ದಾವಣಗೆರೆ: ಸತ್ತ ಮೇಲೆ ನೂರಾರು ಜನ ಮೆರವಣಿಗೆ ಮಾಡಿ ಕಳುಹಿಸಿಕೊಡಬೇಕು ಎಂದು ಪ್ರತಿಯೊಬ್ಬರದ್ದು ಕೊನೆ ಆಸೆಯಾಗಿರುತ್ತೆ. ಆದರೆ ಈ ಕೋವಿಡ್ ಬಂದು ಸಾವನ್ನಪ್ಪಿದರೆ ಮಾತ್ರ ಯಾರೂ ಕೂಡ ಊಹಿಸಲಾಗದಷ್ಟೆ ಮಟ್ಟಿಗೆ ನಮ್ಮ ಶವಸಂಸ್ಕಾರ ಇರುತ್ತೆ. ಹೌದು. ದಾವಣಗೆರೆಯ ಚನ್ನಗಿರಿ ತಾಲೂಕಿನ 56 ವರ್ಷದ ಮಹಿಳೆಯೊಬ್ಬರು ಕಳೆದ 17 ರಂದು ಉಸಿರಾಟದ ತೊಂದರೆಯಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಅವರಿಗೆ ಕೊರೊನಾ ಸೋಂಕು ಇರುವುದು ಕೂಡ ಅಂದೇ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ …
Read More »ಅಟ್ಟಾಡಿಸಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಾಕಿ ಕೊಲೆ………..
ಬೆಂಗಳೂರು: ವ್ಯಕ್ತಿಯೊಬ್ಬ ರಸ್ತೆಯಲ್ಲಿ ಅಟ್ಟಾಡಿಸಿ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ರಾಜಗೋಪಾಲನಗರದ ಲವಕುಶನಗರದಲ್ಲಿ ನಡೆದಿದೆ. ಹೇಮಾ ಕೊಲೆಯಾದ ದುರ್ದೈವಿ. ಆರೋಪಿ ಪತಿ ಮಂಜುನಾಥ್ ರಸ್ತೆಯಲ್ಲಿ ಅಟ್ಟಾಡಿಸಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಕುಣಿಗಲ್ ಮೂಲದ ಹೇಮಾಗೆ ಆರೋಪಿ ಮಂಜುನಾಥ್ ಜೊತೆ 12 ವರ್ಷಗಳ ಹಿಂದೆ ಮದುವೆಯಾಗಿತ್ತು. ಮೃತ ಹೇಮಾ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡಿಕೊಂಡಿದ್ದಳು. ಮಂಗಳವಾರ ಸಂಜೆ ಹೇಮಾ ಪತಿಯ ವಿರುದ್ಧ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಳು. ಅದೇ ವಿಚಾರವಾಗಿ …
Read More »ಸರ್ಕಾರ ಲಾಕ್‍ಡೌನ್ ಮಾಡಲಿಲ್ಲ ಅಂದರೂ ನಾವೇ ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುತ್ತೇವೆ
ಬೆಂಗಳೂರು: ಕೊರೊನಾ ಕಾಟಕ್ಕೆ ಬೆಂಗಳೂರು ನಲುಗಿ ಹೋಗಿದೆ. ಸರ್ಕಾರ ಲಾಕ್‍ಡೌನ್ ಮಾಡಲಿಲ್ಲ ಅಂದರೂ ನಾವೇ ಸ್ವಯಂ ಲಾಕ್‍ಡೌನ್ ಮಾಡಿಕೊಳ್ಳುತ್ತೇವೆ ಅಂತ ಬೆಂಗಳೂರಿನ ಕಮರ್ಷಿಯಲ್ ಏರಿಯಾದ ಜನ ಮುಂದಾಗಿದ್ದಾರೆ. ಲಾಕ್‍ಡೌನ್ ಸಮಯದಲ್ಲಿ ದಿನಕ್ಕೆ ನಾಲ್ಕೈದು ಪ್ರಕರಣಗಳು ಬರುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ಲಾಕ್‍ಡೌನ್ ಸಡಿಲಿಕೆ ಬಳಿಕ ಸೆಂಚುರಿ ಮೇಲೆ ಸೆಂಚುರಿ ಬಾರಿಸಿದ್ದ ಕೊರೊನಾ ಈಗ ದಿನಕ್ಕೆ 800ರ ಬಳಿ ಬಂದಿದೆ. ಹೀಗೆ ಹೋದರೆ ಬೆಂಗಳೂರು ಮತ್ತೊಂದು ಮುಂಬೈ ನಗರ ಆಗುವುದರಲ್ಲಿ ಅನುಮಾನವೇ ಇಲ್ಲ. …
Read More »ಭಿಕ್ಷೆ ಬೇಡಿ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ…………
ದಾವಣಗೆರೆ: ಸರ್ಕಾರಿ ಖೋಟಾದಡಿ ಪ್ರವೇಶ ಪಡೆದಿರುವ ಹೌಸ್ ಸರ್ಜನ್‍ಗಳು ಮತ್ತು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು 16 ತಿಂಗಳ ಶಿಷ್ಯ ವೇತನ ಬಿಡುಗಡೆಗೆ ಆಗ್ರಹಿಸಿ ದಾವಣಗೆರೆಯಲ್ಲಿ ನಡೆಸುತ್ತಿರುವ ಪ್ರತಿಭಟನೆ 2 ದಿನ ಪೂರೈಸಿದೆ. ಆದರೆ ಪ್ರತಿಭಟನೆ ಹಿಂಪಡೆಯದಿದರೆ ಲೈಸೆನ್ಸ್ ರದ್ದು ಮಾಡುವುದಾಗಿ ಎಸ್‍ಪಿ, ತಹಶೀಲ್ದಾರ್ ಬೆದರಿಕೆ ಹಾಕಿದ್ದು, ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳು, ಸಮಸ್ಯೆ ಬಗೆಹರಿಸುವ ಅಶ್ವಾಸನೆ ನೀಡಿದರು. ಆದರೆ ಇದಕ್ಕೆ ವಿದ್ಯಾರ್ಥಿಗಳು ಒಪ್ಪಿಲ್ಲ. ಬದಲಿಗೆ ಸಾರ್ವಜನಿಕವಾಗಿ …
Read More »ಆರೋಗ್ಯ ಸಿಬ್ಬಂದಿ ಕರೆದರೂ ಸೋಂಕಿತರ ಶವ ಸಂಸ್ಕಾರಕ್ಕೆ ಬಾರದ ಸಂಬಂಧಿಕರು
ಹಾವೇರಿ: ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಆಗಮಿಸುವಂತೆ ಪಿಪಿಇ ಕಿಟ್ ತಯಾರು ಮಾಡಿಕೊಂಡು ಆರೋಗ್ಯ ಇಲಾಖೆ ಸಿಬ್ಬಂದಿ ಕಾದು ಕುಳಿತರೂ ಯಾರು ಬಂದಿಲ್ಲ. ಹೀಗಾಗಿ ಆರೋಗ್ಯ ಇಲಾಖೆಯ ಸಿಬ್ಬದಿಯೇ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಮಂಗಳವಾರ ಬೆಳಗ್ಗೆ 6-30ಕ್ಕೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದ ಜಿಲ್ಲೆಯ ಶಿಗ್ಗಾವಿ ಪಟ್ಟಣದ ದೇಸಾಯಿ ಗಲ್ಲಿ ನಿವಾಸಿ 75 ವರ್ಷದ ವೃದ್ಧೆ ಮತ್ತು ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದ ನಿವಾಸಿ 60 ವರ್ಷದ ವೃದ್ಧೆಯರ ಅಂತ್ಯ ಸಂಸ್ಕಾರವನ್ನು …
Read More »ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯಸಂಸ್ಕಾರ
ಬೆಂಗಳೂರು: ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯಸಂಸ್ಕಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಈ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದ್ದು, ಕೊರೊನಾ ವಿಚಾರದಲ್ಲಿ ಮಾನವೀಯತೆಯಿಂದ ನಡೆದುಕೊಳ್ಳೋಣ. ಮಾನವೀಯತೆಗಿಂತ ದೊಡ್ಡ ಧರ್ಮ ಯಾವುದೂ ಇಲ್ಲ ಎಂಬುದನ್ನು ಅರಿಯೋಣ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಬೇಸರದಿಂದಲೇ ಸಿಎಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಅಂತ್ಯ …
Read More »ಅಧ್ಯಕ್ಷರಾಗಿ ಶ್ರೀಪತಿ ಗಣೇಶವಾಡಿ ಹಾಗೂ ಉಪಾಧ್ಯಕ್ಷರಾಗಿ ಕೆಂಚಪ್ಪ ಸಕ್ರೆಪ್ಪಗೋಳ ಆಯ್ಕೆ
ಗೋಕಾಕ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀತಿಗೆ ನೂತನ ಅಧ್ಯಕ್ಷ-ಉಪಾಧ್ಯಕ್ಷರಾಗಿ ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಗಣೇಶವಾಡಿ ಗ್ರಾಮದ ಶ್ರೀಪತಿ ಹಾಲಪ್ಪ ಗಣೇಶವಾಡಿ ಹಾಗೂ ನಾಗನೂರಿನ ಕೆಂಚಪ್ಪ ಕೃಷ್ಣಪ್ಪ ಸಕ್ರೆಪ್ಪಗೋಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದಿಲ್ಲಿ ನಡೆದ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ತಲಾ ಒಬ್ಬೊಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಎರಡೂ …
Read More »ಬೆಳಗಾವಿನೂತನ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಧಿಕಾರ ಸ್ವೀಕರಿಸಿದರು.
ಬೆಳಗಾವಿ -: ನೂತನ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಂಗಳವಾರ (ಜೂ.30) ಅಧಿಕಾರ ಸ್ವೀಕರಿಸಿದರು. ಸೇವಾ ನಿವೃತ್ತಿ ಹೊಂದಿದ ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಅಧಿಕಾರವನ್ನು ಹಸ್ತಾಂತರಿಸಿದರು. ಬೆಳಗಾವಿ ದೊಡ್ಡ ಮತ್ತು ಸೂಕ್ಷ್ಮ ಜಿಲ್ಲೆಯಾಗಿದೆ. ಆದರೆ ನಾನು ಮೂಲತಃ ಬೆಳಗಾವಿ ಜಿಲ್ಲೆಯವನಾಗಿರುವುದರಿಂದ ಕೆಲಸ ಸುಲಭವಾಗಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು. ಗದಗ ಜಿಲ್ಲೆಯಲ್ಲಿ ಪ್ರವಾಹ ನಿರ್ವಹಿಸಿದ ಅನುಭವವಿದೆ. ಕೊರೊನಾ, ನೆರೆ, ಬರ ಸೇರಿದಂತೆ ಎಲ್ಲ ಪರಿಸ್ಥಿತಿಯನ್ನು ನಿಭಾಯಿಸಿದ ಅನುಭವವಿದೆ. ಅದು ಇಲ್ಲಿ …
Read More »ಕಾರ್ಯನಿರ್ವಹಿಸಿದ ಜಿಲ್ಲಾಧಿಕಾರಿ ದೀಪಾ ಚೋಳನ್ವರ್ಗಾವಣೆ,ನಿತೇಶ್ ಪಾಟೀಲ್ ಅವರು ಇವತ್ತು ಅಧಿಕಾರ
ಧಾರವಾಡ: ಕೊರೊನಾ ಸಂದರ್ಭದಲ್ಲಿ ಧಾರವಾಡ ಜಿಲ್ಲಾಧಿಕಾರಿಗಳ ವರ್ಗಾವಣೆಯಾಗಿದೆ. ದೀಪಾ ಚೋಳನ್ ಅವರು ಕಳೆದ ಎರಡು ವರ್ಷಗಳಿಂದ ಧಾರವಾಡ ಜಿಲ್ಲಾಧಿಕಾರಿಗಳಾಗಿದ್ದರು. ರಾಜ್ಯ ಸರ್ಕಾರ ದೀಪಾ ಚೋಳನ್ ಅವರನ್ನು ಸರ್ವ ಶಿಕ್ಷಣ ಅಭಿಯಾದ ಯೋಜನಾ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿದೆ. ಧಾರವಾಡ ನೂತನ ಜಿಲ್ಲಾಧಿಕಾರಿಗಳಾಗಿ ನಿತೇಶ್ ಪಾಟೀಲ್ ಅವರು ಇವತ್ತು ಅಧಿಕಾರ ವಹಿಸಿಕೊಂಡರು. ಇತ್ತ ಕೊರೊನಾ ದಿನೇ ದಿನೇ ಹೆಚ್ಚುತ್ತಿದೆ. ಮುಂದಿನ ದಿನಗಳಲ್ಲಿ ಸೋಂಕು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಇದನ್ನು ನಾವು ತಡೆಯುವ …
Read More »ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟಕ್ಕೆ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ
ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟಕ್ಕೆ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸಾವಿನ ಖಾತೆಯನ್ನು ತೆರೆದಿದೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ದೇಸಾಯಿ ಗಲ್ಲಿ ನಿವಾಸಿಯಾಗಿದ್ದ 75 ವರ್ಷದ ವೃದ್ಧೆ (ರೋಗಿ-8295) ಮೃತಪಟ್ಟಿದ್ದಾರೆ. ಮೃತ ವೃದ್ಧೆಗೆ ರೋಗಿ-6832ರ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿತ್ತು. ಜೂನ್ 19ರಂದು ಕೋವಿಡ್ ಆಸ್ಪತ್ರೆಗೆ ವೃದ್ಧೆಯನ್ನು ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ವೃದ್ಧೆ ಸಾವನ್ನಪ್ಪಿದ್ದಾರೆ. ಹಾವೇರಿ ತಾಲೂಕಿನ ಆಲದಕಟ್ಟಿ ಗ್ರಾಮದ 60 ವರ್ಷದ …
Read More »
Laxmi News 24×7