Breaking News

ಜಿಲ್ಲೆ

ಕೊರೊನಾಗೆ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರ ಬಲಿ

ಬಾಲಗಕೋಟೆ: ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರಿದಿದ್ದು, ಕೋವಿಡ್‍ಗೆ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರ ಬಲಿಯಾಗಿದ್ದಾರೆ. 59 ವರ್ಷದ ಸಮುದಾಯ ಆರೋಗ್ಯ ಕೇಂದ್ರದ (ಸರ್ಕಾರಿ ಆಸ್ಪತ್ರೆ) ಡಿ ದರ್ಜೆ ನೌಕರ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯ ಗುಳೇದಗುಡ್ಡ ನೌಕರ ಕಳೆದ ನಾಲ್ಕು ದಿನದ ಹಿಂದೆ ತೀವ್ರ ಉಸಿರಾಟದ ತೊಂದರೆಯಿಂದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 27 ರಂದು ಕೊರೊನಾ ದೃಢಪಟ್ಟಿತ್ತು. ಒಂದು ದಿನದಿಂದ ವೆಂಟಿಲೇಟರ್ ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. …

Read More »

ನಿಯಂತ್ರಣ ತಪ್ಪಿ 30 ಅಡಿಯ ಪ್ರಪಾತಕ್ಕೆ ಉರುಳಿದ ಕಾರ್- ಮೂವರು ಸಾವು

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಕಾರ್ 30 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಇಬ್ಬರಿಗೆ ಗಂಭೀರ ಗಾಯವಾಗಿದೆ. ಜಿಲ್ಲೆಯ ಶಿರಾ ತಾಲೂಕಿನ ಹೊನ್ನೇಹಳ್ಳಿ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದ್ದು, ಎದುರಿನಿಂದ ಏಕಾಏಕಿ ವಾಹನ ಬಂದಿದೆ. ವಾಹನಕ್ಕೆ ಡಿಕ್ಕಿ ತಪ್ಪಿಸಲು ಹೋಗಿ ಕಾರ್ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ಹ್ಯೂಂಡೈ ಐ-20 ಕಾರ್ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಕಾರಿನಲ್ಲಿದ್ದ ಬಸವರಾಜು ಸೇರಿದಂತೆ ಒಟ್ಟು …

Read More »

ಹಿರಿಯ ಸಾಹಿತಿ ಗಿತಾ ನಾಗಭೂಷಣ್ (78) ಹೃದಯಾಘಾತದಿಂದ ನಿಧನ…..

ಕಲಬುರಗಿ: ಹಿರಿಯ ಸಾಹಿತಿ ಗಿತಾ ನಾಗಭೂಷಣ್ (78) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗೀತಾ ನಾಗಭೂಷಣ್ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಗೀತಾ ನಾಗಭೂಷಣ ನಿಧನಾರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಗೀತಾ ನಾಗಭೂಷಣ್ ಕಲಬುರಗಿಯ ಸ್ವಸ್ತಿಕ ನಗರದಲ್ಲಿ ವಾಸವಾಗಿದ್ದರು. ಶೋಷಿತರ ಪರವಾಗಿ ಬರವಣಿಗೆ ಮೂಲಕ ಗೀತಾ ನಾಗಭೂಷಣ್ ಧ್ವನಿ ಎತ್ತಿದ್ದರು. ಅದರಲ್ಲಿ ಶೋಷಿತ ಮಹಿಳೆಯರ ಪರವಾಗಿ ಧ್ವನಿ ಎತ್ತಿ ಸರ್ಕಾರದ ಕಣ್ಣತೆರಸುವ …

Read More »

ಕೊರೊನಾ ಎಫೆಕ್ಟ್- ಬೆಂಗ್ಳೂರು ಪೊಲೀಸರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಅತಿ ಹೆಚ್ಚು ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿದ್ದು, 1,267 ಮಂದಿಗೆ ಹೆಮ್ಮಾರಿ ಸೋಂಕು ತಗುಲಿದೆ. ಇದೀಗ ಈ ಕೊರೊನಾ ಮಹಾಮಾರಿ ಎಫೆಕ್ಟ್‍ನಿಂದಾಗಿ ಬೆಂಗಳೂರು ಪೊಲೀಸರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. ನಗರದಲ್ಲಿ ಪೊಲೀಸರ ಸಂಖ್ಯೆಯೇ ಕಡಿಮೆ ಇರುವ ಪೊಲೀಸರಲ್ಲಿ 130 ಮಂದಿಗೂ ಅಧಿಕ ಸಿಬ್ಬಂದಿಗೆ ಸೋಂಕು ದೃಢವಾಗಿದೆ. ಸೋಂಕು ದೃಢಪಟ್ಟವರ ಪ್ರಾಥಮಿಕ ಸಂಪರ್ಕದಲ್ಲಿದ್ದ 900ಕ್ಕೂ ಹೆಚ್ಚು ಪೊಲೀಸರು ಕ್ವಾರಂಟೈನ್ ಆಗಿದ್ದಾರೆ. ಅಷ್ಟೇ ಅಲ್ಲದೇ 50 ವರ್ಷಕ್ಕೂ ಮೇಲ್ಪಟ್ಟ …

Read More »

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಭಾನುವಾರ ಬೆಳಗ್ಗೆ ಆ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟುತ್ತಿತ್ತು. ವಧು–ವರ ಇಬ್ಬರೂ ಇಷ್ಟು ಹೊತ್ತಿಗೆ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಡಬೇಕಿತ್ತು. ಅಷ್ಟರಲ್ಲಿ ಆವರಿಸಿದ ಕೋವಿಡ್ ಸೋಂಕಿನ ಛಾಯೆ ಎಲ್ಲವನ್ನೂ ಹಾಳು ಮಾಡಿದೆ.

ಹಾವೇರಿ: ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಭಾನುವಾರ ಬೆಳಗ್ಗೆ ಆ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟುತ್ತಿತ್ತು. ವಧು–ವರ ಇಬ್ಬರೂ ಇಷ್ಟು ಹೊತ್ತಿಗೆ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಡಬೇಕಿತ್ತು. ಅಷ್ಟರಲ್ಲಿ ಆವರಿಸಿದ ಕೋವಿಡ್ ಸೋಂಕಿನ ಛಾಯೆ ಎಲ್ಲವನ್ನೂ ಹಾಳು ಮಾಡಿದೆ. ಹಾವೇರಿ ನಗರದ ಶಿವಾಜಿ ನಗರದ ಯುವಕನ ಜೊತೆ ನಾಗೇಂದ್ರ ಮಟ್ಟಿ ಪ್ರದೇಶದ ಯುವತಿಯ‌ ಮದುವೆ ನಿಶ್ಚಯವಾಗಿತ್ತು. ಇತ್ತ ಮದುಮಗ ಹಾಗೂ ಸಂಬಂಧಿಕರು ಶಿವಾಜಿ ನಗರಕ್ಕೆ ಬಂದಿದ್ದರು. ಇನ್ನೇನು ಭಾನುವಾರ ಬೆಳಗ್ಗೆ …

Read More »

ಇಂದಿಗೆ ಕೊರೊನಾ ಅನ್‍ಲಾಕ್ 1.0 ಮುಕ್ತಾಯ- ರಿವೀಲ್ ಆಗುತ್ತಾ ಮೋದಿಯ ಹೊಸ ಪ್ಲಾನ್?

ನವದೆಹಲಿ: ದೇಶದ್ಯಾಂತ ಕೊರೊನಾ ಸೋಂಕಿನ ಆರ್ಭಟದ ನಡುವೆ ಇಂದಿಗೆ ಅನ್‍ಲಾಕ್ 1.0 ಮುಕ್ತಾಯವಾಗಲಿದೆ. ಹೀಗಾಗಿ ಕೇಂದ್ರ ಸರ್ಕಾರ ಜುಲೈನ 2ನೇ ಹಂತದ ಅನ್‍ಲಾಕ್ 2.0 ಲೆಕ್ಕಚಾರದಲ್ಲಿದ್ದು, ಮೋದಿಯ ಹೊಸ ಅನ್‍ಲಾಕ್ ಪ್ಲಾನ್ ಇಂದು ರಿವೀಲ್ ಆಗುತ್ತಾ, ಈ ಮೂಲಕ ಸೋಂಕಿಗೆ ಬ್ರೇಕ್ ಹಾಕಲು ಮೋದಿ ನಯಾ ಫಾರ್ಮುಲ ಪ್ರಕಟಿಸ್ತಾರಾ ಎಂಬ ಕುತೂಹಲ ಮೂಡಿದೆ. ಕೇಂದ್ರದ ಆರೋಗ್ಯ ಇಲಾಖೆ ಈಗಾಗಲೇ ಸೋಂಕು ಹೆಚ್ಚಿರುವ ರಾಜ್ಯಗಳಲ್ಲಿ ಅಧ್ಯಯನ ನಡೆಸಿದೆ. ದೆಹಲಿ, ಗುಜರಾತ್, ಮಹಾರಾಷ್ಟ್ರ, …

Read More »

ಪ್ರೀತಿಸಿ ಮದುವೆಯಾದ ಜೋಡಿಗೆ ಸಂಬಂಧಿಕರೇ ವಿಲನ್, ಅದೇನಾಯ್ತು ಗೊತ್ತಾ.?

ದಾವಣಗೆರೆ: ಪ್ರೀತಿಸಿ ಮದುವೆಯಾಗಿದ್ದ ದಂಪತಿಗೆ ಬೆದರಿಕೆ ಹಿನ್ನೆಲೆಯಲ್ಲಿ ದಂಪತಿ ದಾವಣಗೆರೆ ಮಹಿಳಾ ಪೊಲೀಸ್ ಠಾಣೆ ಮೊರೆ ಹೋಗಿದ್ದಾರೆ. ರಶ್ಮಿ ಮತ್ತು ಸುನಿಲ್ ಎಂಬುವವರು ಪ್ರೀತಿಸಿ ಮದುವೆಯಾಗಿದ್ದು, ಸಂಬಂಧಿಕರು ಬೆದರಿಕೆ ಹಾಕಿದ್ದಾರೆನ್ನಲಾಗಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆಯ ದಂಪತಿ ಸಂಬಂಧಿಕರಿಂದ ಜೀವ ಬೆದರಿಕೆ ಹಿನ್ನೆಲೆಯಲ್ಲಿ ರಕ್ಷಣೆಗೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಇವರ ಮನವಿ ಆಲಿಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Read More »

ಕೆರೆಗಳ ಹರಿಕಾರ ಕನ್ನಡಿಗ ಕಾಮೇಗೌಡರ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಮಂಡ್ಯ: ಕೆರೆಗಳ ಹರಿಕಾರ ಕನ್ನಡಿಗ ಕಾಮೇಗೌಡರ ಬಗ್ಗೆ ಮನ್​ ಕಿ ಬಾತ್ ಕಾರ್ಯಕ್ರಮದಲ್ಲಿ ಕಾಮೇಗೌಡರ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕಾಮೇಗೌಡ ಅವರು ಇದುವರೆಗೂ 16 ಕೆರೆ ನಿರ್ಮಿಸಿದ್ದಾರೆ. ಈ ಹಿಂದೆ ಅವರ ಸಾಧನೆಯನ್ನ ಗುರುತಿಸಿದ್ದ ಟಿವಿ9 ಕಾಮೇಗೌಡರಿಗೆ ಟಿವಿ9 ಕರುನಾಡ ನಕ್ಷತ್ರ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಪ್ರಾಣ ಇರೋವರೆಗೂ ಕಾಯಕ ಮುಂದುವರಿಸುತ್ತೇನೆ ಮೋದಿ ಸಾಹೇಬರು ನನ್ನಂಥ ಬಡವನ ಬಗ್ಗೆ ಮಾತನಾಡಿರುವುದು ಸಂತಸ ತಂದಿದೆ. ನಾನು ಭಾರತದಲ್ಲಿ ಹುಟ್ಟಿರುವುದಕ್ಕೂ ಸಾರ್ಥಕವಾಯಿತು. …

Read More »

ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಇತಿಹಾಸ ಸೃಷ್ಟಿಸಲಿದೆ-ಲಕ್ಷ್ಮೀ‌ ಹೆಬ್ಬಾಳ್ಕರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಹಾಗೂ ಕಾರ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ರಾಜ್ಯದಲ್ಲಿ ಇತಿಹಾಸ ಸೃಷ್ಟಿಸಲಿದೆ ಎಂದು ಶಾಸಕಿ ಲಕ್ಷ್ಮೀ‌ ಹೆಬ್ಬಾಳ್ಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು.. ಪದಗ್ರಹಣ ಕಾರ್ಯಕ್ರಮವನ್ನು ಎಲ್​ಇಡಿ ಸ್ಕ್ರೀನ್ ಮೂಲಕ ವೀಕ್ಷಣೆ ನಡೆಯಲಿದೆ. ಡಿಜಿಟಲ್ ಮೀಡಿಯಾದ ಮೂಲಕ ನಡೆಯುತ್ತಿರುವ ದೊಡ್ಡ ಕಾರ್ಯಕ್ರಮ ಇದಾಗಿದೆ. ಕಾರ್ಯಕ್ರಮದಲ್ಲಿ 10 ಲಕ್ಷ ಜನ ಎದ್ದು ನಿಂತು ರಾಷ್ಟ್ರಗೀತೆ ಗಾಯನ ಮಾಡಲ್ಲಿದ್ದಾರೆ. ಕೇಡರ್ ಮಟ್ಟದಿಂದ ಪಕ್ಷ ಬೆಳೆಸುವ ಉದ್ದೇಶ ಹೊಂದಲಾಗಿದೆ. ಕಾರ್ಯಕ್ರಮದಲ್ಲಿ …

Read More »

ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ, ಖಾಸಗಿ ಆಸ್ಪತ್ರೆಗಳಿಗೆ CS ಖಡಕ್ ವಾರ್ನಿಂಗ್

ಬೆಂಗಳೂರು: ಕೊವಿಡ್ ಸೋಂಕಿತರಿಗೆ‌ ಚಿಕಿತ್ಸೆ ನಿರಾಕರಿಸುತ್ತಿರುವ ಖಾಸಗಿ ಆಸ್ಪತ್ರೆಗಳಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ್​ ಭಾಸ್ಕರ್​ ಖಡಕ್ ವಾರ್ನಿಂಗ್ ನೀಡಿದ್ದಾರೆ. ರಾಜ್ಯದ ಖಾಸಗಿ ಆಸ್ಪತ್ರೆಗಳಿಗೆ ಆದೇಶ ಹೊರಡಿಸಿರುವ ವಿಜಯ್​ ಭಾಸ್ಕರ್,​ ಕೊವಿಡ್ ರೀತಿಯ ಲಕ್ಷಣ ಇರುವವರಿಗೂ ಪರೀಕ್ಷೆ ಹಾಗೂ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಚಿಕಿತ್ಸೆ ಮತ್ತು ಪರೀಕ್ಷೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಅನ್ವಯ ಕೇಸ್ ದಾಖಲಿಸಲು ನಿರ್ಧರಿಸಿದ್ದಾರೆ. ಇದಲ್ಲದೆ …

Read More »