Breaking News

ಜಿಲ್ಲೆ

ಪೌಷ್ಟಿಕಾಂಶಯುಕ್ತ ಆಹಾರ ಕೊಡದಿದ್ರೆ ಹೇಗೆ ಹುಷಾರಾಗ್ತೇವೆ- ಸರ್ಕಾರಕ್ಕೆ ಸೋಂಕಿತರ ಪ್ರಶ್ನೆ

ಹಾಸನ: ಪೌಷ್ಟಿಕಾಂಶಯುಕ್ತ ಆಹಾರ ಕೊಡದಿದ್ದರೆ ನಾವು ಹೇಗೆ ಹುಷಾರಾಗುತ್ತೇವೆ. ಬರೀ ಅನ್ನ ಬಿಟ್ರೆ ನಮಗೆ ಬೇರೆ ಆಹಾರ ಕೊಡುತ್ತಿಲ್ಲ ಎಂದು ಹಾಸನದ ಕೋವಿಡ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ತಮಗೆ ನೀಡುತ್ತಿರುವ ಚಿಕಿತ್ಸಾ ವಿಧಾನದ ಬಗ್ಗೆ ಅಸಮಾಧಾನ ಹೊರಹಾಕಿ ವಿಡಿಯೋ ಮಾಡಿರುವ ಕೊರೊನಾ ಸೋಂಕಿತರು, ನಮಗೆ ಆರಂಭದ ಐದು ದಿನ ಮಾತ್ರ ಮೆಡಿಸಿನ್ ಕೊಟ್ರು. ಈಗ ಮೆಡಿಸಿನ್ ಕೊಡ್ತಿಲ್ಲ. ಬರೀ ಅನ್ನ …

Read More »

ಸತೀಶ ಜಾರಕಿಹೊಳಿ ಅವರು ಮತ್ತೊಂದು ಐತಿಹಾಸಿಕ ಹೆಜ್ಜೆ

ಬೆಳಗಾವಿ: ಬಡವರ ಜೀವ ಹಿಂಡುತ್ತಿರುವ ಮೌಢ್ಯಗಳ ವಿರುದ್ಧದ ಹೋರಾಟದಲ್ಲಿ ಸದಾ ಮಂಚೂಣಿಯಲ್ಲಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮತ್ತೊಂದು ಐತಿಹಾಸಿಕ ಹೆಜ್ಜೆಯನ್ನು ಇಟ್ಟಿದ್ದಾರೆ. ಬುದ್ಧ, ಬಸವ ಅಂಬೇಡ್ಕರ್ ಅವರ ಸಿದ್ದಾಂತಗಳ ಮೇಲೆ ನಡೆಯುತ್ತಿರುವ ಸರಳ ಸಜ್ಜನಿಕೆಯ ರಾಜಕಾರಣಿ ಎಂದೇ ಖ್ಯಾತಿ ಪಡೆದಿರುವ ಸತೀಶ ಜಾರಕಿಹೊಳಿ ತಮ್ಮ ಸ್ವಂತ ಬಳಕೆಗಾಗಿ ನೂತನವಾಗಿ ಖರೀದಿಸಿರುವ ವಾಹನದ ಉದ್ಘಾಟನಾ ಮತ್ತು ಚಾಲನಾ ಸಮಾರಂಭವನ್ನು ಸ್ಮಶಾನದಲ್ಲಿ ನಡೆಸುವ ಮೂಲಕ ಮತ್ತೊಮ್ಮೆ ಮನೆ ಮಾತಾಗಿದ್ದಾರೆ. ಭಾರತದ …

Read More »

ತಾಯಿಯ ಸಾಲ ವಾಪಸ್ ಕೊಡದ್ದಕ್ಕೆ ಯುವಕನ ಕೊಲೆ-

ಕಲಬುರಗಿ: ಹಣಕಾಸಿನ ವಿಚಾರಕ್ಕೆ ಮೂವರು ಸ್ನೇಹಿತರು ಯುವಕನನ್ನು ಕೊಲೆ ಮಾಡಿದ್ದರು. ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ತಾರಫೈಲ್ ಬಡಾವಣೆ ನಿವಾಸಿಗಳಾದ ಸುನೀಲ್ ಅಲಿಯಾಸ್ ಸೋನು, ಶಿವಲಿಂಗ ಹುಲಿಮನಿ ಮತ್ತು ರಾಜು ಬಂಧಿತ ಆರೋಪಿಗಳು. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ತಾರಫೈಲ್ ಬಡಾವಣೆ ನಿವಾಸಿ ವಿಶಾಲ್‍ನನ್ನ ಜೂನ್ 26 ರಂದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಮೃತ ವಿಶಾಲ್ ಆರೋಪಿ ಸುನೀಲ್ ತಾಯಿ ಬಳಿ 3 ಲಕ್ಷ …

Read More »

ಬೆಳಗಾವಿ ಜಿಲ್ಲೆಯ ಕಡೆಯಿಂದಲೂ ಕಾಮಗಾರಿ ಆರಂಭಿಸಬೇಕು ಎಂದು ತಿಳಿಸಿದರು.

ಬೆಳಗಾವಿ: ಕುಡಚಿ-ಬಾಗಲಕೋಟೆ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ರೈಲ್ವೆ ಇಲಾಖೆಗೆ ಜಮೀನು ಹಸ್ತಾಂತರಿಸಿದರೆ ಶೀಘ್ರ ಕಾಮಗಾರಿಯನ್ನು ಪೂರ್ಣಗೊಳಿಸುವುದು ರೈಲ್ವೆ ಇಲಾಖೆಯ ಪ್ರಥಮ ಆದ್ಯತೆಯಾಗಿದೆ ಎಂದು ಸಚಿವ ಸುರೇಶ್ ಅಂಗಡಿ ಹೇಳಿದರು. ಜಿಲ್ಲಾ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಬೆಳಗಾವಿ-ಬಾಗಲಕೋಟೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಒಮ್ಮೆ ಭೂಸ್ವಾಧೀನ ಪ್ರಕ್ರಿಯೆ ಆರಂಭಗೊಂಡರೆ ಡಿಪಿಆರ್ ಮತ್ತು …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು.

ಬೆಳಗಾವಿ: ಪಾಚ್ಛಾಪೂರ ಜಿಲ್ಲಾ ಪಂಚಾಯತ ಹಾಗೂ ಹತ್ತರಗಿ ಠಾಣಾ ಜಿಲ್ಲಾ ಪಂಚಾಯತ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿನ ಕಾಮಗಾರಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು. ಅರಳಿಕಟ್ಟಿ, ಹಳೆವಂಟಮೂರಿ, ಬಿರನಹೊಳಿ, ಕಾಟಾಬಳಿ, ಇಸ್ಲಾಂಪೂರ, ಚಿಕ್ಕಲದಿನ್ನಿ, ಶಹಾಬಂದರ, ಗೆಜಪತಿ, ಗುಟಗುದ್ದಿ, ರಾಜಕಟ್ಟಿ ಗ್ರಾಮಗಳಿಗೆ ಭೇಟಿ ನೀಡಿ, ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಇದ್ದರು. ‌

Read More »

ಕೋವಿಡ್ ಆಸ್ಪತ್ರೆಯಲ್ಲೇ ಡೆಡ್ಲಿ ತಾಂಡವ-

ಬೆಂಗಳೂರು: ಚೀನಾ ವೈರಸ್ ರಾಜ್ಯದಲ್ಲಿ ರಣರಣಿಸುತ್ತಿದೆ. ದಿನದಿನವೂ ಉಗ್ರರೂಪ ತಾಳಿ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ರಾಜ್ಯದಲ್ಲಿ ಶುಕ್ರವಾರ ದಾಖಲೆಯ 2300ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಬೆಂಗಳೂರಲ್ಲಂತೂ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ. ಕೇವಲ ರಾಜಧಾನಿಯೊಂದರಲ್ಲೇ 1400ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ಬೆಳಕಿಗೆ ಬಂದಿವೆ. ರಾಜ್ಯದಲ್ಲಿ ಎರಡನೇ ಬಾರಿಗೆ ದಿನದಲ್ಲಿ 50ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ. ಇದರಲ್ಲಿ ಬೆಂಗಳೂರಿನಲ್ಲೇ 29 ಮಂದಿ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡದಲ್ಲಿ 8 ಮಂದಿ, ಮೈಸೂರಲ್ಲಿ ನಾಲ್ವರು, ಬೀದರ್‍ನಲ್ಲಿ ಮೂವರು, …

Read More »

ತೀವ್ರ ಜ್ವರದಿಂದ ಬಳಲುತ್ತಿದ್ದ ಉದ್ಯಮಿಸಾವು ………….

ಬೆಂಗಳೂರು, – ತೀವ್ರ ಜ್ವರದಿಂದ ಬಳಲುತ್ತಿದ್ದ ಉದ್ಯಮಿಯೊಬ್ಬರು ತಾವು ವಾಸವಾಗಿದ್ದ ಅಪಾರ್ಟ್‍ಮೆಂಟ್‍ನಲ್ಲೇ ಮೃತಪಟ್ಟಿರುವ ಘಟನೆ ಸುಬ್ರಹ್ಮಣ್ಯನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದಿಲೀಪ್‍ಕುಮಾರ್ (35) ಮೃತಪಟ್ಟ ಉದ್ಯಮಿ. ನೆಲಮಂಗಲದ ಬಳಿ ದಿಲೀಪ್‍ಕುಮಾರ್ ಅವರು ಪೆಟ್ರೋಲ್ ಬಂಕ್ ಇಟ್ಟುಕೊಂಡಿದ್ದು, ಬ್ರಿಗೇಡ್ ಗೇಟ್‍ವೇ ಅಪಾರ್ಟ್‍ಮೆಂಟ್‍ನ ಫ್ಲಾಟ್‍ವೊಂದರಲ್ಲಿ ವಾಸವಾಗಿದ್ದರು. ಪತ್ನಿ ಇತ್ತೀಚೆಗೆ ತವರಿಗೆ ಹೋಗಿದ್ದರು. ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಇವರು ಸ್ವಯಂ ಮಾತ್ರೆ ಹಾಗೂ ಔಷಧಿ ತೆಗೆದುಕೊಂಡು ಮನೆಯಲ್ಲೇ ಇದ್ದರು. ದಿಲೀಪ್‍ಕುಮಾರ್ …

Read More »

ಭೂಗತ ಪಾತಕಿ ರವಿ ಪೂಜಾರಿ ವಿರುದ್ಧ ದೋಷಾರೋಪಣ ಪಟ್ಟಿ

ಬೆಂಗಳೂರು, ಜು.10- ಭೂಗತ ಪಾತಕಿ ರವಿ ಪೂಜಾರಿ ವಿರುದ್ಧ ಬೆಂಗಳೂರು ನಗರ ಪೊಲೀಸರು ನ್ಯಾಯಾಲಯಕ್ಕೆ ಮತ್ತೊಂದು ಚಾರ್ಜ್‍ಶೀಟ್ (ದೋಷಾರೋಪಣ ಪಟ್ಟಿ) ಸಲ್ಲಿಸಿದ್ದಾರೆ. ಈಗಾಗಲೇ ಮೂರು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್‍ಶೀಟ್ ಸಲ್ಲಿಸಿದ್ದು, ಇದು ನಾಲ್ಕನೆ ಚಾರ್ಜ್‍ಶೀಟ್ ಆಗಿದೆ. ಈ ಮೊದಲು ತಿಲಕ್‍ನಗರ ಪೊಲೀಸ್ ಠಾಣೆ ಪ್ರಕರಣ, ವೈಯಾಲಿಕಾವಲ್ ಠಾಣೆ ಹಾಗೂ ವೈಟ್‍ಫೀಲ್ಡ್ ಠಾಣೆ ಪ್ರಕರಣಗಳಲ್ಲಿ ರವಿ ಪೂಜಾರಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದೆ. ದೀಗ ಇಂದಿರಾನಗರ ಪೊಲೀಸ್ ಠಾಣೆಯ …

Read More »

ಜೋಗ ಜಲಪಾತದಲ್ಲಿ ಧುಮ್ಮಿಕ್ಕಿ ಹರಿಯುತ್ತಿರೋ ಶರಾವತಿ- ರಸ್ತೆ ಬದಿಯಲ್ಲಿ ಮಣ್ಣು ಕುಸಿತ

ಶಿವಮೊಗ್ಗ: ಕಳೆದ ಒಂದು ವಾರದಿಂದ ಮಲೆನಾಡಿನಾದ್ಯಂತ ಉತ್ತಮ ಮಳೆಯಾಗುತ್ತಿದೆ. ಉತ್ತಮ ಮಳೆಯ ಕಾರಣ ಪ್ರಸಿದ್ಧ ಜಲಪಾತಗಳಲ್ಲಿ ಒಂದಾದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ ಜಲಪಾತದಲ್ಲಿ ಶರಾವತಿ ಧುಮ್ಮಿಕ್ಕಿ ಹರಿಯುತ್ತಿದೆ. ಮಳೆಗಾಲದ ಸಮಯದಲ್ಲಿ ಜೋಗ ಜಲಪಾತವನ್ನು ವೀಕ್ಷಿಸಲು ರಾಜ್ಯ, ಹೊರ ರಾಜ್ಯಗಳಿಂದಲೂ ಪ್ರವಾಸಿಗರು ಜೋಗಕ್ಕೆ ಭೇಟಿ ನೀಡಿ ನಯನ ಮನೋಹರವಾದ ಜಲಪಾದ ದೃಶ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದರು. ಆದರೆ ಈ ಬಾರಿ ಕೊರೊನಾ ವೈರಸ್ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಸರ್ಕಾರ ಪ್ರವಾಸಿ ತಾಣಗಳಿಗೂ …

Read More »

ಖಾಸಗಿ ಹಾಗೂ ಸರ್ಕಾರಿ ವೈದ್ಯರು ಚಿಕಿತ್ಸೆ ನೀಡಲು ಹಿಂದೇಟುನರಳಾಡಿ ಪ್ರಾಣ ಕಳೆದುಕೊಂಡ ವ್ಯಕ್ತಿ………..

ವಿಜಯಪುರ: ಜಿಲ್ಲೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ವ್ಯಕ್ತಿಯೊಬ್ಬರು ನರಳಾಡಿ ಪ್ರಾಣ ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮಲಘಾಣ ಗ್ರಾಮದ ರೋಗಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆ ಕಂಡು ಬಂದ ಕೂಡಲೇ ತಡ ರಾತ್ರೀ ವಿಜಯಪುರ ಆಸ್ಪತ್ರೆಗೆ ಕರೆ ತರಲಾಗಿತ್ತು. ಆದರೆ ಈ ವೇಳೆ ಖಾಸಗಿ ಹಾಗೂ ಸರ್ಕಾರಿ ವೈದ್ಯರು ವ್ಯಕ್ತಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕಿದ್ದರು. ರಾತ್ರಿ ಇಡೀ ಅಲೆದು ಕೊನೆಗೆ …

Read More »