿಗೆ ಬಂದಿದೆ

ಮಂಡ್ಯ: ಇ-ತ್ಯಾಜ್ಯಗಳಿಂದ ತಾನು 600 ಡ್ರೋನ್​ಗಳನ್ನ ತಯಾರಿಸಿದ್ದೇನೆ. ಬಡತನದಿಂದ ಬೆಳೆದು ಮೇಲೆ ಬಂದಿದ್ದೇನೆ. ಅನೇಕ ಅಂತಾರಾಷ್ಟ್ರೀಯ ಡ್ರೋನ್ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದಿದ್ದೇನೆ. 87 ದೇಶಗಳಲ್ಲಿ ಕೆಲಸ ಆಫರ್ ಇದ್ದರೂ ತಾಯಿಗೋಸ್ಕರ ದೇಶದಲ್ಲೇ ಉಳಿದುಕೊಂಡಿದ್ದೇನೆ ಎಂದು ಸಖತ್ತಾಗಿ ಬಿಂಬಿಸಿಕೊಂಡಿದ್ದ ಮಂಡ್ಯದ ‘ಡ್ರೋನ್ ಸ್ಪೆಷಲಿಸ್ಟ್’ನ ಅಸಲಿಯತ್ತು ಈಗ ಬೆಳಕಿಗೆ ಬಂದಿದೆ. ಸುದ್ದಿ ಜಾಲತಾಣವೊಂದು ಈತನದ್ದು ಬರೇ ಸುಳ್ಳಿನ ಕಂತೆಗಳು ಎಂದು ತನಿಖಾ ವರದಿಯಲ್ಲಿ ಬಟಾಬಯಲು ಮಾಡಿದೆ. ಈತನ ಹೆಸರು ಪ್ರತಾಪ್. ಮಂಡ್ಯ ಜಿಲ್ಲೆ …

Read More »

1 ವಾರ ಲಾಕ್‍ಡೌನ್‍ಗೂ ಮುನ್ನ ಎರಡು ದಿನ ಲಾಕ್ ಫ್ರೀ – 2 ದಿನ ಫ್ರೀ ನೀಡಿದ್ದು ಯಾಕೆ?

ಬೆಂಗಳೂರು: ಲಾಕ್‍ಡೌನ್ ಮಾಡಲ್ಲ ಎಂದು ಹೇಳಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಶನಿವಾರ ರಾತ್ರಿ ಒಂದು ವಾರಗಳ ಕಾಲ ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರವನ್ನು ಸಂಪೂರ್ಣವಾಗಿ ಲಾಕ್‍ಡೌನ್ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಹೆಮ್ಮಾರಿಗೆ ಬ್ರೇಕ್ ಹಾಕಲು ಒಂದು ವಾರ ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್ ಆಗಲಿದೆ. ಜುಲೈ 14 ಮಂಗಳವಾರ ರಾತ್ರಿ 8 ಗಂಟೆಯಿಂದ ಕಂಪ್ಲೀಟ್ ಲಾಕ್ ಆಗಲಿದ್ದು, ಜುಲೈ 22 ಬುಧವಾರ ಬೆಳಗ್ಗೆ 5 ಗಂಟೆವರೆಗೆ ಲಾಕ್‍ಡೌನ್ …

Read More »

ರಾಜ್ಯದಲ್ಲಿ ಶನಿವಾರ-ಭಾನುವಾರ ಲಾಕ್ ಡೌನ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಆರ್ಭಟ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇನ್ಮುಂದೆ ರಾಜ್ಯದಲ್ಲಿ ಶನಿವಾರ-ಭಾನುವಾರ ಲಾಕ್ ಡೌನ್ ಮಾಡುವ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಡಿಸಿಎಂ ಗೋವಿಂದ್ ಕಾರಜೋಳ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಾರಕ್ಕೆರಡು ದಿನಗಳ ಕಾಲ ಲಾಕ್ ಡೌನ್ ಮಾಡುವ ಸಂಬಂಧ ಸಿಎಂ ಯಡಿಯೂರಪ್ಪ ಅವರು ತಜ್ಞರ ಅಂತಿಮ ಮಾಹಿತಿಗಾಗಿ ಕಾಯುತ್ತಿದ್ದು, ಈ ನಿಟ್ಟಿನಲ್ಲಿ ಅವರು ಅಂತಿಮ ಮಾಹಿತಿ ಬಳಿಕ ಇನ್ಮುಂದೆ ರಾಜ್ಯದಲ್ಲಿ ಶನಿವಾರ-ಭಾನುವಾರ ಲಾಕ್ …

Read More »

ಇಂದು ರಾಜ್ಯದಲ್ಲಿ `ಸಂಡೇ ಕರ್ಪ್ಯೂ’ : ಏನಿರುತ್ತೆ? ಏನಿರಲ್ಲ?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯ್ಲಿ ರಾಜ್ಯ ಸರ್ಕಾರವು ಭಾನುವಾರ ಸಂಪೂರ್ಣ ಲಾಕ್ ಡೌನ್ ಗೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗಿನ ಜಾವ 5 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ. ಈಗಾಗಲೇ ಪ್ರತಿದಿನ ರಾತ್ರಿ 8 ಗಂಟೆಯಿಂದ ಬೆಳಗಿನ ಜಾವ 5 ಗಂಟೆಯವರೆಗೆ ಕರ್ಪ್ಯೂ ಜಾರಿಯಲ್ಲಿದೆ. ಲಾಕ್ ಡೌನ್ ವೇಳೆ ಸುಖಾಸುಮ್ಮನೆ ಮನೆಯಿಂದ …

Read More »

ಸೋಮವಾರದ ಜಿಲ್ಲಾಧಿಕಾರಿಗಳ ಸಭೆಯ ನಂತರ ಮತ್ತೆ ಸಂಪೂರ್ಣ ಕರ್ನಾಟಕ ಲಾಕ್ ಡೌನ್ ಆಗತ್ತಾ..?

ಬೆಂಗಳೂರು: ಇಂದು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ಮಂಗಳವಾರದಿಂದ ಒಂದು ಲಾಕ್‍ಡೌನ್ ಆಗಲಿವೆ. ಇದೇ ರೀತಿ ಸೋಮವಾರ ಉಳಿದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಘೋಷಿಸುವ ಸಾಧ್ಯತೆಗಳಿವೆ. ಸೋಮವಾರ ಜಿಲ್ಲಾಧಿಕಾರಿಗಳ ಸಿಎಂ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಸಭೆಯಲ್ಲಿ ಜಿಲ್ಲೆಯ ಸ್ಥಿತಿ ಗತಿಗಳ ಬಗ್ಗೆ ಮಾಹಿತಿಯನ್ನು ಮುಖ್ಯಮಂತ್ರಿಗಳು ಪಡೆಯಲಿದ್ದಾರೆ. ಜಿಲ್ಲಾಧಿಕಾರಿಗಳು ನೀಡುವ ವರದಿ ಆಧರಿಸಿ ಸೋಮವಾರ ಸಂಜೆ ಲಾಕ್‍ಡೌನ್ ಘೋಷಣೆ ಮಾಡುವ ಸಾಧ್ಯತೆಗಳು ದಟ್ಟವಾಗಿವೆ. ಹೆಚ್ಚು ಕೊರೊನಾ ಪ್ರಕರಣಗಳಿರುವ ಜಿಲ್ಲೆಗಳನ್ನು ಲಾಕ್‍ಡೌನ್ …

Read More »

ಮಂಗಳ ವಾರ ಎಂಟು ಗಂಟೆಯಿಂದ ಮತ್ತೆ ಲಾಕ್ ಡೌನ್… ….!

ಬೆಂಗಳೂರು: ಕಳೆದ 10 ದಿನಗಳಿಂದ ಎದ್ದಿರುವ ಕೊರೊನಾ ಮಹಾ ಸುನಾಮಿಗೆ ತತ್ತರಿಸಿರುವ ರಾಜ್ಯ ಸರ್ಕಾರ, ರಾಜಧಾನಿಯನ್ನು ಒಂದು ವಾರ ಲಾಕ್‍ಡೌನ್ ಮಾಡಿ ಆದೇಶ ಹೊರಡಿಸಿದೆ. ಮಂಗಳವಾರದಿಂದ ಅಂದ್ರೆ ಜುಲೈ 14ರಿಂದ ರಾತ್ರಿ 8 ಗಂಟೆಯಿಂದ ಜುಲೈ 22ರ ನಸುಕಿನಜಾವ ಐದು ಗಂಟೆಯವರೆಗೂ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಲಾಕ್‍ಡೌನ್ ಆಗಲಿದೆ. ಈ ಸಂಬಂಧ ರಾತ್ರಿ 8 ಗಂಟೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಈ ಪ್ರಕಟಣೆ ಮಾಡಿದರು. ಸೋಂಕು ತಡೆಗೆ, ಸಂಡೇ …

Read More »

ಇಂದು ಒಂದೇ ದಿನ ರಾಜ್ಯದಲ್ಲಿ 2798 ಜನರಿಗೆ ಸೋಂಕು………..

ಬೆಂಗಳೂರು – ರಾಜ್ಯದಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚುತ್ತ ಸಾಗುತ್ತಿದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 2798 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ 1533 ಜನರಿಗೆ ಸೋಂಕು ತಗುಲಿದೆ. ಇಂದು ಒಟ್ಟೂ 70 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 23 ಜನರು ಸಾವಿಗೀಡಾಗಿದ್ದಾರೆ. ಈ ಮಧ್ಯೆ ಮಂಗಳವಾರ ರಾತ್ರಿಯಿಂದ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಒಂದು ವಾರ ಲಾಕ್ ಡೌನ್ ಮಾಡಲು ಸರಕಾರ ನಿರ್ಧರಿಸಿದೆ.  ಇಡೀ ರಾಜ್ಯಕ್ಕೆ ಲಾಕ್ ಡೌನ್ ಮಾಡಬೇಕೋ …

Read More »

ಸಚಿವ ಸಿ.ಟಿ.ರವಿ ಅವರಿಗೆ ಕೊರೊನಾ ಸೋಂಕು

ಬೆಂಗಳೂರು: ಸಚಿವ ಸಿ.ಟಿ.ರವಿ ಅವರಿಗೆ ಕೊರೊನಾ ಸೋಂಕು ತಗುಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ. ಸಂಸದೆ ಸುಮಲತಾ ಅಂಬರೀಶ್, ಶಾಸಕರಾದ ಪ್ರಾಣೇಶ್, ಅಜೇಯ್ ಸಿಂಗ್, ಪುಟ್ಟಣ್ಣಯ್ಯ ಸೇರಿದಂತೆ ಹಲವು ಜನಪ್ರತಿನಿಧಿಗಳಿಗೆ ಕೊರೊನಾ ತಗುಲಿದೆ. ಎಲ್ಲರೂ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆದಷ್ಟು ಬೇಗ ಗುಣಮುಖರಾಗಿ ಬರುತ್ತೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಈ ಹಿಂದೆಯೂ ಕೊರೊನಾ ಪರೀಕ್ಷೆಗೆ ಒಳಗಾಗಿದ್ದ ಸಿ.ಟಿ.ರವಿ ಸ್ವಯಂ ಕ್ವಾರಂಟೈನ್ …

Read More »

ಬುರುಡ ಸಮಾಜಕ್ಕೆ ಸರಕಾರದಿಂದ ಆರ್ಥಿಕ ನೆರವು ನೀಡುವಂತೆ ಒತ್ತಾಯಿ

ಚಿಕ್ಕೋಡಿ: ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್‍ದಿಂದಾಗಿ ಬಿದರಿನ ಬುಟ್ಟಿ ತಯಾರಿಸಿ ಬದುಕು ಸಾಗಿಸುತ್ತಿದ್ದ ಬುರುಡ(ಮೇದಾರ)ಸಂಕಷ್ಟದಲ್ಲಿದ್ದು, ಬುರುಡ ಸಮಾಜಕ್ಕೆ ಸರಕಾರದಿಂದ ಆರ್ಥಿಕ ನೆರವು ನೀಡುವಂತೆ ಒತ್ತಾಯಿಸಿ ಶನಿವಾರ ಮೇದಾರ ಕೇತಯ್ಯ ಬುರುಡ ಸಮಾಜ ಸಂಘದಿಂದ ವಿಧಾನ ಪರಿಷತ್‍ನ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರಿಗೆ ಮನವಿ ಅಲ್ಲಿಸಿದರು. ಕೊರೊನಾ ಬಂದು ಲಾಕ್‍ಡೌನ್‍ದಿಂದ ಪರಿಶಿಷ್ಟ ಪಂಗಡದ ವರ್ಗದವರಾಗಿರುವ ನಾವು ನಮ್ಮ ಮೂಲ ಕಸುಬು ಬಿದರಿನ ಬುಟ್ಟಿ ಮತ್ತು ಮರಗಳು ಸೇರಿದಂತೆ ಇನ್ನಿತರ ಬಿದರಿನ ವಸ್ತುಗಳನ್ನು …

Read More »