ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ಶಿರಕೋಳ ಗ್ರಾಮಕ್ಕೂ ಕೊರೊನಾ ಪಾದಾರ್ಪಣೆ ಮಾಡಿದೆ. ಶಿರಕೋಳ ಗ್ರಾಮದ 60 ಜನ ಇರುವ ಅವಿಭಕ್ತ ಕುಟುಂಬದ ಸದಸ್ಯನೋರ್ವನಿಗೆ ಕೊರೊನಾ ಸೋಂಕು ತಗುಲಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿದೆ. 60 ಜನ ಇರುವ ಈ ಕುಟುಂಬಸ್ಥರು ಮನೆಯಲ್ಲಿ ಸದಸ್ಯನೊಬ್ಬನಿಗೆ ಸೋಂಕು ತಗುಲಿದ್ದು, ಇದೀಗ ಆ ಕುಟುಂಬದಲ್ಲಿರುವ ಎಲ್ಲ ಸದಸ್ಯರಿಗೂ ಕೊರೊನಾ ಆತಂಕ ಎದುರಾಗಿದೆ. ಅಲ್ಲದೆ ಇಡೀ ಗ್ರಾಮಸ್ಥರು ಕೂಡ ಆತಂಕ ಎದುರಿಸುವಂತಾಗಿದೆ. ಗ್ರಾಮದ 36 ವರ್ಷದ …
Read More »ತೈಲ ಬೆಲೆ ಏರಿಕೆಯನ್ನು ಖಂಡಿಸಿ ಬೀದಿಗೆ ಇಳಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್
ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಮಧ್ಯೆ ಕಾಂಗ್ರೆಸ್ ತೈಲ ಬೆಲೆ ಏರಿಕೆಯನ್ನು ಖಂಡಿಸಿ ಬೀದಿಗೆ ಇಳಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ. ಅಧ್ಯಕ್ಷ ಡಿಕೆ ಶಿವಕುಮಾರ್ , ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ನೂರಾರು ಕಾರ್ಯಕರ್ತರು ಸೈಕಲ್ ತುಳಿದ ಪರಿಣಾಮ ಕೆಪಿಸಿಸಿ ಕಚೇರಿ ಇರುವ ಕ್ವೀನ್ಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಸಾಮಾಜಿಕ ಅಂತರದ ನಿಯಮವೇ ಉಲ್ಲಂಘನೆ ಆಗಿತ್ತು. ಸಿದ್ದರಾಮಯ್ಯ ಮತ್ತು ಡಿಕೆ …
Read More »ಈ ಹಿಂದೆ ಕೊಳಚೆ ನೀರಿಗೆ ಹೊಲಿಸಿದ್ದ ಸಚಿವ ರಮೇಶ ಜಾರಕಿಹೊಳಿ ಇಂದು ಮತ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಇರುವೆಗೆ ಹೊಲಿಸಿದ್ದಾರೆ.
ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮತ್ತು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಶೀತಲ ಸಮರ ತಾರಕಕ್ಕೇರುತ್ತಿದ್ದು ಇಂದು ಮತ್ತೆ ಸಚಿವ ರಮೇಶ ಲಕ್ಷೀ ಹೆಬ್ಬಾಳ್ಕರ ಅವರಿಗೆ ಟಾಂಗ್ ನೀಡಿದ್ದಾರೆ. ಈ ಹಿಂದೆ ಕೊಳಚೆ ನೀರಿಗೆ ಹೊಲಿಸಿದ್ದ ಸಚಿವ ರಮೇಶ ಜಾರಕಿಹೊಳಿ ಇಂದು ಮತ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಇರುವೆಗೆ ಹೊಲಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳಕರ ಅವರು ನಿಮ್ಮ ಸವಾಲು ಸ್ವೀಕರಿಸಿದ್ದಾರೆ ಎಂದು ಮಾಧ್ಯಮದವರ ಹೇಳಿಕೆಗೆ …
Read More »ಗ್ರಾಮೀಣ ಭಾಗಕ್ಕೂ ಆವರಿಸಿದ ಮಹಾಮಾರಿ ಕೊರೋನಾ..!
ಗದಗ: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಹೆಚ್ಚಾಗುತ್ತಿದೆ. ಕೊರೋನಾ ಚಿಕಿತ್ಸೆಗೆ ಮೈದಾನ, ಕ್ರೀಡಾಂಗಣ ಸೇರಿದಂತೆ ಬಯಲು ಪ್ರದೇಶಗಳಲ್ಲಿ ವ್ಯವಸ್ಥೆ ಮಾಡಲು ಜನರನ್ನು ಜಾನುವಾರುಗಳು ಎಂದು ತಿಳಿದಿದ್ದೀರಾ? ಎಂದು ಶಾಸಕ ಎಚ್.ಕೆ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಯುದ್ಧೋಪಾದಿಯಲ್ಲಿ ಮಾಡಬೇಕಾದ ಕೆಲಸಗಳನ್ನು ಬಿಟ್ಟು ಬೇರೆಲ್ಲವನ್ನೂ ಮಾಡುತ್ತಿದೆ. ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ಲಭ್ಯವಾಗುತ್ತಿಲ್ಲ. ಎಲ್ಲೆಡೆ ಕೋವಿಡ್ ಆಸ್ಪತ್ರೆಗಳು ದಿನ ಕಳೆದಂತೆ ಭರ್ತಿಯಾಗುತ್ತಿವೆ. ಹೆಚ್ಚಿನ ಬೆಡ್‌ಗಳ ವ್ಯವಸ್ಥೆ ಮಾಡಲು …
Read More »ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ಸುಮಾರು 11 ಲಕ್ಷ ರೂ. ಮೊತ್ತದಲ್ಲಿ, ನಿಪ್ಪಾಣಿಯ ಶ್ರೀ ವಿದ್ಯಾಮಂದಿರ ಶಾಲೆಯ ನೂತನ ಸಭಾಗೃಹ ನಿರ್ಮಾಣ ಕಾಮಗಾರಿ
ನಿಪ್ಪಾಣಿ :ಶೈಕ್ಷಣಿಕವಾಗಿ ಮಾತ್ರಲ್ಲ, ಶಿಕ್ಷಣೇತರ ಚಟುವಟಿಕೆಗಳೊಂದಿಗೆ ದೇಶದ ಭಾವೀ ಪ್ರಜೆಗಳ ಭವಿಷ್ಯ ಸಮೃದ್ಧಿ ಒಬ್ಬ ವ್ಯಕ್ತಿಯ ವ್ಯಕ್ತಿತ್ವ ರೂಪುಗೊಳ್ಳುವುದು ಬಾಲ್ಯದಲ್ಲಿಯೇ. ವಿದ್ಯಾರ್ಥಿಯಾಗಿರುವಾಗಲೇ ಉತ್ತಮ ಶಿಕ್ಷಣದೊಂದಿಗೆ, ಶಿಕ್ಷಣೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡಿದಲ್ಲಿ, ಮಗುವಿಗೆ ಸುಂದರ ಭವಿಷ್ಯ ನೀಡಲು ಸಾಧ್ಯ. ದೇಶದ ಸದ್ಭವಿಷ್ಯದ ಭವಿಷ್ಯವನ್ನು ಅತ್ಯುತ್ತಮವಾಗಿ ರೂಪಿಸುವ ಇಚ್ಛೆ! ಈ ನಿಟ್ಟಿನಲ್ಲಿ, ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ಸುಮಾರು 11 ಲಕ್ಷ ರೂ. ಮೊತ್ತದಲ್ಲಿ, ನಿಪ್ಪಾಣಿಯ ಶ್ರೀ ವಿದ್ಯಾಮಂದಿರ ಶಾಲೆಯ ನೂತನ ಸಭಾಗೃಹ ನಿರ್ಮಾಣ …
Read More »ಬೆಳಗಾವಿಯ ನಗರದ ಪೊಲೀಸ್ ಆಯುಕ್ತರಾಗಿ ಡಾ.ಕೆ. ತ್ಯಾಗರಾಜನ್ ಅವರು ಸೋಮವಾರ ಅಧಿಕಾರಿ ಸ್ವೀಕರಿಸಿದರು.
ಬೆಳಗಾವಿ: ಬೆಳಗಾವಿಯ ನಗರದ ಪೊಲೀಸ್ ಆಯುಕ್ತರಾಗಿ ಡಾ.ಕೆ. ತ್ಯಾಗರಾಜನ್ ಅವರು ಸೋಮವಾರ ಅಧಿಕಾರಿ ಸ್ವೀಕರಿಸಿದರು. ಭಾನುವಾರ ಸಂಜೆಗೆ ಬೆಳಗಾವಿ ನಗರಕ್ಕೆ ಆಗಮಿಸಿದ ಅವರು, ಇಂದು ಅಧಿಕಾರ ಸ್ವೀಕರಿಸಿದರು. ಪೊಲೀಸ್ ಆಯುಕ್ತರಾಗಿ ಸೇವೆಗೈದಿದ್ದ ಲೋಕೇಶ್ ಕುಮಾರ್ ಅವರು ತ್ಯಾಗರಾಜನ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಡಾ.ಕೆ. ತ್ಯಾಗರಾಜನ್ ಅವರನ್ನು ಬೆಳಗಾವಿಯ ಆಯುಕ್ತರಾಗಿ ಸರ್ಕಾರ ವರ್ಗಾವಣೆ ಆದೇಶ ನೀಡಿ ಎರಡನೇ ದಿನವೇ ಅಧಿಕಾರಿಕ್ಕೆ ಹಾಜರಾಗಿದ್ದಾರೆ.
Read More »ದಿನದಿಂದ ದಿನಕ್ಕೆ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಳವಾಗತೊಡಗಿದೆ.
ಶಿವಮೊಗ್ಗ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಳವಾಗತೊಡಗಿದೆ. ಭಾನುವಾರ ನಾಲ್ವರಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಆತಂಕದ ಸಂಗತಿ ಎಂದರೆ ಈ ನಾಲ್ವರು ಒಂದೇ ಕುಟುಂಬವರಾಗಿದ್ದಾರೆ. ಸೋಂಕಿತರಲ್ಲಿ 19 ವರ್ಷದ ಮಹಿಳೆ (ಪಿ-11963), 80 ವರ್ಷದ ವೃದ್ಧೆ (ಪಿ-11964), 56 ವರ್ಷದ ಪುರುಷ (ಪಿ-11965) ಹಾಗೂ 20 ವರ್ಷದ ಯುವತಿ (ಪಿ- 11966) ಇದ್ದಾರೆ. ಭಾನುವಾರ ಪತ್ತೆಯಾದ ನಾಲ್ವರು ಸೋಂಕಿತರಿಗೂ ತಮ್ಮ ಸಂಬಂಧಿಯಿಂದಲೇ ಕೊರೋನಾ ತಗುಲಿರುವ ಸಾಧ್ಯತೆ …
Read More »ಕೊರೊನಾಗೆ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರ ಬಲಿ………
ಬಾಲಗಕೋಟೆ: ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರಿದಿದ್ದು, ಕೋವಿಡ್‍ಗೆ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರ ಬಲಿಯಾಗಿದ್ದಾರೆ. 59 ವರ್ಷದ ಸಮುದಾಯ ಆರೋಗ್ಯ ಕೇಂದ್ರದ (ಸರ್ಕಾರಿ ಆಸ್ಪತ್ರೆ) ಡಿ ದರ್ಜೆ ನೌಕರ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯ ಗುಳೇದಗುಡ್ಡ ನೌಕರ ಕಳೆದ ನಾಲ್ಕು ದಿನದ ಹಿಂದೆ ತೀವ್ರ ಉಸಿರಾಟದ ತೊಂದರೆಯಿಂದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 27 ರಂದು ಕೊರೊನಾ ದೃಢಪಟ್ಟಿತ್ತು. ಒಂದು ದಿನದಿಂದ ವೆಂಟಿಲೇಟರ್ ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. …
Read More »ಸಿಂಧೂರ ಲಕ್ಷ್ಮಣನಾಗಿ ಅಬ್ಬರಿಸಲಿದ್ದಾರೆ ಡಿ ಬಾಸ್……………..
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪೌರಾಣಿಕ ಪಾತ್ರಗಳಿಗೆ ಹೇಳಿ ಮಾಡಿಸಿದ ನಟ ಎನ್ನುವಂತಾಗಿದ್ದು, ಅದರಂತೆ ಸಂಗೊಳ್ಳಿ ರಾಯಣ್ಣ, ಕುರುಕ್ಷೇತ್ರ ಸಿನಿಮಾಗಳಲ್ಲಿ ತಮ್ಮ ಖದರ್ ತೋರಿಸಿದ್ದಾರೆ. ಅದೇ ರೀತಿ ರಾಜ ವೀರ ಮದಕರಿ ಸಿನಿಮಾದ ಚಿತ್ರೀಕರಣ ಸಹ ಆರಂಭವಾಗಿದೆ. ಹೀಗಿರುವಾಗಲೇ ಡಿ ಬಾಸ್‍ಗಾಗಿ ಮತ್ತೊಂದು ಐತಿಹಾಸಿಕ ಸಿನಿಮಾ ಸಿದ್ಧವಾಗುತ್ತಿದೆ. ಹೌದು ರಾಬರ್ಟ್ ಸಿನಿಮಾ ಚಿತ್ರೀಕಣ ಬಹುತೇಕ ಪೂರ್ಣಗೊಂಡಿದ್ದು, ಇನ್ನೇನು ಬಿಡುಗಡೆಗೆ ಸಿದ್ಧವಾಗಿದೆ. ಇದರ ಬೆನ್ನಲ್ಲೇ ಡಿ ಬಾಸ್ ರಾಜ ವೀರ ಮದಕರಿ …
Read More »ಸಾರಿಗೆ ಸಿಬ್ಬಂದಿ ವೇತನ ತಡೆ ಹಿಡಿಯಲ್ಲ,ಕಟ್ ಮಾಡಲ್ಲ.
ಬಾಗಲಕೋಟೆ: ಯಾವುದೇ ಕಾರಣಕ್ಕೂ ಸಾರಿಗೆ ಸಿಬ್ಬಂದಿ ವೇತನ ತಡೆ ಹಿಡಿಯಲ್ಲ. ಸಂಬಳ ಕಟ್ ಮಾಡಲ್ಲ. ಪೂರ್ಣ ಸಂಬಳ ಕೊಡುತ್ತೇವೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಭರವಸೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾದಿಂದಾಗಿ ಸಾರಿಗೆ ಸಂಸ್ಥೆಗೆ ಬಹಳ ಹಾನಿಯಾಗಿದೆ. ಎರಡು ತಿಂಗಳು ಸಾರಿಗೆ ಸಿಬ್ಬಂದಿಗೆ ಸರ್ಕಾರ ಸಂಬಳ ಕೊಟ್ಟಿದೆ. ಸಿಬ್ಬಂದಿ ಸಂಬಳಕ್ಕಾಗಿ ರಾಜ್ಯ ಸರ್ಕಾರ 651 ಕೋಟಿ ರೂ. ಕೊಟ್ಟಿದೆ. ಮುಂದಿನ ತಿಂಗಳು ಸಂಬಳ ಕೊಡಲು ಕಷ್ಟಸಾಧ್ಯವಾಗಬಹುದು. …
Read More »
Laxmi News 24×7