Breaking News

ಜಿಲ್ಲೆ

ಸಾಹುಕಾರ್ ರಮೇಶ್ ಜಾರಕಿಹೊಳಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಎಚ್ಚರಿಕೆ ಸಂದೇಶ ನೀಡಿದ್ರು

ಬೆಳಗಾವಿ- ಜಿಲ್ಲಾ ಉಸ್ತುವಾರಿ ಸಚಿವ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಲಕ್ಷ್ಮೀ ಹೆಬ್ಬಾಳಕರ ಅವರು ಹಂಚಿರುವ ಕುಕ್ಕರ್ ಹಿಂದಿರುವ ಸತ್ಯವನ್ನು ಬಹಿರಂಗ ಪಡಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಬಿಜೆಪಿ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ ,ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕುಕ್ಕರ್ ಹಂಚಿದ್ದು ನನ್ನ ದುಡ್ಡುನಿಂದ ಅದು ಅಕೀ ದುಡ್ಡಲ್ಲ,ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆಯಾಗಿದೆ,ಈಗ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಅವರು ದುಡ್ಡು ಹಂಚುತ್ತಿರುವದು ನನ್ನ ಗಮನಕ್ಕೆ ಬಂದಿದೆ ,ಅವರು …

Read More »

ಕೊರೊನಾಗೆ ಮೊದಲ ಬಲಿಯಾದ ಕಲಬುರಗಿಯಲ್ಲಿ ಇನ್ನೂ ಪ್ರಾರಂಭಿಸಿಲ್ಲ ಲ್ಯಾಬ್: ಪ್ರಿಯಾಂಕ್ ಖರ್ಗೆ ಆಕ್ರೋಶ

ಕಲಬುರಗಿ: ದೇಶದಲ್ಲೇ ಕಿಲ್ಲರ್ ಕೊರೊನಾಗೆ ಮೊದಲು ಬಲಿ ಪಡೆದಿದ್ದೇ ಕಲಬುರಗಿ ಜಿಲ್ಲೆಯಲ್ಲಿ. ಆದರೆ ಇಲ್ಲಿವರಗೆ ಜಿಲ್ಲೆಯಲ್ಲಿ ಇರುವುದು ಒಂದೇ ಪರೀಕ್ಷಾ ಕೇಂದ್ರ. ಸರ್ಕಾರದ ನಿರ್ಲಕ್ಷ್ಯದಿಂದ ಜಿಲ್ಲೆಯ ಜನರು ಕಂಗಾಲಾಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಜಿಮ್ಸ್ ಆಸ್ಪತ್ರೆಯಲ್ಲಿ ಮಾತ್ರ ಕೊರೊನಾ ಟೆಸ್ಟ್ ಲ್ಯಾಬ್ ಇದೆ. ಇಲ್ಲಿ ಪ್ರತಿನಿತ್ಯ ಸಾವಿರ ಸ್ಯಾಂಪಲ್ಸ್ ಗಳನ್ನು ಮಾತ್ರ ಟೆಸ್ಟ್ ಮಾಡಲಾಗುತ್ತಿದೆ. ಇನ್ನೂ …

Read More »

ಹಾಸನದಲ್ಲಿ ಕೊರೊನಾಗೆ ಇಂದು ಇಬ್ಬರು ಬಲಿ- ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಹಾಸನ: ಜಿಲ್ಲೆಯಲ್ಲಿ ಕೊರೊನಾ ಮರಣಮೃದಂಗ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಕೂಡ ಇಬ್ಬರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಹಾಸನದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಹೊಳೆನರಸೀಪುರ ಮೂಲದ 88 ವರ್ಷದ ವ್ಯಕ್ತಿ ಮತ್ತು ಅರಸೀಕೆರೆ ಮೂಲದ 47 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಹೊಳೆನರಸೀಪುರ ಮೂಲದ 88 ವರ್ಷದ ವ್ಯಕ್ತಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಜೂನ್ 29ರಂದು ಡಯಾಲಿಸಿಸ್‍ಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ ನಾಲ್ಕರಂದು ಐಸಿಯುಗೆ …

Read More »

ಬೆಳಗಾವಿಯಲ್ಲಿ ಕೊರೊನಾ ಭೀತಿ ನಡುವೆ ಡೆಂಗ್ಯೂಗೆ ಬಾಲಕ ಬಲಿ

ಬೆಳಗಾವಿ, ಜುಲೈ 6: ಕೊರೊನಾ ವೈರಸ್ ಭೀತಿ ನಡುವೆಯೇ ಬೆಳಗಾವಿಯಲ್ಲಿ ಡೆಂಗ್ಯೂ ಪ್ರಕರಣ ಕಾಣಿಸಿಕೊಂಡಿದೆ. ಬೆಳಗಾವಿಯ ವಡಗಾವಿಯ ವಿಷ್ಣು ಗಲ್ಲಿ ನಿವಾಸಿ, 12 ವರ್ಷದ ಬಾಲಕ ಡೆಂಗ್ಯೂಗೆ ಬಲಿಯಾದ್ದಾನೆ ವರದ್ ಕಿರಣ್ ಪಾಟೀಲ್ (12) ಡೆಂಗ್ಯೂಗೆ ಬಲಿಯಾದ ಬಾಲಕ. ಕೆಎಲ್‌ಎಸ್ ಶಾಲೆಯ ಆರನೇ ತರಗತಿ ವಿದ್ಯಾರ್ಥಿಯಾಗಿದ್ದ ವರದ ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ, ನಿನ್ನೆ ಜುಲೈ 5ರಂದು ಸಾವನ್ನಪ್ಪಿದ್ದಾನೆ ಕೊರೊನಾ ವೈರಸ್ ನಿಂದಾಗಿ ಈಗಾಗಲೇ …

Read More »

ಕೋವಿಡ್ ಕೇರ್‌ ಕೇಂದ್ರಗಳಲ್ಲಿ 20,000 ಬೆಡ್ ಮತ್ತು ಐಸಿಯು ವ್ಯವಸ್ಥೆ

ಬೆಂಗಳೂರು: ಕೋವಿಡ್- 19 ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲಿಯೇ ಎದುರಾಗುವ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರುವ ರಾಜ್ಯ ಸರಕಾರ, ನಗರದ ಕೋವಿಡ್‌ ಕೇರ್‌ ಕೇಂದ್ರಗಳಲ್ಲಿನ ಬೆಡ್‌ಗಳ ಪ್ರಮಾಣವನ್ನು ೨0 ಸಾವಿರದವರೆಗೂ ಹೆಚ್ಚಿಸಲು ನಿರ್ದರಿದೆ. ಬೆಂಗೂರಿನಲ್ಲಿ ಸೋಮವಾರ ಉನ್ನತ ಮಟ್ಟದ ಸಭೆ ನಡೆಸಿದ ಕೋವಿಡ್‌ ಕೇರ್‌ ಕೇಂದ್ರಗಳ (ಸಿಸಿಸಿ) ಉಸ್ತುವಾರಿಯೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಈಗಾಗಲೇ ನಮ್ಮಲ್ಲಿ 1250 ಬೆಡ್ ಗಳು ಲಭ್ಯ ಇವೆ. ಬೆಂಗಳೂರು …

Read More »

ಕರೋನ ವಾರಿಯರ್ಸ್‍ಗಳಂತೆ ಕೆಲಸ ಮಾಡಿ : ಬಿಬಿಎಂಪಿ ಸದಸ್ಯರಿಗೆ ಸಚಿವ ಅಶೋಕ್ ಸಲಹೆ

ಬೆಂಗಳೂರು, ಜು.6- ನಿಮ್ಮ ನಿಮ್ಮ ವಾರ್ಡ್‍ಗಳಿಗೆ 20 ಲಕ್ಷ ರೂ. ನೀಡಿದ್ದೇವೆ. ಅದನ್ನು ಸರಿಯಾಗಿ ಉಪಯೋಗ ಮಾಡಿಕೊಳ್ಳಿ. ಪಕ್ಷಾತೀತವಾಗಿ ನೀವೇ ವಾರಿಯರ್ಸ್‍ಗಳಂತೆ ಕೆಲಸ ಮಾಡಬೇಕು ಎಂದು ಪಾಲಿಕೆ ಸದಸ್ಯರಿಗೆ ಸಚಿವ ಆರ್.ಅಶೋಕ್ ಸಲಹೆ ನೀಡಿದರು. ಕೊರೊನಾ ಸಂಬಂಧ ಪಾಲಿಕೆ ಸಭೆಯಲ್ಲಿಂದು ಹಮ್ಮಿಕೊಳ್ಳಲಾಗಿದ್ದ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ವಾರ್ಡ್‍ಗೂ ತಾರತಮ್ಯ ಮಾಡುವುದಿಲ್ಲ. ಎಲ್ಲ ಪಕ್ಷವೂ ಒಂದೇ. ನಿಮಗೆ ನೀಡಿರುವ ಹಣವನ್ನು ರೋಗಿಗಳಿಗೆ ಬಳಸಿ ಎಂದರು. ಕೊರೊನಾದಿಂದಾಗಿ ಹೆಚ್ಚಿನ ಸಮಸ್ಯೆಗಳು …

Read More »

ದೊಣ್ಣೆಗಳನ್ನು ಹಿಡಿದು ಕಾವಲು ಕಾಯುತ್ತಿದ್ದಾರೆಗ್ರಾಮಸ್ಥರು

ಹಾವೇರಿ,- ಮಹಾಮಾರಿ ಕೊರೊನಾ ರಾಜ್ಯದ ಮೂಲೆ ಮೂಲೆಗೂ ಹಬ್ಬುತ್ತಿದ್ದು, ಸೋಂಕಿನಿಂದ ದೂರವಿರಲು ಹಿರೆಕೆರೂರು ತಾಲ್ಲೂಕಿನ ಚಿನ್ನಮುಳಗುಂದ ಗ್ರಾಮಸ್ಥರು ದೊಣ್ಣೆಗಳನ್ನು ಹಿಡಿದು ಸ್ವಯಂಪ್ರೇರಿತ ನಿರ್ಬಂಧ ಹೇರಿಕೊಂಡಿದ್ದಾರೆ. ನಮ್ಮ ಗ್ರಾಮದಲ್ಲಿ ಯಾವುದೇ ಸೋಂಕಿಲ್ಲ. ಬೇರೆ ಊರಿನವರು ಬಂದು ಸೋಂಕು ಹಬ್ಬಿಸುವುದು ಬೇಡ ಎಂದು ಮುಂಜಾಗ್ರತಾ ಕ್ರಮವಾಗಿ ಗ್ರಾಮಸ್ಥರು ದೊಣ್ಣೆಗಳನ್ನು ಹಿಡಿದು ಕಾವಲು ಕಾಯುತ್ತಿದ್ದಾರೆ. ಈ ಗ್ರಾಮಕ್ಕೆ ಬೇರೆ ಊರುಗಳಿಂದ ಯಾರೂ ಬರುವಂತಿಲ್ಲ, ಯಾರೂ ಹೊರಹೋಗದಂತೆ ನೋಡಿಕೊಳ್ಳುತ್ತಿದ್ದಾರೆ.ಮನೆಗೆ ಒಬ್ಬೊಬ್ಬರು ಇಂತಿಷ್ಟು ಗಂಟೆಗಳ ಲೆಕ್ಕದಲ್ಲಿ ಊರಿನ …

Read More »

ಚನ್ನರಾಯನಪಟ್ಟಣ 14 ದಿನ ಲಾಕ್‍ಡೌನ್- 3 ದಿನ ಮಾತ್ರ ಅಗತ್ಯವಸ್ತು ಖರೀದಿಗೆ ಅವಕಾಶ

ಹಾಸನ: ಜಿಲ್ಲೆಯಲ್ಲಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಪಥವನ್ನು ವಿಸ್ತರಿಸಿಕೊಳ್ತಿದೆ. ಇದಕ್ಕೆ ಹಾಸನದ ಜನ ಮದ್ದು ಅರೆದಿದ್ದಾರೆ. ಸರ್ಕಾರದ ಆದೇಶ ಇಲ್ಲದಿದ್ದರೂ ಹಾಸನ ಜಿಲ್ಲೆ ಭಾಗಶಃ ಲಾಕ್‍ಡೌನ್ ಆಗುತ್ತಿದೆ. ಹೌದು. ಜಿಲ್ಲೆಯಲ್ಲಿ ಕೊರೊನಾ ನಾಗಾಲೋಟದಿಂದ ಓಡುತ್ತಿದ್ದು ಕೊರೊನಾ ವಾರಿಯರ್ಸ್ ಸೇರಿದಂತೆ ಜಿಲ್ಲೆಯಲ್ಲಿ ಇದುವರೆಗೂ 541 ಕೊರೊನಾ ಪ್ರಕರಣ ಪತ್ತೆಯಾಗಿದೆ. ಅದರಲ್ಲಿ 255 ಜನ ಗುಣಮುಖರಾಗಿದ್ರೆ 278 ಕೇಸ್‍ಗಳು ಆಕ್ಟೀವ್ ಆಗಿದ್ದು 8 ಜನ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯಲ್ಲೇ ಅದರಲ್ಲೂ ಚನ್ನರಾಯಪಟ್ಟಣದಲ್ಲಿ …

Read More »

ರಾಘವೇಂದ್ರ ಕೋ -ಆಪರೇಟಿವ್‌ ಬ್ಯಾಂಕ್‌ ಮಾಜಿ ಸಿಇಓ ಆತ್ಮಹತ್ಯೆ

ಬೆಂಗಳೂರು: ಶ್ರೀ ಗುರುರಾಘವೇಂದ್ರ ಕೋ- ಆಪರೇಟೀವ್ ಬ್ಯಾಂಕ್ ಮಾಜಿ ಸಿಇಓ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೂರ್ಣ ಪ್ರಜ್ಞಾ ಲೇಔಟ್‌ನಲ್ಲಿರುವ ನಿವಾಸದಲ್ಲಿ  ವಾಸುದೇವ ಮಯ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆ ಮುಂದೆ ಕಾರಿನಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ ಕಾರಿನಲ್ಲಿ ಮದ್ಯ ಸೇವಿಸಿದ್ದಾರೆ. ಮದ್ಯದಲ್ಲಿ ವಿಷವನ್ನು ಮಿಶ್ರಣ ಮಾಡಿರುವ ವಿಚಾರ ಈಗ ತಿಳಿದುಬಂದಿದೆ. ಬ್ಯಾಂಕ್ ವಿರುದ್ದ 1,400 ಕೋಟಿ ರೂ. ಅವ್ಯವಹಾರ ಕೇಳಿ ಬಂದಿತ್ತು. ಹಗರಣದಲ್ಲಿ ವಸುದೇವ ಮಯ್ಯ ಪ್ರಮುಖ ಆರೋಪಿಯಾಗಿದ್ದರು. ಜೂನ್ 18 …

Read More »

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಒಂದು ವರ್ಷವಾಯ್ತು:ಬಿ.ಸಿ.ಪಾಟೀಲ್

ಶಿವಮೊಗ್ಗ: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಇಂದಿಗೆ ಒಂದು ವರ್ಷವಾಯ್ತು ಎಂದು ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ದಿನವನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ನೆನಪಿಸಿಕೊಂಡರು. ಶಿವಮೊಗ್ಗದ ಇರುವಕ್ಕಿಯಲ್ಲಿ ನಿರ್ಮಾಣ ಆಗುತ್ತಿರುವ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕಟ್ಟಡ ಕಾಮಗಾರಿ ವೀಕ್ಷಣೆಗೆ ಸಚಿವರು ಆಗಮಿಸಿದ್ದ ವೇಳೆ ಕೃಷಿ ವಿವಿ ಉಪಕುಲಪತಿ ಅವರು ಸಚಿವರನ್ನು ಸನ್ಮಾನಿಸಿದರು. ಈ ವೇಳೆ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದನ್ನು ನೆನಪಿಸಿಕೊಂಡ ಸಚಿವರು ಇಂದು ಕಾಂಗ್ರೆಸ್ ಗೆ …

Read More »